Chikmagalur
ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ
Chikmagalur
ಹಣಕ್ಕಾಗಿ ಮದುವೆಯಲ್ಲಿ ರಂಪಾಟ ಮಾಡಿದ ಮಂಗಳಮುಖಿಯರು
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮದುವೆ ಮನೆಯೊಂದಕ್ಕೆ ನುಗ್ಗಿದ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ನಡೆಸಿ, ಮದುವೆಯ ಸಂಭ್ರಮವನ್ನೇ ಕೆಡಿಸಿರುವ ಘಟನೆ ನಡೆದಿದೆ.
ಕೇವಲ ಹಣಕ್ಕಾಗಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರ ನಡೆಗೆ ಮದುವೆಗೆ ಬಂದಿದ್ದ ಅತಿಥಿಗಳು ಹಾಗೂ ವಧು-ವರರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ನಗರದ ಪ್ರಸಿದ್ಧ ರಂಗಣ್ಣನ ಛತ್ರದಲ್ಲಿ ಇಂದು ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು.

ಹಸೆಮಣೆ ಏರಿದ್ದ ವಧು-ವರರಿಗೆ ಅತಿಥಿಗಳು ಶುಭ ಹಾರೈಸುತ್ತಿದ್ದ ವೇಳೆ ಇಬ್ಬರು ಮಂಗಳಮುಖಿಯರು ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಂಪ್ರದಾಯದಂತೆ ಮದುವೆ ಮನೆಯವರು ಅವರಿಗೆ 500 ರೂಪಾಯಿ ಹಣ ನೀಡಲು ಮುಂದಾಗಿದ್ದಾರೆ. ಆದರೆ, 500 ರೂಪಾಯಿ ಪಡೆಯಲು ನಿರಾಕರಿಸಿದ ಮಂಗಳಮುಖಿಯರು, ಬರೋಬ್ಬರಿ 10,000 ರೂಪಾಯಿ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಮದುವೆ ಮನೆಯವರು ಅಷ್ಟು ದೊಡ್ಡ ಮೊತ್ತ ನೀಡಲು ನಿರಾಕರಿಸಿದಾಗ, ಮಂಗಳಮುಖಿಯರು ಮಂಟಪದ ಮೇಲೆಯೇ ರಂಪಾಟ ಆರಂಭಿಸಿದ್ದಾರೆ. ವಧು-ವರರ ಮುಂದೆಯೇ ಅಸಭ್ಯವಾಗಿ ವರ್ತಿಸಿ, ಜೋರಾಗಿ ಕಿರುಚಾಡಿದ್ದಾರೆ. ‘ನಿಮಗೆ ಹಣ ಕೊಡೋ ಯೋಗ್ಯತೆ ಇಲ್ವಾ?’ ಎಂದು ಮನೆಯವರನ್ನು ಏಕವಚನದಲ್ಲೇ ನಿಂದಿಸಿದ್ದಾರೆ. ಮಂಗಳಮುಖಿಯರ ಈ ಹಠಾತ್ ವರ್ತನೆಯಿಂದ ಮದುವೆಗೆ ಬಂದಿದ್ದ ಹೆಣ್ಣುಮಕ್ಕಳು ಹಾಗೂ ಹಿರಿಯರು ಮುಜುಗರಕ್ಕೊಳಗಾದರು.

ಮಂಗಳಮುಖಿಯರ ಈ ಅಸಭ್ಯ ವರ್ತನೆಯನ್ನು ಕಂಡು ಅಲ್ಲಿದ್ದ ಕೆಲವರು ಪ್ರಶ್ನೆ ಮಾಡಲು ಮುಂದಾದಾಗ, ಅವರ ವಿರುದ್ಧವೂ ಕಿಡಿಕಾರಿದ್ದಾರೆ. ‘ದಮ್ಮಿದ್ದರೆ ಹೊರಗೆ ಬಾ, ನಿನ್ನನ್ನು ನೋಡಿಕೊಳ್ಳುತ್ತೇವೆ’ ಎಂದು ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮದುವೆ ಮಂಟಪದಲ್ಲಿ ಗದ್ದಲ ಸೃಷ್ಟಿಸಿದ್ದರಿಂದ, ಮಂಗಳವಾದ್ಯದ ಸದ್ದಿಗಿಂತ ಮಂಗಳಮುಖಿಯರ ಕಿರುಚಾಟವೇ ಹೆಚ್ಚಾಗಿತ್ತು. ಇದರಿಂದಾಗಿ ಸಂಭ್ರಮದಿಂದ ನಡೆಯಬೇಕಿದ್ದ ಮದುವೆ ಕಾರ್ಯಕ್ರಮ ಕೆಲಕಾಲ ಸ್ಥಗಿತಗೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮದುವೆ ಅಥವಾ ಶುಭ ಸಮಾರಂಭಗಳಲ್ಲಿ ಮಂಗಳಮುಖಿಯರು ಬಂದು ಹರಸುವುದು ವಾಡಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಈ ರೀತಿ ದಬ್ಬಾಳಿಕೆ ನಡೆಸುವುದು ಮತ್ತು ಸಾರ್ವಜನಿಕವಾಗಿ ಅವಮಾನ ಮಾಡುವುದು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಈ ಘಟನೆಯ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಕಿರುಕುಳದ ವಿರುದ್ಧ ಪೊಲೀಸ್ ಕ್ರಮಕ್ಕೆ ಒತ್ತಾಯಿಸಿದ.
Chikmagalur
ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ: ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ತಾತ್ಕಾಲಿಕ ನಿರ್ಬಂಧ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ ನಡೆಯುತ್ತಿರುವುದರಿಂದ, ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ಪ್ರವಾಸಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ದೇವಸ್ಥಾನದ ನಿರ್ಮಾಣಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ಭಾರಿ ವಾಹನಗಳ ಮೂಲಕ ಸಾಗಿಸುತ್ತಿರುವುದರಿಂದ ಮತ್ತು ಈ ರಸ್ತೆ ಕಿರಿದಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಫೆ.7 ರಿಂದ ಮಾರ್ಚ್ 5, 2026ರ ವರೆಗೆ ಪ್ರವಾಸಿ ಜೀಪ್‌ಗಳು ಹಾಗೂ ಸಾರ್ವಜನಿಕ ವಾಹನಗಳ ಓಡಾಟವನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ನಿಷೇಧಿಸಿದೆ. ಆದ್ದರಿಂದ, ಪ್ರವಾಸಿಗರು ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ನಡೆದುಕೊಂಡು ಹೋಗುವ ಮೂಲಕ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Chikmagalur
ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಟಿ.ರವಿ
ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್‌ಸಿ ಡಾ.ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ. ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು ಜಿಲ್ಲಾ ಸರ್ಜನ್ ಹಾಗೂ ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು.

ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಡವರ ಬದುಕು ದುಸ್ತರ
“ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.
ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.
-
Mandya11 hours agoನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ : ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿ ಬಿಡುವುದು ಸಂಪೂರ್ಣ ನಿಷೇಧ – ಡಿಸಿ
-
Special3 hours agoಉಚಿತ PSI ಕೋಚಿಂಗ್: ಪರೀಕ್ಷೆ ಇಲ್ಲದೆ ಆಯ್ಕೆ!!
-
State4 hours agoಲೈಂಗಿಕ ದೌರ್ಜನ್ಯ ಕೇಸ್: ಮಂಡ್ಯ ರಮೇಶ್, ಸಾಧು ಕೋಕಿಲ ವಿರುದ್ದದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
-
Hassan5 hours agoಗೋಮಾತೆ ಎಂದಿಗೂ ಕೈ ಬಿಡುವುದಿಲ್ಲ: ಸದಾಶಿವ ಶಿವಾಚಾರ್ಯ ಸ್ವಾಮೀಜಿ
-
Mysore3 hours agoಫೆ. 13ಕ್ಕೆ ನಂಜನಗೂಡು, ತಾಂಡವಪುರದಲ್ಲಿ ರೈತ ಸ್ನೇಹ ಮುಖಾಮುಖಿ ಚರ್ಚೆ : ಕಾರ್ಯಕ್ರಮ ವಿಶೇಷತೆ ಕುರಿತು ವಿದ್ಯಾಸಾಗರ್ ಸುದ್ದಿಗೋಷ್ಠಿ
-
National4 hours agoರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯದ ಬಗ್ಗೆ ಪುನಃ ಧ್ವನಿ ಎತ್ತಿದ ಮಾಜಿ ಪ್ರಧಾನಿ ಎಚ್ಡಿಡಿ
-
Mysore13 hours agoಪ್ರಧಾನಿ ವಿರುದ್ದ ಸಿಎಂ ಹೇಳಿಕೆ ರಾಜಕೀಯ ಪ್ರೇರಿತ: ಡಾ. ಹೇಮಾ ನಂದೀಶ್
-
Mysore15 hours agoಯಾತ್ರಿಕರಿಂದ ಮಹದೇಶ್ವರ ಬೆಟ್ಟದ ಸ್ವಚ್ಛತೆಗೆ ಧಕ್ಕೆ ಆಗದಂತೆ ಕ್ರಮಕ್ಕೆ ಮನವಿ

