Chamarajanagar
ಚಾಮರಾಜನಗರ: ಫೆ.13ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತಾಲೂಕಿನ ಕಾಗಲವಾಡಿ ಶಾಖಾ ವ್ಯಾಪ್ತಿಯ ಚಂದಕವಾಡಿ ಉಪಕೇಂದ್ರದ ನವೋದಯ ಎನ್.ಜೆ.ವೈ ಹಾಗೂ ಹಿರಿಕೆರೆ ಎನ್.ಜೆ.ವೈ ಫೀಡರ್ ಗಳ ತುರ್ತು ಕಾಮಗಾರಿಯನ್ನು ಫೆಬ್ರವರಿ 13 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹೆಬ್ಬಸೂರು, ಬಸಪ್ಪನಪಾಳ್ಯ, ಸರಗೂರು, ಹುರಳಿನಂಜನಪುರ, ಕಾಗಲವಾಡಿ, ಲಿಂಗರಾಜಪುರ, ಕರಿಯನಕಟ್ಟೆ, ಮಲ್ಲುಪುರ, ಹಂಚಿತಾಳಪುರ, ಕೊಕ್ಕನಹಳ್ಳಿ, ಅಯ್ಯನಪುರ, ಹಿತ್ತಲಗುಡ್ಡ, ಕೋಟಂಬಳ್ಳಿ, ಮಲ್ಲೇದೇವನಹಳ್ಳಿ ಹಾಗೂ ನಾಗವಳ್ಳಿ, ನಲ್ಲೂರು, ದೇವರಾಜಪುರ, ಕೋಟೆತಿಟ್ಟು, ಹೊಂಡರಬಾಳು, ಚಂದಕವಾಡಿ, ಅರಳೀಪುರ ಗ್ರಾಮಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸುವಂತೆ ನಿಗಮದ ಸಂತೇಮರಹಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.53 ಕೋಟಿ ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ರವರ ಸಮ್ಮುಖದಲ್ಲಿ ಇಂದು ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ , ಕಾರ್ತಿಕ ಮಾಸ, ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದu ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 28 ದಿನಗಳ ಅವಧಿಯಲ್ಲಿ 2,53,98,859 ನಗದು ಹಣ, 25 ಗ್ರಾಂ ಚಿನ್ನ ಹಾಗೂ 1 ಕೆಜಿ 253 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ. ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು 16 ವಿದೇಶಿ ನೋಟುಗಳು ಕಂಡುಬಂದಿವೆ.
ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ , ಭಾರತಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
Chamarajanagar
ಮನೆಯ ಬೀಗ ಮುರಿದು ಹಾಡ ಹಗಲಿನಲ್ಲಿಯೇ ಕಳ್ಳತನ
ಚಾಮರಾಜನಗರ: ಹಾಡ ಹಗಲಲ್ಲೇ ಮನೆ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ಇಂದು ಸಂಭವಿಸಿದೆ.
ಕರಿನಂಜನಪುರದ ನಿವಾಸಿ ನಾರಾಯಣಸ್ವಾಮಿ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಕಳ್ಳರು ಮನೆ ಒಳನುಗ್ಗಿ ಬೀರು ಹೊಡೆದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು. ಖದೀಮರನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.
Chamarajanagar
ಪತ್ರಿಕಾ ಛಾಯಾಗ್ರಾಹಕ ಹಬೀಬ್ ಉಲ್ಲಾಗೆ ಶ್ರದ್ಧಾಂಜಲಿ ಸಲ್ಲಿಕೆ
ಕೊಳ್ಳೇಗಾಲ: ಪಟ್ಟಣದ ಸಂಗಮ್ ಸ್ಟುಡಿಯೋ ಮಾಲೀಕರು ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕ ಹಬೀಬ್ ಉಲ್ಲಾ ನಿಧನಗೊಂಡ ಹಿನ್ನೆಲೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತ ಹಬೀಬ್ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಮಾಜಿ ಸಚಿವರು ಎನ್.ಮಹೇಶ್, ಮಾಜಿ ಶಾಸಕರಾದ ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜು, ಆರ್.ನರೇಂದ್ರ, ಪರಿಮಳಾ ನಾಗಪ್ಪ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಹೆಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ಶ್ರೀವರ್ಧನ್ ಆರ್.ಕೆ, ನಗರಸಭೆ ಮಾಜಿ ಸದಸ್ಯರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕು ಫೋಟೋಗ್ರಾಫರ್ ಸಂಘ ಪದಾಧಿಕಾರಿಗಳು ಹಾಗೂ ಇತರೆ ಮುಖಂಡರು ಇತರರು ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಪವನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಡಿ.ನಟರಾಜು, ನಿರ್ದೇಶಕರಾದ ಮರಿಸ್ವಾಮಿ, ರಾಜಶೇಖರ್, ಚಿಕ್ಕಮಾಳಿಗೆ, ರಾಜೇಶ್, ನಟರಾಜು, ಸುರೇಶ್, ಅವಿನ್ ಪ್ರಕಾಶ್, ಮೂಗೂರು ಮಹೇಶ್, ಸುರೇಂದ್ರ, ಶಂಕರ್, ಚಂದ್ರಶೇಖರ್, ಅಣಗಳ್ಳಿ ಮಹೇಶ್, ಸ್ಯಾಮುವೇಲ್, ವಸಂತಕುಮಾರ್, ಸಾಗರ್, ಕಾರ್ತಿಕ್, ಪ್ರೇಮ್, ನಟರಾಜು, ಲಿಂಗರಾಜು, ಗಿರೀಶ್ ಇದ್ದರು.
-
State14 hours agoIPL, ಟಿ-20 ವಿಶ್ವಕಪ್ ಕ್ರಿಕೆಟ್ ಸಂಬಂಧ ಸಿಎಂ, ಡಿಸಿಎಂರನ್ನು ಭೇಟಿ ಮಾಡಿದ ವೆಂಕಟೇಶ್ ಪ್ರಸಾದ್
-
Mandya17 hours agoಜಿಲ್ಲಾಧಿಕಾರಿಗಳಿಂದ ಗುತ್ತಲು ಕೆರೆಗೆ ಭೇಟಿ ಮತ್ತು ಪರಿಶೀಲನೆ
-
Chamarajanagar9 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Mandya15 hours agoಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿ ಭೇಟಿ
-
State9 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan12 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan11 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar10 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
