Connect with us

Kodagu

ನೆಲಜಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರು ದ್ವಂಸ

Published

on

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ನೆಲಜಿ ಗ್ರಾಮದ ಮನೆಯಂಗಳದ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರನ್ನು ಕಾಡಾನೆಗಳು ದಾಳಿ ನಡೆಸಿ ಧ್ವಂಸಗೊಳಿಸಿದ ಘಟನೆ ನಡೆದಿದೆ.

ನೆಲಜಿ ಗ್ರಾಮದ ಕೈಬುಲಿರ ದಿನೇಶ್ ಎಂಬುವವರ ಮನೆಯ ಪಕ್ಕದ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ದಾಳಿನಡೆಸಿದ ಕಾಡಾನೆಗಳು ದ್ವಂಸಗೋಳಿಸಿದೆ. ಇದರಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು ಶೆಡ್ ನ ಮೇಲ್ಚಾವಣಿಗೂ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ.
ಸೋಮವಾರ ಮುಂಜಾನೆ ನೆಲಜಿ ಗ್ರಾಮದ ಕೈಬುಲಿರ ಐನ್ ಮನೆ ಬಳಿಯಲ್ಲಿ ಕಾಡಾನೆಗಳ ಹಿಂಡು ಕಂಡುಬಂದಿದ್ದು ಮನೆಯ ಆವರಣದಲ್ಲೂ ಕಾಡಾನೆಗಳು ಜಾಲಾಡಿ ನಷ್ಟ ಉಂಟು ಮಾಡಿದೆ.

ನೆಲಜಿ ಗ್ರಾಮದಲ್ಲಿ ಇತ್ತೀಚೆಗೆ ಕಾಡಾನೆಗಳು ನಿರಂತರ ಧಾಳಿ ನಡೆಸುತ್ತಾ ಗ್ರಾಮಸ್ಥರ ತೋಟಗಳಿಗೆ ಲಗ್ಗೆ ಇಟ್ಟು ಲಕ್ಷಾಂತರ ರುಪಾಯಿ ನಷ್ಟ ಉಂಟುಮಾಡಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಕೂಡಲೇ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳದೇ ಹೋದರೆ ನೆಲಜಿ ಮುಖ್ಯ ರಸ್ತೆಯನ್ನು ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಸಿಎಂರೊಂದಿಗೆ ಸಂವಾದ ನಡೆಸಿದ ಎ.ಎಸ್‌.ಪೊನ್ನಣ್ಣ

Published

on

ಬೆಳಗಾವಿ/ಮಡಿಕೇರಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಈ ಅಧಿವೇಶನದಲ್ಲಿ  ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದ್ದಾರೆ.

Continue Reading

Kodagu

ಅಂತರಾಷ್ಟ್ರೀಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ: ಮಡಿಕೇರಿಯ ಎಸ್.ಅನ್ವಿತ್  ಚಾಂಪಿಯನ್

Published

on

ಮಡಿಕೇರಿ: ಇತ್ತೀಚೆಗೆ ದುಬೈಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ 15ನೇ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅನ್ವಿತ್ ಎಸ್. ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ನಗರದ ಬ್ರೈನೋಬ್ರೈನ್ ಅಬಕಾಸ್ ಸಂಸ್ಥೆಯ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ಬಳಿ ಎಸ್.ಅನ್ವಿತ್  ತರಬೇತಿ ಪಡೆಯುತ್ತಿದ್ದಾನೆ. ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಅನ್ವಿತ್ ಸೇರಿದಂತೆ ಕರ್ನಾಟಕ ರಾಜ್ಯದ ಆರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುಮಾರು 16 ದೇಶಗಳ 1,800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮದೆನಾಡಿನ ಬಿಜಿಎಸ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿರುವ ಎಂಟು ವರ್ಷದ ಅನ್ವಿತ್ ಎಸ್. ಮದೆನಾಡು ಮದೆ ಮಹೇಶ್ವರ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ಶ್ರೀನಿವಾಸ ವಿ. ಹಾಗೂ ಪವಿತ್ರ ಎಂ.ಎನ್ ದಂಪತಿಯ ಪುತ್ರ.

ಬಹುಮಾನ ವಿತರಣಾ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಬ್ರೈನೋಬ್ರೈನ್ ಅಂತಾರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅವರು ಅನ್ವಿತ್ ಸಾಧನೆಯನ್ನು ಶ್ಲಾಘಿಸಿದರು.

ಮಾರ್ಗದರ್ಶಕಿ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅನ್ವಿತ್, ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಹೆಮ್ಮೆ ಎನಿಸಿದೆ. ತಂದೆ ತಾಯಿಗಳ ಸಹಕಾರದಿಂದ ಅನ್ವಿತ್ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದು, ಅಂತಾರಾಷ್ಟ್ರೀಯ ಮಟ್ಟದ ಯಶಸ್ಸು ಅವರ ಕುಟುಂಬದವರಿಗೆ ಸಲ್ಲಬೇಕು ಎಂದರು.

Continue Reading

Kodagu

ಶನಿವಾರಸಂತೆ – ಡಿ.10ಕ್ಕೆ ವಿದ್ಯುತ್ ವ್ಯತ್ಯಯ

Published

on

ಮಡಿಕೇರಿ : 66/11 ಕೆ.ವಿ ಶನಿವಾರಸಂತೆ ಮತ್ತು 66/11 ಕೆವಿ ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Continue Reading

Trending

error: Content is protected !!