State
ಪೊಲೀಸರ ಮಿಂಚಿನ ಕಾರ್ಯಾಚರಣೆ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ

ಉದ್ಯಮಿಯೊಬ್ಬರಿಗೆ MLA ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ, ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ಎನ್ನುವವಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೋಚಕ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ

ಉದ್ಯಮಿಯ ಮುಗ್ದತೆ ಬಳಸಿಕೊಂಡು ವಂಚನೆ
ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ, ಉದ್ಯಮಿಯ ಮುಗ್ಧತೆಯನ್ನು ಬಳಸಿಕೊಂಡು ವಂಚನೆ ಮಾಡಿದ್ದರಿಂದ ಚೈತ್ರಾ ಕುಂದಾಪುರ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯಿಂದ ಮೂರು ಹಂತದಲ್ಲಿ ಸುಮಾರು 7 ಕೋಟಿ ರೂಪಾಯಿಗಳನ್ನು ಆರೋಪಿಗಳು ಪಡೆದಿದ್ದರು. ಪ್ರಕರಣ ಸಂಬಂಧ ಮಂಗಳವಾರ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ ನಾಯಕ್ ಪೆಲತ್ತೂರುವನ್ನು ಸಿಸಿಬಿ ಪೊಲೀಸರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಡಿಗೆ ಭಾಷಣಕಾರ್ತಿ ಎಂದೇ ಫೇಮಸ್, ಸಂಘಟನೆಯೊಂದಿಗೂ ಇಲ್ಲ ಒಳ್ಳೆಯ ನಂಟು
ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಗ್ಯಾಂಗ್, ಕೇಂದ್ರದ ನಾಯಕರು, ಆರ್‌ಎಸ್‌ಎಸ್ ಪ್ರಮುಖರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿ ಉದ್ಯಮಿಗೆ ಪಂಗನಾಮ ಹಾಕಿದೆ. ಇಷ್ಟೇ ಅಲ್ಲದೇ ಆರ್‌ಎಸ್‌ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಚೈತ್ರಾ ಕುಂದಾಪುರ ಟೀಮ್ ಸೃಷ್ಟಿ ಮಾಡಿತ್ತು. ಚೈತ್ರ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದು, ಈ ಹಿಂದೆ ಹಿಂದು ಸಂಘಟನೆಯ ನಿಷ್ಠಾವಂತ ಕಾರ್ಯಕರ್ತರ ಮೇಲೆಯೇ ಈಕೆ ಸುಳ್ಳು ಕೇಸ್ ದಾಖಲಿಸಿದ್ದಳು.
State
ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ

ಕೆಯುಡಬ್ಲ್ಯೂಜೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ
ಬೆಂಗಳೂರು-ಡಿ.1. ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ
ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.
ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು.
ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಭುದ್ಧತೆ ಹೊಂದಿದ ಪತ್ರಕರ್ತರು ಇದ್ದರು. ಈಗ ಆ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ವೃತ್ತಿ ಭಾಂದವರ ಬಗ್ಗೆ ತೋರುತ್ತಿರುವ ಕಾಳಜಿಯು ನಿಜಕ್ಕೂ ಸ್ತುತ್ಯಾರ್ಹ. ನಿರಂತರ ಕಾರ್ಯಕ್ರಮ ಮೂಲಕ ಕೆಯುಡಬ್ಲ್ಯೂಜೆ ಹೊಸ ಹೆಜ್ಜೆ ಇಟ್ಟಿರುವುದು ವಿಶೇಷ ಎಂದು ಅಭಿನಂದಿಸಿದರು.
ಪತ್ರಿಕಾ ವಿತರಕರನ್ನೂ ಸರ್ಕಾರ ಈ ಬಾರಿ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆಸ್ಪತ್ರೆಗೆ ಸೇರಿದವರಿಗೆ ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ವಿತರಕರನ್ನು ಗುರುತಿಸುವ ಕಾರ್ಯವು ಇನ್ನೂ ಮುಂದುವರಿಯಲಿದೆ ಎಂದು ಅವರು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತರಾದ ಮಾಯಾ ಶರ್ಮಾ
ಮಾತನಾಡಿ, ಪತ್ರಕರ್ತರು ಯಾವ ಪಕ್ಷಕ್ಕೂ ಮತ್ತು ಯಾವ ಪಂಥಕ್ಕೂ ಸೇರಿದವರಲ್ಲ. ಸದಾ ನಿಸ್ಪಕ್ಷಪಾತವಾಗಿ ಕೆಲಸ ಮಾಡುವ ಮೂಲಕ ವೃತ್ತಿ ಬದ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸುದ್ದಿಮನೆಯ ಹಿರಿಯ ಸುಬ್ಬು ಹೊಲೆಯಾರ್ ಮಾತನಾಡಿ, ವೃತ್ತಿಪರವಾದ ಕೆಯುಡಬ್ಲ್ಯೂಜೆ ಸಂಸ್ಥೆಯಲ್ಲಿ ನನಗೆ ಗೌರವಿಸುತ್ತಿರುವುದು ಅಭಿಮಾನದ ಸಂಗತಿ ಎಂದರು. ಡಾ.ಅಂಬೇಡ್ಕರ್ ಆಶಯಗಳು ಸಂವಿಧಾನಬದ್ದವಾಗಿ ಶೋಷಿತ ಸಮುದಾಯಗಳಿಗೆ ನಿಜ ಅರ್ಥದಲ್ಲಿ ತಲುಪಬೇಕು ಎಂದರು.
ಹಿರಿಯ ಪತ್ರಕರ್ತ ರಫೀಕ್ ಭಂಡಾರಿ, ಪತ್ರಿಕಾ ವಿತರಕರಾದ ಜವರಪ್ಪ ಮೈಸೂರುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸಭಾಪತಿಗಳ ವಿಶೇಷಾಧಿಕಾರಿ ಡಾ. ಮಹೇಶ್ ವಾಳ್ವೇಕರ್ , ವಿಧಾನಸಭಾಧ್ಯಕ್ಷರ ಮಾಧ್ಯಮ ಸಂಯೋಜಕರಾದ ಜ್ಞಾನಶೇಖರ್ ಅವರನ್ನೂ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ
ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸದಾ ಬದ್ಧವಾಗಿ ಕೆಲಸ ಮಾಡುತ್ತದೆ. ವೃತ್ತಿ ಬಾಂಧವರನ್ನು ಕೆಯುಡಬ್ಲ್ಯೂಜೆ ಅಂಗಳದಲ್ಲಿ ಸನ್ಮಾನಿಸತ್ತಿರುವುದು ಅಭಿಮಾನದ ಸಂಗತಿ ಎಂದರು.
ಸಮಾರಂಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ನಿಂಗಪ್ಪ ಚಾವಡಿ,
ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ, ಶೇಷಚಂದ್ರಿಕಾ, ಡಿ. ಉಮಾಪತಿ, ಪತ್ರಿಕಾ ವಿತರಕರಒಕ್ಕೂಟದ ಅಧ್ಯಕ್ಷ ಶಂಭುಲಿಂಗ, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್, ಕೆ.ಆರ್.ದೇವರಾಜ್, ಕೋಲಾರದ ವಿ.ಮುನಿರಾಜು, ನಗರ ಘಟಕದ ಪದಾಧಿಕಾರಿಗಳು, ಹಿರಿಯ ಪತ್ರಕರ್ತೆ ಶಮಂತಾ, ಶಶಿಕಲಾ ಸೇರಿದಂತೆ ಹಿರಿಯ ಪತ್ರಕರ್ತರು ಮತ್ತು ಬೆಂಗಳೂರು ನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರೂ ಹಾಜಾರಿದ್ದರು.
ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಸ್ವಾಗತಿಸಿದರು, ಕೊನೆಯಲ್ಲಿ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು
State
‘ಗೃಹಲಕ್ಷ್ಮೀ’ ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ಬೇಗ ಈ ದಾಖಲೆ ರೆಡಿ ಮಾಡಿ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಗೃಹಲಕ್ಷ್ಮೀ ಯೋಜನೆ (Gruhalakshmi scheme) ಹಣ ಜಮೆ ಮಾಡಲು ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸುಧಾರಣ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.
ರಾಜ್ಯದ ಎಲ್ಲಾ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಕಚೇರಿಯಿಂದಲೇ ಯೋಜನೆ ಹಣ ಬಿಡುಗಡೆಯ ಮಾಡಲು ತಯಾರಿ ನಡೆಸುತ್ತಿದೆ. ಇದರ ಜೊತೆಗೆ,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯು ಅಂಗನವಾಡಿ ಕಾರ‍್ಯಕರ್ತೆಯರನ್ನು ಮನೆ ಭೇಟಿಗೆ ಸೂಚನೆ ನೀಡಿದ್ದು, ಈ ಮೂಲಕ ಫಲಾನುಭವಿಗಳಿಗೆ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ.ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗೃಹಲಕ್ಷ್ಮೀ ಯೋಜನೆ ಹಣವನ್ನು ಫಲಾನುಭವಿಗಳಿಗೆ ಪ್ರತಿ ತಿಂಗಳ 20 ತಾರೀಖಿನೊಳಗೆ ಹಣ ವರ್ಗಾವಣೆ ಮಾಡಲು ಸೂಚಿಸಿದೆ.
ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಹಣ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ‍್ಯಕರ್ತೆಯರಿಗೆ ಇಲಾಖೆ ಜವಾಬ್ದಾರಿ ನೀಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿನ ಅಂಗನವಾಡಿ ಕಾರ‍್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮನೆಗೆ ಭೇಟಿ ಫಲಾನುಭವಿಗಳಿಗೆ ಗೃಹಲಲಕ್ಷ್ಮೀ ಯೋಜನೆ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಅರ್ಹರಿಗೆ ಯೋಜನೆಯ ಹಣ ಬಾರದಿದ್ದರೆ, ಆಗಿರುವ ಸಮಸ್ಯೆಯನ್ನು ಬಗೆಹರಿಸಲು ತಿಳಿಸಲಾಗಿದೆ.
State
ಪಂಚಭೂತಗಳಲ್ಲಿ ಕ್ಯಾ| ಪ್ರಾಂಜಲ್ ಲೀನ

ಮೂರು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾಳಗದಲ್ಲಿ ಹುತಾತ್ಮರಾದ ಕ್ಯಾ| ಪ್ರಾಂಜಲ್
ಅವರು ಇಂದು ಪಂಚಭೂತಗಳಲ್ಲಿ ಲೀನರಾದರು. ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿನ ಎಚ್‌ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸಹಿತ ಗಣ್ಯರು ಉಪಸ್ಥಿತರಿದ್ದು ಅಂತಿಮ ಗೌರವ ನಮನ ಸಲ್ಲಿಸಿದರು. ಎಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಿದ ಸಂದರ್ಭ ಪಾರ್ಥಿವ ಶರೀರಕ್ಕೆ ಅಲ್ಲಿ ಮಿಲಿಟರಿ ಗೌರವ ಸಲ್ಲಿಸಲಾಯಿತು. ಕ್ಯಾ| ಪ್ರಾಂಜಲ್ ಅವರ ತಂದೆ ಎಂ. ವೆಂಕಟೇಶ್, ತಾಯಿ ಅನುರಾಧಾ, ಪತ್ನಿ ಅದಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹೊÉàಟ್ ಗೌರವ ಅರ್ಪಿಸಿದರು. ಬಳಿಕ ಜಿಗಣಿಯ ಸ್ವಗೃಹಕ್ಕೆ ಪ್ರಾಂಜಲ್ ಪಾರ್ಥಿವ ಶರೀರವನ್ನು ತರಲಾಯಿತು. . ಇಂದು ಬೆಳಗ್ಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತಂದು ಭಾರತೀಯ ಸೇನೆ ಮತ್ತು ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮಸುಂದರ ಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಕಣ್ಣೀರಿನ ಭಾವಪೂರ್ಣ ವಿದಾಯ ಸಲ್ಲಿಸಲಾಯಿತು.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore6 days ago
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ