Connect with us

Manglore

ಆಕಸ್ಮಿಕವಾಗಿ ಸಿಡಿದ ಪಿಸ್ತೂಲ್: ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ

Published

on

ಬಂಟ್ವಾಳ: ಇತ್ತೀಚೆಗಷ್ಟೇ ಪರವಾನಗಿ ಪಡೆದ ಪಿಸ್ತೂಲನ್ನು ಹೊಂದಿದ್ದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರೂ ಆಗಿರುವ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಆಕಸ್ಮಿಕವಾಗಿ ಗುಂಡೇಟು ತಗಲಿದೆ.

ವಿಟ್ಲ ಸಮೀಪ ಅನಂತಾಡಿ ಎಂಬಲ್ಲಿಗೆ ತೆರಳಿದ್ದ ಸಂದರ್ಭ, ತನ್ನ ಕೈಯಲ್ಲಿದ್ದ ಪಿಸ್ತೂಲು ಮಿಸ್ ಫೈರ್ ಆಗಿ ತೊಡೆಯ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗುಂಡೇಟು ತಗಲಿದ ವಿಚಾರ ಸಂಜೆಯ ವೇಳೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ್ದು, ಈ ಕುರಿತು ರಾತ್ರಿವರೆಗೆ ಯಾವುದೇ ಪೊಲೀಸ್ ಪ್ರಕರಣ ಸಮೀಪದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿಲ್ಲ.

ಬಿ.ಸಿ.ರೋಡಿನಲ್ಲಿ ವಾಸಿಸುತ್ತಿರುವ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರು, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದು, ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿಯನ್ನೂ ಹೊಂದಿದವರಾಗಿದ್ದಾರೆ. ಅನಂತಾಡಿ ಸಮೀಪ ಖಾಸಗಿ ಕಾರ್ಯಕ್ಕೆಂದು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

 

Continue Reading

Manglore

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ: ಚಾಲಕ ನಿಧ**ನ

Published

on

ಬಂಟ್ವಾಳ: ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಪ್ರಯಾಣಿಕರಾಗಿದ್ದ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟವರು.

ಮಹಾಬಲ ಪೂಜಾರಿಯವರು ತಮ್ಮ ಸಂಬಂಧಿಗಳ ಮಕ್ಕಳನ್ನು ಮೂಡಬಿದರೆಯ ಮಿಜಾರು ಎಂಬಲ್ಲಿಗೆ ಗರಡಿ ಜಾತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ವಾಪಸ್ ಮನೆಗೆ ಬರುವ ವೇಳೆ ಚಾಲಕ ಮಹಾಬಲ ಪೂಜಾರಿಯವರ ನಿಯಂತ್ರಣ ಕಳೆದಕೊಂಡ ಆಟೋರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಪರಿಣಾಮ ಚಾಲಕ ರಿಕ್ಷಾದ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ. ಉಳಿದಂತೆ ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಉ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading

Manglore

ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ 10 ಲಕ್ಷ ಫ್ರೋತ್ಸಾಹಧನ

Published

on

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯಾದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ 2024-25ನೇ ಸಾಲಿನ ಬಜೆಟ್ ನಲ್ಲಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಥಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಇವರು ಘೋಷಿಸಿದ ರೂ 10 ಲಕ್ಷದ ಪ್ರೋತ್ಸಾಹ ಧನವನ್ನು ಮೇಯರ್ ಮನೋಜ್ ಕುಮಾರ್ ಇವರು ಪಟ್ಲ ಫೌಂಡೇಶನಿನ ಕೇಂದ್ರೀಯ ಸಮಿತಿಯ ಜತೆಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಇವರ ಮೂಲಕ ಟ್ರಸ್ಟಿಗೆ ನೀಡಿದರು.

ಈ ಸಂದರ್ಭದಲ್ಲಿ ಮಹಾಗರಪಾಲಿಕೆಯ ಉಪಮೇಯರ್ ಭಾನುಮತಿ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ವಿಪಕ್ಷ ನಾಯಕರಾದ ಅನಿಲ್ ಕುಮಾರ್ ವಿವಿಧ ಸ್ಥಾಯಿಸಮಿತಿ ಅಧ್ಯಕ್ಷರುಗಳಾದ ಮನೋಹರ್ ಶೆಟ್ಟಿ, ಸುಮಿತ್ರ ಕರಿಯ, ಸರಿತಾ ಶಶಿಧರ್, ವೀಣಾ ಮಂಗಳ ಮಾಜಿ ಮೇಯರ್ ಶಶಿಧರ ಹೆಗ್ಡೆ ಉಪಸ್ಥಿತರಿದ್ದರು.

ಪಟ್ಲ ಫೌಂಡೇಶನ್ ಗೆ ಈ ಅನುದಾನವನ್ನು ಕೊಡಿಸುವಲ್ಲಿ ವಿಶೇಷವಾಗಿ ಸ್ಪಂದಿಸಿದ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ, ಮೇಯರ್, ಮಾಜಿ ಮೇಯರ್ ಗಳು, ಆಡಳಿತ ಹಾಗೂ ವಿರೋಧ ಪಕ್ಷದ ಎಲ್ಲಾ ಕಾರ್ಪೊರೇಟರ್ ಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಹಾಗೂ ಕೇಂದ್ರೀಯ ಹಾಗೂ ಎಲ್ಲಾ ಪ್ರಾದೇಶಿಕ ಘಟಕಗಳು ಅಭಿನಂದನೆಗಳನ್ನು ಸಲ್ಲಿಸಿದೆ

Continue Reading

Manglore

ಉದ್ಘಾಟನೆ ಗೊಂಡ ಆರೋಗ್ಯ ಕೇಂದ್ರಕ್ಕೆ ಬೀಗ- ಮರು ಉದ್ಘಾಟನೆ ಗೆ ಹುನ್ನಾರ: ವೇದವ್ಯಾಸ ಕಾಮತ್ ಆರೋಪ

Published

on

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಮಂಗಳಾದೇವಿಯಲ್ಲಿ ನಾಲ್ಕೈದು ದಿನಗಳ ಹಿಂದೆ ಶಿಷ್ಟಾಚಾರದ ಪ್ರಕಾರವೇ ಉದ್ಘಾಟನೆಗೊಂಡಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿ, ಮರು ಉದ್ಘಾಟನೆ ನಡೆಸಲು ಹುನ್ನಾರ ನಡೆದಿರುವ ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆ ವತಿಯಿಂದ ಗೌರವಾನ್ವಿತ ಮೇಯರ್ ರವರು ಶಿಷ್ಟಾಚಾರದ ಪ್ರಕಾರವೇ ನಡೆದುಕೊಂಡಿದ್ದು ಯಾವುದೇ ಲೋಪವಾಗಿಲ್ಲ. ಶಿಷ್ಟಾಚಾರ ಉಲ್ಲಂಘನೆ ನೆಪದಲ್ಲಿ ಬಡಪಾಯಿ ನೌಕರರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗೂ ಕೆಲಸದಿಂದ ತೆಗೆದು ಹಾಕುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿರುವುದು ಅಧಿಕಾರದ ಮದವಾಗಿದೆ. ಅಲ್ಲದೇ ಆರೋಗ್ಯ ಸಚಿವರಾದವರು ಆರೋಗ್ಯ ಕೇಂದ್ರವನ್ನು ತೆರೆಸಬೇಕು ಹೊರತು ಮುಚ್ಚುವುದಲ್ಲ. ಕೇವಲ ತಮ್ಮ ಸ್ವಪ್ರತಿಷ್ಠೆಗಾಗಿ ಒಂದು ಆರೋಗ್ಯ ಕೇಂದ್ರವನ್ನೇ ಬಂದ್ ಮಾಡಿ, ಸಾರ್ವಜನಿಕರನ್ನು ಹೊರ ಹಾಕಿ ಮರು ಉದ್ಘಾಟನೆ ಮಾಡುತ್ತೇವೆ ಎನ್ನುತ್ತಿರುವ ಪ್ರಕರಣ ಇಡೀ ರಾಜ್ಯದ ಇತಿಹಾಸದಲ್ಲೇ ಮೊದಲು. ಅಂತಹ ಕೆಟ್ಟ ದಾಖಲೆಯೊಂದು ಕಾಂಗ್ರೆಸ್ ಸರ್ಕಾರದಲ್ಲಿ ದಾಖಲಾಗುತ್ತಿದೆ ಎಂದರು.

ಇಲ್ಲಿನ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಕ್ಷೇತ್ರದ ಜವಾಬ್ದಾರಿಯುತ ಶಾಸಕನಾಗಿ ಕಾಮಗಾರಿಗೆ ಸಂಬಂಧಪಟ್ಟ ಇಲಾಖೆಯ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆತಂದು ಮುತುವರ್ಜಿ ವಹಿಸಿದ್ದೆ. ಅಲ್ಲದೇ ಸ್ಥಳೀಯ ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿ, ಹಾಗೂ ಅಂದಿನ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲ್ ರವರು ಸಹ ವಿಶೇಷ ಆಸಕ್ತಿ ವಹಿಸಿದ್ದರ ಫಲವಾಗಿ ಇಂದು ಕ್ಷೇತ್ರದ ಜನತೆಗೆ ಅನುಕೂಲವಾಗಿದೆ. ಆದರೆ ಇದರಲ್ಲೂ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿರುವುದಕ್ಕೆ ಸಾರ್ವಜನಿಕರೇ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಾಳೆಯಿಂದ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಈವರೆಗೂ ಯಾವೆಲ್ಲಾ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲವೋ ಆ ಎಲ್ಲಾ ಕಾರ್ಯಕ್ರಮಗಳೂ ಮರು ಉದ್ಘಾಟನೆಯಾಗಲಿ, ಆ ಮೂಲಕ ಜಿಲ್ಲೆಯಲ್ಲಿ ಕೆಟ್ಟ ಸಂಪ್ರದಾಯ ಆರಂಭವಾಗಲಿ ಎಂದು ಆಕ್ರೋಶದಿಂದ ನುಡಿದರು.

Continue Reading

Trending

error: Content is protected !!