Connect with us

Chikmagalur

ಭೀಕರ ಅಪಘಾತದಲ್ಲಿ ದಂಪತಿ ಸಾವು, ಮಗುವಿಗೆ ಗಂಭೀರ ಗಾಯ

Published

on

ಚಿಕ್ಕಮಗಳೂರು : ಭೀಕರ ಸರಣಿ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದು, ಮಗುವಿಗೆ ಗಂಭೀರ ಗಾಯವಾಗಿ ಗಾಯಗಳಾಗಿರುವ ಘಟನೆ ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.
ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ
ಬೈಕ್ ನಲ್ಲಿದ್ದ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿದ 14 ತಿಂಗಳ ಮಗುವಿಗೆ ಗಂಭೀರ ಗಾಯವಾಗಿದೆ.
ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ದಂಪತಿಗಳು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಮಂಗಳೂರಿನಲ್ಲಿ ‌ 13 ವರ್ಷದ ಬಾಲಕಿಯ ಕೊಲೆ

Published

on

ಮಂಗಳೂರಿನಲ್ಲಿ ‌ 13 ವರ್ಷದ ಬಾಲಕಿಯ ಕೊಲೆ

ಮಂಗಳೂರು: ನಗರದ ಜೋಕಟ್ಟೆಗೆ ಚಿಕಿತ್ಸೆಗೆಂದು ಬೆಳಗಾವಿಯಿಂದ‌ ಬಂದಿದ್ದ 13 ವರ್ಷದ ಬಾಲಕಿಯನ್ನು ಕೊಲೆ ಮಾಡಿದ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.

4 ದಿನಗಳ ಹಿಂದೆ ಬೆಳಗಾವಿ ಮೂಲದ ಹನುಮಂತ ಎಂಬವರು ಮನೆಗೆ ಅವರ ತಮ್ಮನ ಮಗಳು 13 ವರ್ಷದ ಬಾಲಕಿ ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು. ಇಂದು ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬಾಲಕಿಯ ಕೊಲೆ ನಡೆದಿದೆ.

ಇಂದು ಬೆಳಿಗ್ಗೆ 10.30 ಗಂಟೆಗೆ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದರು. ಅದರಂತೆ ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿಯು ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕೊಲೆಯಾಗಿರುವುದು ತಿಳಿದುಬಂದಿದೆ.

ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಹತ್ಯೆ ಮಾಡಿದ ರೀತಿ ಕಂಡುಬಂದಿರುವುದನ್ನು ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತ ಅವರಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದು, ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

Chikmagalur

ಕೆರೆಗಳ ಒತ್ತುವರಿ ತೆರವುಗೊಳಿಸಲು ಸೂಚನೆ

Published

on

ಚಿಕ್ಕಮಗಳೂರು: ಆ. ೦೬: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿಯನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.


ಕೆರೆಗಳ ಸರ್ವೆ ನಡೆಸಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಕ್ರಮವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಇನ್ನೂ ಒತ್ತುವರಿ ತೆರವುಗೊಳಿಸುವ ಕಾರ್ಯ ಜಿಲ್ಲೆಯಲ್ಲಿ ಪೂರ್ಣಗೊಂಡಿಲ್ಲ ಎಂದ ಅವರು. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಒಂದು ವಾರದಲ್ಲಿ ಪೂರ್ಣಗೊಳಿಸುವಂತೆ ಹೇಳಿದ ಅವರು. ಕೆರೆಗಳ ಸುತ್ತ ಬಯೋ ಸ್ಪೆನ್ಸಿಂಗ್ ಮಾಡುವಂತೆ ತಿಳಿಸಿದರು.
ಶಾಲಾ ಕಟ್ಟಡ, ಅಂಗನವಾಡಿ, ಆಸ್ಪತ್ರೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಕಟ್ಟಡದ ಗುಣಮಟ್ಟ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ ಅವರು. ಕಟ್ಟಡಗಳ ದುರಸ್ತಿ ಕಾರ್ಯವಿದ್ದರೆ ತಕ್ಷಣ ದುರಸ್ತಿ ಪಡಿಸುವಂತೆ ಕ್ರಮವಹಿಸಬೇಕು. ಮಳೆ, ಗಾಳಿಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿರುವ ಕುರಿತು ದೂರುಗಳು ಬರುತ್ತಿದ್ದು, ತಕ್ಷಣ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಹೇಳಿದರು.


ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಜುಲೈ ೧೫ ರಿಂದ ೩೧ ರವರೆಗೆ ಅತಿ ಹೆಚ್ಚು ಮಳೆ ಹಾಗೂ ಗಾಳಿಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈಗಾಗಲೇ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಕಂಬಗಳನ್ನು ಸರಿಪಡಿಸುವ ಕೆಲಸವಾಗುತ್ತಿದೆ. ಏಪ್ರಿಲ್ ೦೧ ರಿಂದ ಇಲ್ಲಿಯವರೆಗೆ ೫ ಮಾನವ, ೫ ಜಾನುವಾರುಗಳ ಹಾನಿಯಾಗಿದೆ. ೪೩೧ ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಪರಿಹಾರವನ್ನು ನೀಡಲಾಗಿದೆ. ೨೭.೦೯ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದ ಅವರು ರೈತರಿಗೆ ಹವಾಮಾನಕ್ಕನುಗುಣವಾಗಿ ಬೆಳೆ ಬೆಳೆಯುವ ಕುರಿತು ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.


ಸಾರ್ವಜನಿಕರು ಆಸ್ತಿ ನೊಂದಣಿಯನ್ನು ಜಿಲ್ಲೆಯ ಯಾವುದೇ ಸಬ್‌ರಿಜಿಷ್ಟ್ರರ್ ಕಛೇರಿಯಲ್ಲಾದರೂ ನೊಂದಾಯಿಸಿಕೊಳ್ಳಬಹುದು ಎಂದು ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು. ಮಳೆಯಿಂದಾಗಿ ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳಾದ ದಲ್ಜಿತ್ ಕುಮಾರ್, ಕಾಂತರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Continue Reading

Chikmagalur

ರೌಡಿಶೀಟರ್ ಓರ್ವ ಸಿಕ್ಕಸಿಕ್ಕವರಿಗೆ ಚಾಕು ಇರಿದು ಸ್ಥಳಕ್ಕೆ ಬಂದ ಪೊಲೀಸರ ಮೇಲು ಚಾಕು ಚುಚ್ಚಲು ಯತ್ನಿಸಿದ ಘಟನೆ

Published

on

ಚಿಕ್ಕಮಗಳೂರು : ನಗರದ ಬೇಲೂರು ರಸ್ತೆಯಲ್ಲಿ ರೌಡಿಶೀಟರ್ ಓರ್ವ ಸಿಕ್ಕಸಿಕ್ಕವರಿಗೆ ಚಾಕು ಇರಿದು ಸ್ಥಳಕ್ಕೆ ಬಂದ ಪೊಲೀಸರ ಮೇಲು ಚಾಕು ಚುಚ್ಚಲು ಯತ್ನಿಸಿದ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.

ನಗರದ ಬೇಲೂರು-ಹಿರೇಮಗಳೂರು ರಸ್ತೆಯಲ್ಲಿ ಎಣ್ಣೆ ಹಾಗೂ ಗಾಂಜಾ ಮತ್ತಿನಲ್ಲಿ ಯುವಕ ರಾಡು, ಡ್ರಾಗ‌ರ್ ನಿಂದ ಚುಚ್ಚಿ ನಡು ರಸ್ತೆಯಲ್ಲಿ ರಂಪಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲು‌ ಸ್ಥಳಕ್ಕೆ ಬಂದ ಪೊಲೀಸರ ಮೇಲು ಚಾಕು ಹಾಗೂ ರಾಡಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.

 

ಇವನ ರಂಪಾಟಕ್ಕೆ ಅಸಹಾಯಕರಾಗಿ ಪೊಲೀಸರು ನಿಲ್ಲುವ ಸ್ಥಿತಿ ಉಂಟಾಗಿತ್ತು. ಈತನನ್ನು ಸಗಣಿಪುರದ ಕಿರಿಕ್ ಕೌಶಿಕ್ ಎನ್ನಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ಬೈಪಾಸ್ ರಸ್ತೆಯಲ್ಲಿ ಕೆಲಕಾಲ ಆತಂಕ ಮೂಡಿತ್ತು.

ಕೌಶಿಕ್ ನ ರಂಪಾಟಕ್ಕೆ ಪೊಲೀಸರೇ ದಂಗು ಬಡಿದಂತೆ ಸುಮ್ಮನಿರಬೇಕಾಯಿತು.‌ ಸಾರ್ವಜನಿಕರ ಕರೆ ಮೇರೆಗೆ ವಶಕ್ಕೆ ಪಡೆಯಲು ಬಂದ ನಗರ ಪೊಲೀಸ್‌ ಠಾಣೆಯ ಎಎಸ್‌ಐ ಕುಮಾರಸ್ವಾಮಿ ವಿರುದ್ಧವೇ ಚಾಕುವಿನಿಂದ ದಾಳಿಗೆ ಈತ ಯತ್ನುಸಿದ್ದಾನೆ.

ಕೊನೆಗೆ ವಶಕ್ಕೆ ಪಡೆದರೂ ಪೊಲೀಸ್ ವಾಹನದಿಂದ ತಪ್ಪಿಸಿಕೊಂಡು ಹೋಗಲು ಸಹಾ ಯತ್ನಿಸಿದ್ದು ಕೆಲಕಾಲ ಹೆದ್ದಾರಿಯಲ್ಲಿ ಗಾಬರಿಗೊಂಡ ಜನರು ಇವನ ರಂಪಾಟ ನೋಡುತ್ತಿದ್ದರು.

Continue Reading

Trending

error: Content is protected !!