Connect with us

Kodagu

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Published

on

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ -ನಾಪೋಕ್ಲು ಕೊಳಕೇರಿ ರಸ್ತೆಯಲ್ಲಿ ಘಟನೆ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಚಾಲಕ ಪಾರು

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಗೆ ಪಲ್ಟಿ ಹೊಡೆದ ಘಟನೆ ನಾಪೋಕ್ಲು ಕೊಳಕೇರಿ ಮುಖ್ಯರಸ್ತೆಯ ಕೋಟೇರಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಕಕ್ಕಬ್ಬೆ ಸಮೀಪದ ಕುಂಜಿಲ ಗ್ರಾಮದಿಂದ ನಾಪೋಕ್ಲುವಿಗೆ ಬರುತ್ತಿದ್ದ ಮಾರುತಿ ವ್ಯಾಗನರ್ ಕಾರು ಕೋಟೇರಿ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿ ಹೊಡೆದಿದೆ. ಅಪಘಾತದಿಂದ ಕಾರು ಚಾಲಕ ಕುಂಜಿಲ ಗ್ರಾಮದ ನಿವಾಸಿ ಖಾಲಿದ್ ಎಂಬುವವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಕಾರಿನ ಮೇಲ್ಭಾಗ ಸಂಪೂರ್ಣ ಜಖಂ ಗೊಂಡಿದೆ. ಸಾರ್ವಜನಿಕರ ಸಹಕಾರದಿಂದ ಪಲ್ಟಿ ಹೊಡೆದ ಕಾರನ್ನು ತೆರೆವುಗೊಳಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Kodagu

ಕಿರುಹೊಳೆಯ ಬದಿ ಜಾಗ ಒತ್ತುವರಿ ಆಗಿದ್ದಲ್ಲಿ ಕೂಡಲೇ ತೆರವುಗೊಳಿಸುವ ಕಾರ್ಯಕ್ಕೆ ಮರು ಚಾಲನೆ ನೀಡಿ – ಎ.ಎಸ್ ಪೊನ್ನಣ್ಣ

Published

on

ಮಡಿಕೇರಿ : ಗೋಣಿಕೊಪ್ಪ ಪಟ್ಟಣದಲ್ಲಿನ ಕಿರುಹೊಳೆಯ ಬದಿ ಜಾಗ ಒತ್ತುವರಿ ಆಗಿದ್ದಲ್ಲಿ ಕೂಡಲೇ ತೆರವುಗೊಳಿಸುವ ಕಾರ್ಯಕ್ಕೆ ಮರು ಚಾಲನೆ ನೀಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೂಚಿಸಿದ್ದಾರೆ.
ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿರುವ ‘ಟ್ರ‍್ಯಾಸ್ ಬ್ಯಾರಿಕೇಡ್’ ಉದ್ಘಾಟನೆ ಹಾಗೂ ವನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಕಿರುಹೊಳೆ ಸಂರಕ್ಷಿಸುವಲ್ಲಿ ಈ ಹಿಂದೆ ಶ್ರಮಿಸಲಾಗಿತ್ತು. ಆ ನಿಟ್ಟಿನಲ್ಲಿ ಕಿರುಹೊಳೆಯನ್ನು ಹಿಂದಿನAತೆ ಉಳಿಸಬೇಕು. ಈ ಕಾರ್ಯಕ್ಕೆ ಮರು ಚಾಲನೆ ನೀಡಬೇಕು ಎಂದು ಶಾಸಕರು ತಿಳಿಸಿದರು. ನದಿ, ತೊರೆ, ಹಳ್ಳಕೊಳ್ಳ ಹಾಗೂ ಜಲಾಶಯವನ್ನು ನಾಶ ಮಾಡಿ ಅಭಿವೃದ್ಧಿ ಮಾಡಬೇಕಿಲ್ಲ, ಅರಣ್ಯ, ಪರಿಸರ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಪ್ರತಿಪಾದಿಸಿದರು.
ಕಿರುಹೊಳೆಯಲ್ಲಿ ಟ್ರ‍್ಯಾಸ್ ಬ್ಯಾರಿಕೇಡ್ ಅಳವಡಿಸಿರುವುದರಿಂದ ಘನ ತ್ಯಾಜ್ಯ ವಿಲೇವಾರಿಗೆ ಸಹಕಾರಿಯಾಗಿದೆ. ಇದೊಂದು ರೀತಿಯ ಸಣ್ಣ ಪ್ರಯೋಗ ಎಂದರೆ ತಪ್ಪಾಗದು. ಮನೆ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯಕ್ಕಾಗಿ ಮನವಿಗಳು ಬರುತ್ತವೆ, ಆದರೆ ಸ್ವಚ್ಛತಾ ಕಾರ್ಯಕ್ಕೆ ಮನವಿ ಮಾಡುವುದು ಕಡಿಮೆ, ಆ ದಿಸೆಯಲ್ಲಿ ‘ಕ್ಲೀನ್ ಕೂರ್ಗ್’ ತಂಡದವರು ಕಿರುಹೊಳೆ ಸೇರಿದಂತೆ ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಪರಿಸರ ಸಂರಕ್ಷಿಸುವಲ್ಲಿ ಸರ್ಕಾರದ ಜತೆ ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ್ ಮಾತನಾಡಿ ಯಾವುದೇ ನದಿ, ತೊರೆ, ಹಳ್ಳ ಕೊಳ್ಳಗಳಲ್ಲಿ ಜಲಚರಗಳು ಚೆನ್ನಾಗಿದ್ದರೆ ನೀರು ಶುದ್ಧವಾಗಿದೆ ಎಂದು ಅರ್ಥ ಎಂದರು. ಪರಿಸರ ಸಂರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಗಿಡಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಗೋಣಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿದರು. ಗ್ರಾ.ಪಂ.ಉಪಾಧ್ಯಕ್ಷರಾದ ಮಂಜುಳಾ, ತಹಶಿಲ್ದಾರರಾದ ಮೋಹನ್ ಕುಮಾರ್, ಬಿ.ಎನ್.ಪ್ರಕಾಶ್, ಪಿಡಿಒ ತಿಮ್ಮಯ್ಯ ಇತರರು ಇದ್ದರು.

Continue Reading

Kodagu

ಸೀಮಾಗೆ ಡಾಕ್ಟರೇಟ್ ಪದವಿ

Published

on

ಗೋಣಿಕೊಪ್ಪ: ಕಾವೇರಿ ಕಾಲೇಜು ಇತಿಹಾಸ ವಿಭಾಗದ ಮುಖ್ಯಸ್ಥೆ ಮೂರೀರ ಸಿ.ಸೀಮಾ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ದೊರೆಕಿದೆ.


ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕಿ ಡಾ.ಕೋಡಿರ ಮೀನಾಕ್ಷಿ ಲೋಕೇಶ್ ಮಾರ್ಗದರ್ಶನದಲ್ಲಿ ಮಂಡಿಸಿದ ಕೊಡಗಿನ ಕೊಡವ ಭಾಷಿಕ ಸಮುದಾಯಗಳ ಚಾರಿತ್ರಿಕ ಅಧ್ಯಯನ ಸಮಾಜ ಮತ್ತು ಸಂಸ್ಕೃತಿ ಎಂಬ ಮಹಾಪ್ರಬಂಧಕ್ಕೆ ಪದವಿ ನೀಡಿದೆ. ಇವರು ಬಾಳುಗೋಡು ಗ್ರಾಮದ ಮೂರೀರ ಮಿಟ್ಟು ಚಿಟ್ಟಿಯಪ್ಪ, ಮಲ್ಲಿಗೆ ದಂಪತಿ ಪುತ್ರಿ.

Continue Reading

Kodagu

ಕ್ರೀಡಾಂಗಣದ ಉಸ್ತುವಾರಿ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published

on

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣಕ್ಕೆ ಕ್ರೀಡಾಂಗಣದ ಉಸ್ತುವಾರಿ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-220986 ಮತ್ತು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Continue Reading

Trending

error: Content is protected !!