State
ಕರ್ನಾಟಕ ಅಂಚೆ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಕೇಂದ್ರ ಸರ್ಕಾರಿ ಹುದ್ದೆಗಳು
India Post Office Recruitment 2025 – ಭಾರತೀಯ ಅಂಚೆ ಇಲಾಖೆಯ ವಿವಿಧ ಶಾಖೆಗಳಲ್ಲಿ ಖಾಲಿ ಇರುವಂತಹ ನೂರಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳು ಗ್ರೂಪ್ ಸಿ ಹಾಗೂ ಕೇಂದ್ರ ಸರ್ಕಾರದ ಹುದ್ದೆಗಳಾಗಿವೆ. ಈ ಹುದ್ದೆಗಳಿಗಾಗಿ ಅರ್ಜಿ ಹೇಗೆ ಸಲ್ಲಿಸಬೇಕು ಯಾವ ಹುದ್ದೆಗಳು ಎಷ್ಟು ಖಾಲಿ ಇವೆ ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ.
ಖಾಲಿ ಇರುವಂತಹ ಹುದ್ದೆಗಳ ವಿವರ :
• ಅಂಚೆ ಸಹಾಯಕ – 05 ಹುದ್ದೆಗಳು
• ವಿಂಗಡಣೆ ಸಹಾಯಕ – 10 ಹುದ್ದೆಗಳು
• ಪೋಸ್ಟ್ ಆಫೀಸ್ ಅಸಿಸ್ಟೆಂಟ್ – 114 ಹುದ್ದೆಗಳು
ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು, ಯಾವುದೇ ಒಂದು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮಿತಿಯ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷದಿಂದ 27 ವರ್ಷದ ಒಳಗಿರಬೇಕು.
ಮಾಸಿಕ ವೇತನ – ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ 25,500ರೂ. ಯಿಂದ 81,100ರೂ. ವರೆಗೆ ಇರಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 02 ಜುಲೈ 2025
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು, ಈ ಕೆಳಗಿರುವ ಲಿಂಕ್ ಮೇಲೆ ಒತ್ತಿ ಅಧಿಕೃತ ಅಧಿಸೂಚನೆಯನ್ನು ಓದಿ ಅಲ್ಲಿಯೇ ಸಿಗುವಂತಹ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಪಟ್ಟ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.
https://drive.google.com/file/d/13S2hj6ioWl1m8-8K2cIwuesYjhxrLo5c/view?usp=drivesdk
State
ಧರ್ಮಸ್ಥಳದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ: ಕೆಯುಡಬ್ಲ್ಯೂಜೆ ಖಂಡನೆ
ಬೆಂಗಳೂರು:ಧರ್ಮಸ್ಥಳದಲ್ಲಿ ಮಾಧ್ಯಮದವರ ಮೇಲೆ ನಡೆದ ಹಲ್ಲೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಖಂಡಿಸಿದೆ.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಕೆಲ ಘಟನೆಗಳು ಕಳವಳಕಾರಿಯಾಗಿದೆ. ತನಿಖೆಯಲ್ಲಿ ಸತ್ಯ ಸಂಗತಿ ಹೊರಬರಲಿ ಎನ್ನುವುದು ಎಲ್ಲರ ನಿರೀಕ್ಷೆ. ಈ ಹೊತ್ತಿನಲ್ಲಿ ಮಾಧ್ಯಮಗಳ ಅತಿರೇಕದ ವರ್ತನೆ ಸರಿಯಲ್ಲ ಕೆಯುಡಬ್ಲ್ಯೂಜೆ ಪ್ರತಿಕ್ರಿಯಿಸಿದೆ.
ಧಾವಂತದ ವರದಿಗಳ ಬದಲಿಗೆ ಸಂಯಮವಿರಲಿ ಎಂದು ಸಲಹೆ ನೀಡಿದೆ.
ಸುವರ್ಣ ಟಿವಿ ವರದಿಗಾರ ಹರೀಶ್ ಮೇಲೆ ನಡೆದ ಹಲ್ಲೆ ಖಂಡನೀಯ ಮತ್ತು ಯುಟೂಬರ್ಸ್ ಗಳ ಮೇಲಿನ ಹಲ್ಲೆ ಕೂಡ ಖಂಡನೀಯ. ಈ ಘಟನೆಗಳಲ್ಲಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಕೆಯುಡಬ್ಲ್ಯೂಜೆ ಆಗ್ರಹಿಸಿದೆ.
State
SBI ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ನೇಮಕಾತಿ : ಪದವಿ ಓದುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು
SBI Bank Junior Associates Recruitment 2025 : ಭಾರತ ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವಂತಹ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ .
ವಿಶೇಷತೆ ಏನೆಂದರೆ, ಸದ್ಯಕ್ಕೆ ಅಂತಿಮ ಸೆಮಿಸ್ಟರ್ನಲ್ಲಿ ಪದವಿ ಶಿಕ್ಷಣ ಓದುತ್ತಿರುವ ಅಭ್ಯರ್ಥಿಗಳು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ನೇಮಕಾತಿಯ ವಿವರ : ಭಾರತ ದೇಶಾದ್ಯಂತ ವಿವಿಧ ರಾಜ್ಯಗಳ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಒಟ್ಟು 5,180 ಹುದ್ದೆಗಳನ್ನು ಈ ನೇಮಕಾತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿದಂತಹ ಅಥವಾ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ವಯೋಮಿತಿ ನೋಡುವುದಾದರೆ 20 ರಿಂದ 28 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ನೀವು ಮೀಸಲಾತಿ ವರ್ಗಕ್ಕೆ ಸೇರಿದವರಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.
ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟು?
ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 24,050ರೂ. ಯಿಂದ 64,480ರೂ. ವರೆಗೆ ಸಿಗಲಿದೆ.
ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಅರ್ಜಿ ಶುಲ್ಕ :
• ಸಾಮಾನ್ಯ,ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 750ರೂ.
• ಉಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 26, 2025
ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ – https://sbi.co.in/web/careers
Politics
ಸಾರಿಗೆ ನೌಕರರ ಮುಷ್ಕರದ ಬಗ್ಗೆ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಜಟಾಪಟಿ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಇದೀಗ ಅಶೋಕ್ ಅವರು ತಮ್ಮ ಖಾತೆಯಿಂದ ಟ್ವೀಟ್ ಮಾಡುವ ಮುಖಾಂತರ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್ ಅವರು, ಸಿಎಂ ಸಿದ್ದರಾಂಯ್ಯ ಅವರೇ, ಸಾರಿಗೆ ಸಂಸ್ಥೆಗಳು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೊಂಡು ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ. ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗಳನ್ನ ದಿವಾಳಿ ಮಾಡಿದ ಕುಖ್ಯಾತಿ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ನಿಮ್ಮ ದುರಾಡಳಿತದಿಂದ ಬಸ್ ನಿಲ್ದಾಣಗಳನ್ನೂ ಲೀಸ್‌ಗಿಡುವ ಹೀನಾಯ ಸ್ಥಿತಿಗೆ ಇಂದು KSRTC ಸಂಸ್ಥೆ ತಲುಪಿದೆ. ನಿಮ್ಮ ಕಾರ್ಯವೈಖರಿಗೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿದ್ದಾರೆ.

ಒಂದೆಡೆ, ಈಗಾಗಲೇ 15-30% ಟಿಕೆಟ್ ದರ ಏರಿಕೆ ಮಾಡಿದ್ದೀರಿ, ಮತ್ತೊಂದೆಡೆ KSRTC ಸಂಸ್ಥೆಯನ್ನ 2,000 ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೀರಿ. ನೌಕರರಿಗೆ 1,800 ಹಿಂಬಾಕಿ ಉಳಿಸಿಕೊಂಡಿದ್ದೀರಿ, ನಿಗಮಗಳಿಗೆ 6,000 ಕೋಟಿ ರೂಪಾಯಿ ಬಾಕಿ ಇದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಅರ್ಥಿಕ ಪರಿಸ್ಥಿತಿ ನಿಭಾಯಿಸಲು ಬಸ್ ನಿಲ್ದಾಣಗಳನ್ನು ಹರಾಜು ಹಾಕಿದರೂ ಅಚ್ಚರಿಯಿಲ್ಲ! ಎಂದು ವಾಗ್ದಾಳಿ ನಡೆಸಿದ್ದಾರೆ.
2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ಸಂಸ್ಥೆಗಳಲ್ಲಿ ₹1,000 ಕೋಟಿಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಸಾರಿಗೆ ನಿಗಮಗಳಲ್ಲಿ 25,000 ಜನರಿಗೆ ಕಾಯಂ ಉದ್ಯೋಗ ಕೊಟ್ಟಿದ್ದೆ. ಪ್ರಯಾಣಿಕರಿಗೆ ಗುಣಮಟ್ಟದ ನಿಲ್ದಾಣ ಮತ್ತು ಬಸ್ ಸೇವೆ, ಇಂಧನ ಉಳಿತಾಯ, ಜೈವಿಕ ಇಂಧನ ಬಳಕೆ ಮತ್ತಿತರ ಕಾರ್ಯದಕ್ಷತೆ ಗಮನಿಸಿ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯಕ್ಕೆ 30ಕ್ಕೂ ಹೆಚ್ಚು ಪ್ರಶಸ್ತಿ ನೀಡಿತ್ತು ಎಂದು ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟ ಆಗಿದ್ದು ನಿಜ. ಆದರೆ ಬೇರೆ ರಾಜ್ಯಗಲ್ಲಿ ಸಾರಿಗೆ ನೌಕರರಿಗೆ ಸಂಬಳವೂ ಕೊಡದಿದ್ದ ಸಂದರ್ಭದಲ್ಲೂ ನಾವು ವೇತನ ಕೊಟ್ಟಿದ್ದೇವೆ. ಅದು ಕಾರ್ಮಿಕರ ಕಲ್ಯಾಣದ ಬಗ್ಗೆ ನಮ್ಮ ಪಕ್ಷದ ಬದ್ಧತೆ. ನಮ್ಮ ಪಕ್ಷವಾಗಲಿ, ನಾನಾಗಲಿ ತಮ್ಮಿಂದ ಆಡಳಿತದ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.
-
Mandya20 hours agoಆ.10ರಂದು ಕೆ.ಆರ್.ಎಸ್ ಪಕ್ಷದಿಂದ ಮಹಾಧಿವೇಶನ
-
Hassan23 hours agoಹಾಸನ : ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ
-
Manglore21 hours agoಧರ್ಮಸ್ಥಳ ಅಹಿತಕರ ಘಟನೆ- ಒಟ್ಟು ಏಳು ಪ್ರಕರಣ ದಾಖಲು
-
Kodagu14 hours agoಸಮುದಾಯ ಭವನದ ಸ್ಥಳ ವೀಕ್ಷಣೆ ಹಾಗೂ ಪರಿಶೀಲನೆ ಮಾಡಿದ ಪೊನ್ನಣ್ಣ
-
Hassan20 hours agoಪಟೇಲ್ ಶಿವಪ್ಪನವರನ್ನು ಹಾಸನದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಬೇಕು: ಜಿಲ್ಲಾ ಕುರುಬರ ಸಂಘದ ನಿರ್ದೇಶಕ ರಾಜಣ್ಣ
-
Hassan20 hours agoನಂಜೆ ದೇವರ ಕಾವಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸ್ವರೂಪ್ ಪ್ರಕಾಶ್
-
State19 hours agoಧರ್ಮಸ್ಥಳದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ: ಕೆಯುಡಬ್ಲ್ಯೂಜೆ ಖಂಡನೆ
-
Kodagu17 hours agoಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಎ.ಎಸ್.ಪೊನ್ನಣ್ಣ

