Connect with us

Mandya

ಜಿಲ್ಲಾಧಿಕಾರಿಯಿಂದ ಚೆಕ್ ಪೋಸ್ಡ್ ಪರಿಶೀಲನೆ

Published

on

ಮದ್ದೂರು: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಮದ್ದೂರು ತಾಲ್ಲೂಕಿನ ಮಲ್ಲನಕುಪ್ಪೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಚಲಿಸುವ ಎಲ್ಲಾ ವಾಹನಹಳ ಪರಿಶೀಲನೆ ನಡೆಸಬೇಕು. ತಾವು ಮಾಡುವ ಕೆಲಸಗಳನ್ನು ಜಿಲ್ಲಾ ದೂರು ನಿರ್ವಾಹಣಾ ಕೋಶದಿಂದ ವೀಕ್ಷಿಸಲಾಗುತ್ತಿದೆ. ಇದರ ಜೊತೆಗೆ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವೀಕ್ಷಕರು ಸಹ ತಮ್ಮ ಕೆಲಸಗಳ ಬಗ್ಗೆ ನಿಗಾ ವಹಿಸುತ್ತಾರೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಲೋಪ ಕಂಡು ಬಂದರೆ ನೋಟೀಸ್ ಜಾರಿ ಮಾಡಿ ಆರ್.ಪಿ‌ಆಕ್ಟ್ ಅಡಿ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಸಹಾಯಕ ಚುನಾವಣಾಧಿಕಾರಿ ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಡೆಂಗ್ಯೂ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕರ

Published

on

ಮಂಡ್ಯ: ಸ್ವಚ್ಛತೆಗೆ ಆದ್ಯತೆ ನೀಡಿ, ಡೆಂಗ್ಯೂ ಬಗ್ಗೆ ಗಾಬರಿಬೇಡ. ನಿಮ್ಮೊಡನೆ ನಾವಿದ್ದೇವೆ. ಮನೆಯ ಸುತ್ತ ಮುತ್ತ ನೈರ್ಮಲ್ಯ ಕಾಪಾಡಿಕೊಳ್ಳಿ ಎಂದು ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ, ತಾಲೂಕು ಆಡಳಿತ, ಪುರಸಭೆ ಶ್ರೀರಂಗಪಟ್ಟಣ ಸ್ಥಳೀಯ ಆರೋಗ್ಯ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀರಂಗಪಟ್ಟಣದ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ “ಡೆಂಗ್ಯೂ ನಿಯಂತ್ರಣ ಕುರಿತು” ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವತಃ ಶಾಸಕ ರಮೇಶ್ ಬಂಡಿಸಿದ್ದೇಗೌಎ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರುಗಳು ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಅರಿವು ಮೂಡಿಸಿದರು.

ಇತ್ತೀಚೆಗೆ ತಾಲೂಕಿನಲ್ಲಿ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ದಂತಹ ಪ್ರಕರಣಗಳು ಹೆಚ್ಚಾಗುತ್ತಿತ್ತು ನಾಗರಿಕರನ್ನು ಭಯಭೀತಗೊಳ್ಳುವಂತೆ ಮಾಡಿದೆ. ಸಾರ್ವಜನಿಕರಿಗೆ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ನಿಯಂತ್ರಣದ ಬಗ್ಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಜನರಲ್ಲಿ ಧೈರ್ಯ ತುಂಬುವ ಸಲುವಾಗಿ ಜಾಗೃತಿ ಜಾತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕೆಂದು ಸಲಹೆ ನೀಡಿದರು.

ನಂತರ ಜಾಗೃತಿ ಜಾಥಾವು ಬಸ್ ನಿಲ್ದಾಣದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕರಪತ್ರ ವಿತರಿಸಿ ಪುರಸಭೆ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಡೆಂಗ್ಯು ನಿಯಂತ್ರಣ ಕುರಿತು ಘೋಷಣೆ ಕೂಗುತ್ತಾ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ತ, ಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಇಓ ವೇಣು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ.ಮಂಜುನಾಥ್,‌ ಪುರಸಭೆ ಮುಖ್ಯಾಧಿಕಾರಿ ರಾಜಣ್ಣ,ಹಾಗೂ ಆರೋಗ್ಯ ಇಲಾಖೆಯ ಕ್ಷೇತ್ರ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Continue Reading

Mandya

ಕೆ.ಆರ್.ಎಸ್. ಜಲಾಶಯದಿಂದ 1,50,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ – ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

Published

on

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯದಿಂದ ಈಗಾಗಲೇ 70,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದ್ದು, ಮಳೆ ಹೆಚ್ಚಾಗಿರುವುದರಿಂದ ಸುಮಾರು 1,00,000 ದಿಂದ 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಹಾಗೂ ರೈತರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದ್ದಾರೆ.

Continue Reading

Mandya

ಆ.02 ರಿಂದ ಅಂತರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ.

Published

on

ಮಂಡ್ಯ: ಆದಿಚುಂಚನಗಿರಿ ವಿಶ್ವವಿದ್ಯಾಲಯ, ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಫಾರ್ ಮಾಲಿಕ್ಯುಲರ್ ಮೆಡಿಸಿನ್ ಹಾಗೂ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಶ್ರಯದಲ್ಲಿ ಆ. 02 ಮತ್ತು 03 ರಂದು ಅಂತರರಾಷ್ಟ್ರೀಯ ವೈದ್ಯಕೀಯ ಸಮ್ಮೇಳನವನ್ನು ಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ
ವಿಶ್ವವಿದ್ಯಾಲಯದ ಡಾಕ್ಟರ್ ಶೋಬಿತ್ ರಂಗಪ್ಪ ತಿಳಿಸಿದರು .

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ 18 ಮಂದಿ ಪ್ರೊಫೆಸರ್ ಗಳು ತಮ್ಮ ವಿಚಾರವನ್ನು ಮಂಡಿಸಿ ಸಾಧನೆ ಮತ್ತು ಸಂಶೋಧನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಶ್ರೀ ಬಾಲ ಗಂಗಾಧರನಾಥ ಮಹಾ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಶ್ರೀ ಡಾ..ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆಮಿಕಲ್ ಬಯೋಲಜಿ ಸೊಸೈಟಿಯ ಅಧ್ಯಕ್ಷ ಪ್ರೊಫೆಸರ್ ತೇಜ್ ಪಾಲ್ ಸಿಂಗ್ ಭಾಗವಹಿಸಲಿದ್ದಾರೆ ಎಂದರು. ಅತಿಥಿಗಳಾಗಿ ಇಂಡಿಯಾ ಕೆಮಿಕಲ್ ಬಯಾಲಜಿ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷ ಪ್ರೊಫೆಸರ್ ಸಿದ್ದಾರ್ಥ ,ಉಪಾಧ್ಯಕ್ಷ ಪ್ರೊಫೆಸರ್ ಕೆಎಸ್ ರಂಗಪ್ಪ ,ಮಾಜಿ ಅಧ್ಯಕ್ಷ ಪ್ರೊಫೆಸರ್ ತಪಸ್ ಕೆ ಕುಂದು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ಘೋಷ್ಠಿಯಲ್ಲಿ ಪ್ರೊಫೆಸರ್ ಪ್ರಶಾಂತ್ ಕಾಳಪ್ಪ ,ಪ್ರೊಫೆಸರ್ ಡಾಕ್ಟರ್ ಅನಿಲ್ ಕುಮಾರ್ ಉಪಸ್ಥಿತರಿದ್ದರು.

Continue Reading

Trending

error: Content is protected !!