Chamarajanagar
ನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
ಚಾಮರಾಜನಗರ ಜಿಲ್ಲೆ ಹಿರಿಕಾಟಿ ಬಳಿ ಕ್ರಷರ್ ವಿಚಾರವಾಗಿ ಉದ್ಯಮಿಗಳಿಗೆ ಬೆದರಿಕೆ ಹಾಕಿರುವ ಆರೋಪ ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್ ಅವರ ಮೇಲೆ ಕೇಳಿ ಬಂದಿದೆ. ಚಾಮರಾಜನಗರದ ಸಂಸದ ಸುನಿಲ್ ಬೋಸ್ ಅವರ ಹೆಸರು ಕೂಡ ಪ್ರಸ್ತಾಪಿಸಿರುವ ನಂದಕುಮಾರ್, ನನಗೆ ಸಂಸದರ ಬೆಂಬಲವಿದೆ. ನನ್ನ ಪೊಲಿಟಿಕಲ್ ಒವರ್ ಏನು ಅಂತ ತೋರಿಸುತ್ತೇನೆ ಅಂತ ಉದ್ಯಮಿಗಳಿಗೆ ಬೆದರಿಕೆ ಹಾಕಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಯಮಿಗಳು ನಂದಕುಮಾರ್ ಸೇರಿ ಇತರರ ವಿರುದ್ಧ ಆರೋಪಗಳನ್ನು ಮಾಡಿದ್ದರು. ಹಿರಿಕಾಟಿ ಬಳಿ ಕ್ರಷರ್ ಉದ್ಯಮವನ್ನು ಕಾನೂನು ನೀತಿ ನಿಯಾಮವಳಿ ಅನ್ವಯವೇ, ಯಾವುದೇ ಉಲ್ಲಂಘನೆ ಅಗದಂತೆ ನಡೆಸುತ್ತ ಬಂದಿದ್ದೇವೆ. ನಮ್ಮ ಕ್ರಷರ್ ಪಕ್ಕದಲ್ಲೇ ನಂದಕುಮಾರ್ ಅವರ ಕ್ರಷರ್ ಕೂಡ ಇದೆ. ನಮಗೆ ಕಿರುಕುಳ ನೀಡಿ ಇಲ್ಲಿಂದ ನಮ್ಮ ಕ್ರಷರ್ ಅನ್ನ ಬೇರೆಡೆ ಸ್ಥಳಾಂತರ ಮಾಡಲು ಈ ರೀತಿ ಕಿರುಕಳ ನೀಡಿದ್ದಾರೆ ಅಂತ ಬಹಿರಂಗವಾಗಿ ಮಾಧ್ಯಮಗಳೆದುರು ಗಂಭೀರ ಆರೋಪಗಳನ್ನ ಮಾಡಿದ್ದರು.
ಇನ್ನು ಉದ್ಯಮಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ನಂದಕುಮಾರ್ ನಾನಂಥವನಲ್ಲಾ, ನಾನು ಯಾವುದೇ ಪೊಲಿಟಿಕಲ್ ಪವರ್ ಯೂಸ್ ಮಾಡುವುದಾಗಿ ಹೇಲಿಲ್ಲ. ಅವರು ವಿನಾಕಾರಣ ಸುಳ್ಳು ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರ ಅಂತ ಸ್ಪಷ್ಟನೆ ನೀಡಿದ್ದಾರೆ.
Chamarajanagar
ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾ*ವು
ಹನೂರು : ಕುಡಿಯುವ ನೀರು ತೆಗೆದುಕೊಳ್ಳಲು ಹೋಗಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಿದ್ದರಾಜಮ್ಮ ಮೃತ ದುರ್ದೈವಿ.

ಘಟನೆ ವಿವರ : ಮಧುವನಹಳ್ಳಿ ಗ್ರಾಮದಿಂದ ಲೊಕ್ಕನಹಳ್ಳಿ ಗ್ರಾಮದ ಜಮೀನೊಂದಕ್ಕೆ ಕೂಲಿಗಾಗಿ ಬಂದಿದ್ದ ಸಂದರ್ಭದಲ್ಲಿ ಕುಡಿಯಲು ನೀರು ತೆಗೆದುಕೊಳ್ಳಲು ಜಮೀನಿನಲ್ಲಿ ಇದ್ದಂತಹ ಕೃಷಿ ಹೊಂಡಕ್ಕೆ ತೆರಳಿದ್ದಾಗ ಆಯಾ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿರುತ್ತಾರೆ ಎಂದು ತಿಳಿದುಬಂದಿದೆ.
ಘಟನಾಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ
Chamarajanagar
ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿ ಬಂಧನ
ಚಾಮರಾಜನಗರ: ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಲಿಯಾಸ್ ಪಾಷಾ(40) ಬಂಧಿತ ಆರೋಪಿ. ಈತ ಆಟೋದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.
ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಚಾಮರಾಜನಗರ: ಕೇರಳ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 96 ಲಾಟರಿ ಟಿಕೆಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನ ಅಮಚವಾಡಿ ಗ್ರಾಮದ ಸಿದ್ದಶೆಟ್ಟಿ(60) ಬಂಧಿತ ಆರೋಪಿ. ಈತ ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಬಂಧಿತನ ಬಳಿ ಇದ್ದ 4,800 ರೂ. ಮೌಲ್ಯದ 96 ಲಾಟರಿ ಟಿಕೇಟ್ ಹಾಗೂ 300 ರೂ ನಗದು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Special22 hours agoಗೃಹಲಕ್ಷ್ಮಿ ಯೋಜನೆಯಲ್ಲಿ 1.04 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಸರ್ಕಾರದಿಂದ ಪರಿಶೀಲನೆ!
-
Kodagu18 hours agoಗುಡ್ಲೂರು ಗ್ರಾಮದಲ್ಲಿ ಆರೋಗ್ಯ ಜಾಗೃತಿ ಹಾಗೂ ತಪಾಸಣಾ ಶಿಬಿರ
-
Hassan13 hours agoಹಾಸನ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆ–ಕಟ್ಟೆಗಳು ತುಂಬಿ ರೈತರಲ್ಲಿ ಸಂತಸ
-
Special10 hours agoಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ: ಅರ್ಜಿ ಆಹ್ವಾನ!
-
Politics16 hours agoಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ಸಲ್ಲಿಕೆ: ಸಿದ್ದರಾಮಯ್ಯ
-
Chikmagalur23 hours agoತೋಟದ ಗೋಡೋನ್ನಿಂದ ₹2.5 ಲಕ್ಷ ಮೌಲ್ಯದ 7 ಅಡಿಕೆ ಮೂಟೆ ಕಳ್ಳತನ
-
State12 hours agoಕರ್ನಾಟಕದಲ್ಲಿ ಗುಡುಗು–ಸಿಡಿಲು ಮಳೆ ಎಚ್ಚರಿಕೆ: ಆರೆಂಜ್, ಯೆಲ್ಲೋ ಅಲರ್ಟ್ IMDಯಿಂದ ಘೋಷಣೆ
-
National12 hours agoಈ ಬಾರಿ ಕೋಲ್ಕತ್ತಾದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
