Chikmagalur
ಅತ್ಯಾಚಾರಕ್ಕೆ ಯತ್ನ ಆರೋಪ, ವೈದ್ಯ ಎಲ್ಡೋಸ್ ಜೈಲು ಪಾಲು

ಚಿಕ್ಕಮಗಳೂರು : ಬಾಳೆಹೊನ್ನೂರಿನಲ್ಲಿ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನರಸಿಂಹರಾಜಪುರ ವೈದ್ಯಾಧಿಕಾರಿ ಡಾ .ಎಲ್ಡೋಸ್ ಜಾಮೀನು ರದ್ದಾಗಿದ್ದು ಜೈಲು ಪಾಲಾಗಿದ್ದಾನೆ.
ಸೋಮವಾರ ವಿಚಾರಣೆ ನಡೆಸಿದ ನರಸಿಂಹರಾಜಪುರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ. ಘಟನೆ ನಂತರ ಡಾ. ವರ್ಗೀಸ್ ನನ್ನು ನರಸಿಂಹರಾಜಪುರ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ ಮಾಡಲಾಗಿತ್ತು. ಡಾ. ಎಲ್ಡೋಸ್ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 ಅನ್ವಯ ಕೇಸ್ ದಾಖಲಾಗಿತ್ತು. ಬಳಿಕ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆ ನಡೆಸಿದ ನರಸಿಂಹರಾಜಪುರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ.
ನೊಂದ ಮಹಿಳೆಯೂ ಇಲಾಖೆಯ ಡಿ ದರ್ಜೆ ಸಿಬ್ಬಂದಿ ಆಗಿದ್ದು, ಬಾಳೆಹೊನ್ನೂರು ವಸತಿ ಗೃಹಕ್ಕೆ ಬರಲು ಹೇಳಿದ್ದನು, ಈತನ ಬಗ್ಗೆ ತಿಳಿದಿದ್ದ ಮಹಿಳೆ ತನ್ನ ಗಂಡ ಹಾಗೂ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದರು. ಬಾಳೆಹೊನ್ನೂರು ಪಟ್ಟಣದ ಸರ್ಕಾರಿ ವೈದ್ಯರ ವಸತಿ ಗೃಹದಲ್ಲಿ ಮಹಿಳೆಯೊಂದಿಗೆ ಏಕಾಂತ ಸಮಯ ಕಳೆಯಲು ತಯಾರಾಗಿದ್ದಾಗ ಮಹಿಳೆಯ ಪತಿ ಹಾಗೂ ಸಂಬಂಧಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದನು. ಈತನ ಘನಂದಾರಿ ಕೆಲಸಕ್ಕೆ ಸಾರ್ವಜನಿಕರು ಹಾಗೂ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದರು.
Chikmagalur
ಸಂಪರ್ಕ ಕಡಿತದ ಭೀತಿಯಲ್ಲಿ ಬಣಕಲ್ ದೇವರಮನೆ ರಸ್ತೆ

ಚಿಕ್ಕಮಗಳೂರು: ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮುಖಂಡ ಬಿಎಸ್ ವಿಕ್ರಂ ಮಾತನಾಡಿ ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಗ ಕಡಿತದ ಭೀತಿ ಎದುರಾಗಿದೆ ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ, ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ.
ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಹಾಗೂ ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.
ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Chikmagalur
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಿಕ್ಕಮಗಳೂರು : ಅತಿವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ನಡೆದಿದೆ
ಮೂಡಿಗೆರೆ- ಕೊಟ್ಟೆಗೆಹಾರ ಮಾರ್ಗದ ಬಿದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ.
Chikmagalur
ಅಕ್ರಮ ಇಸ್ಪೀಟು ಜೂಜಾಟದ ಅಡ್ಡೆಯ ಮೇಲೆ ದಾಳಿ, ೭ ಮಂದಿ ಬಂಧನ

ಚಿಕ್ಕಮಗಳೂರು : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಗಿಲೆ ಗ್ರಾಮದ ಬಳಿಯ ಪ್ಲಾಂಟೇಶನ್ ಬಳಿ ನಡೆದಿದೆ.
ಖಚಿತ ಮಾಹಿತಿಯೊಂದಿಗೆ ಬಣಕಲ್ ಠಾಣೆಯ ಪಿಎಸೈ ರೇಣುಕಾ ಸಾರಥ್ಯದಲ್ಲಿ ಪೊಲೀಸರ ತಂಡದೊಂದಿಗೆ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದು, 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್, ಕಿರಣ್, ಮೆಹಬೂಬ್, ಮಾಲತೇಶ್, ಅಶೋಕ್, ಸಚಿನ್, ದಿಲೀಪ್ ಪಾಲ್ಗೊಂಡಿದ್ದರು.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ