Chikmagalur
ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು
ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು 2,55,000/- ರೂ. ಮೌಲ್ಯವುಳ್ಳ ಸ್ವತ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ಇಲಾಖೆಯೂ ಜು.23 ರಂದು ಪಿರ್ಯಾದುದಾರರು KA14C6478 ನಂಬರಿನ ಪಿಕಪ್ ವಾಹನದಲ್ಲಿ ಚಾಲಕ & ಹೆಲ್ಪರ್ ದರ್ಶನ್ ರೊಂದಿಗೆ ತೀರ್ಥಹಳ್ಳಿಯಿಂದ ಬೆಳಗ್ಗಿನ ಜಾವ ಸುಮಾರು 04.00 ಗಂಟೆಗೆ ಎನ್ಆರ್ ಪುರಕ್ಕೆ ಬಂದು ಕೋಳಿಗಳನ್ನು ಮಾರಾಟ ಮಾಡಿಕೊಂಡು ಮಾರಾಟದಿಂದ ಬಂದ 2.00.000/- ರೂ ಹಣವನ್ನು ತೆಗೆದುಕೊಂಡು ವಾಪಸ್ಸು ಶಿವಮೊಗ್ಗಕ್ಕೆ ಬೆಳಗಿನ ಜಾವ 04.45 ಗಂಟೆಯ ಸಮಯದಲ್ಲಿ ಶಿವಮೊಗ್ಗ ಮುಖ್ಯ ರಸ್ತೆ ಆರಂಭಳ್ಳಿ ಬಸ್ ನಿಲ್ದಾಣದ ಬಳಿ ಬೊಲೆರೋ ಪಿಕಪ್ ವಾಹನದಲ್ಲಿ ಹೋಗುತ್ತಿರುವಾಗ ರಸ್ತೆಯ ಎರಡು ಬದಿಯಿಂದ ಎರಡು ಕಾರುಗಳನ್ನು ಅಡ್ಡವಾಗಿ ನಿಲ್ಲಿಸಿಕೊಂಡು ಸುಮಾರು 8 ರಿಂದ 10 ಜನ ವಾಹನವನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್ ಮತ್ತು ಕೈನಿಂದ ಪಿಕಪ್ ವಾಹನದ ಚಾಲಕ ಮತ್ತು ಹೆಲ್ಪರ್ ನಿಗೆ ಹೊಡೆದು ಹಲ್ಲೆ ಮಾಡಿ ಅವರ ಬಳಿ ಇದ್ದ 3 ಮೊಬೈಲ್, ಬೆಳ್ಳಿ ಬ್ರಾಸ್ಲೆಟ್, ಬೆಳ್ಳಿ ಚೈನ್ & ವಾಹನದಲ್ಲಿದ್ದ 2.00.000/- ರೂ ಹಣವನ್ನು ದೋಚಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಠಾಣಾ ಮೊ.ನಂ: 64/2025 ಕಲಂ 310(2),311 ಬಿಎನ್ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

ಈ ಘೋರ ಅಪರಾಧ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕದ್ದಮಾಲನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಡಾ.ವಿಕ್ರಂ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ಜಿಲ್ಲೆ, ಶ್ರೀ ಸಿಟಿ ಜಯಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಬಾಲಾಜಿ ಸಿಂಗ್ ಪೊಲೀಸ್ ಉಪಾಧೀಕ್ಷಕರು ಕೊಪ್ಪ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಶ್ರೀ, ಗುರುದತ್ ಕಾಮತ್ ಎನ್.ಆರ್ ಪುರ ವೃತ್ತ ನಿರೀಕ್ಷಕರವರ ನೇತೃತ್ವದಲ್ಲಿ ಎನ್ಆರ್ ಪುರ ಪೊಲೀಸ್ ಠಾಣೆಯ ಪಿಎಸ್ಐ ಬಿ.ಎಸ್ ನಿರಂಜನ್ ಗೌಡ ಸಿಬ್ಬಂದಿಗಳಾದ ಬಿನು ಪಿ.ಎ ಅಮಿತ್ ಚೌಗುಲೆ, ದೇವರಾಜ, ಮಧು ಎಸ್.ಜಿ, ಯುಗಾಂಧರ್, ಶಿವರುದ್ರಪ್ಪ, ಕೌಶಿಕ್ ಹೆಚ್.ಸಿ. ಹಾಗೂ ಬಾಳೆಹೊನ್ನೂರು ಠಾಣೆಯ ಅಪರಾಧ ವಿಭಾಗದ ಶಂಕರ್ ಕೆ.ಜೆ ರನ್ನೊಳಗೊಂಡ ತಂಡವನ್ನು ರಚನೆ ಮಾಡಿದ್ದು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ನಯಾಜ್ ಅಂಜುಂ & ರಬ್ಬಾನಿ ಯವರ ತಾಂತ್ರಿಕ ಸಹಯೋಗದೊಂದಿಗೆ ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ತನಿಖೆಯನ್ನು ನಡೆಸಿ ಪ್ರಕರಣದಲ್ಲಿನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ಪ್ರಸ್ತುತ ಮೇಲ್ಕಂಡ ಪ್ರಕರಣದಲ್ಲಿ 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು ಅದರಲ್ಲಿ ಒಬ್ಬಾತ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನಾಗಿದ್ದು ಉಳಿದಂತೆ 1) ಸತ್ಯಾನಂದ ಸತ್ಯ , ಸ್ನೇಕ್ ಸತ್ಯ ಬಿನ್ ಕುಮಾರ 26 ವರ್ಷ, ಆದಿಕರ್ನಾಟಕ ಜನಾಂಗ ಕೂಲಿಕೆಲಸ ವಾಸ ತಾರಿಕಟ್ಟೆ ಹಿರಿಯೂರು ಅಂಚೆ ಭದ್ರಾವತಿ ತಾಲ್ಲೂಕು 2) ಸಯ್ಯದ್ ಲತೀಫ್ @ ಲತೀಫ್ ಬಿನ್ ಅಜೀಜ್ 25 ವರ್ಷ ಮೆಕಾನಿಕ್ ಕೆಲಸ ಮುಸ್ಲಿಂ ಜನಾಂಗ ವಾಸ ಅಪ್ಪಾಜಿ ಬಡಾವಣೆ ಹಿರಿಯೂರು ಗ್ರಾಮ ಭದ್ರಾವತಿ ತಾಲ್ಲೂಕು ಆಗಿರುತ್ತದೆ. ಪ್ರಕರಣದಲ್ಲಿನ ಆರೋಪಿ ಸತ್ಯ ಸತ್ಯಾನಂದ ಈತನ ಮೇಲೆ ಈಗಾಗಲೇ ಕೊಲೆ, ಸುಲಿಗೆ, ಗಾಂಜಾ ದಂತಹ ಎಂಟು ಪ್ರಕರಣಗಳು ದಾಖಲಾಗಿರುತ್ತವೆ.
ಮೇಲ್ಕಂಡ ಪ್ರಕರಣದಲ್ಲಿ ಆರೋಪಿಗಳಿಂದ ಒಂದು ಬೆಳ್ಳಿಯ ಬ್ರಾಸ್ ಲೈಟ್, ಒಂದು ಬೆಳ್ಳಿಯ ಸರ, 2 ಮೊಬೈಲ್ ಒಂದು ಸೌಂಡ್ ಸಿಸ್ಟಂ ಹಾಗೂ ಕೃತ್ಯಕ್ಕೆ ಉಪಯೋಗಿಸಿದ 1 ಹೊಂಡಾಸಿಟಿ ಕಾರ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ಲಾಂಗ್ & ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಒಟ್ಟು ಅಂದಾಜು 2,55,000/- ರೂ ನಷ್ಟು ಮೌಲ್ಯವುಳ್ಳ ಸ್ವತ್ತುಗಳನ್ನು ಸದರಿ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

ಸದರಿ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿ ಕದ್ದಮಾಲನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಅಪರಾಧ ಪತ್ತೆದಳ ತಂಡದಲ್ಲಿದ್ದ ಅಧಿಕಾರಿ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.
Chikmagalur
ಜಯಪುರದಲ್ಲಿ ಮೂರನೇ ವರ್ಷದ ಯಕ್ಷರಾತ್ರಿ ಯಶಸ್ವಿ – ಉಳಿದ ಹಣ ಟ್ರಸ್ಟ್‌ಗೆ ದೇಣಿಗೆ
ವರದಿ: ಎಂ.ಪಿ. ಪ್ರದೀಪ್ ಹೆಬ್ಬಾರ್, ಜಯಪುರ.
ಜಯಪುರ: ದುರ್ಗಾಪರಮೇಶ್ವರಿ ಯಕ್ಷ ಮಿತ್ರಕೂಟ ಕೊಗ್ರೆ–ಶಾಂತಿಗ್ರಾಮ ಇವರ ವತಿಯಿಂದ ಮೂರನೇ ವರ್ಷದ ಯಕ್ಷರಾತ್ರಿ ಯಕ್ಷಗಾನ ಕಾರ್ಯಕ್ರಮವು ಕೊಗ್ರೆಯ ಶ್ರೀ ವಿದ್ಯಾಗಣಪತಿ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.
ಹಾಲಾಡಿ ಮೇಳದ ಕಲಾವಿದರು “ಪಂಜರಪಕ್ಷಿ” ಎಂಬ ಪ್ರಸಂಗವನ್ನು ಬಯಲಾಟ ರೂಪದಲ್ಲಿ ಮನಮೋಹಕವಾಗಿ ಪ್ರದರ್ಶಿಸಿದರು. ಕಾರ್ಯಕ್ರಮಕ್ಕೆ ಯಕ್ಷಾಭಿಮಾನಿಗಳು ಹಾಗೂ ಸಾರ್ವಜನಿಕರಿಂದ ಉತ್ತಮ ಮಟ್ಟದ ಪ್ರತಿಕ್ರಿಯೆ ದೊರಕಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ದೇಣಿಗೆ ಕೂಡ ಸಂಗ್ರಹವಾಯಿತು.

ಕಾರ್ಯಕ್ರಮದ ಎಲ್ಲಾ ಖರ್ಚು ವೆಚ್ಚಗಳನ್ನು ತೆಗೆದ ನಂತರ ಉಳಿದ ಸುಮಾರು ₹40,001 ಮೊತ್ತವನ್ನು ಕೊಗ್ರೆಯ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸೇವಾ ಟ್ರಸ್ಟ್ (ರಿ.)ನ ಅಭಿವೃದ್ಧಿ ನಿಧಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಯಕ್ಷ ಮಿತ್ರಕೂಟದ ಅಧ್ಯಕ್ಷ ವರ್ಧಮಾನಯ್ಯ, ಕಾರ್ಯದರ್ಶಿ ಶಿವಶಂಕರ್ ಆಚಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಕುಮಾರ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ದತ್ತಾತ್ರೇಯ ಮತ್ತು ಜಯಕುಮಾರ್ ಉಪಸ್ಥಿತರಿದ್ದರು.
Chikmagalur
ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ಸೀತಾಳಯ್ಯನಗಿರಿ
ಚಿಕ್ಕಮಗಳೂರು: ರಸ್ತೆಯಲ್ಲಿ ಚಾಲಕನ ಸಣ್ಣದೊಂದು ಎಡವಟ್ಟಿನಿಂದಾಗಿ ಟೆಂಪೋ ಟ್ರಾವೆಲರ್ ವಾಹನವೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಆದರೆ ಚಾಲಕನ ಸಮಯಪ್ರಜ್ಞೆ ಮತ್ತು ಅದೃಷ್ಟವಶಾತ್ ವಾಹನದಲ್ಲಿದ್ದ ಬೆಂಗಳೂರು ಮೂಲದ 13 ಮಂದಿ ಪ್ರವಾಸಿಗರು ಯಾವುದೇ ಪ್ರಾಣಾಪಾಯವಿಲ್ಲದೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಬೆಂಗಳೂರಿನಿಂದ ಚಿಕ್ಕಮಗಳೂರಿನ ಗಿರಿಪ್ರದೇಶಗಳಿಗೆ ಪ್ರವಾಸಕ್ಕೆ ಬಂದಿದ್ದ ತಂಡ ಮುಳ್ಳಯ್ಯನಗಿರಿ ವೀಕ್ಷಣೆ ಮುಗಿಸಿ ವಾಪಸ್ ಇಳಿಜಾರಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಮಾಣಿಕ್ಯಾಧಾರ ಮತ್ತು ಸೀತಾಳಯ್ಯನಗಿರಿ ನಡುವಿನ ಕಡಿದಾದ ಇಳಿಜಾರಿನಲ್ಲಿ ವಾಹನ ಚಲಿಸುತ್ತಿದ್ದಾಗ, ಹಿಂಭಾಗದ ಸೀಟಿನಲ್ಲಿದ್ದ ಪ್ರಯಾಣಿಕರೊಬ್ಬರ ಪಾದರಕ್ಷೆ (ಚಪ್ಪಲಿ) ಜಾರಿ ಮುಂಭಾಗದ ಚಾಲಕನ ಸೀಟಿನ ಬಳಿ ಬಂದು ಬಿದ್ದಿದೆ. ಇಳಿಜಾರಿನ ರಸ್ತೆಯಾದ್ದರಿಂದ ಈ ಚಪ್ಪಲಿ ಎಲ್ಲಿ ಬ್ರೇಕ್ ಮತ್ತು ಎಕ್ಸಲೇಟರ್ ಪೆಡಲ್‌ಗಳ ಮಧ್ಯೆ ಸಿಲುಕಿಕೊಳ್ಳುತ್ತದೆಯೋ ಎಂಬ ಆತಂಕ ಚಾಲಕನಿಗೆ ಎದುರಾಗಿದೆ.

ಆತ ತಕ್ಷಣವೇ ಚಲಿಸುತ್ತಿದ್ದ ವಾಹನದಲ್ಲೇ ಬಾಗಿ ಆ ಚಪ್ಪಲಿಯನ್ನು ತೆಗೆಯಲು ಪ್ರಯತ್ನಿಸಿದ್ದಾನೆ. ಈ ಸಂದರ್ಭ ವಾಹನದ ಗೇರ್ ಲಿವರ್ ನ್ಯೂಟ್ರಲ್ (Neutral) ಸ್ಥಿತಿಗೆ ಬಿದ್ದಿದೆ. ಇಳಿಜಾರಿನ ರಸ್ತೆಯಾಗಿದ್ದರಿಂದ ಗೇರ್ ಇಲ್ಲದ ಟೆಂಪೋ ಒಮ್ಮಿಂದೊಮ್ಮೆಗೇ ಅತಿ ವೇಗವಾಗಿ ಮುಂದಕ್ಕೆ ನುಗ್ಗಿದೆ. ಚಾಲಕ ಬ್ರೇಕ್ ಹಾಕುವಷ್ಟರಲ್ಲೇ ವಾಹನವು ರಸ್ತೆ ಬದಿಯ ರಕ್ಷಣಾ ಗೋಡೆಯನ್ನು ದಾಟಿ ಕಂದಕದ ಕಡೆಗೆ ಇಳಿದಿದೆ.
ವಾಹನ ಕಂದಕಕ್ಕೆ ಇಳಿಯುತ್ತಿದ್ದಂತೆ ಒಳಗಿದ್ದ ಪ್ರಯಾಣಿಕರು ಜೋರಾಗಿ ಕಿರುಚಾಡಿದ್ದಾರೆ. ಅದೃಷ್ಟವಶಾತ್ ಟೆಂಪೋ ಕಂದಕದ ಆರಂಭದಲ್ಲೇ ಸಿಲುಕಿ ನಿಂತಿದ್ದರಿಂದ ಭೀಕರ ದುರಂತವೊಂದು ತಪ್ಪಿದಂತಾಗಿದೆ. ವಾಹನದಲ್ಲಿದ್ದ ಎಲ್ಲಾ 13 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಿರಿಪ್ರದೇಶಗಳ ತಿರುವು ರಸ್ತೆಯಲ್ಲಿ ಚಾಲನೆ ಮಾಡುವಾಗ ಚಾಲಕರು ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.
Chikmagalur
ಬಾವಿ ಸ್ವಚ್ಛಗೊಳಿಸಲು ಇಳಿದ ಮೋಹನ್ ದಾರುಣ ಸಾ*ವು
ಚಿಕ್ಕಮಗಳೂರು : ಬಾವಿ ಕ್ಲೀನ್ ಮಾಡಲು ಇಳಿದಿದ್ದ ವ್ಯಕ್ತಿಯೊಬ್ಬರು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ದರ್ಶನ್ ಎಂಬುವರ ಮನೆಯ ಬಾವಿಯನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಮೋಹನ್ (40) ಎಂಬುವರು ಬಾವಿಯೊಳಗೆ ಇಳಿದಿದ್ದರು. ಆದರೆ ಬಾವಿಯ ಆಳದಲ್ಲಿ ತೀವ್ರವಾದ ಉಸಿರಾಟದ ಸಮಸ್ಯೆ ಎದುರಾದ ಕಾರಣ ಅವರು ಬಾವಿಯೊಳಗೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಆಕಸ್ಮಿಕ ದುರಂತದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
State21 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
State2 hours agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Mysore10 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Hassan23 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan4 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Sports2 hours agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
-
Chamarajanagar22 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Mysore4 hours agoದೈವ ನಿಂದನೆ ಪ್ರಕರಣ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್
