Mysore
ಪತ್ರಕರ್ತ ಪುನೀತ್ ಗೆ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿ
ಪಿರಿಯಾಪಟ್ಟಣ: ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಜನಮಿತ್ರ ವರದಿಗಾರ ಪತ್ರಕರ್ತ ಸಿ.ಜಿ ಪುನೀತ್ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನೀಡಲಾಗುವ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಪ್ರಸ್ತಕ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗೆ ಸಿ.ಜಿ ಪುನೀತ್ ಆಯ್ಕೆಯಾಗಿದ್ದು, ನ.29ರ ಬುಧವಾರ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಕನ್ನಡಾಂಬೆ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

Mysore
ನಾಳೆ, ಫೆ.8ಕ್ಕೆ ಬೃಹತ್ ಇಜ್ತೆಮಾ ಸಮಾವೇಶ
ವರದಿ: ರವಿಚಂದ್ರ ಬೂದಿತಿಟ್ಟು
ಪಿರಿಯಾಪಟ್ಟಣ: ಲೋಕ ಕಲ್ಯಾಣ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಸಮೀಪದ ಹಲಗನಹಳ್ಳಿ ಗ್ರಾಮದಲ್ಲಿ ಶನಿವಾರ ಮತ್ತು ಭಾನುವಾರ ಆಯೋಜಿಸಲಾಗಿರುವ ಬೃಹತ್ ಇಜ್ತೆಮಾ ಧಾರ್ಮಿಕ ಸಮಾವೇಶಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಲಕ್ಷಾಂತರ ಮುಸ್ಲಿಂ ಸಮುದಾಯದವರು ಆಗಮನಕ್ಕೆ ವೇದಿಕೆ ಸಜ್ಜಾಗಿದೆ.
ಈ ಎರಡು ದಿನಗಳ ಕಾಲ ನಡೆಯುವ ಸಮಾವೇಶದಲ್ಲಿ ದೇಶದ ವಿವಿಧ ಭಾಗಗಳಿಂದ ಪ್ರಖ್ಯಾತ ಧಾರ್ಮಿಕ ವಿದ್ವಾಂಸರು ಆಗಮಿಸಿ ಪ್ರವಚನ ನೀಡಲಿದ್ದಾರೆ. ಮಾನವೀಯತೆ, ಶಾಂತಿ ಮತ್ತು ಸೌಹಾರ್ದತೆಯ ಕುರಿತು ವಿಶೇಷ ಉಪನ್ಯಾಸಗಳು ನಡೆಯಲಿವೆ.
ಸಮಾವೇಶಕ್ಕಾಗಿ ವಿಶಾಲವಾದ ಮೈದಾನದಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದ್ದು, ಏಕಕಾಲಕ್ಕೆ ಸಾವಿರಾರು ಜನರು ಪ್ರಾರ್ಥನೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲರ ಅನುಕೂಲಕ್ಕಾಗಿ ತಾತ್ಕಾಲಿಕ ಶೌಚಾಲಯ ಮತ್ತು ಸ್ನಾನಗೃಹಗಳು, ಶುದ್ಧ ಕುಡಿಯುವ ನೀರಿಗಾಗಿ ಅಲ್ಲಲ್ಲಿ ಟ್ಯಾಂಕರ್‌ಗಳನ್ನು ಇರಿಸಲಾಗಿದೆ. ವಾಹನಗಳ ದಟ್ಟಣೆ ತಪ್ಪಿಸಲು ಸಮಾವೇಶದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆಗಾಗಿ ವೈದ್ಯಕೀಯ ಶಿಬಿರ ಹಾಗೂ ಅಂಬುಲೆನ್ಸ್ ವ್ಯವಸ್ಥೆಯನ್ನು ಸ್ಥಳದಲ್ಲೇ ಕಲ್ಪಿಸಲಾಗಿದೆ.

ಕಳೆದ ಒಂದು ತಿಂಗಳಿನಿಂದ ಸಮಾವೇಶದ ಯಶಸ್ವಿಗಾಗಿ ಸತತವಾಗಿ ಆಯೋಜಕರು ಶ್ರಮಿಸುತ್ತಿದ್ದು, ಅಕ್ಕಪಕ್ಕದ ಗ್ರಾಮದವರೆಲ್ಲರಿಗೂ ಸಹಕರಿಸುವಂತೆ ಕೋರಿ ಔತಣ ಕೂಟವನ್ನು ವ್ಯವಸ್ಥೆ ಮಾಡಿಸಲಾಗಿತ್ತು.
ಬರುವ ಜನಗಳಿಗೆ ಊಟದ ಅನುಕೂಲಕ್ಕಾಗಿ 5 ಜೋನ್ ಗಳು ಮಾಡಲಾಗಿದೆ1 ಬನ್ನೂರ್ ಜೋನ್ 2 ಫಾರೂಕ್ಯ ಜೋನ್ 3 ಸಾಲಿಗ್ರಾಮ ಜೋನ್ 4 ಅಬುಜರ್ ಜೂನ್5 ಮೈಸೂರು ಉಲೂಮ ಜೋನ್ ಎಲ್ಲಿಗೆ ಬರುವ ಜನಗಳು ಯಾವ ಜೊನಲ್ಲಾದರೂ ಹೋಗಿ 50 ರೂಪಾಯಿಗಳನ್ನು ನೀಡಿ ಊಟ ಮಾಡಬಹುದು.
ಮೈಸೂರು ಜಿಲ್ಲೆ, ತಾಲ್ಲೂಕುಗಳಿಂದ ಆಗಮಿಸುವ ಮುಸ್ಲಿಂ ಬಾಂಧವರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಸೌಲಭ್ಯ ಮಾಡಲಾಗಿದೆ
ಇದು ಕೇವಲ ಧಾರ್ಮಿಕ ಸಭೆಯಲ್ಲ, ಬದಲಾಗಿ ಮನುಕುಲದ ಏಳಿಗೆಗಾಗಿ ಪ್ರಾರ್ಥಿಸುವ ಪವಿತ್ರ ವೇದಿಕೆಯಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ನೈತಿಕ ಮೌಲ್ಯಗಳನ್ನು ಉತ್ತೇಜಿಸುವ ಸಂದೇಶವನ್ನು ಹರಡುವ ಉದ್ದೇಶ ಹೊಂದಲಾಗಿದೆ, ಪ್ರತಿಯೊಬ್ಬರೂ ಶಿಸ್ತಿನಿಂದ ಪಾಲ್ಗೊಂಡು, ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ತಿಳಿಸಿದ್ದಾರೆ.
Mysore
ಫೆ.6 ರಿಂದ 8 ರವರೆಗೆ ಹೊನಳು ಬೆಳಕು ಕುಸ್ತಿ ಪಂದ್ಯಾವಳಿ: ಪ್ರಸನ್ನ ಕುಮಾರ್
ಮೈಸೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಥಮ ಬಾರಿಗೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕುಸ್ತಿ ಸಂಘದ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕು ಕುಸ್ತಿ ಪಂದ್ಯಾವಳಿಯನ್ನು ಫೆ. 6ರಿಂದ 8ರವರೆಗೆ ನಂಜನಗೂಡು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಕುಸ್ತಿ ಸಂಘದ ಸಂಘಟನಾ ಅಧ್ಯಕ್ಷ ಪೈ.ಪ್ರಸನ್ನಕುಮಾರ್ (ರಾಕ್) ತಿಳಿಸಿದರು.
ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು ಈ ಕುಸ್ತಿ ಪಂದ್ಯಾವಳಿಯು 28 ವರ್ಷಗಳ ನಂತರ ನಂಜನಗೂಡಿನಲ್ಲಿ ನಡೆಯುತ್ತಿದ್ದು, ಇದನ್ನು ಮೊದಲ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕುಸ್ತಿಯ ಜಾತ್ರೆ ಎಂದು ಹೇಳಬಹುದು. ಈ ಪಂದ್ಯಾವಳಿಯಲ್ಲಿ 15 ಹಾಗೂ 17 ವರ್ಷದೊಳಗಿನ ಕ್ರೀಡಾ ಪಟುಗಳು, ಹಿರಿಯರ ವರ್ಗ ಕುಸ್ತಿ ಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪುರುಷರು ಹಾಗೂ ಮಹಿಳೆಯರ ಈ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ಯು-15 ವರ್ಷದೊಳಗಿನ ರಾಷ್ಟ್ರೀಯ ಚಾಂಪಿಯನ್ ಶಿಪ್ ಕರ್ನಾಟಕ ರಾಜ್ಯ ಕುಸ್ತಿ ತಂಡ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಾದ ಕರ್ನಾಟಕ ಕಿಶೋರ, ಕರ್ನಾಟಕ ಕುಮಾರ, ಕರ್ನಾಟಕ ಕೇಸರಿ, ಕರ್ನಾಟಕ ಕಂಠೀರವ ಪ್ರಶಸ್ತಿಗಳು ಹಾಗೂ ಮಹಿಳಾ ವಿಭಾಗದಲ್ಲಿ ಕರ್ನಾಟಕ ಕಿಶೋರಿ ಹಾಗೂ ಕರ್ನಾಟಕ ಕುಮಾರಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾದ ಕುಸ್ತಿ ಪಟುಗಳಿಗೆ ರಾಜ್ಯ ಎಸ್ ಸಿಪಿಟಿಸಿಎಸ್ ಪಿ ನಿಧಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವೇತನ ಸಿಗಲು ಸಹಾಯವಾಗಲಿದೆ. ಅಲ್ಲದೇ ಯುವ ಪ್ರತಿಭೆಗಳಿಗೆ ಅವಕಾಶ ನೀಡುವುದರ ಜೊತೆಗೆ ಅವರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಕಡೆಗಳಿಂದ ನೂರಕ್ಕೂ ಹೆಚ್ಚು ಕುಸ್ತಿ ಪಟುಗಳು ಭಾಗವಹಿಸಲಿದ್ದಾರೆ. ಇಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ನೇರವಾಗಿ ಆಯ್ಕೆಯಾಗಲಿದ್ದಾರೆ. ವಿಜೇತರಾದವರಿಗೆ ಬೆಳ್ಳಿ ಗದೆ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದರು.
ಫೆ.6ರಂದು ಮೈಸೂರಿನ ಜ್ಞಾನ ಪ್ರಕಾಶ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಸುನೀಲ್ ಬೋಸ್, ಶಾಸಕರಾದ ದರ್ಶನ್ ದ್ರುವನಾರಾಯಣ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ, ಫೆ 8ರಂದು ಸನಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಪಂದ್ಯಾವಳಿ ಆಯೋಜಕರಾದ ಮಹದೇವಮೂರ್ತಿ, ರಾಂಬೋ ಕಿರಣ್, ಗಿರೀಶ್ ತೊರೆಮಾವು, ಡಾ. ವಿನೋದ್ ಕುಮಾರ್, ಶ್ರೀಕಂಠ ಪ್ರಸಾದ್ ಇದ್ದರು.
Mysore
ಪುಷ್ಪ ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ವರದಿ: ರವಿಚಂದ್ರ ಬೂದಿತಿಟ್ಟು
ಪಿರಿಯಾಪಟ್ಟಣ: ತಾಲೂಕಿನ ಪುಷ್ಪ ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಅಯಾನ್ ಗೋವಾದಲ್ಲಿ ಇತ್ತೀಚೆಗೆ ನಡೆದ ಆಲ್ ಇಂಡಿಯಾ ರೋಲರ್ ರಿಲೇ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮಹಮ್ಮದ್ ಅಯಾನ್ ಅವರು ಹುಣಸೂರಿನ ಕಿಂಗ್ಸ್ ಸ್ಕೇಟಿಂಗ್ ಅಕಾಡೆಮಿಯಲ್ಲಿ ತರಬೇತುದಾರರಾದ ಮುಸವಿರ್ ಅವರ ಮಾರ್ಗದರ್ಶನದಲ್ಲಿ ಸ್ಕೇಟಿಂಗ್ ತರಬೇತಿ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಅವರ ಶಿಸ್ತುಬದ್ಧ ಅಭ್ಯಾಸ ಹಾಗೂ ಪರಿಶ್ರಮವೇ ಈ ಮಹತ್ವದ ಯಶಸ್ಸಿಗೆ ಕಾರಣವಾಗಿದೆ.
ಈ ಸಾಧನೆಗೆ ಪಿರಿಯಾಪಟ್ಟಣ ಟೌನ್ ನಿವಾಸಿಗಳಾದ ಮಂಜೀರಾ ಬಾನು, ಅರ್ಷಾದ್ ಹಾಗೂ ರುಹಿ ತಾಜ್ ಅವರು ಮಹಮ್ಮದ್ ಅಯಾನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಯೋಗ ಮಟ್ಟದಲ್ಲೂ ದೇಶಕ್ಕೆ ಕೀರ್ತಿ ತರುವಂತೆ ಶುಭ ಹಾರೈಸಿದರು.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.
-
Special21 hours agoಕೊನೆಗೂ ಬಂತು ಯುಪಿಎಸ್ಸಿ ನೇಮಕಾತಿ: 933 ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸುವಿಕೆ ಆರಂಭ!
-
Sports18 hours agoWPL Champions| ಸತತ 2ನೇ ಆರ್ಸಿಬಿಗೆ ಚಾಂಪಿಯನ್ ಕಿರೀಟ: RCB ಹ್ಯಾಟ್ರಿಕ್ ಸಾಧನೆ!
-
Chamarajanagar4 hours agoಬಿಳಿಗಿರಿ ರಂಗನಬೆಟ್ಟದ ದೇವಾಲಯ ಸುತ್ತಮುತ್ತ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಶ್ರಮದಾನ
-
National23 hours agoಹಾಸನ ಮೆಗಾ ಡೇರಿ ವಿಸ್ತರಣೆಗೆ ಕೇಂದ್ರದ ನೆರವು: NDDB ಮೂಲಕ 150 ಕೋಟಿ ರೂ. ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸಮ್ಮತಿ
-
Mysore22 hours agoಮನರೇಗಾ ಹೆಸರು ಬದಲಾವಣೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
-
State34 minutes agoನಮ್ಮ ಪಕ್ಷದ ಹೈಕಮಾಂಡ್ ಡಾ.ಯತೀಂದ್ರ ಅವರೇ: ಡಿಸಿಎಂ ಡಿಕೆಶಿ ಟಾಂಗ್
-
National54 minutes agoಮಹಿಳೆಯ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ನ್ಯಾಯಾಂಗ ಆಗ್ರಹಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್
-
Mysore1 hour agoವಕೀಲರ ಸಂಘದ ಅಧ್ಯಕ್ಷರ ಮೇಲೆ ಪ್ರಕರಣ: ವಕೀಲ ಸಂಘದಿಂದ ಪ್ರತಿಭಟನೆ
