Connect with us

Mysore

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕಾಗಿ ಸಹಾಯವಾಣಿ

Published

on

ಚಾಮರಾಜನಗರ, ಫೆ.14:- ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08226-223160, ಮೊ.ಸಂ 9740942901 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾದಲ್ಲಿ ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಕೊಠಡಿ ಸಂಖ್ಯೆ 104/1 ರಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Mysore

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

Published

on

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್‌ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Continue Reading

Mysore

ಎಚ್‌ಸಿಎಂ ಮನೆಗೆ ದಸಂಸ ಮುಖಂಡರಿಂದ ಮುತ್ತಿಗೆ ಯತ್ನ

Published

on

ಮೈಸೂರು: ಸಚಿವ ಡಾ. ಹೆಚ್ ಸಿ ಮಹದೇವಪ್ಪ ನಿವಾಸಕ್ಕೆ ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮೈಸೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ದಸಂಸ ಕಾರ್ಯಕರ್ತರು ರಾಜ್ಯ ಸರ್ಕಾರರವನ್ನು ಎಷ್ಟೇ ಮನವಿ ಮಾಡಿದರೂ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಬೇಸತ್ತು ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ‌ ಮಹದೇವಪ್ಪ ನಿವಾಸಕ್ಕೆ ಕೂಡಲೇ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.

ದಲಿತ ಸಂಘರ್ಷ ಸಮಿತಿ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದು ಎಲ್ಲರನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

Mysore

ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿ

Published

on

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್,ಸದಸ್ಯರಾದ ಗೌತಮ್ ಸಾಲೇಚ ಮತ್ತು ರಿತೇಶ್ ಗೌಡ ಭೇಟಿ ಮಾಡಿ ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಬೇಸ್ ಮೆಂಟ್ನಲ್ಲಿ ನಿಲ್ಲಿಸಿದ್ದು ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿಸಿದರು .

ಕಾಮಗಾರಿ 2019 ರಲ್ಲಿ ಆದೇಶ ಪಡೆದ ಗುತ್ತಿಗೆದಾರರು 2021 ರಲ್ಲಿ ಬೇಸ್ ಮೆಂಟ್ ವರೆಗೆ ಮಾತ್ರ ಮಾಡಿ ನಿಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಮಳೆಗೆ ಶಿಥಿಲವಾಗುತ್ತಿದೆ. ಕೇಂದ್ರ ಸರ್ಕಾರದ 3 ಕೋಟಿ ರೂಪಾಯಿ
ರಾಜ್ಯ ಸರ್ಕಾರದ 1 ಕೋಟಿ ರೂಪಾಯಿ ಮೈಸೂರು ಕೈಗಾರಿಕೆಗಳ ಸಂಘದ 50 ಲಕ್ಷ ರೂಪಾಯಿ ಕೆ.ಐ.ಎ.ಡಿ.ಬಿ.ಗೆ ವಿ.ಐ.ಪಿ.ಸಿ ಮೂಲಕ ನೀಡಿ 20020 ರಲ್ಲಿ ಕಟ್ಟಡ ಪೂರ್ಣ ಗೊಳಿಸುವ ಭರವಸೆ ಹುಸಿಯಾಗಿದೆ.

ಕೂಡಲೇ ಕಾಮಗಾರಿ ಪುನಾರಂಬಿಸುವಂತೆ ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯ ನಿರ್ವಾಹಕ ಮಹೇಶ್ ಅವರಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೂರವಾಣಿಯಲ್ಲಿ ಸೂಚಿಸಿದರು.

ಜಿತೋ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಸ್ಟಾರ್ ಏರ್ ಲೈನ್ಸ್ ಮಾಲೀಕ ಶ್ರೀ ಸಂಜಯ್ ಗೋದಾವತ್ ಮೈಸೂರಿನಲ್ಲಿ ಅವರ ವಿಮಾನ ಸೇವೆಯನ್ನು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಪೂರ್ಣಗೊಂಡ ಬಳಿಕ ಒದಗಿಸಲಾಗುವುದು ಎಂದು ತಿಳಿಸಿದ ವಿಷಯವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಇತು.

ಇದಕ್ಕೆ ಪ್ರಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು ವಿಮಾನಗಳ ಸದ್ಭಳಕೆ ದಿಕ್ಕಿನಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಸೂಕ್ತ ಪ್ರಚಾರ ಮಾಡಬೇಕೆಂದರು.

Continue Reading

Trending

error: Content is protected !!