Connect with us

Manglore

ಅ.15ರಂದು ಸಿಎಂ ಡಿ.ಕೆ. ಶಿವಕುಮಾರ್ ದ.ಕ.ಜಿಲ್ಲೆಗೆ ಆಗಮನ

Published

on

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.


ಅ.15ರಂದು ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯಲಿರುವ ದಸರಾ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯಲಿರುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Continue Reading

Manglore

ದ.ಕ.ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣಕ್ಕೆ ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಿದ ರಾಜ್ಯ ಸರ್ಕಾರ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಸಲಹೆಗಳನ್ನು ಆಹ್ವಾನಿಸಿದೆ.


ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿದೆ. ಆದ್ದರಿಂದ ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ.

ಹೆಸರಿನ ವಿವರ ಹೀಗಿದೆ:
* ಪ್ರಾದೇಶಿಕ ಭಾಷೆ (ಕನ್ನಡ): ಮಂಗಳೂರು ಜಿಲ್ಲೆ
* ರೋಮನ್ ಲಿಪಿ (ಇಂಗ್ಲಿಷ್): MANGALURU DISTRICT
* ದೇವನಾಗರಿ ಲಿಪಿ (ಹಿಂದಿ): मंगलुरु ज़िला

ಪ್ರಸ್ತಾವಿತ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಲಹೆ, ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಂದ ಸ್ವೀಕೃತವಾಗುವ ಸಲಹೆ ಮತ್ತು ಅಭಿಪ್ರಾಯಗಳನ್ನು ಪರಿಶೀಲಿಸಿದ ಬಳಿಕ ಈ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು

1. ಮುಖ್ಯಮಂತ್ರಿಯವರ ಸಚಿವಾಲಯ,
ಕೊಠಡಿ ಸಂಖ್ಯೆ 235, 2ನೇ ಮಹಡಿ,
ವಿಧಾನಸೌಧ, ಬೆಂಗಳೂರು-560001
email: [email protected]

2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ
ಕಂದಾಯ ಇಲಾಖೆ, ಕೊಠಡಿ ಸಂಖ್ಯೆ 711
7ನೇ ಮಹಡಿ, ಬಹುಮಹಡಿಗಳ ಕಟ್ಟಡ,
ಡಾ.ಬಿ.ಆರ್.ಅಂಬೇಡ್ಕರ್ ವೀದಿ,
ಬೆಂಗಳೂರು- 560001
email: [email protected]

3. ದ.ಕ.ಜಿಲ್ಲಾಧಿಕಾರಿ, ಪ್ರಜಾಸೌಧ,
ದ.ಕ.ಜಿಲ್ಲಾಡಳಿತ ಕೇಂದ್ರ, ಜಿಲ್ಲಾಧಿಕಾರಿಗಳ
ಕಾರ್ಯಾಲಯ, ಪಡೀಲು, ಮಂಗಳೂರು
ದ.ಕ.ಜಿಲ್ಲೆ- 575007
email: [email protected].

ಇವರಿಗೆ ಸಲ್ಲಿಸಬಹುದಾಗಿದೆ.

ಅಧಿಸೂಚನೆಯ ಪ್ರಕಾರ, ಜಿಲ್ಲೆಯ ಈಗಿನ ಹೆಸರಾದ ‘ದಕ್ಷಿಣ ಕನ್ನಡ ಜಿಲ್ಲೆ’ಯನ್ನು ರೋಮನ್ ಲಿಪಿ, ದೇವನಾಗರಿ ಲಿಪಿ ಹಾಗೂ ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ‘ಮಂಗಳೂರು ಜಿಲ್ಲೆ’ ಎಂದು ಬದಲಾಯಿಸಲು ಉದ್ದೇಶಿಸಲಾಗಿದೆ.
ಸಾರ್ವಜನಿಕರ ಅಭಿಪ್ರಾಯ ಸಂಗ್ರಹದ ಬಳಿಕವೇ ಪ್ರಸ್ತಾವನೆಗೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ಮರುನಾಮಕರಣದ ಕುರಿತು ಸರ್ಕಾರದ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸರಕಾರದ ಪ್ರಕಟಣೆ ತಿಳಿಸಿದೆ.

Continue Reading

Manglore

ವಿದ್ಯುತ್ ತಂತಿ ಸ್ಪರ್ಶಿಸಿ ಬಾವ : ಬಾಮೈದ‌, ಸಾ*ವು- ಓರ್ವ ಬಾಲಕನ ಸ್ಥಿತಿ ಗಂಭೀರ

Published

on

ಸುಳ್ಯ: ಹೊಳೆಯಲ್ಲಿ ಮೀನು ಹಿಡಿಯಲು ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾವ ಮತ್ತು ಬಾಮೈದರಿಬ್ಬರು ಮೃತಪಟ್ಟಿದ್ದು, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.


ಘಟನೆಯಲ್ಲಿ ರಮೇಶ್ ಮತ್ತು ಭರತ್ ಎಂಬವರು ಮೃತಪಟ್ಟಿದ್ದಾರೆ. ಇವರೊಂದಿಗೆ ತೆರಳಿದ್ದ ಬಾಲಕನಿಗೂ ವಿದ್ಯುತ್ ತಗುಲಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಅ.12ರಂದು ರಾತ್ರಿ ಭರತ್, ರಮೇಶ್ ಹಾಗೂ ಅವರ ಸಂಬಂಧಿ ಯುವಕ ಸಿಂಚನ್ ಮೂವರು ರಾತ್ರಿ 10.30ರ ವೇಳೆಗೆ ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರ ಇರುವ ತೋಡಿಗೆ ಮೀನು ಹಿಡಿಯಲೆಂದು ಹೋಗಿದ್ದರೆನ್ನಲಾಗಿದೆ.

ತೋಡಿನ ಮೇಲ್ಬಾಗದಲ್ಲಿ ತಂತಿಯನ್ನು ಕಟ್ಟಲಾಗಿದ್ದು ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಇದನ್ನು ಗಮನಿಸದೆ ಭರತ್ ಹಾಗೂ ರಮೇಶ್ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಗೊಂಡು ಸ್ಥಳದಲ್ಲೇ ಮೃತಪಟ್ಟರು. ಅಲ್ಲದೆ ಜೊತೆಗಿದ್ದ ಸಿಂಚನ್‌ಗೂ ತಂತಿ ಸ್ಪರ್ಶಿಸಿ ಆತ ಎಸೆಯಲ್ಪಟ್ಟಿದ್ದಾನೆ. ಅತನ ಕೈ, ಎದೆ, ಕಾಲಿಗೆ ಸುಟ್ಟ ಗಾಯಗಳಾಗಿವೆ.

ಬೆಳ್ಳಾರೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕಾರ್ಯ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ಸಿಂಚನ್ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿದ್ದಾರೆ.‌ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

Manglore

ಕಲ್ಮಡ್ಕದಲ್ಲಿ ಭೀಕರ ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರ ಬ*ಲಿ: ಬಾಲಕ ಗಂಭೀರ!

Published

on

ಸುಳ್ಯ: ವಿದ್ಯುತ್ ಶಾಕ್ (Electric shock) ಗೆ ಒಳಗಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಬಾಲಕನೋರ್ವ ಗಂಭೀರ ಗಾಯಗೊಂಡ ಹೃದಯ ವಿದ್ರಾವಕ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ಸಂಭವಿಸಿದೆ.

ಕಳೆದ ತಡರಾತ್ರಿ ಸುಮಾರು 1 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ ಮೃತರನ್ನು ಬೊಮ್ಮೆಟ್ಟಿ ನಿವಾಸಿ ಭರತ್ ಹಾಗೂ ಉಪ್ಪಿನಂಗಡಿ ಮೂಲದ ಗಣೇಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಟುಂಬಕ್ಕೆ ಆಧಾರವಾಗಿದ್ದ ಕ್ರೀಡಾಪಟು: ಮೃತ ಭರತ್ ಅವರು ಉತ್ತಮ ಕ್ರೀಡಾಪಟುವಾಗಿದ್ದು, ಗ್ರಾಮದಲ್ಲಿ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಹಲವೇಡೆ ಸನ್ಮಾನಗಳಿಗೂ ಭಾಜನರಾಗಿದ್ದರು. ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದ ಇವರೇ ತಮ್ಮ ಕುಟುಂಬಕ್ಕೆ ಮುಖ್ಯ ಆಧಾರಸ್ತಂಭವಾಗಿದ್ದರು ಎಂದು ಸ್ಥಳೀಯರು ಕಣ್ಣೀರಿಟ್ಟಿದ್ದಾರೆ.

ನಿಖರ ಕಾರಣ ತಿಳಿದುಬಂದಿಲ್ಲ:ರಾತ್ರಿ ವೇಳೆ ಈ ಅನಾಹುತ ಸಂಭವಿಸಿದ್ದು, ವಿದ್ಯುತ್ ಆಘಾತಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಈ ಕುರಿತು ಮಾಹಿತಿ ನಿರೀಕ್ಷಿಸಲಾಗಿದೆ.

Continue Reading

Trending

error: Content is protected !!