Chikmagalur
ತೊಟ್ಟಿಲು ತೂಗುವ ಕೈಗಳು ದೇಶವನ್ನು ರಕ್ಷಿಸಬಹುದು: ಚಂದ್ರಶೇಖರ್ ಮುರೊಳ್ಳಿ

ವರದಿ: ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ
ಜಯಪುರ: ಸುಂದರವಾದ ಕಾರ್ಯಕ್ರಮ ನಡೆಸಲು ಕಲಾವಿದರು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯವಶ್ಯಕ. ಇವರೆಲ್ಲರ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತೇವೆ. ಇದಕ್ಕೆ ಯಾವ ಮೇಲಿನವರ ಒಪ್ಪಿಗೆ ಹಾಗೂ ಮುಲಾಜು ಅವಶ್ಯಕತೆ ಇರುವುದಿಲ್ಲ ಎಂದು ಮೇಗುಂದ ಹೋಬಳಿ ಘಟಕ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಮುರೊಳ್ಳಿ ಹೇಳಿದರು.
ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮಹಿಳಾ ಘಟಕ ಹಾಗೂ ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮೇಗುಂದ ಹೋಬಳಿ ಘಟಕದ ವತಿಯಿಂದ ಆಯೋಜಿಸಲಾದ ಸಂಕ್ರಾಂತಿ ಜಾನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮವು ಶುಕ್ರವಾರ ಮೇಗೂರು ಗಿರಿಜನ ಆಶ್ರಮ ಶಾಲೆಯಲ್ಲಿ ನಡೆದಿದ್ದು, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಸರ್ಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ನೀಡುತ್ತಾರೆ, ಎಲ್ಲರೂ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಹೇಳಿದರು.
ಕೊಪ್ಪ ತಾಲೂಕು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀನಿಧಿ ದಿನೇಶ್ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಾ ತೊಟ್ಟಿಲು ತೂಗುವ ಕೈಗಳು ದೇಶವನ್ನು ರಕ್ಷಿಸಬಹುದು, ಆದ್ದರಿಂದ ಮಹಿಳೆಯರು ಮನಸು ಮಾಡಿದರೆ ದೇಶವನ್ನೇ ಮುನ್ನಡೆಸಬಹುದು ಎಂದರು.
ಮೇಗುಂದ ಹೋಬಳಿ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ರತ್ನಾಕರ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಜಾನಪದದ ಅರಿವು ಮೂಡಿಸುವ ಉದ್ದೇಶ ಈ ಕಾರ್ಯಕ್ರಮವಾಗಿದೆ. ಜಾನಪದ ಎನ್ನುವುದು ಕಲೆಯಲ್ಲ, ನಮ್ಮ ಸಂಸ್ಕೃತಿ. ನಾವು ದಿನನಿತ್ಯ ಹಾಕುವ ರಂಗೋಲಿಯಿಂದ ಹಿಡಿದು ದೇವರ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಯಾವುದೇ ಭೇದಭಾವವಿಲ್ಲದೆ ಎಲ್ಲ ಮಕ್ಕಳನ್ನು ಒಂದೇ ರೀತಿ ನೋಡಿಕೊಳ್ಳುತ್ತಾರೆ. ಸರ್ಕಾರಿ ಶಾಲೆಯಲ್ಲಿ ನುರಿತ ಶಿಕ್ಷಕರು ಇರುವುದರಿಂದ, ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದರು.
ಮೇಗುಂದ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಶಾಂತಕುಮಾರ್ ಜೈನ್ ಮಾತನಾಡಿ ಶಿಲೆ ಹೆಚ್ಚು ಪೆಟ್ಟು ತಿಂದರೆ ದೇವರ ವಿಗ್ರಹವಾಗುತ್ತದೆ, ಕಮ್ಮಿ ಪೆಟ್ಟು ತಿಂದ ಶಿಲೆಯು ಮೆಟ್ಟಿಲಾಗುತ್ತದೆ. ಜೀವನದಲ್ಲಿ ಹೆಚ್ಚು ಕಷ್ಟ ಪಟ್ಟವರು, ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ. ಶಿಕ್ಷಕ ಹಾಗೂ ಆರಕ್ಷಕ ಸಮಾಜ ರಕ್ಷಣೆಯನ್ನು ಮಾಡುತ್ತಾರೆ. ಶಿಕ್ಷಕ ಶಿಕ್ಷಣ ನೀಡಿ ಉತ್ತಮ ಪ್ರಜೆಯನ್ನಾಗಿ ಮಾಡಿದರೆ, ತಪ್ಪು ಮಾಡಿದವರಿಗೆ ಶಿಕ್ಷೆ ನೀಡಿ ಆರಕ್ಷಕರು ಉತ್ತಮ ಪ್ರಜೆಗಳನ್ನು ಸೃಷ್ಟಿಸುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಜನಮಿತ್ರ ವರದಿಗಾರರಾದ ಪ್ರದೀಪ್ ಹೆಬ್ಬಾರ್, ಈದಿನ.com ನಾ ಗಿರಿಜಾ, ಸೆಕ್ಸ್ ಫೋನ್ ವಾಜಕರಾದ ಆಶಿಶ್ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಬೈರೇದೇವರು,ಅತ್ತಿಕುಳಿ, ಮೇಗೂರು, ಶಾಂತಿಗ್ರಾಮ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಭಿನಂದಿಸಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಸದಸ್ಯ ಯಡಗುಂದ ವಾಸು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೃಪಾಲ ಅರೆಹಳ್ಳ, ಭಾಗ್ಯ ಚಂದ್ರಶೇಖರ್, ರೇವಣ್ಣ, ಮಹೇಶ್, ಪುಷ್ಪ ಇದ್ದರು.
Chikmagalur
ಮಾನವ ಕಳ್ಳ ಸಾಗಾಣಿಕೆ ಸಾಮಾಜಿಕ ಪಿಡುಗು: ವಿ ಹನುಮಂತಪ್ಪ

ಚಿಕ್ಕಮಗಳೂರು: ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಇದಕ್ಕೆ ಸಣ್ಣ ಮಕ್ಕಳು, ಯುವತಿಯರು, ಹೆಣ್ಣು ಮಕ್ಕಳು ಬಲಿಪಶು ಆಗುತ್ತಿರುವುದು ಅತ್ಯಂತ ಕಳವಳಕಾರಿ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಿಕ್ಕಮಗಳೂರು ಹಾಗೂ ಪರಿವರ್ತನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಶಿರಾಳಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ತಾಲ್ಲೂಕು ಪಂಚಾಯಿತಿ ಡಾ. ಅಂಬೇಡ್ಕರ್ ಸಭಾಂಗಣದಲ್ಲಿ ಮಾನವ ಕಳ್ಳ ಸಾಗಣಿಕೆಯ ಮಜಲುಗಳ ಅರಿವು ಕುರಿತು ಒಂದು ದಿನದ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಹೇಳಿದರು.
ವಿವಿಧ ಆಮಿಷಗಳಿಗೆ ಒಳಗಾಗಿ ಮೋಸದ ಬಲೆಗೆ ತುತ್ತಾಗಿ ಶೋಷಿತರಾಗುವುದನ್ನು ಸಮುದಾಯದ ಪ್ರತಿಯೊಬ್ಬರು ಅರಿತು ಜಾಗೃತರಾಗಬೇಕು ಸಮುದಾಯದ ಪ್ರತಿಯೊಬ್ಬರು ಅರಿತು ಜಾಗೃತರಾದಾಗ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಮಾನವ ಕಳ್ಳ ಸಾಗಾಣಿಕೆ ತಡೆಯಲು ಸಾಧ್ಯವಾಗುತ್ತದೆ. ಅಮಾಯಕ ಹೆಣ್ಣು ಮಕ್ಕಳು ಮಾನವ ಕಳ್ಳ ಸಾಗಾಣಿಕೆದಾರರಿಗೆ ಬಲಿಯಾಗುತ್ತಿರುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿರುವುದು ಒಂದೆಡೆಯಾದರೆ, ಸಣ್ಣ ಮಕ್ಕಳನ್ನು ಅಪಹರಿಸಿ ಭಿಕ್ಷಾಟನೆಗೆ ಹಚ್ಚುವುದು. ಮಾನವ ದೇಹದ ಅಂಗಾಂಗಳ ಮಾರಾಟದ ಪ್ರಸಂಗಗಳು ಕೇಳಿ ಬರುತ್ತವೆ ಎಂದರು.
ಪ್ರತಿಯೊಬ್ಬ ಪ್ರಜ್ಞಾವಂತ ಸಮುದಾಯ ವಿವಿಧ ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಪಾಲಕರು ಬಹು ಎಚ್ಚರಿಕೆಯಿಂದ ಇದ್ದು, ಮಾನವ ಕಳ್ಳ ಸಾಗಾಣಿಕೆ ತಡೆಗೆ ಸಂಕಲ್ಪ ತೊಡಬೇಕು ಎಂದ ಅವರು ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದ ಅವರು ಮಾನವ ಕಳ್ಳ ಸಾಗಾಣಿಕೆ ಕಂಡು ಬಂದಲ್ಲಿ ಜನತೆ ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾನವ ಕಳ್ಳ ಸಾಗಾಣಿಕೆ ಎಂಬುದು ಸಾಮಾನ್ಯ ಮಹಿಳೆಯರಿಗೆ ಸಮಾಜದಲ್ಲಿ ಸಾಮಾನ್ಯಯುತವಾಗಿ ಜೀವನ ನಡೆಸಲು ಸಮಸ್ಯೆಯಾಗುತ್ತಿದೆ. ಮಹಿಳೆಯರನ್ನು ಕಳ್ಳ ಸಾಗಾಣಿಕೆಯಿಂದ ಅವರನ್ನು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದು, ಕೆಲವು ಮಾರಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೆಣ್ಣು ಮಕ್ಕಳ ಲೈಂಗಿಕ ಕ್ರಿಯೆಗೆ ದುರ್ಬಳಕೆ, ಅಂಗಾಂಗಗಳ ಮಾರಾಟ, ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳಿಗೆ ಮಾನವ ಕಳ್ಳಸಾಗಾಣಿಕೆ ನಡೆಯುತ್ತದೆ. ಈ ಬಗ್ಗೆ ತನಿಖೆ ಮಾಡಿ, ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದ ಅವರು ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು ದುರದೃಷ್ಟಕರ, ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟ ಮಾಡುತ್ತಿದ್ದಾರೆ. ಅವರನ್ನು ಬಲವಂತವಾಗಿ ದುಡಿಮೆಗಳಲ್ಲಿ ದುಡಿಸಿಕೊಳ್ಳುತ್ತಿದ್ದಾರೆ. ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುವಂತೆ ಬಾಲ ಕಾರ್ಮಿಕರಾಗಿ ದುಡಿಸುವಂತದ್ದು, ಭಿಕ್ಷಾಟನೆಗೆ ಮಕ್ಕಳನ್ನು ಅಥವಾ ಹಿರಿಯ ಜೀವಗಳನ್ನು ಬಳಸಿಕೊಳ್ಳುತ್ತಿದ್ದಾರೆ ಇವುಗಳನ್ನು ತಪ್ಪಿಸಿ ಅವರಿಗೆ ನೆರವು ನೀಡಿ, ಉತ್ತಮ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು ಒಡನಾಡಿ ಸೇವಾ ಸಂಸ್ಥೆ ಕಾರ್ಯದರ್ಶಿ ಸ್ಟ್ಯಾನ್ಲಿ ಕೆ.ವಿ. ಪ್ರಾಸ್ತಾವಿಕ ನುಡಿಗಳನ್ನಾಡಿ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರು ಜಾಗೃತರಾಗಬೇಕು. ಇಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ಕ್ರಿಯಾಯೋಜನೆಗಳನ್ನು ರೂಪಿಸಿದ್ದು, ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ದತಿ, ಭಿಕ್ಷಾಟನೆ ಇವುಗಳನ್ನು ನಿರ್ಮೂಲನೆ ಮಾಡಲು ಪಣತೊಟ್ಟಿದೆ. ಹೆಣ್ಣು ಮಕ್ಕಳನ್ನು ಬೇರೆ ಬೇರೆ ಕೆಲಸಗಳಿಗೆ ಬಳಸಿಕೊಳ್ಳುತ್ತಿರುವುದನ್ನು ನಾವು ಪತ್ತೆ ಮಾಡಿ ಅವರಿಗೆ ನೆರವು ನೀಡಿ, ಉತ್ತಮ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದೇವೆ ಎಂದು ಹೇಳಿದರು.
ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಮಾತನಾಡಿ ಮಾನವ ಕಳ್ಳ ಸಾಗಾಣಿಕೆಯಲ್ಲಿ ತಂತ್ರಜ್ಞಾನದ ಬಳಕೆ ಉಪಯೋಗ ಮತ್ತು ದುರುಪಯೋಗ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಜನರು ಜವಾಬ್ದಾರಿಯುತವಾಗಿ ತಡೆಗಟ್ಟುವಂತಹ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಚಿಕ್ಕಮಗಳೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇಶಕ ರೇವಣ್ಣ, ಶಿರಾಳಕೊಪ್ಪ ಪರಿವರ್ತನಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಶಂಕರಪ್ಪ ಡಿ., ಮೈಸೂರು ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಪರಶುರಾಮ್ ಎಂ.ಎಲ್. ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Chikmagalur
ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮ

ವರದಿ: ಸಿ. ಎಲ್ ಪೂರ್ಣೇಶ್ ಚಕ್ಕುಡಿಗೆ
ಮೂಡಿಗೆರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಗೋಣಿಬೀಡು ವಲಯದ ಅಂಗಡಿ ಗ್ರಾಮದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಬಡ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಆಯೋಜಿಸಲಾಗಿದ್ದು, ಅದರ ಸಮಾರೂಪ ಸಮಾರಂಭ ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಹತ್ತನೆ ತರಗತಿ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಪರವಾಗಿ ಎಕ್ಸಂ ಪ್ಯಾಡ್ ಮತ್ತು ಪೆನ್ ವಿತರಿಸಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದಡಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯವಾಗುವಂತೆ 10ನೇ ತರಗತಿ ವಿದ್ಯಾರ್ಥಿಗಳಿಗೆ 3 ತಿಂಗಳ ಕಾಲ ಟ್ಯೂಷನ್ ಕ್ಲಾಸ್ ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಿವಾನಂದ ಮಾತನಾಡಿ, ಕಾರ್ಯಕ್ರಮದ ರೂಪು ರೇಷಗಳು ಹಾಗೂ ಯೋಜನೆಯು ನಡೆದು ಬಂದ ದಾರಿ ಬಗ್ಗೆ ವಿವರಿಸಿದರು.
ಜನಜಾಗೃತಿ ವೇದಿಕೆ ವಿಭಾಗದ ಯೋಜನಾಧಿಕಾರಿ ನಾಗರಾಜ್ ಮಾತನಾಡಿ, ಅನೇಕ ಯುವಕ ಯುವತಿಯರು ಮದ್ಯಪಾನ, ತಂಬಾಕು ಸೇವನೆ, ಮಾದಕ ವಸ್ತುಗಳ ಸೇವನೆಗೆ ಮಾರು ಹೋಗುತ್ತಿರುವುದು ದುರ್ದೈವ ಸಂಗತಿ. ಇದರಿಂದ ಎಷ್ಟೋ ಯುವಕರು ತಮ್ಮ ಜೇವನವನ್ನೇ ಬಲಿ ತೆಗೆದುಕೊಳುತ್ತಿದ್ದಾರೆ. ಮಾದಕ ವ್ಯಸನಕ್ಕೆ ದಾಸರಾಗುತ್ತಿರುವ ಯುವಕರು ತಮಗೆ ಅರಿವಿಲ್ಲದೆಯ ಕಾನೂನು ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಮೈಗೂಡಿಸಿಕೊಳ್ಳುವುದರ ಮೂಲಕ ತಮ್ಮ ಜೇವನವನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕರಾದ ರಾಮೇಶ್ವರಪ್ಪ, ಟ್ಯೂಷನ್ ಕ್ಲಾಸ್ ಶಿಕ್ಷಕಿ ಲತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಒಕ್ಕುಡದ ಉಪಾಧ್ಯಕ್ಷ ಗಿರೀಶ್, ವಲಯ ಮೇಲ್ವೀಚಾರಕ ದೀಪಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಭಾರತಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Chikmagalur
ಚಿಕ್ಕಮಗಳೂರು ನಗರವನ್ನು ಸಿಎಂ ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುವುದು: ಶಾಸಕ ಹೆಚ್.ಡಿ ತಮ್ಮಯ್ಯ

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ನಗರವನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಸಮಗ್ರ ಅಭಿವೃದ್ಧಿಪಡಿಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು.
ಅವರು ಇಂದು ನಗರದ ಕೋಟೆ ಬಡಾವಣೆ ಬೇಲೂರು ರಸ್ತೆ ನೂತನ ಬಸ್ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಭಾಗಗಳಲ್ಲಿ ಅತ್ಯುನ್ನತ ಮಾದರಿಯ ೪ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಯಾದ ಬಳಿಕ ಕಾಮಗಾರಿಗಳನ್ನು ಆರಂಭಿಸಿ ಮೇ ತಿಂಗಳೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.
ನಗರದ ವಿವಿದೆಡೆ ವಿನೂತನ ಮಾದರಿಯಲ್ಲಿ ಹೊರದೇಶದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದು, ಈ ಬಸ್ ನಿಲ್ದಾಣಗಳನ್ನು ಅತ್ಯಾಧುನಿಕ ರೀತಿಯಲ್ಲಿ ಗ್ಲಾಸ್ ಅಳವಡಿಸಿರುವುದರಿಂದ ಇದು ಸರ್ಕಾರದ ಆಸ್ತಿ ಅಲ್ಲ ಸಾರ್ವಜನಿಕರ ಆಸ್ತಿ ಎಂದು ಭಾವಿಸಿ ಹಾನಿಯಾಗದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.
ಪಕ್ಷಾತೀತವಾಗಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಇಲ್ಲಿ ಒಂದು ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂಬ ಹಲವು ದಿನಗಳ ಬೇಡಿಕೆ ಇಂದು ಈಡೇರಿದ್ದು, ಸಂಸದ ಜಯರಾಂ ರಮೇಶ್ ನಿಧಿಯಿಂದ ೧೦.೯೨ ಲಕ್ಷ ರೂ ಹಾಗೂ ತಮ್ಮ ಶಾಸಕರ ನಿಧಿಯಿಂದ ೫ ಲಕ್ಷ ರೂ ನಿಧಿಯಲ್ಲಿ ಈ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದರು.
೧೦.೯೦ ಲಕ್ಷ ರೂ ವೆಚ್ಚದಲ್ಲಿ ಹಿರೇಮಗಳೂರಿನಲ್ಲಿ ಬಸ್ ನಿಲ್ದಾಣ, ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆ ಕಲ್ಯಾಣ ನಗರದಲ್ಲಿ ೧೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ಹಾಗೂ ಕಣಿವೇ ರುದ್ರೇಶ್ವರ ದೇವಸ್ಥಾನದ ಬಳಿ ಹೌಸಿಂಗ್ ಬೋರ್ಡ್ ಆರನೇ ಹಂತದ ಜನರಿಗೆ ಹಾಗೂ ದಾಸರಹಳ್ಳಿ ಜನರಿಗೆ ಅನುಕೂಲವಾಗುವಂತೆ ೧೦.೯೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದೆಂದರು.
ಈ ನಾಲ್ಕು ಕಾಮಗಾರಿಗಳಿಗೆ ಅಗತ್ಯವಾಗಿ ಬೇಕಾಗಿರುವ ಹಣ ಲಭ್ಯವಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದೆಂದು ತಿಳಿಸಿದ ಅವರು, ಜನಪ್ರತಿನಿಧಿಗಳಾಗಿ ಎಲ್ಲಾ ಜನರ ಆಶಯಗಳಿಗೆ ಸ್ಪಂದಿಸಿ ಪಕ್ಷಾತೀತವಾಗಿ ಕೆಲಸ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದರು.
ನಗರದಲ್ಲಿ ಹಾನಿಯಾಗಿರುವ ರಸ್ತೆಗಳ ದುರಸ್ಥಿಗೆ ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು ಅಂಚೆ ಕಚೇರಿ ರಸ್ತೆ, ಒಕ್ಕಲಿಗರ ಸಮುದಾಯ ಭವನದ ರಸ್ತೆ, ಶಂಕರಪುರ ಐದನೇ ಕ್ರಾಸ್ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳನ್ನು ದುರಸ್ಥಿಪಡಿಸಲು ಜಯರಾಂ ರಮೇಶ್ ರವರ ಮನವೊಲಿಸಿ ಅನುದಾನ ತಂದಿರುವುದರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಚಿಕ್ಕಮಗಳೂರು ನಗರಕ್ಕೆ ಸೀಮಿತವಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
ಗವನಹಳ್ಳಿಯಿಂದ ರಾಂಪುರದವರೆಗೆ ಉತ್ತಮ ಗುಣಮಟ್ಟದ ವಿದ್ಯುತ್ ದೀಪ ಅಳವಡಿಸಲು ಈಗಾಗಲೇ ಡಿಪಿಆರ್ ಮಾಡಲಾಗಿದೆ. ಮುಂದೆ ಬೇಲೂರು ಬಸ್ ನಿಲ್ದಾಣದಿಂದ ಹಿರೇಮಗಳೂರುವರೆಗೆ ಬೀದಿದೀಪ ಅಳವಡಿಸಲು ಕ್ರಮವಹಿಸಲಾಗುವುದೆಂದು ಹೇಳಿದರು.
ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ನಾವು ಅಧ್ಯಕ್ಷರಾದ ನಂತರ ಸಿ ಟಿ ಬಸ್ ನಿಲ್ದಾಣಗಳನ್ನು ನಿರ್ಮಿಸಬೇಕೆಂದು ಸಾರ್ವಜನಿಕರಿಂದ ಬಹಾಳ ಬೇಡಿಕೆ ಬಂದ ಪರಿಣಾಮ ಇಂದು ಶಾಸಕರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಈಡೇರಿಸಿದ್ದಾರೆ ಎಂದರು.
ಸಾರ್ವಜನಿಕರು ಈ ಅತ್ಯಾಧುನಿಕ ಬಸ್ ನಿಲ್ದಾಣಗಳನ್ನು ತಮ್ಮ ಆಸ್ತಿ ಎಂಬಂತೆ ಬಳಸಿಕೊಳ್ಳಬೇಕೆಂದು ಮನವಿ ಮಾಡಿದ ಅವರು,ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಿದಾಗ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಬಸ್ ನಿಲ್ದಾಣಗಳು ಇಲ್ಲದೆ ತೊಂದರೆಯಾಗುತ್ತಿತ್ತು. ಇಂದು ನಗರದ ವಿವಿಧ ನಾಲ್ಕು ಭಾಗಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಗುದ್ದಲ್ಲಿಪೂಜೆ ನೆರವೇರಿಸಿರುವುದು ಶ್ಲಾಘನೀಯ ಎಂದರು.
ನಗರದಲ್ಲಿ ಪರವಾನಗಿ ಇಲ್ಲದೆ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಗಮನ ಸೆಳೆದಾಗ ಅಂತಹ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಡಿಎ ಆಯುಕ್ತರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಸಿಡಿಎ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ನಾಯ್ಡು, ಗ್ರಾಮಸ್ಥರಾದ ದಯಾನಂದ ನಾಯ್ಡು, ವೆಂಕಟೇಧ್ ನಾಯ್ಡು, ನಗರಸಭೆ ಸದಸ್ಯರಾದ ಮಧುಕುಮಾರ್ ರಾಜ್ ಅರಸ್, ಶಾದಬ್, ಆನಂದ, ಸೋಮಣ್ಣ ಹಾಗೂ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಸಿಡಿಎ ಆಯುಕ್ತರಾದ ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.
-
State13 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan9 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan8 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports11 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್