Chikmagalur
ಚಿಕ್ಕಮಗಳೂರು ನಗರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ದಿಢೀರ್ ಭೇಟಿ
ಚಿಕ್ಕಮಗಳೂರು :
ಚಿಕ್ಕಮಗಳೂರು ನಗರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ದಿಢೀರ್ ಭೇಟಿ
ಚಿಕ್ಕಮಗಳೂರು ಜಿಲ್ಲೆಯ 4 ಶಾಸಕರು ಸೇರಿ 28 ಮುಖಂಡರ ಜೊತೆ ತುರ್ತು ಸಭೆ ಕರೆದ ಸುರ್ಜೆವಾಲ
ಕಾಂಗ್ರೆಸ್ ಅಭ್ಯರ್ಥಿ ಪರ ನಿರೀಕ್ಷೆ ಮಟ್ಟದಲ್ಲಿ ಪ್ರಚಾರ ಮಾಡದ ಶಾಸಕರು
ಅಭ್ಯರ್ಥಿ ಅನುಪಸ್ಥಿತಿಯಲ್ಲಿ ಒಮ್ಮೆ ಮಾತ್ರ ಪ್ರಚಾರ ಮಾಡಿರುವ ಜಿಲ್ಲಾ ಉಸ್ತುವಾರಿ ಕೆ.ಜೆ. ಜಾರ್ಜ್
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಭೀತಿ…?
ಕಾಂಗ್ರೆಸ್ ಪಕ್ಷದ ಸಮೀಕ್ಷೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸೋಲಿನ ರಿಪೋರ್ಟ್ ಹಿನ್ನೆಲೆ
ಚಿಕ್ಕಮಗಳೂರು ಶಾಸಕರು ಸೇರಿದಂತೆ 28 ಮುಖಂಡರ
ದಿಢೀರ್ ಸಭೆ ಕರೆದ ಸುರ್ಜೆವಾಲ
ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ 3 ಗಂಟೆಗೆ ಆಗಮಿಸಲಿರುವ ಸುರ್ಜೆವಾಲ
ಖಾಸಗಿ ಹೋಟೆಲ್ ನಲ್ಲಿ ಎರಡು ಗಂಟೆಗಳ ಕಾಲ ಸಭೆ ನಡೆಸಲಿರುವ ಸುರ್ಜೆವಾಲ
ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರವನ್ನ ವಶಪಡಿಸಿಕೊಂಡಿದ್ದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷದ 4 ಶಾಸಕರಿದ್ರು ಸೋಲಿನ ರಿಪೋರ್ಟ್ ಸಿಕ್ಕ ಬೆನ್ನಲೇ ಸುರ್ಜೆವಾಲ ಆಕ್ಟಿವ್
Chikmagalur
ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನ
ಚಿಕ್ಕಮಗಳೂರು: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರುಅವರು ಸೋಮವಾರ ಈ ಬಗ್ಗೆ ಹೇಳಿಕೆ ನೀಡಿರುವ ಅವರು ಈ ಸಂಭ್ರಮದ ಒಂದು ಭಾಗವಾಗಿ ಹರ್ ಘರ್ ತಿರಂಗಾ, ಎಂಬ ಘೋಷ ವಾಕ್ಯದೊಂದಿಗೆ ೨೦೨೪ ರ ಆ.೧೩ ರಿಂದ ೧೫ರ ವರೆಗೆ ದೇಶದ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಿ ದಾಖಲಿಸುವಂತೆ ಕರೆ ನೀಡಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ, ಚಿತ್ರಕಲಾ ಶಿಬಿರ, ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಕಾರದಿಂದ ಆಗಸ್ಟ್ ೧೩ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಕೋಟೆ ಬಡಾವಣೆಯಲ್ಲಿರುವ ಐತಿಹಾಸಿಕ ಸುಗ್ಗಿ ಕಲ್ಲಿನಿಂದ ಜಿಲ್ಲಾಧಿಕಾರಿಗಳ ಕಛೇರಿಯ ನೆನಪಿಂಗಳದವರೆಗೆ ವಾಕಥಾನ್ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಎಲ್ಲಾ ಕಛೇರಿಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವರು ಎಂದರು.
ಆಗಸ್ಟ್ ೧೪ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಕೆ ಎಂ. ರಸ್ತೆಯ ದಂಟರಮಕ್ಕಿಯಿಂದ ಐಡಿಎಸ್‌ಜಿ ಕಾಲೇಜಿನವರೆಗೆ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳಿಂದ, ಎಐಟಿ ಸರ್ಕಲ್‌ನಿಂದ ಎಐಟಿ ಕಾಲೇಜಿನ ವರೆಗೆ ಎಐಟಿ ಕಾಲೇಜಿನ ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ ಏರ್ಪಡಿಸಲಾಗುವುದು.
ರಿವರ್, ರ್‍ಯಾಪ್ಪಿಂಗ್‌ನ್ನು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರವಾಸೋದ್ಯಮ ಇಲಾಖೆ ಮೂಲಕ ನಡೆಸಲಾಗುವುದು ಎಂದು ನುಡಿದರು.
ಸಾರ್ವಜನಿಕರು ಈ ತಿರಂಗಾ ಅಭಿಯಾನದಲ್ಲಿ ಕೈ ಜೋಡಿಸಿ ತಮ್ಮ ತಮ್ಮ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು
Chikmagalur
ಸರ್ಕಾರಿ ನೌಕರರ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮ
ಚಿಕ್ಕಮಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು ಎಂದು ಶಾಸಕ ಎಚ್. ಡಿ. ತಮ್ಮಯ್ಯ ಸಲಹೆ ಮಾಡಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘ, ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ನಂತರದ ಉನ್ನತ ಶಿಕ್ಷಣದ ಆರು ವರ್ಷಗಳ ಸಮಯ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖವಾದ ಘಟ್ಟ, ಆ ಕಾಲ ನಮ್ಮ ಬದುಕನ್ನು ರೂಪಿಸುವ ಕಾಲ, ಆ ಸಂದರ್ಭದಲ್ಲಿ ನಾವು ಆಕರ್ಷಣೆಗಳಿಗೆ ಒಳಗಾಗಿ ಅತ್ತಿತ್ತ ಹೊರಳಿದರೆ ಬದುಕು ಹಾದಿ ತಪ್ಪುತ್ತದೆ ನಮ್ಮ ಗುರಿಯನ್ನು ತಲುಪಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳಿಗೆ ಬಹಳಷ್ಟು ಅಭಿಲಾಷೆಗಳಿರುತ್ತವೆ ಅವುಗಳನ್ನು ಪೂರೈಸಿಕೊಳ್ಳುವ ಸಮಯ ವಿದ್ಯಾರ್ಥಿ ದೆಸೆಯಲ್ಲ, ಉನ್ನತ ಶಿಕ್ಷಣ ಮುಗಿದ ನಂತರ ಅವುಗಳನ್ನು ಈಡೇರಿಸಿಕೊಳ್ಳಬಹುದು ಹಾಗಾಗಿ ವಿದ್ಯಾರ್ಥಿಗಳು ಶ್ರದ್ದೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಬದುಕಿನಲ್ಲಿ ನೆಲೆ ನಿಂತ ನಂತರ ಹೆತ್ತವರನ್ನು ಯಾವುದೇ ಕಾರಣಕ್ಕೂ ಮರೆಯಬಾರದು ನಾವು ಈ ಮಟ್ಟಕ್ಕೆ ಬರಲು ಹೆತ್ತವರ ತ್ಯಾಗ, ಪರಿಶ್ರಮ ಕಾರಣ ಎಂಬುದನ್ನು ಅರಿತು ಅವರನ್ನು ಸಾಕಿ ಸಲಹಬೇಕು ಎಂದು ತಿಳಿಸಿದರು.
ಎ ಐ ಟಿ ಪ್ರಾಂಶುಪಾಲ ಡಾ, ಸಿ. ಟಿ. ಜಯದೇವ್ ಮಾತನಾಡಿ ಇದು ಜ್ಞಾನದ ಯುಗ, ಈ ಜಗತ್ತಿನಲ್ಲಿ ಜ್ಞಾನಕ್ಕೆ ಮಾತ್ರ ಬೆಲೆ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು, ಬರೀ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಎಲ್ಲಾ ಕ್ಷೇತ್ರಗಳಲ್ಲೂ ಎಲ್ಲಾ ವಿಷಯಗಳಲ್ಲೂ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಕೌಶಲ್ಯವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ವೇಳೆ ಪೋಷಕರ ಆರ್ಥಿಕ ಶಕ್ತಿ ಯನ್ನು ಅವರ ಪರಿಸ್ಥಿತಿಯನ್ನೂ ಅರ್ಥ ಮಾಡಿಕೊಳ್ಳಬೇಕು, ಆತ್ಮವಿಶ್ವಾಸ ಶ್ರದ್ಧೆ ಪರಿಶ್ರಮವನ್ನು ಮೈಗೂಡಿಸಿಕೊಳ್ಳಬೇಕು, ವಿದ್ಯಾವಂತರಾಗುವುದರ ಜೊತೆಗೆ ವಿನಯವಂತರೂ ಆಗಬೇಕು ಎಂದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಮಾತನಾಡಿ ಕಳೆದ ೫ ವರ್ಷದ ಅವಧಿಯಲ್ಲಿ ಸಂಘದಿಂದ ಜಿಲ್ಲೆಯ ಒಂದೂವರೆ ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗಿದೆ, ಜಿಲ್ಲಾ ಸರಕಾರಿ ನೌಕರರ ಸಂಘ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿರುವ ಜಿಲ್ಲಾ ಸರ್ಕಾರಿ ನೌಕರರ ೨೪೪ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಮಂಜುನಾಥ ಸ್ವಾಮಿ ಕಾರ್ಯದರ್ಶಿ ಎ. ಎಸ್. ದರ್ಶನ್ ಉಪಾಧ್ಯಕ್ಷ ಹೆಚ್. ಆರ್. ಶಿವಕುಮಾರ್ ಖಜಾಂಚಿ ಡಾ. ಜಗದೀಶ್. ರಾಜ್ಯ ಪರಿಷತ್ ಸದಸ್ಯ ಎಸ್. ಟಿ. ಪೂರ್ಣೇಶ್, ದೇವಾನಂದ್, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಪದ್ಮರಾಜ್, ಅಜ್ಜಂಪುರ ತಾಲೂಕು ಅಧ್ಯಕ್ಷ ಈಶ್ವರಪ್ಪ, ಶೃಂಗೇರಿ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಬಿ ಇ ಒ ಹೇಮಚಂದ್ರ ಉಪಸ್ಥಿತರಿದ್ದರು.
Chikmagalur
ರಸ್ತೆ ಪೂರ್ಣವಾಗದೇ ಸ್ಥಳೀಯರಿಂದ ಟೋಲ್ ಸಂಗ್ರಹ ಮಾಡ್ತಿದ್ದಾರೆಂದು ಆರೋಪಿಸಿ ದಿಢೀರ್ ಪ್ರತಿಭಟನೆ
ಚಿಕ್ಕಮಗಳೂರು : ಕಡೂರು ತಾಲೂಕಿನ ಲಿಂಗ್ಲಾಪುರ ಟೋಲ್ ಬಳಿ ರಸ್ತೆ ಪೂರ್ಣವಾಗದೇ ಸ್ಥಳೀಯರಿಂದ ಟೋಲ್ ಸಂಗ್ರಹ ಮಾಡ್ತಿದ್ದಾರೆಂದು ಆರೋಪಿಸಿ ದಿಢೀರ್ ಪ್ರತಿಭಟನೆ ನಡೆಸಿದರು.
ಸ್ಥಳಿಯರು ಪ್ರತಿಭಟನೆ ಮಾಡಿ ನಮ್ಮ ಜಮೀನು-ಮಣ್ಣು ಕೊಟ್ಟು ಓಡಾಡೋಕೆ ದುಡ್ಡೂ ಕೊಡ್ಬೇಕಾ ಎಂದು ಪ್ರಶ್ನಿಸಿದ್ದಾರೆ.
ಸ್ಥಳೀಯರ ಓಡಾಟಕ್ಕೆ ಸರ್ವಿಸ್ ರಸ್ತೆ ನಿರ್ಮಿಸುವಂತೆ ಒತ್ತಾಯಿಸಿ ಸರ್ವಿಸ್ ರಸ್ತೆ ಇದ್ರೆ ನಾವು ಹೈವೆಗೆ ಬರೋದೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಸ್ಥಳೀಯರಿಂದಲೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿ
ನಿತ್ಯ ಹೊಲ-ಗದ್ದೆ-ತೋಟಗಳಿಗೆ ಹೋಗುವಾಗಲೂ ಟೋಲ್ ಕೊಡೋಕೆ ಆಗುತ್ತಾ ಎಂದು ಕೇಳಿದ್ದಾರೆ
ರಾಷ್ಟ್ರೀಯ ಹೆದ್ದಾರಿ 206 ರಲ್ಲಿರುವ ಟೋಲ್ ಬಳಿ ನಿತ್ಯ ಗಲಾಟೆ ಸಾಮಾನ್ಯವಾಗಿದ್ದು ಸ್ಥಳೀಯರ ಮನವೊಲಿಸಲು ಕಡೂರು ಪೊಲೀಸರು ಹರಸಾಹಸ ಪಡಬೇಕಾಯಿತು.
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.