Connect with us

Chikmagalur

ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ

Published

on

ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.

ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಬಾಲಕಿ ಮೇಲೆ ಅ*ತ್ಯಾಚಾರ: ಆರೋಪಿಗೆ 20 ವರ್ಷ ಶಿಕ್ಷೆ

Published

on

ಚಿಕ್ಕಮಗಳೂರು: ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ 20 ವರ್ಷ ಸಜೆ ಮತ್ತು 50,000 ದಂಡ ವಿಧಿಸಲಾಗಿದೆ.

ಮೂಡಿಗೆರೆ ತಾಲೂಕು ಕುಂದೂರು ಗ್ರಾಮದ ಭಟ್ರುಗದ್ದೆ ವಾಸಿ, ಯೋಗೇಶ್ ಕೆ. ಎಸ್. (23 ವರ್ಷ) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಈತನ ವಿರುದ್ಧದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.-1, ಆರೋಪಿಗೆ 20 ವರ್ಷ ಸಜೆ ಮತ್ತು ರೂ. 50,000/- ದಂಡ ವಿಧಿಸಿದೆ.

ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011 ರ ಅಡಿಯಲ್ಲಿ ನೊಂದ ಬಾಲಕಿಗೆ ರೂ. 1,00,000/- ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಮೂಡಿಗೆರೆ ವೃತ್ತದ ಅಂದಿನ ಸಿಪಿಐ ಸೋಮೇಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಭರತ್ ಕುಮಾರ್ ನ್ಯಾಯಾಲಯದಲ್ಲಿ ವಾದ ಮಂಡಿಸಿರುತ್ತಾರೆ. ಮತ್ತು ಎ.ಎಸ್.ಐ. ಯತೀಶ್ ಎಸ್ ನ್ಯಾಯಾಲಯದ ಕರ್ತವ್ಯ ಮತ್ತು ಸಿ.ಪಿ.ಸಿ. ಮನು ಕೆ. ಎಸ್. ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು

Continue Reading

Chikmagalur

ಬೀರೂರು ಗುರು ಭವನದಲ್ಲಿ ಪತ್ರಕರ್ತರ ಸಮ್ಮಿಲನ ಮತ್ತು ಪತ್ರಿಕಾ ದಿನಾಚರಣೆ

Published

on

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದ ಗುರು ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡೂರು ತಾಲೂಕು ಘಟಕದ ವತಿಯಿಂದ ಪತ್ರಕರ್ತರ ಸಮ್ಮಿಲನ ಮತ್ತು ಪತ್ರಿಕಾ ದಿನಾಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನ ಕೆಯು‌ಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಮದನ್ ಗೌಡ ಅವರು ನೆರವೇರಿಸಿದರು.

Continue Reading

Chikmagalur

ಮರ ಬಿದ್ದು 2 ಮನೆಗಳಿಗೆ ಹಾನಿ

Published

on

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ‌ ಬಿರುಗಾಳಿ ಮಳೆ ಆರ್ಭಟ ಮುಂದುವರಿದಿದ್ದು ಸಾಲು ಸಾಲು ಅವಾಂತರಗಳನ್ನ ಸೃಷ್ಟಿಸುತ್ತಿದೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯಡದಂಟೆ ಗ್ರಾಮದಲ್ಲಿ ಭಾರೀ ಬಿರುಗಾಳಿಗೆ ಬೃಹತ್ ಗಾತ್ರದ ಅಕೇಶಿಯ ಮರವೊಂದು‌ ಮುರಿದು ಮನೆಯ ಮೇಲೆ ಬಿದ್ದ ಪರಿಣಾಮವಾಗಿ ಮನ್ವಿತಾ ಅಫ್ರಿದ್ ಮತ್ತು ರಫೀಕ್ ಎಂಬುವವರ ಮನೆಗಳ ಮೇಲೆ ಮರ ಬಿದ್ದಿದ್ದರಿಂದ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಹಾನಿಯಾಗಿದ್ದು. ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೂ ಹಾನಿಯಾಗಿದೆ. ಇನ್ನೂ ವಿದ್ಯುತ್ ಕಂಬಗಳು ಕೂಡಾ ಮುರಿದು ಬಿದ್ದು. ವಿದ್ಯುತ್ ವ್ಯತ್ಯಯ ಉಂಟಾಗಿ ಜನ ಪರದಾಟ ಪಡುವಂತಾಗಿದೆ.

Continue Reading

Trending

error: Content is protected !!