Sports
ಮುಂದಿನ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ

ನವದೆಹಲಿ: ನಾಳೆ ಜಾತಿ ಗಣತಿ ವರದಿಯನ್ನು ಸಂಪುಟದಲ್ಲಿ ಮಂಡಿಸಬೇಕಾಗಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಈ ಬಾರಿ ಅಲ್ಲ, ಮುಂದಿನ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನವದೆಹಲಿಯಲ್ಲಿ ಕನ್ನಡ ಚಾನೆಲ್‌ಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ವರದಿಯೂ ಕ್ಯಾಬಿನೇಟ್‌ನಲ್ಲಿ ಚರ್ಚೆಯೇ ಆಗಿಲ್ಲ. ಅದು ಸಾರ್ವಜನಿಕರಿಗೆ ಮುಕ್ತವಾಗಿಲ್ಲ. ಜಾತಿಗಣತಿ ವರದಿಯಲ್ಲೇನಿದೆ ಎಂಬುದು ನನಗೆ ಗೊತ್ತಿಲ್ಲ. ಊಹಾಪೋಹಗಳು ನಡೆಯುತ್ತಿದ್ದು, ವರದಿ ಸಂಬಂಧ ಈವರೆಗೆ ಯಾವುದೇ ಅಂಕಿಅಂಶಗಳು ಬಂದಿಲ್ಲ. ಈ ಬಗ್ಗೆ ಕ್ಯಾಬಿನೇಟ್‌ನಲ್ಲಿ ಚರ್ಚೆ ಮಾಡಿ ಎಲ್ಲರ ಅಭಿಪ್ರಾಯದೊಂದಿಗೆ ಮುಂದುವರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೋಹನ್ ಭಾಗವತ್ ಅವರು ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕಿದ್ದು, 1947 ರಲ್ಲಿ ಅಲ್ಲ ರಾಮಮಂದಿರ ನಿರ್ಮಾಣವಾದ ಬಳಿಕ ಎಂದು ನೀಡಿದ ಹೇಳಿಕೆಗೆ ಕಿಡಿಕಾರಿದ ಸಿದ್ದರಾಮಯ್ಯ ಅವರು, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಈ ಬಗ್ಗೆ ಅವರಿಗೆ ಕೇಳಿದರೇ ಏನು ಹೇಳುತ್ತಾರೆ. ದೇಶದ ಸ್ವಾತಂತ್ರ್ಯದಲ್ಲಿ ಅವರು ಭಾಗಿಯಾಗಿರಲಿಲ್ಲ. ಬದಲಾಗಿ ಆರ್‌ಎಸ್‌ಎಸ್ ಅಂದಿನ ಕಾಲದಲ್ಲಿಯೇ ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು. ಹಾಗಾಗಿ ಅವರು ಆ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.
ಈ ಬಗ್ಗೆ ಟ್ವೀಟ್ ಕೂಡಾ ಮಾಡಿರುವ ಸಿಎಂ ಸಿದ್ದರಾಮಯ್ಯ, “ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಹೋರಾಟಗಾರರಿಗೆ ಮಾಡಿದ ಅವಮಾನ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು.
ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಸುದೀರ್ಘವಾಗಿ ಬರೆದುಕೊಂಡು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
Sports
INDvsENG 1st ODI: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

ನಾಗ್ಪುರ: ಭಾರತ ತಂಡದ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ದಾಳಿಯ ನೆರವಿನಿಂದ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಷಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 47.4 ಓವರ್‌ಗಳಲ್ಲಿ ಆಲ್‌ಔಟ್ ಆಗಿ 248 ರನ್ ಕಲೆಹಾಕಿದರು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 38.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಇಂಗ್ಲೆಂಡ್ ಇನ್ನಿಂಗ್ಸ್: ಇಂಗ್ಲೆಂಡ್ ಪರವಾಗಿ ಫಿಲ್ ಸಾಲ್ಟ್ ಹಾಗೂ ಬೆನ್ ಡಕೆಟ್ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಸಾಲ್ಟ್ 43(26) ಹಾಗೂ ಡಕೆಟ್ 32(29) ರನ್ ಗಳಿಸಿದರು. ಜೋ ರೂಟ್ 19(31) ರನ್ ಬಾರಿಸಿ ನಿರ್ಗಮಿಸಿದರೇ, ಹ್ಯಾರಿ ಬ್ರೂಕ್ ಶೂನ್ಯ ಸುತ್ತಿದರು.
ಬಳಿಕ ಒಂದಾದ ನಾಯಕ ಬಟ್ಲರ್ ಹಾಗೂ ಬೆಥೆಲ್ ಅರ್ಧಶತಕ ಬಾರಿಸಿ ಅಲ್ಪ ಬುನಾದಿ ಹಾಕಿದರು. ಬಟ್ಲರ್ 52(67), ಬೆಥೆಲ್ 51(64) ರನ್ ಗಳಿಸಿ ಔಟಾದರು. ಉಳಿದಂತೆ ಲಿವಿಂಗ್‌ಸ್ಟೋನ್ 5(10), ಬ್ರೈಡನ್ ಕಾರ್ಸ್ 10(18), ಆದಿಲ್ ರಶೀದ್ 8(16), ಮಹ್ಮೂದ್ 2(4), ಹಾಗೂ ಜೋಫ್ರಾ ಆರ್ಚರ್ ಔಟಾಗದೇ 21(18) ಉಳಿದರು.
ಟೀಂ ಇಂಡಿಯಾ ಪರವಾಗಿ ಹರ್ಷಿತ್ ರಾಣಾ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಕಬಳಿಸಿದರು. ಕುಲ್ದೀಪ್, ಶಮಿ ಹಾಗೂ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದು ಮಿಂಚಿದರು.
ಟೀಂ ಇಂಡಿಯಾ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ 2(7) ರನ್ ಗೆ ಸುಸ್ತಾದರೇ, ಜೈಸ್ವಾಲ್ 15(22) ರನ್ ಗಳಿಸಿ ಔಟಾದರು. ಬಳಿಕ ಒಂದಾದ ಶ್ರೇಯಸ್ ಅಯ್ಯರ್ ಮತ್ತು ಗಿಲ್ ತಂಡವನ್ನು ಗೆಲುವಿನ ದಡ ಕೊಂಡೊಯ್ದರು. ಅಯ್ಯರ್ 59(36) ಅರ್ಧಶತಕ ಗಳಿಸಿ ಔಟಾದರೇ, ಬಳಿಕ ಬಂದ ಅಕ್ಷರ್ ಪಟೇಲ್ 52(47) ರನ್ ಗಳಿಸಿ ಉಪಯುಕ್ತ ಕಾಣಿಕೆ ನೀಡಿದರು.
ಶುಭ್‌ಮನ್ ಗಿಲ್ 96 ಎಸೆತಗಳಲ್ಲಿ 14 ಬೌಂಡರಿ ಸಹಿತ 87 ರನ್ ಕಲೆಹಾಕಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಉಳಿದಂತೆ ಕೆ.ಎಲ್ ರಾಹುಲ್ 2(9), ಹಾರ್ದಿಕ್ ಪಾಂಡ್ಯ ಹಾಗೂ ಜಡೇಜಾ ಔಟಾಗದೇ ಕ್ರಮವಾಗಿ 9(6), 12(10) ರನ್ ಗಳಿಸಿ ಗೆಲುವಿನ ನಗೆ ಬೀರಿದರು.
ಇಂಗ್ಲೆಂಡ್ ಪರ ಮಹಮೂದ್ ಹಾಗೂ ರಶೀದ್ ತಲಾ ಎರಡು ವಿಕೆಟ್, ಆರ್ಚರ್ ಹಾಗೂ ಬೆಥೆಲ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
Sports
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್‌ರೌಂಡರ್ ಸ್ಟೋಯ್ನಿಸ್

ಸಿಡ್ನಿ: ಆಸ್ಟ್ರೇಲಿಯಾ ತಂಡದ ಪ್ರಮುಖ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಅವರು ಅಂತರಾಷ್ಟ್ರೀಯ ಏಕದಿನಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಇದೇ ಫೆ.19 ರಿಂದ ಪಾಕಿಸ್ತಾನ್ ಆಯೋಜಕತ್ವದಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟೋಯ್ನಿಸ್ ದಿಢೀರ್ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಏಕದಿನ ಮಾದರಿಯಿಂದ ನಿವೃತ್ತಿಗೊಳ್ಳುತ್ತಿರುವುದು ಮುಂದಿನ ದಿನಗಳಲ್ಲಿ T20 ಮಾದರಿಯಲ್ಲಿ ಹೆಚ್ಚಿನ ಗಮನ ನೀಡುವ ಉದ್ದೇಶದಿಂದ ತಮ್ಮ ಏಕದಿನ ನಿವೃತ್ತಿ ಕುರಿತು ಸ್ಪಷ್ಟನೆ ನೀಡಿದ್ದಾರೆ 35 ವರ್ಷದ ಮಾರ್ಕಸ್ ಸ್ಟೋಯ್ನಿಸ್.
ಆಸೀಸ್ ಪರ 71 ಪಂದ್ಯಗಳಾಡಿ 64 ಬಾರಿ ಬ್ಯಾಟ್ ಬೀಸಿರುವ ಸ್ಟೋಯ್ನಿಸ್ 93.96 ಸರಾಸರಿಯಲ್ಲಿ 1 ಶತಕ, 6 ಅರ್ಧಶತಕ ಸಹಿತ 1495 ರನ್ ಬಾರಿಸಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 48 ವಿಕೆಟ್ ಕಬಳಿಸಿದ್ದಾರೆ. ಇವರು 2019 ರ T20 ವಿಶ್ವಕಪ್ ಹಾಗೂ ಭಾರತ ಆಯೋಜಕತ್ವದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.
Sports
ಚುಟುಕು ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ರಶೀದ್ ಖಾನ್

ನವದೆಹಲಿ: ಆಧುನಿಕ ಕ್ರಿಕೆಟ್ ಜಗತ್ತಿನಲ್ಲಿ ಚುಟುಕು ಮಾದರಿಗೆ (ಟಿ20) ಎಲ್ಲಿಲ್ಲದ ಅಭಿಮಾನಿಗಳ ಬಳಗವಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್), ಬಿಗ್‌ಬ್ಯಾಷ್ ಲೀಗ್(ಬಿಬಿಎಲ್), ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್), ಎಸ್‌ಎ ಟಿ20 ಸೇರಿದಂತೆ ಜಗತ್ತಿನಾದ್ಯಂತ ಹಲವು ಕಡೆಗಳಲ್ಲಿ ಚುಟುಕು ಮಾದರಿ ತನ್ನದೇ ಛಾಪು ಮೂಡಿಸಿದೆ.
ಈ ಚುಟುಕು ಮಾದರಿಯಲ್ಲಿ ಪ್ರತಿ ಬಾರಿಯೂ ನೂತನ ದಾಖಲೆಗಳು ಆಗುತ್ತಿರುತ್ತದೆ, ಮತ್ತೊಂದೆಡೆ ಆ ದಾಖಲೆಗಳು ಮುರಿಯಲ್ಪಡುತ್ತದೆ. ಇದೇ ನಿಟ್ಟಿನಲ್ಲಿ ಸದ್ಯ ದಕ್ಷಿಣಾ ಆಫ್ರಿಕಾದಲ್ಲಿ ನಡೆಯುತ್ತಿರುವ ಎಸ್‌ಎ ಟಿ20 ಲೀಗ್‌ನಲ್ಲಿ ಅಫ್ಘಾನಿಸ್ತಾನ್ ಬೌಲರ್ ರಶೀದ್ ಖಾನ್ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ.
ಎಸ್‌ಎ ಟಿ20 ಕ್ವಾಲಿಫೈ ಪಂದ್ಯದಲ್ಲಿ ಎಂಐ ಕೇಪ್‌ಟೌನ್ ತಂಡದ ಪರವಾಗಿ ಬೌಲಿಂಗ್ ಮಾಡಿದ ರಶೀದ್ ಪ್ರಮುಖ ಎರಡು ವಿಕೆಟ್ ಕಬಳಿಸಿದರು. ಆ ಮೂಲಕ ಟಿ20ಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಈ ಹಿಂದೆ ವೆಸ್ಟ್ ಇಂಡೀಸ್‌ನ ಆಲ್‌ರೌಂಡರ್ ಡ್ವೇನ್ ಬ್ರಾವೋ ಅವರು 582 ಪಂದ್ಯಗಳಿಂದ ಬರೋಬ್ಬರಿ 631 ವಿಕೆಟ್ ಕಬಳಿಸಿ ಅಗ್ರಸ್ಥಾನದಲ್ಲಿದ್ದರು. ಈ ದಾಖಲೆಯನ್ನು ಮುರಿದಿರುವ ರಶೀದ್ ಖಾನ್ ಕೇವಲ 461 ಪಂದ್ಯಗಳಿಂದ 633 ವಿಕೆಟ್ ಪಡೆದು ವಿಶ್ವದಾಖಲೆ ಬರೆದಿದ್ದಾರೆ.
ಟಿ20 ವಿಭಾಗದಲ್ಲಿ ಅತ್ಯಧಿಕ ವಿಕೆಟ್ ಪಡೆದವರಿವರು:
ರಶೀದ್ ಖಾನ್ (ಅಫ್ಘಾನಿಸ್ತಾನ್): 633
ಡ್ವೇನ್ ಬ್ರಾವೋ (ವೆಸ್ಟ್ ಇಂಡೀಸ್): 631
ಸುನೀಲ್ ನರೈನ್ (ವೆಸ್ಟ್ ಇಂಡೀಸ್): 573
ಇಮ್ರಾನ್ ತಾಹೀರ್ (ಸೌಥ್ ಆಫ್ರಿಕಾ): 531
ಶಕೀಬ್ ಅಲ್-ಹಸನ್ (ಬಾಂಗ್ಲಾದೇಶ): 492
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್‌ರೌಂಡರ್ ಸ್ಟೋಯ್ನಿಸ್