Mysore
ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
ಉಡುಪಿ: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿಯಾ್ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಜಲಾಲುದ್ದೀನ್ ಉಚ್ಚಿಲ ಹಾಗೂ ಹಮೀದ್ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Mysore
ರಾಜಕೀಯ ಪ್ರೇರಿತದಿಂದ ನೂತನ ಸಹಕಾರ ಸಂಘ ಸ್ಥಾಪನೆ: ಸತೀಶ್ ಆರೋಪ
ಪಿರಿಯಾಪಟ್ಟಣ: ರಾಜಕೀಯ ಪ್ರೇರಿತದಿಂದ ಮತ್ತೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ ಹೊರತು ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲ್ಲ ಎಂದು ಕಸಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಆರೋಪಿಸಿದರು.
ಹಬಟೂರು ಗ್ರಾಮದ ಸಮುದಾಯ ಭವನದಲ್ಲಿ ಕರೆದಿದ್ದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ನಮ್ಮ ಸಂಘದಿಂದ ರೈತರಿಗೆ ವಿವಿಧ ರೀತಿಯ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಸಂಘವು ಉತ್ತಮವಾಗಿ ಲಾಭದತ್ತ ಸಾಗುತ್ತಿದೆ. ಆದರೆ ನಮ್ಮ ಸಂಘದ ವ್ಯಾಪ್ತಿಗೆ ಒಳಪಡುವ ಚೌತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಬಟ್ಟೂರು ಗ್ರಾಮದಲ್ಲಿ ನೂತನ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಈ ನೂತನ ಸಂಘದ ವ್ಯಾಪ್ತಿಗೆ ಒಳಪಡುವ ರೈತರು ಇನ್ನುಮುಂದೆ ಅದೇ ಸಂಘದಲ್ಲಿ ಸಾಲ ಪಡೆಯಬೇಕು ಹಾಗೂ ನಮ್ಮ ಸಂಘದಿಂದ ಅವರನ್ನು ಬಿಡುಗಡೆಗೊಳಿಸಬೇಕು ಎಂಬಂತೆ ಸಹಾಯಕ ನಿಬಂಧಕರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ನಮ್ಮ ಸಂಘವು ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯವು ಆದೇಶಕ್ಕೆ ತಡೆ ನೀಡಿದೆ ಎಂದು ತಿಳಿಸಿದರು.

ಆದ್ದರಿಂದ ನಮ್ಮ ಸಂಘದ ವ್ಯಾಪ್ತಿಗೆ ಒಳಪಡುವ ಬೂದಿತಿಟ್ಟು, ಹಬಟ್ಟೂರು, ಲಕ್ಷ್ಮೀಪುರ, ಹಬಟ್ಟೂರು ಕೊಪ್ಪಲು, ಅಂಕನಹಳ್ಳಿ ಕೊಪ್ಪಲು, ಜವರಿ ಕೊಪ್ಪಲು ಹಾಗೂ ಮಲ್ಲಯ್ಯನ ಕೊಪ್ಪಲು ಗ್ರಾಮಗಳ ರೈತರು ಯಾವುದೇ ಗೊಂದಲಕ್ಕೆ ಒಳಗಾಗದೆ, ಇದುವರೆಗೆ ವ್ಯವಹರಿಸುತ್ತಿದ್ದ ಸಂಘದಲ್ಲಿಯೇ ಸಾಲ ಪಡೆಯಬಹುದು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಮೇಗೌಡ, ಸದಸ್ಯರಾದ ಪಿ.ಕೆ. ಕುಮಾರ್, ಎಚ್.ಪಿ. ಸುರೇಶ್, ರಮೇಶ್, ರಾಮಕೃಷ್ಣ, ಜಮೀನ್, ಶೋಭಾ, ಗೀತಾ, ನಳಿನಿ,ವಿ. ಆರ್ ವೆಂಕಟೇಶ್, ಕರಿ ನಾಯ್ಕ, ಸೇರಿದಂತೆ ರೈತರು ಉಪಸ್ಥಿತರಿದ್ದರು.
Mysore
ವಿಜೃಂಭಣೆಯಿಂದ ಜರುಗಿದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮರಥೋತ್ಸವ
ವರದಿ: ರವಿಚಂದ್ರ ಬೂದಿತಿಟ್ಟು
ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ರಥೊತ್ಸವವು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ರಥೋತ್ಸವದ ಹಿನ್ನಲೆ ಗ್ರಾಮದ ಮತ್ತು ಬೆಟ್ಟದ ಮೇಲಿನ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆಯಿಂದ ವಿಶೇಷ ಪೂಜೆಗಳು ಮಂತ್ರ ಪಠಿಸುವ ಮೂಲಕ ನಡೆಯಿತು. ಮೂರು ರಥಗಳಿಗೂ ವಿವಿಧ ಪುಷ್ಪಗಳಿಂದ ಹಾಗೂ ಕೇಸರಿ ಸೇರಿದಂತೆ ಹಲವು ಬಗೆಯ ಬಣ್ಣ ಬಣ್ಣಗಳ ಬಾವುಟಗಳಿಂದ ಅಲಂಕಾರ ಮಾಡಲಾಗಿತ್ತು. ರಥಗಳ ಮೇಲೆ ಕ್ರಮವಾಗಿ ಬೆಳ್ಳಿಬಸಪ್ಪ, ಗಣಪತಿ ಹಾಗೂ ಗಿರಿಜಮ್ಮ ಮಲ್ಲಯ್ಯ ದೇವರ ಉತ್ಸವ ಮೂರ್ತಿಗಳನ್ನು ಪೂಜೆ ಸಲ್ಲಿಸಿ, ಸುತ್ತ ಪ್ರದಕ್ಷಿಣೆ ಹಾಕಿ ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ ಸಲ್ಲಿದ ಶುಭಗಳಿಗೆಯಲ್ಲಿ ಗಣ್ಯರು ಹಾಗೂ ಭಕ್ತಾಧಿಗಳು ರಥಕ್ಕೆ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.

ಬಳಿಕ ವಿವಿಧೆಡೆಯಿಂದ ಆಗಮಿಸಿದ ಭಕ್ತರೆಲ್ಲ ಒಟ್ಟಾಗಿ ಸೇರಿ ಮೊದಲು ಬೆಳ್ಳಿ ಬಸಪ್ಪ, ನಂತರ ಗಣಪತಿ ಮತ್ತು ಕಡೆಯಲ್ಲಿ ಗಿರಿಜಮ್ಮ ಮಲ್ಲಯ್ಯ ರಥಗಳನ್ನು ಒಂದೊಂದಾಗಿ ಉಘೇ ಮಲ್ಲಯ್ಯ, ಉಘೇ ಗಿರಿಜಾಮ್ಮ, ಉಘೇ ಮಲ್ಲಿಕಾರ್ಜುನ ಜೈಕಾರದೊಂದಿಗೆ ಎಳೆದು ಭಕ್ತಿ ಸಮರ್ಪಣೆ ಮಾಡಿದರು. ನವದಂತಿಗಳು ಸೇರಿದಂತೆ ಆಗಮಿಸಿದ ಭಕ್ತರು ಹಣ್ಣು ದವನ ಎಸೆದು ತಮ್ಮ ಇಷ್ಟಾರ್ಥವನ್ನು ಈಡೇರಿಸುವಂತೆ ಪ್ರಾರ್ಥಿಸಿಕೊಂಡರು.
ಬೆಟ್ಟ ಹತ್ತಿಳಿದ ಭಕ್ತರು: ಇನ್ನಾ ಜಾತ್ರಾ ಮಹೋತ್ಸವ ಅಂಗವಾಗಿ ಕಳೆದು ಮೂರು ನಾಲ್ಕು ದಿನಗಳಿಂದ ಬೆಟ್ಟ ಹತ್ತುವರ ಸಂಖ್ಯೆ ಹೆಚ್ಚಾಗಿದೆ. ರಥೋತ್ಸವ ದಿನವು ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸಿದೆ ಸಾವಿರಾರೂ ಮಂದಿ ಬೆಟ್ಟ ಹತ್ತಿ ಮೇಲಿರುವ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿದರು.
ಬೆಟ್ಟಕ್ಕೆ ಆಗಮಿಸಿದ ಭಕ್ತರು ಮಾತ್ರವಲ್ಲದೇ ಯುವಕ ಯುವತಿಯರು, ಸ್ನೇಹಿತರು ಫೋಟೋ ತೆಗೆದುಕೊಂಡು ಹಾಗೂ ಹಲವರು ರೀಲ್ಸ್ ಮಾಡುವ ಮೂಲಕ ಸಂತಸಪಟ್ಟರು. ಬಿಸಿಲಿನ ದಾಹದ ದಣಿವು ನಿಗಿಸಲು ಮೆಟ್ಟಿಲುಗಳ ಉದ್ದಕ್ಕೂ ನೀರಿನ ಬಾಟಲ್, ಮಜ್ಜಿಗೆ ಮತ್ತು ಜ್ಯೂಸ್ ಮಾರಾಟ ಮಾಡುವ ಸಣ್ಣಪುಟ್ಟ ಅಂಗಡಿಗಳು ವ್ಯಾಪಾರ ವಹಿವಾಟು ನಡೆಸದವು.
ಜಾತ್ರಾ ಮಹೋತ್ಸವ ಹಿನ್ನಲೆ ಸ್ಥಳೀಯ ವಿವಿಧ ಸೇವಾ ಸಂಘ ಸಮಿತಿಗಳು ಬಂದಂತಹ ಭಕ್ತರಿಗೆ ಅನ್ನದಾನ ಆಯೋಜಿಸಿದರು. ತಾಲೂಕು ಆರೋಗ್ಯ ಇಲಾಖೆವತಿಯಿಂದ ಬೆಟ್ಟದ ಬಳಿ ಆರೋಗ್ಯ ಶಿಬಿರವನ್ನು ಆಯೋಜಿಸಿ ಆರೋಗ್ಯ ತಪಾಸಣೆ ಮಾಡಿದರು.
ಜಾತ್ರಾ ಮಹೋತ್ಸವದಲ್ಲಿ ಗಾವಡಗೆರೆ ಮಠದ ಶ್ರೀ ನಟರಾಜ ಸ್ವಾಮೀಜಿ, ಕನ್ನಡ ಮಠದ ಶ್ರೀ ಚನ್ನಬಸವ ದೇಶಿ ಸ್ವಾಮೀಜಿ ಉಪಸ್ಥಿತರಿದ್ದರು.
Mysore
ಕಚ್ಚಾ ತಂಬಾಕು ಮೇಲಿನ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ: ಸಂಸದ ಯದುವೀರ್
ಮೈಸೂರು: ತಂಬಾಕು ಬೆಳೆಗಾರರಿಗೆ ಪೂರಕವಾಗುವ ರೀತಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕಚ್ಚಾ ತಂಬಾಕು ಮೇಲಿನ ಸುಂಕವನ್ನು ರದ್ದುಗೊಳಿಸಲಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈಗಾಗಲೇ ಸಲ್ಲಿಸಿದ್ದ ಮನವಿಗೆ ಹಣಕಾಸು ಸಚಿವರು ಪುರಸ್ಕರಿಸಿ, ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಫೆ. 5ರಿಂದ ತಂಬಾಕು ಮಾರುಕಟ್ಟೆ ಹರಾಜು ಪುನರಾರಂಭ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಉತ್ಪಾದಿತವಲ್ಲದ ತಂಬಾಕಿನ (ಕಚ್ಚಾ) ಮೇಲಿನ ಅಬಕಾರಿ ಸುಂಕವನ್ನು ರದ್ದುಗೊಳಿಸಿ ಹಣಕಾಸು ಸಚಿವರು ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.

ಫೆ. 5ರಿಂದ ತಂಬಾಕು ಮಾರುಕಟ್ಟೆ ಹರಾಜು ಪುನರಾರಂಭಗೊಳ್ಳಲಿದೆ. ಇದರಿಂದ ತಂಬಾಕು ಬೆಳೆಗಾರರು ಮತ್ತು ಈ ವಲಯಕ್ಕೆ ಸಂಬಂಧಿಸಿದ ಎಲ್ಲರಿಗೂ ನೆರವಾಗಲಿದೆ.
ಕಚ್ಚಾ ತಂಬಾಕಿನ ಮೇಲಿನ ಅಬಕಾರಿ ಸುಂಕವನ್ನು ರದ್ದುಗೊಳಿಸುವ ಗೆಜೆಟ್ ಅಧಿಸೂಚನೆ ಹೊರಡಿಸಿರುವುದರಿಂದ ರೈತರು ಮತ್ತು ವ್ಯಾಪಾರಿಗಳ ದೀರ್ಘಕಾಲೀನ ಬೇಡಿಕೆ ಈಡೇರಿದಂತಾಗಿದೆ. ತಂಬಾಕು ಮಾರುಕಟ್ಟೆಗೆ ಸ್ಥಿರತೆಯನ್ನು ತರುವ ನಿರೀಕ್ಷೆಯಿದೆ.
ಈ ಸಕಾಲಿಕ ಕ್ರಮಗಳು ವ್ಯಾಪಾರದಲ್ಲಿ ನಿರಂತರತೆ ಒದಗಿಸುತ್ತದೆ. ರೈತರ ವಿಶ್ವಾಸವನ್ನು ಬಲಪಡಿಸುತ್ತದೆ ಮತ್ತು ಸಾವಿರಾರು ತಂಬಾಕು ಬೆಳೆಯುವ ಕುಟುಂಬಗಳ ಜೀವನೋಪಾಯಕ್ಕೆ ಆದ್ಯತೆ ನೀಡಲಿದೆ.
ರೈತರ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ಕೃಷಿ ಸಮುದಾಯದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಸದಾ ಬದ್ಧನಾಗಿದ್ದೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
National15 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Special18 hours agoಪೋಸ್ಟ್ ಆಫೀಸ್ ಉದ್ಯೋಗ ಅವಕಾಶ: ನೇರ ನೇಮಕಾತಿ
-
Hassan9 hours agoಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡ
-
Special8 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
Kodagu20 hours agoಹೂಡಿಕೆ ಹೆಸರಲ್ಲಿ ಸೈಬರ್ ವಂಚನೆ : 1.14 ಕೋಟಿ ರೂ. ಕಳೆದುಕೊಂಡ ಸಿದ್ದಾಪುರದ ವ್ಯಕ್ತಿ
-
State9 hours agoಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Kodagu11 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Mandya12 hours agoಅದ್ದೂರಿಯಾಗಿ ಜರುಗಿದ ಶ್ರೀ ಮಾರಮ್ಮ ದೇವಿ ಅಮ್ಮನವರ 3 ನೇ ವರ್ಷದ ವಾರ್ಷಿಕೋತ್ಸವ
