Connect with us

Chikmagalur

ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರವೇ ಪ್ರತಿಭಟನೆ

Published

on

ಚಿಕ್ಕಮಗಳೂರು : ರಾಜ್ಯದಲ್ಲಿ ನೀರಿನ ಕೊರತೆಯಿಂದ ರೈತರು ಸಂಕಷ್ಟದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಈ ನಡುವೆ ರಾಜ್ಯ ಸರ್ಕಾರದ ನಿಲುವು ಸರಿಯಲ್ಲ. ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ)ಯ ಜಿಲ್ಲಾಧ್ಯಕ್ಷ ನಾಗವಾರ ರಮೇಶ್ ಎಚ್ಚರಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಬಳಿಕ ಮಾತನಾಡಿ, ಮಳೆ ಕೊರತೆಯಿಂದ ರಾಜ್ಯದಲ್ಲಿ ಜನತೆಗೆ ತೀವ್ರ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಸೂಕ್ತವಲ್ಲ. ಕೂಡಲೇ ನೀರು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ೧೯೨ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ ದಿನ ೫ ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿ ಎಂದು ಹೇಳಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಪ್ರಾಧಿಕಾರದ ಆದೇಶ ಮುಖ್ಯವಲ್ಲ. ಈಗಲೂ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊ ಳ್ಳಬೇಕು. ರಾಜ್ಯದ ಎಲ್ಲ ಸಂಸದರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.

Continue Reading
Click to comment

Leave a Reply

Your email address will not be published. Required fields are marked *

Chikmagalur

ಭಾರಿ ಮಳೆ- ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯುಸಿಗೆ ರಜೆ

Published

on

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಲಾಗಿದೆ.

ಈ ವೇಳೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ
ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

Continue Reading

Chikmagalur

ಮಲೆನಾಡ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ*

Published

on

 

ಚಿಕ್ಕಮಗಳೂರು :

ಕಾಫಿನಾಡಲ್ಲಿ ಮಳೆ ಅಬ್ಬರ ಹಿನ್ನೆಲೆ

*ಮಲೆನಾಡ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ*

*ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಶಾಲೆಗಳಿಗೆ ರಜೆ*

*ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ*

ನಾಳೆ ಒಂದು ರಜೆ ಘೋಷಿಸಿದ ಜಿಲ್ಲಾಡಳಿತ

ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಿಂದ ಆದೇಶ

Continue Reading

Chikmagalur

ರೀಲ್ಸ್ ರೋಮಿಯೋಗಳ ವಿರುದ್ಧ ಪ್ರಕರಣ ದಾಖಲು

Published

on

ಚಿಕ್ಕಮಗಳೂರು :

ರೀಲ್ಸ್ ರೋಮಿಯೋಗಳ ವಿರುದ್ಧ ಪ್ರಕರಣ ದಾಖಲು

ರೀಲ್ಸ್ ಹುಚ್ಚಿಗೆ ರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡಿದ್ದ ಯುವಕರು

ಐವರು ಯುವಕರಿಂದ 5 ಕಿ.ಮೀ.ರಸ್ತೆ ಸಂಪೂರ್ಣ ಹಾಳು

ಐವರು ಯುವಕರನ್ನು ವಶಕ್ಕೆ ಪಡೆದ‌ ಪೊಲೀಸರು

ಮಂಗಳೂರಿನ ಉಜಿರೆ ಮೂಲದ ಗಿರೀಶ್, ಗಣೇಶ್, ಗಣೇಶ್ ಕುಮಾರ್, ಪ್ರವೀಣ್, ರೋಹಿತ್ ಬಂಧಿತ ಯುವಕರು

ಮೂಡಿಗೆರೆ ತಾಲೂಕಿನ ರಾಣಿ ಝರಿ ರಸ್ತೆ ಬಳಿ ವೀಲ್ಹಿಂಗ್ ಮಾಡಿದ್ದ ಯುವಕರು

ರಸ್ತೆಯಲ್ಲಿ ವೀಲ್ಹಿಂಗ್ ಮಾಡಿದ್ದ ಬೈಕ್ ಗಳನ್ನು ವಶಕ್ಕೆ‌ ಪಡೆದ ಪೊಲೀಸರು

ಐವರು ಯುವಕರ ಮೇಲೆ‌ ಸಾರ್ವಜನಿಕ ರಸ್ತೆ ಹಾಳು, ಜನರಿಗೆ ತೊಂದರೆ ಹಿನ್ನೆಲೆ ಪ್ರಕರಣ ದಾಖಲು

ಬಾಳೂರು ಪೊಲೀಸರಿಂದ ಯುವಕರ ಬಂಧನ

ಚಿಕ್ಕಮಗಳೂರು ಜಿಲ್ಲೆಯ‌ ಮೂಡಿಗೆರೆ ತಾಲೂಕು

Continue Reading

Trending

error: Content is protected !!