Chikmagalur
ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಪೊಲೀಸರಿಂದ ಬ್ಯಾರಿಕೆಡ್ ಅಳವಡಿಕೆ

ಬಣಕಲ್ :ಉತ್ತಮ ಗುಣಮಟ್ಟದ ರಸ್ತೆಗಳಿದ್ದರೂ ಸಹ ಚಾರ್ಮಾಡಿ ಘಾಟಿಯಲ್ಲಿ ಮಂಜು ಕವಿದ ವಾತಾವರಣ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪಿ.ಎಸ್.ಐ ಜಂಬೂರಾಜ್ ಮಹಾಜನ್ ತಿಳಿಸಿದರು.
ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪಘಾತ ತಡೆಗಟ್ಟಲು ಬ್ಯಾರಿಕೆಡ್ ಗಳನ್ನು ಅಳವಡಿಸಲಾಯಿತು. ಯುವಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು.ಚಾರ್ಮಾಡಿ ಘಾಟಿಯ ತಿರುವಿನ ಬಳಿ ರಸ್ತೆ ಬದಿಯ ಮೋರಿಗಳು ಬಿರುಕು ಬಿಟ್ಟಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಮುಂಜಾಗ್ರತ ಕ್ರಮವನ್ನು ಬಣಕಲ್ ಪೊಲೀಸರು ಕೈ ಗೊಂಡರು.ಬಸ್ ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದರು.
ಈ ಸಂದರ್ಭದಲ್ಲಿ ಬಣಕಲ್ ಠಾಣೆಯ ASI ಶಶಿ, ಜಗದೀಶ್, ಸಿಬ್ಬಂದಿ ವರ್ಗ ಹಾಜರಿದ್ದರು
Chikmagalur
ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ ಕಲ್ಪಿಸುವರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದ್ದು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Chikmagalur
ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.
Chikmagalur
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ – ಬೈ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು. ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mandya22 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State18 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿಗೆ ಬೆಳ್ಳಿ ಹಬ್ಬದ ಸಂಭ್ರಮ
-
Mandya23 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu22 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan19 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya23 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ