Connect with us

State

ಕನ್ನಡ ನಾಡಿನ ಶ್ರಮಿಕರ-ದುಡಿಯುವ ವರ್ಗಗಳ ಬೇಡಿಕೆಗೆ ಸಿಎಂ ಸ್ಪಂದನೆ

Published

on

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ಕೈಯಾರೆ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಊಟ ಬಡಿಸಿದ ಮುಖ್ಯಮಂತ್ರಿಗಳು

ಬೆಂಗಳೂರು, ಮಾರ್ಚ್ 11: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.

ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ದವಾಗಿದ್ದು, ಉಳಿದ್ದು ಸಿದ್ದಗೊಳ್ಳುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಈಗಾಗಲೇ ಒಂದು ಉದ್ಘಾಟಿಸಲಾಗಿದೆ. ಮತ್ತೊಂದು ಇಂದಿರಾ ಕ್ಯಾಂಟೀನ್ ಇಲ್ಲಿ ಬರಲಿದೆ. ವಿಮಾನ ನಿಲ್ದಾಣದಲ್ಲಿ 2 ಇಂದಿರಾ ಕ್ಯಾಂಟೀನ್ ಬರಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದರು.

ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ
ಬೆಂಗಳೂರಿನ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

National

ಕೆಪಿಎಸ್‌ ಶಾಲೆ ತೆರೆಯುವ ಮೂಲಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ

Published

on

 ನವದೆಹಲಿ:  ಕೆಪಿಎಸ್ ಶಾಲೆಗಳನ್ನು ತೆರೆಯುವ ಮ್ಯಾಗ್ನೆಟ್​ ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್  ಸರ್ಕಾರ ಮುಂದಾಗಿದ್ದು, ಈ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಆರೋಪ ಕೇಳಿ ಬಂದಿದೆ.  ಹಾಗಾಗಿ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದ್ದು, ಸರ್ಕಾರದ ನಡೆ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಶಿಕ್ಷಕರ ನೇಮಕಾತಿ ಹಾಗೂ ಶಿಕ್ಷಕರಿಗೆ ಸಂಬಳ ಕೊಡಲು ಆಗುತ್ತಿಲ್ಲ.  ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ..

Continue Reading

Sports

NOC ನಿರಾಕರಿಸಿದ MCA: RCBಗೆ ಬಿಗ್‌ಶಾಕ್‌

Published

on

ಮುಂಬೈ: ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತದಿಂದಾಗಿ ತವರು ಕ್ರೀಡಾಂಗಣ ಬದಲಾಯಿತಿಸಲು ಮುಂದಾಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಗೆ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌  ಶಾಕ್‌ ನೀಡಿದೆ.

ಐಪಿಎಲ್‌ನ ಐದು ತವರು ಪಂದ್ಯಗಳಿಗಾಗಿ ಮುಂಬೈನ ಡಿ.ವೈ. ಪಾಟೀಲ್‌ ಕ್ರೀಡಾಂಗಣ ಬಳಕೆಗೆ ಎನ್‌ಒಸಿ ನೀಡಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆರ್‌ಸಿಬಿ, 2025 ರ ಆವೃತ್ತಿಯಲ್ಲಿ ಐಪಿಎಲ್‌ ಟ್ರೋಫಿ  ಗೆದ್ದ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ನಡೆದಿತ್ತು. ಈ ವೇಳೆ 11 ಅಭಿಮಾನಿಗಳು ಅಸುನೀಗಿದ್ದರು. ಆದ್ದರಿಂದ 2026 ರ ಟೂರ್ನಿ ವೇಳೆ ಐದು ಪಂದ್ಯಗಳಿಗೆ ತವರು ಕ್ರೀಡಾಂಗಣ ಬದಲಾಯಿಸಲು ಆರ್‌ಸಿಬಿ ತೀರ್ಮಾನಿಸಿತ್ತು.

ನವೀ ಮುಂಬೈನ ಡಿ.ವೈ. ಪಾಟೀಲ್‌ ಕ್ರೀಡಾಂಗಣ ಮತ್ತು ಪುಣೆ ಮೈದಾನಕ್ಕೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಭೇಟಿ ನೀಡಿತ್ತು. ಪುಣೆ ಮೈದಾನವನ್ನ ರಾಜಸ್ಥಾನ ರಾಯಲ್ಸ್‌ ತಂಡ ತವರು ಕ್ರೀಡಾಂಗಣವಾಗಿ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ 5 ತವರು ಪಂದ್ಯಗಳಿಗಾಗಿ ಡಿ.ವೈ. ಪಾಟೀಲ ಕ್ರೀಡಾಂಗಣಕ್ಕೆ ಫ್ರಾಂಚೈಸಿ ಮನವಿ ಮಾಡಿತ್ತು. ಆದರೆ ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಈ ಮೈದಾನವನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರ್‌ಸಿಬಿಗೆ ಎನ್‌ಒಸಿ ನಿರಾಕರಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇನ್ನೊಂದು ಕಡೆ ಆರ್‌ಸಿಬಿ ಪಂದ್ಯಗಳನ್ನ ಬೆಂಗಳೂರಿನಲ್ಲೇ ನಡೆಸಲು ಕೆಎಸ್‌ಸಿಎ ಎಲ್ಲಿಲ್ಲದ ಕಸರತ್ತು ನಡೆಸುತ್ತಿದೆ. ಈ ಸಂಬಂಧ ನಾಳೆ (ಫೆ.12) ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಇಂದು (ಫೆ.11) ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಗೃಹ ಸಚಿವರು ನೇಮಕ ಮಾಡಿದ್ದ ಸಮಿತಿ ಸಲ್ಲಿಸಿರುವ ವರದಿಯನ್ನ ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ, ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ನಿರೀಕ್ಷೆಯಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ 2026 ರ ಐಪಿಎಲ್‌ ಆವೃತ್ತಿ ಉದ್ಘಾಟನೆ ಆಗಲಿದೆ.

Continue Reading

Politics

ಶೀಘ್ರದಲ್ಲಿಯೇ ಬಜೆಟ್‌ ದಿನಾಂಕ ನಿಗದಿ: ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಬಜೆಟ್‌ ದಿನಾಂಕವನ್ನು ಶೀಘ್ರದಲ್ಲಿಯೇ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಂಎಲ್‌ಎಗಳು ಮತ್ತು ಎಂಎಲ್‌ಸಿಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಪತ್ರಕರ್ತರು ಪದೇ ಪದೇ ಒಂದೇ ವಿಚಾರವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ನಿರ್ಧರಿಸಿದರೆ ಅದರಂತೆ ನಾನು ಹಾಗೂ ಡಿಸಿಎಂಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Continue Reading

Trending

error: Content is protected !!