Connect with us

Chikmagalur

ಚಿಕ್ಕಮಗಳೂರು ನಗರವನ್ನು ಸಿಎಂ ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುವುದು: ಶಾಸಕ ಹೆಚ್.ಡಿ ತಮ್ಮಯ್ಯ

Published

on

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ನಗರವನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಸಮಗ್ರ ಅಭಿವೃದ್ಧಿಪಡಿಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು.

ಅವರು ಇಂದು ನಗರದ ಕೋಟೆ ಬಡಾವಣೆ ಬೇಲೂರು ರಸ್ತೆ ನೂತನ ಬಸ್ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಭಾಗಗಳಲ್ಲಿ ಅತ್ಯುನ್ನತ ಮಾದರಿಯ ೪ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಯಾದ ಬಳಿಕ ಕಾಮಗಾರಿಗಳನ್ನು ಆರಂಭಿಸಿ ಮೇ ತಿಂಗಳೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.

ನಗರದ ವಿವಿದೆಡೆ ವಿನೂತನ ಮಾದರಿಯಲ್ಲಿ ಹೊರದೇಶದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದು, ಈ ಬಸ್ ನಿಲ್ದಾಣಗಳನ್ನು ಅತ್ಯಾಧುನಿಕ ರೀತಿಯಲ್ಲಿ ಗ್ಲಾಸ್ ಅಳವಡಿಸಿರುವುದರಿಂದ ಇದು ಸರ್ಕಾರದ ಆಸ್ತಿ ಅಲ್ಲ ಸಾರ್ವಜನಿಕರ ಆಸ್ತಿ ಎಂದು ಭಾವಿಸಿ ಹಾನಿಯಾಗದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.

ಪಕ್ಷಾತೀತವಾಗಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಇಲ್ಲಿ ಒಂದು ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂಬ ಹಲವು ದಿನಗಳ ಬೇಡಿಕೆ ಇಂದು ಈಡೇರಿದ್ದು, ಸಂಸದ ಜಯರಾಂ ರಮೇಶ್ ನಿಧಿಯಿಂದ ೧೦.೯೨ ಲಕ್ಷ ರೂ ಹಾಗೂ ತಮ್ಮ ಶಾಸಕರ ನಿಧಿಯಿಂದ ೫ ಲಕ್ಷ ರೂ ನಿಧಿಯಲ್ಲಿ ಈ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದರು.

೧೦.೯೦ ಲಕ್ಷ ರೂ ವೆಚ್ಚದಲ್ಲಿ ಹಿರೇಮಗಳೂರಿನಲ್ಲಿ ಬಸ್ ನಿಲ್ದಾಣ, ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆ ಕಲ್ಯಾಣ ನಗರದಲ್ಲಿ ೧೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ಹಾಗೂ ಕಣಿವೇ ರುದ್ರೇಶ್ವರ ದೇವಸ್ಥಾನದ ಬಳಿ ಹೌಸಿಂಗ್ ಬೋರ್ಡ್ ಆರನೇ ಹಂತದ ಜನರಿಗೆ ಹಾಗೂ ದಾಸರಹಳ್ಳಿ ಜನರಿಗೆ ಅನುಕೂಲವಾಗುವಂತೆ ೧೦.೯೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದೆಂದರು.

ಈ ನಾಲ್ಕು ಕಾಮಗಾರಿಗಳಿಗೆ ಅಗತ್ಯವಾಗಿ ಬೇಕಾಗಿರುವ ಹಣ ಲಭ್ಯವಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದೆಂದು ತಿಳಿಸಿದ ಅವರು, ಜನಪ್ರತಿನಿಧಿಗಳಾಗಿ ಎಲ್ಲಾ ಜನರ ಆಶಯಗಳಿಗೆ ಸ್ಪಂದಿಸಿ ಪಕ್ಷಾತೀತವಾಗಿ ಕೆಲಸ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದರು.

ನಗರದಲ್ಲಿ ಹಾನಿಯಾಗಿರುವ ರಸ್ತೆಗಳ ದುರಸ್ಥಿಗೆ ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು ಅಂಚೆ ಕಚೇರಿ ರಸ್ತೆ, ಒಕ್ಕಲಿಗರ ಸಮುದಾಯ ಭವನದ ರಸ್ತೆ, ಶಂಕರಪುರ ಐದನೇ ಕ್ರಾಸ್ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳನ್ನು ದುರಸ್ಥಿಪಡಿಸಲು ಜಯರಾಂ ರಮೇಶ್ ರವರ ಮನವೊಲಿಸಿ ಅನುದಾನ ತಂದಿರುವುದರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಚಿಕ್ಕಮಗಳೂರು ನಗರಕ್ಕೆ ಸೀಮಿತವಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಗವನಹಳ್ಳಿಯಿಂದ ರಾಂಪುರದವರೆಗೆ ಉತ್ತಮ ಗುಣಮಟ್ಟದ ವಿದ್ಯುತ್ ದೀಪ ಅಳವಡಿಸಲು ಈಗಾಗಲೇ ಡಿಪಿಆರ್ ಮಾಡಲಾಗಿದೆ. ಮುಂದೆ ಬೇಲೂರು ಬಸ್ ನಿಲ್ದಾಣದಿಂದ ಹಿರೇಮಗಳೂರುವರೆಗೆ ಬೀದಿದೀಪ ಅಳವಡಿಸಲು ಕ್ರಮವಹಿಸಲಾಗುವುದೆಂದು ಹೇಳಿದರು.

ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ನಾವು ಅಧ್ಯಕ್ಷರಾದ ನಂತರ ಸಿ ಟಿ ಬಸ್ ನಿಲ್ದಾಣಗಳನ್ನು ನಿರ್ಮಿಸಬೇಕೆಂದು ಸಾರ್ವಜನಿಕರಿಂದ ಬಹಾಳ ಬೇಡಿಕೆ ಬಂದ ಪರಿಣಾಮ ಇಂದು ಶಾಸಕರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಈಡೇರಿಸಿದ್ದಾರೆ ಎಂದರು.

ಸಾರ್ವಜನಿಕರು ಈ ಅತ್ಯಾಧುನಿಕ ಬಸ್ ನಿಲ್ದಾಣಗಳನ್ನು ತಮ್ಮ ಆಸ್ತಿ ಎಂಬಂತೆ ಬಳಸಿಕೊಳ್ಳಬೇಕೆಂದು ಮನವಿ ಮಾಡಿದ ಅವರು,ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಿದಾಗ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಬಸ್ ನಿಲ್ದಾಣಗಳು ಇಲ್ಲದೆ ತೊಂದರೆಯಾಗುತ್ತಿತ್ತು. ಇಂದು ನಗರದ ವಿವಿಧ ನಾಲ್ಕು ಭಾಗಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಗುದ್ದಲ್ಲಿಪೂಜೆ ನೆರವೇರಿಸಿರುವುದು ಶ್ಲಾಘನೀಯ ಎಂದರು.

ನಗರದಲ್ಲಿ ಪರವಾನಗಿ ಇಲ್ಲದೆ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಗಮನ ಸೆಳೆದಾಗ ಅಂತಹ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಡಿಎ ಆಯುಕ್ತರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಿಡಿಎ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ನಾಯ್ಡು, ಗ್ರಾಮಸ್ಥರಾದ ದಯಾನಂದ ನಾಯ್ಡು, ವೆಂಕಟೇಧ್ ನಾಯ್ಡು, ನಗರಸಭೆ ಸದಸ್ಯರಾದ ಮಧುಕುಮಾರ್ ರಾಜ್ ಅರಸ್, ಶಾದಬ್, ಆನಂದ, ಸೋಮಣ್ಣ ಹಾಗೂ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಸಿಡಿಎ ಆಯುಕ್ತರಾದ ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

Continue Reading

Chikmagalur

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮ

Published

on

ಕೊಟ್ಟಿಗೆಹಾರ: ದಕ್ಷಿಣ ಕನ್ನಡ–ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.

ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಗಂಭೀರ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.


ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಮುಂಜಾಗ್ರತ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ.  ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ.

Continue Reading

Chikmagalur

ನಾನು ರಾಮನಗರ ಜಿಲ್ಲೆ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

Published

on

ಚಿಕ್ಕಮಗಳೂರು : ರಾಮನಗರ ಜಿಲ್ಲೆ ನಮ್ಮ ತಂದೆಯವರ ಕರ್ಮ ಭೂಮಿ, 1994ರಲ್ಲಿ ಹಾಸನದಿಂದ ಬಂದಂತಹ ದೇವೇಗೌಡರಿಗೆ ರಾಜಕೀಯವಾಗಿ ಜನ್ಮ ಕೊಟ್ಟ ಭೂಮಿಯಾಗಿದೆ. ಹಾಗಾಗಿ ನಾನು ರಾಮನಗರ ಜಿಲ್ಲೆ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂದು  ಚಾಮರಾಜನಗರದಿಂದ ಸ್ಪರ್ಧೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬೇರೆ ಯಾವುದೇ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೂ ಇಲ್ಲ. ರಾಮನಗರದಲ್ಲಿ ನನ್ನನ್ನೇ ನಂಬಿರುವಂತಹ ಕಾರ್ಯಕರ್ತರು, ಮುಖಂಡರು, ಒಂದು ವರ್ಗವಿದ್ದು ನಮ್ಮನ್ನ ಪ್ರೀತಿಸುವ ಜನರಿದ್ದಾರೆ. ಇವತ್ತು ಜಿಲ್ಲೆಯಲ್ಲಿ ಸಣ್ಣಪುಟ್ಟ ಹಿನ್ನೆಡೆಗಳು ಆಗಿರಬಹುದು, ನಾನು ಒಪ್ಪಿಕೊಳ್ಳುತ್ತೇನೆ. ಕಳೆದ 4 ಚುನಾವಣೆಯಲ್ಲೂ ನಮ್ಮ ಜಿಲ್ಲೆಯ ಜನ ನಮ್ಮ ಕೈ ಬಿಟ್ಟಿಲ್ಲ  ಎಂದು ಹೇಳಿದ್ದಾರೆ.

ರಾಜಕೀಯದ ಕೆಲ ಸಂದರ್ಭದಲ್ಲಿ ಚುನಾವಣೆಯಲ್ಲಿ ಏರು-ಪೇರು ಆಗಿದೆ. ನಾವು ಎಲ್ಲವನ್ನೂ ಸಮತೋಲನವಾಗಿ ತೆಗೆದುಕೊಂಡು ಹೋಗಬೇಕು, ಏಕೆಂದರೆ ಅಲ್ಲಿ ದುಡಿದಿದ್ದೇವೆ.  ದೇವೇಗೌಡರ ಕುಟುಂಬ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದೆ ಎಂದಿದ್ದಾರೆ.

ದ್ವೇಷ ಭಾಷಣ ಕಾಯ್ದೆ ಜಾರಿಗೊಳಿಸಲು ಸರ್ಕಾರ ರಾಜ್ಯಪಾಲರ ಅಂಕಿತಕ್ಕೆ ಕಾದು ಕುಳಿತಿದ್ದರು. ಈ ಕಾಯ್ದೆ ಪತ್ರಿಕಾ ಮಾಧ್ಯಮವನ್ನ ಕಟ್ಟಿ ಹಾಕುವಂತದ್ದು, ಪ್ರಜಾಪ್ರಭುತ್ಬದಲ್ಲಿ ಪ್ರತಿಪಕ್ಷಗಳ ಹಕ್ಕನ್ನ ಸದೆಬಡಿಯವ ಹುನ್ನಾರ. ಈ ಕಾಯ್ದೆ ಜಾರಿಯಾಗಿದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಮಸೂದೆ ಆಗ್ತಿತ್ತು. ರಾಜ್ಯಪಾಲರು ಈ ಎಲ್ಲಾ ಅಂಶಗಳ ಗಮನಿಸಿ ಒಳ್ಳೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರ  ತೀರ್ಮಾನವನ್ನ ನಾವು ಸ್ವಾಗತ ಕೊರುತ್ತೇವೆ

ರಾಜ್ಯಪಾಲರ ಘನತೆಯನ್ನ ತಗ್ಗಿಸುವ ಕೆಲಸ ಸರ್ಕಾರದಿಂದ ಆಗಬಾರದು. ರಾಜ್ಯಪಾಲರನ್ನ ಮುಜುಗರಕ್ಕೆ ಸಿಲುಕಿಸಿ, ಗೌರವಕ್ಕೆ ದಕ್ಕೆ ತರುವ ಕೆಲಸವನ್ನ ಅವರಿಂದಲೇ ಮಾಡಿಸೋ ಕೆಲಸವನ್ನ ಸರ್ಕಾರ ಬಿಡಬೇಕು. ರಾಜ್ಯಪಾಲರು ಒಂದು ವಾಕ್ಯ ಓದುತ್ತಾರೋ. ಒಂದು ಪ್ಯಾರಾ ಓದಬೇಕಾ ಅಥವಾ ಒಂದು ಪದದಲ್ಲಿ ಮುಗಿಸಬೇಕಾ ಎಂಬುದು  ಅವರಿಗೆ ಬಿಟ್ಟದ್ದು, ಮುಜಗರಕ್ಕೀಡು ಮಾಡುವ ಅಂಶ ಹಾಕಿದ್ರು ಅವುಗಳನ್ನ ನೋಡಿಯೇ ಅವರು ಅವರ ಘನತೆ ಉಳಿಸಿಕೊಂಡಿದ್ದಾರೆ. ಅವರ ನಿರ್ಧಾರ-ತೀರ್ಮಾನವನ್ನ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.

ಇನ್ನೊಂದು ತಿಂಗಳಲ್ಲಿ ಜಾತಿ ಜನಗಣತಿ ಬಿಡುಗಡೆ ವಿಚಾರ

ಜಾತಿ ಜನಗಣತಿ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಹಾಗೂ ಹಿಂದುಳಿದ ವಿಚಾರಕ್ಕೆ ಆಗಬೇಕು. ಇದು ಮೇಲ್ನೋಟಕ್ಕೆ ರಾಜಕೀಯ ಉದ್ದೇಶದಿಂದ ಕೂಡಿರುವಂತಿದೆ. ಸರ್ಕಾರದ ಲೋಪದೋಶಗಳು, ಸಮಸ್ಯೆಗಳು ಎದುರಾದಾಗ ಅದರಿಂದ ಜಾರಿಕೊಳ್ಳಲು ಇವೆಲ್ಲಾ ಬರುತ್ತದೆ. ಆಗ ಜಾತಿಗಣತಿ-ಜನಗಣತಿಯನ್ನ ಮುಂದಿಟ್ಟು ಜನರ ದಿಕ್ಕು ತಪ್ಪಿಸುವುದು ಬೇಡ. ನೀವು ಮಾಡಿ ಅದಕ್ಕೆ ನಮ್ಮ ಸ್ವಾಗತವಿದೆ, ಅದರೆ ಅದು ಯಾವ ರೀತಿ ಇದೆ. ಜಾತಿಗಣತಿ ಜಾರಿ ಮಾಡುವ ಉದ್ದೇಶ ಸರಿ ಇರಬೇಕು. ನಿಮ್ಮ ವರದಿ ಜನರ ಮುಂದೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದಾರೆ.

Continue Reading

Chikmagalur

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆ

Published

on

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿರುವ ಎಂಎಲ್ಸಿ ಸಿ.ಟಿ ರವಿ ಇದೀಗ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

ಕೊಪ್ಪ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿರುವ ದಿನೇಶ್‌ ಹೊಸೂರು ಅವರಿಗೆ ಉಪಾಧ್ಯಕ್ಷ ಸ್ಥಾನ ಲಭಿಸಿದೆ.

ಡಿಸಿಸಿ ಬ್ಯಾಂಕ್‌ನಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿದ್ದು, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಕೊಪ್ಪದ ದಿನೇಶ್‌ ಹೊಸೂರು ಅವರು ಕಡೂರು ಶಾಸಕ ಕೆ.ಎಸ್. ಆನಂದ್ ವಿರುದ್ಧ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಚಿಕ್ಕಮಗಳೂರು ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆ ಕೂಗುವ ಮೂಲಕ ಕಾರ್ಯಕರ್ತರು ತಮ್ಮ ಸಂತಸ ವ್ಯಕ್ತಪಡಿಸಿದರು.

Continue Reading

Trending

error: Content is protected !!