Connect with us

State

ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ

Published

on

ದಾಖಲೆಗಳ ಸಮೇತ ಜನರೆದುರು, ಕನ್ನಡಿಗರ ಎದುರು ಚರ್ಚೆಗೆ ಬನ್ನಿ. ನೀವು ಕರೆದ ಜಾಗಕ್ಕೆ ನಾನು ಬರ್ತೀನಿ. ನೀವು ರೆಡಿನಾ ?

ಬಿಜೆಪಿ ಶೂದ್ರರ, ಮಹಿಳೆಯರ ದಲಿತರ, ದುಡಿಯುವ ವರ್ಗಗಳ, ಶ್ರಮಿಕರ, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಶತ್ರು: ಶೂದ್ರರು ರಾಜಕೀಯ ಸ್ವಾರ್ಥಕ್ಕಾಗಿ BJP ಯಲ್ಲಿದ್ದಾರೆ ಅಷ್ಟೆ: ಸಿಎಂ ಸಿದ್ದರಾಮಯ್ಯ

ನುಡಿದಂತೆ ನಡೆದು ಜನರ ಬದುಕಿಗೆ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸಂಸ್ಕಾರ: ಜನರನ್ನು ಕೇಳವ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವುದು ಬಿಜೆಪಿ ಸಂಸ್ಕಾರ: ಸಿ.ಎಂ ಟೀಕಾಪ್ರಹಾರ

56 ಇಂಚಿನ ಎದೆ ಇರೋದಲ್ಲ ಮುಖ್ಯ. ಎದೆಯೊಳಗೆ ಹೃದಯ ಇರಬೇಕು. ಆ ಹೃದಯಕ್ಕೆ ರೈತರ, ಕಾರ್ಮಿಕರ, ವಿದ್ಯಾರ್ಥಿ ಯುವಜನರ ಪರವಾದ ತಾಯಿ ಕರುಳು ಇರಬೇಕು: ಸಿ.ಎಂ ವ್ಯಂಗ್ಯ

ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ನಿಮ್ಮೆಲ್ಲರ-ನಮ್ಮೆಲ್ಲರ ಧ್ವನಿ: ಇವರು ಗೆಲ್ಲುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಮಾ 27: ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ನಿಮ್ಮೆಲ್ಲರ ಧ್ವನಿ. ನಮ್ಮೆಲ್ಲರ ಧ್ವನಿ. ಇವರು ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ ನಾನು, ನೀವು ಗೆದ್ದಂತೆ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ಮೈಸೂರು ನಗರದ ಇಂದಿರಗಾಂಧಿ ಕಾಂಗ್ರೆಸ್ ಭವನದ ಮೈದಾನದಲ್ಲಿ ಇಂದು ಆಯೋಜಿಸಿದ್ದ, ಚಾಮರಾಜ, ಕೃಷ್ಣರಾಜ , ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನುಡಿದಂತೆ ನಡೆದು ಜನರ ಬದುಕಿಗೆ ಸ್ಪಂದಿಸುವುದು ನಮ್ಮ ಕಾಂಗ್ರೆಸ್ ಸಂಸ್ಕಾರ. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವುದು ಬಿಜೆಪಿ ಸಂಸ್ಕಾರ. ಬಿಜೆಪಿಯನ್ನು ನಿರಂತರವಾಗಿ ಸೈದ್ಧಾಂತಿಕವಾಗಿ ವಿರೋಧಿಸುತ್ತಾ ಬೀದಿ ಹೋರಾಟಗಳ ಮೂಲಕ ಬೆಳೆದವರು ಲಕ್ಷ್ಮಣ್ ಎಂದು ಮೆಚ್ಚುಗೆ ಸೂಚಿಸಿದರು.

ಬರೀ 56 ಇಂಚಿನ ಎದೆ ಇರೋದಲ್ಲ. ಎದೆಯೊಳಗೆ ಹೃದಯ ಇರಬೇಕು. ಆ ಹೃದಯಕ್ಕೆ ರೈತರ, ಕಾರ್ಮಿಕರ, ವಿದ್ಯಾರ್ಥಿ ಯುವಜನರ ಪರವಾದ ತಾಯಿ ಕರುಳು ಇರಬೇಕು ಎಂದು ವ್ಯಂಗ್ಯವಾಡಿದರು.

ಸಾಮಾಜಿಕ ನ್ಯಾಯ, ಸಂವಿಧಾನ ರಕ್ಷಣೆ, ಸರ್ವರ ಅಭಿವೃದ್ಧಿ, ಅನ್ನ-ಅಕ್ಷರ-ಆಸರೆ-ಆರೋಗ್ಯ-ವಸತಿ ಜತೆಗೆ ಸಾಮಾಜಿಕ ಪ್ರಗತಿಗೆ ನಿಷ್ಠವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್. ಬಿಜೆಪಿ ಇದಕ್ಕೆ ವಿರುದ್ಧವಾದ ಮಹಿಳೆಯರ, ದಲಿತರ, ಶೂದ್ರರ ಮತ್ತು ದುಡಿಯುವವರ, ಶ್ರಮಿಕರ ವಿರೋಧಿಯಾದ ಶ್ರೀಮಂತರ ಪರವಾದ ಪಕ್ಷ ಎಂದರು.‌

BJP ಯ ಹುಟ್ಟು ಮತ್ತು ಇತಿಹಾಸವನ್ನು ಸರಿಯಾಗಿ ಗಮನಿಸಿ. BJP ತನ್ನ ಆಚರಣೆಯಲ್ಲಿ ಬಹುಸಂಖ್ಯಾತರ ವಿರೋಧಿಯಾದ ಪಕ್ಷ. ಶೂದ್ರರು, ದಲಿತರನ್ನು ಸಮಸ್ತ ಮಹಿಳೆಯರನ್ನು ಅಕ್ಷರ ಸಂಸ್ಕೃತಿಯಿಂದ, ಶಿಕ್ಷಣದಿಂದ ದೂರ ಇಡಬೇಕು ಎನ್ನುವುದು ಮನುಸ್ಮೃತಿಯ ಸಿದ್ಧಾಂತ. ಈ ಸಿದ್ಧಾಂತ ಅಸಮಾನತೆಯನ್ನು, ಜಾತಿ ತಾರತಮ್ಯವನ್ನು ಸ್ಪಷ್ಟವಾಗಿ ಬೆಂಬಲಿಸುತ್ತದೆ. ಆದ್ದರಿಂದ ಇದು ಭಾರತದ ಬಹು ಸಂಖ್ಯಾತ ದುಡಿಯುವ ವರ್ಗಗಳ ವಿರೋಧಿಯಾದ ಪಕ್ಷ ನೆರೆದಿದ್ದ ಕಾರ್ಯಕರ್ತರಿಗೆ ಮನವರಿಕೆ ಮಾಡಿಸಿದರು.

ಮೋದಿಯವರು ಇಡಿ ದೇಶದ ಜನರಿಗೆ ಹೇಳಿದ ಸುಳ್ಳುಗಳು ನಿಮಗೆ ಗೊತ್ತಿಲ್ಲವೇ? ಮೋದಿಯವರು ಕಳೆದ 10 ವರ್ಷಗಳಲ್ಲಿ ಒಂದೇ ಒಂದು ದಿನ ಈ ದೇಶದ ನಿರುದ್ಯೋಗ ಸಮಸ್ಯೆ ಬಗ್ಗೆ, ಬೆಲೆ ಏರಿಕೆ ಬಗ್ಗೆ, ಗೊಬ್ಬರದ ಬೆಲೆ ದುಬಾರಿಯಾಗಿರುವ ಬಗ್ಗೆ ಬಾಯಿಯನ್ನೇ ಬಿಟ್ಟಿಲ್ಲ . ಪತ್ರಕರ್ತರಿಗೆ ಹೆದರಿ ಇವತ್ತಿನವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನಡೆಸದ ಏಕೈಕ ಪ್ರಧಾನಮಂತ್ರಿ ಎಂದು ವ್ಯಂಗ್ಯವಾಡಿದರು.

ದೇವರ ಹೆಸರಲ್ಲಿ, ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ವೈಷಮ್ಯ ಸೃಷ್ಟಿಸುವ ರಾಜಕಾರಣ ಬಹಳ ಸುಲಭ. ಆದರೆ, ಉದ್ಯೋಗ ಸೃಷ್ಟಿ ಮಾಡುವುದು, ಈ ದೇಶದ ಬಹುಸಂಖ್ಯಾತರ ಬದುಕಿಗೆ ಸ್ಪಂದಿಸುವ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಜನಪರವಾದ ಕಾಳಜಿ ಬೇಕು. ಅಭಿವೃದ್ಧಿ ಪಥದಲ್ಲಿ ದೇಶ ಮುನ್ನಡೆಸುವುದು ಗೊತ್ತಿರಬೇಕು. ಪ್ರಧಾನಿ ಮೋದಿಯವರಿಂದ ಇದು ಸಾಧ್ಯವಾಗಿಲ್ಲ ಎಂದರು.

ಅದಾನಿ, ಅಂಬಾನಿ ಪರವಾಗಿ ಇದ್ದರೆ ಈ ದೇಶದ ದುಡಿಯುವ ವರ್ಗಗಳು, ಯುವಕ, ಯುವತಿಯರ ಭವಿಷ್ಯ ರೂಪಿಸುವುದಾದರೂ ಹೇಗೆ ? ಇದು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರರಾದ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಶ್ರೀ ತನ್ವೀರ್ ಸೇಠ್, ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಕೆ.ಹರೀಶಗೌಡ, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಎಂ.ಕೆ.ಸೋಮಶೇಖರ್, ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಸೇರಿದಂತೆ, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬೂತ್ ಮುಖಂಡರುಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್

ಅಲ್ರೀ ಬರೀ ಡೈಲಾಗ್ ಹೊಡ್ಕೊಂಡು 10 ವರ್ಷ ಮುಗಿಸಿದ್ರಲ್ಲಾ ಇದು ದೇಶದ ಜನರಿಗೆ ಮಾಡಿದ ಅವಮಾನ ಅಲ್ವಾ?

ನಿಮ್ಮ ಅಕೌಂಟಿಗೆ 15 ಲಕ್ಷ ಹಾಕ್ತೀನಿ ಅಂದ್ರು. 15 ಪೈಸೆನಾದ್ರೂ ಹಾಕಿದ್ರಾ?

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ, ನಿರ್ಮಲಾ ಸೀತಾರಾಮನ್ ಒಂದೇ ಒಂದು ಪೈಸೆ ಕೊಡೋದು ಬೇಡ. ಕನ್ನಡಿಗರ ಪಾಲಿನ ತೆರಿಗೆ ಪಾಲು ಕೊಟ್ಟರೆ ಸಾಕು

ಒಂದು ವರ್ಷಕ್ಕೆ ಕನ್ನಡಿಗರು ಒಂದು ಲಕ್ಷದ 30 ಸಾವಿರ ಕೋಟಿ ರೂಪಾಯಿ ಕೇಂದ್ರಕ್ಕೆ ಕೊಡ್ತಾರೆ. ಇದರಲ್ಲಿ ಕನ್ನಡಿಗರಿಗೆ ವಾಪಾಸ್ ಬರುವುದು ಕೇವಲ 53 ಸಾವಿರ ಕೋಟಿ. ಈ ಅನ್ಯಾಯವನ್ನು ಸರಿ ಮಾಡಿ ಕನ್ನಡಿಗರ ಕೂಗಿಗೆ, ಕನ್ನಡಿಗರ ಶ್ರಮಕ್ಕೆ ಬೆಲೆ ಕೊಡಿ

ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ: ದಾಖಲೆಗಳ ಸಮೇತ ಜನರೆದುರು, ಕನ್ನಡಿಗರ ಎದುರು ಚರ್ಚೆಗೆ ಬನ್ನಿ. ನೀವು ಕರೆದ ಜಾಗಕ್ಕೆ ನಾನು ಬರ್ತೀನಿ. ನೀವು ರೆಡಿನಾ ?

.

Continue Reading
Click to comment

Leave a Reply

Your email address will not be published. Required fields are marked *

State

ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗವಹಿಸಿದ ಬಾಲಿವುಡ್ ಕುಟುಂಬ

Published

on

ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು.

ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.

Continue Reading

State

ಸೆಝ್ ಕೈಗಾರಿಕಾ ವಲಯದಲ್ಲಿ ಬೆಂಕಿ‌ ಅವಘಡ- ಕೋಟ್ಯಾಂತರ ನಷ್ಟ

Published

on

ಮಂಗಳೂರು: ಸೆಝ್ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಕಂಪೆನಿಯಲ್ಲಿ ದುರಸ್ತಿ ಕಾರ್ಯನಡೆಯುತ್ತ ಕಾರಣ ನೌಕರರು ಯಾರು ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಥೆಂಟಿಕ್ ಓಷನ್ ಟ್ರೆಷರ್ ನ ಮೂಲವೊಂದು ಮಾಹಿತಿ ನೀಡಿದೆ.

ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಸುಮಾರು 10 ಕೋ.ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.

ಸದ್ಯ ಕೈಗಾರಿಕಾ ವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.

ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೇಟ್ ಗಳನ್ನು ಮಾಡಿ ವಿದೇಶಗಳಿಗೆ ತಫ್ತು ಮಾಡುವ ಕಂಪೆನಿಯಾಗಿದೆ.

Continue Reading

State

ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

Published

on

ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು.

ಆದರೆ ಪೊಲೀಸ್ ಕಾನ್ಸ್‌ಸ್ಟೇಬಲ್‌ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ 3ತಿಂಗಳಿನಿಂದ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಮಹಮ್ಮದ್ ಹ್ಯಾರೀಸ್ ಪ್ರತಿದಿನ ಕರೆಮಾಡಿ 18,000 ರೂ. ಹಣ ಲಂಚವಾಗಿ ನೀಡಬೇಕೆಂದು ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂದು ಫಿರ್ಯಾದಿದಾರರಿಗೆ ಬೆದರಿಸುತ್ತಿದ್ದ.

ಇದರಿಂದ ಬೇಸತ್ತ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ 18,000 ಲಂಚ ಪಡೆಯುತ್ತಿದ್ದಾಗಲೇ ಮಹಮ್ಮದ್ ಹ್ಯಾರೀಸ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

Continue Reading

Trending

error: Content is protected !!