Connect with us

Mysore

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅದ್ದೂರಿ ಸ್ವಾಗತ ಕೋರಿದ ಶಾಸಕ ದರ್ಶನ್ ಧ್ರುವನಾರಾಯಣ್

Published

on

ಕ್ಷೇತ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿದ ದರ್ಶನ್ ಧ್ರುವನಾರಾಯಣ್

ನಂಜನಗೂಡು : ಶ್ರೀ ಕಡೆ ಮಾಲಮ್ಮ ದೇವಸ್ಥಾನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಂಜನಗೂಡು ರಾಜ್ಯದ ಎರಡನೇ ಬಾರಿ ಮುಖ್ಯಮಂತ್ರಿ ಯಾಗಿ ಮೊದಲನೆ ಬಾರಿಗೆ ನಂಜನಗೂಡಿಗೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ನಗರಸಭೆ ಮತ್ತು ತಾಲೂಕು ಆಡಳಿತ ವತಿಯಿಂದ ಗಡಿಭಾಗದಲ್ಲಿ ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು.

ಹುಲ್ಲಹಳ್ಳಿ ಸರ್ಕಲ್ ಬಳಿ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಬ್ಲಾಕ್ ಅಧ್ಯಕ್ಷರುಗಳು ಮಾಜಿ ಶಾಸಕ ಕಳಲೆ ಕೇಶಮೂರ್ತಿ ಪಕ್ಷದ ಮುಖಂಡರು ನಗರಸಭೆ ಸದಸ್ಯರುಗಳು ಮತ್ತು ಕಾರ್ಯಕರ್ತರು ರಾಜ್ಯದ ಮುಖ್ಯಮಂತ್ರಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಪಟಾಕಿ ಸಿಡಿಸಿ ಭಾರಿ ಗಾತ್ರದ ಹೂವಿನ ಹಾರಾಕಿ ಸಂಭ್ರಮಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ಕನಕದಾಸ ಸಾರ್ವಜನಿಕ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಶಂಕು ಸ್ಥಾಪನೆ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ನೇರವಾಗಿ ಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕಡೆ ಮಾಲಮ್ಮ ಎಂಬ ನೂತನ ದೇವಾಲಯ ಉದ್ಘಾಟನೆಯನ್ನು ನೆರವೇರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಇವತ್ತು ನಾವೆಲ್ಲರೂ ಕೂಡ ಸೇರಿ ಕಡೆ ಮಾಲಮ್ಮ ಈ ದೇವಸ್ಥಾನವನ್ನು ಉದ್ಘಾಟನೆಯನ್ನು ನೆರವೇರಿಸಿದ್ದೇವೆ.

ಕಡೆ ಮಾಲಮ್ಮ ದೇವಿ ನಿಮ್ಮೆಲ್ಲರಿಗೂ ಕೂಡ ಒಳ್ಳೆಯದಾಗಲಿ.ಉಪಚುನಾವಣೆಯಲ್ಲಿ ಕೇಶವಮೂರ್ತಿ ಅವರು ಪರವಾಗಿ ವೋಟ್ ಕೇಳುವುದಕ್ಕೆ ಬಂದಿದ್ದೆ,

ಈ ದೇಶದಲ್ಲಿ ವೈವಿಧ್ಯತೆ ಇರತಕ್ಕಂಥದ್ದು ಇದೆ.
ದೇವರು ಒಬ್ಬನೇ ಇರೋದು ಆದರೆ ಹೆಸರುಗಳು ಮಾತ್ರ ಬೇರೆ ಒಂದೇ ದೇವರು ಹೆಸರುಗಳು,
ಮನುಷ್ಯನಿಗೆ ಮನಸ್ಸು ಶುದ್ಧವಾಗಿದ್ದರೆ ಮಾತ್ರ ಪೂಜೆ ಮಾಡಬೇಕು ದೇವರು ಒಲಿಯುತ್ತಾನೆ ಆಶೀರ್ವಾದ ಮಾಡುತ್ತಾನೆ. ಮತ್ತೆ ಸ್ವಾರ್ಥ ಇರಬಾರದು. ಯಾವ ಸಮಾಜವೂ ಕೂಡ ಒಗ್ಗಟ್ಟಾಗಿದ್ದರೆ ಮಾತ್ರ ಉಳಿಯುತ್ತದೆ ಇಲ್ಲ ಅಂದರೆ ನಾಶವಾಗುತ್ತದೆ. ದೇವರ ಬಗ್ಗೆ ನಂಬಿಕೆ ಇಡಿ ಮನುಷ್ಯರ ಮನುಷ್ಯರ ನಡುವೆ ದ್ವೇಷ ಮತ್ತು ನಿಂದಿಸಬೇಡಿ ಮನುಷ್ಯರಾಗಿರಿ ಪ್ರತಿಯೊಬ್ಬರೂ ಕೂಡ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ನಾವು ಚುನಾವಣೆಯ ಕೊಟ್ಟ ಮಾತಿನಂತೆ 2000 ಉಚಿತ ಕರೆಂಟ್ ಉಚಿತ ಬಸ್ ವ್ಯವಸ್ಥೆ ನಿರುದ್ಯೋಗ ಯುವಕರಿಗೆ 3000 ಉಚಿತ ಅಕ್ಕಿ ನೀಡುತ್ತಿದ್ದೇವೆ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಅಂತ ಇದ್ದರೆ ಅದು ಕಾಂಗ್ರೆಸ್ ಸರ್ಕಾರ,

ನಂಜನಗೂಡುಗೆ ನರೇಂದ್ರ ಮೋದಿ ಬಂದ ಹೋದ ಮೇಲೆ ನಾನು ಗೆದ್ದೆ ಭಾಗದ ಶಾಸಕರು ಎಲ್ಲರೂ ಗೆದ್ದರು ಐದು ಗ್ಯಾರಂಟಿಗಳನ್ನು ನೀಡಿದರೆ ಆರು ತಿಂಗಳಲ್ಲಿ ದಿವಾಳಿ ಯಾಗುತ್ತದೆ ಎಂದಿದ್ದರು ದಿವಾಳಿ* ಆಗಲೇ ಇಲ್ಲ ಇನ್ನೊಬ್ಬ ವ್ಯಕ್ತಿ ಇದ್ದಾನೆ ಕುಮಾರಸ್ವಾಮಿ ಈತನಿಗೆ ಹೊಟ್ಟೆ ಕಿಚ್ಚು ಎಂದು ಕುಮಾರಸ್ವಾಮಿ ಅವರಿಗೆ ಕುಟುಕಿದರು.

ಚುನಾವಣೆಯಲ್ಲಿ ದರ್ಶನ್ ಧ್ರುವನಾರಾಯಣ್ ಅವರನ್ನು ಗೆಲ್ಲಿಸಿದ್ದೀರಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿ ಅಂತ ಪತ್ರದ ಮೇಲೆ ಪತ್ರ ಬರೆಯುತ್ತಿದ್ದಾರೆ ಎಲ್ಲವನ್ನು ಕಳಲೆ ಗ್ರಾಮಕ್ಕೆ ಏನು ಕೇಳಿದಿರಿ ಎಲ್ಲವನ್ನು ಮಾಡಿಕೊಡುತ್ತೇನೆ ನಿಮ್ಮ ಆಶೀರ್ವಾದದಿಂದ ಐದು ವರ್ಷ ಇದ್ದೇ ಇರುತ್ತೇನೆ ನಮ್ಮ ಕೆಲಸಗಳನ್ನು ನೋಡಿ ವಿರೋಧ ಪಕ್ಷದವರು ಹೊಟ್ಟೆ ಕಿಚ್ಚು ಕೊಳ್ಳುತ್ತಿದ್ದಾರೆ ವಿರೋಧ ಪಕ್ಷದವರು ಏನೇ ಮಾತನಾಡಿದರು ಕೂಡ ನುಡಿದಂತೆ ನಡೆದುಕೊಳ್ಳುತ್ತೇವೆ 5 ವರ್ಷದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅಭಿವೃದ್ಧಿಪಡಿಸುತ್ತೇನೆ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ನಂಜನಗೂಡು ವಿಧಾನಸಭಾ ಕ್ಷೇತ್ರ ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಕೇಳಿಕೊಂಡರು.

ನನ್ನ ಕ್ಷೇತ್ರದಲ್ಲಿ ಬಸ್ ಕೊರತೆ ಉಂಟಾಗಿದೆ ಹೆಚ್ಚಿನ ಬಸ್ಸುಗಳ ವ್ಯವಸ್ಥೆ. ಕಾಡಂಚಿನ ಗ್ರಾಮಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯ ಒದಗಿಸಬೇಕು. ಬದನಾವಳು ಗ್ರಾಮದಲ್ಲಿರುವ ಖಾದಿ ಗ್ರಾಮೋದ್ಯೋಗಿಯ ಮೂಲಭೂತ ಸೌಕರ್ಯ ಒದಗಿಸಲು ನಗರಸಭೆಗೆ ಹೆಚ್ಚಿನ ಬಡಾವಣೆಗಳು ಪಂಚಾಯಿತಿಗಳು ಸೇರ್ಪಡೆಯಾಗಿವೆ. ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ನೀಡಬೇಕೆಂದು.ನಾನು ಕೂಡ ಪ್ರತಿಗ್ರಾಮದಲ್ಲಿ ಜನ ಸಂಪರ್ಕ ಸಭೆ ನಡೆಸಿ ಕುಂದು ಕೊರತೆ ಆಲಿಸಿ ಕ್ಷೇತ್ರದಲ್ಲೇ ಇದ್ದೇನೆ ಕ್ಷೇತ್ರ ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಯನ್ನು ಮನವಿ ಮಾಡಿದರು.

ಡಾ. ಎಸ್ .ಸಿ ಮಹದೇವಪ್ಪ ಉಸ್ತುವಾರಿ ಸಚಿವರು ಮಾತನಾಡಿ ಕಳಲೆ ಒಂದು ಐತಿಹಾಸಿಕ ಗ್ರಾಮ, ಬಡವರು ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆ ಇರುವುದರಿಂದ ಅಭಿವೃದ್ಧಿಪಡಿಸಬೇಕು2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 600 ಕೋಟಿ ನೀಡಿ ಧ್ರುವ ನಾರಾಯಣ್ ಮತ್ತು ನಾನು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದೇವೆ.
ಮುಂದಿನ ಐದು ವರ್ಷದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ ನಾನು ಮುಖ್ಯಮಂತ್ರಿಗಳು ಸೇರಿ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸುತ್ತೇವೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶಾಸಕರಗಳಾದ ಗುಂಡ್ಲುಪೇಟೆ ಗಣೇಶ್ ಪ್ರಸಾದ್, ಹರೀಶ್ ಗೌಡ, ರವಿಶಂಕರ್,ಮಾಜಿ ಶಾಸಕ ಕಳಲೆ ಕೇಶವಮೂತಿ೯, ಕಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್, ಕಳಲೆ ರಾಜೇಶ್, ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

Published

on

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.


ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

Published

on

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

Published

on

ಸಾಲಿಗ್ರಾಮ  ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ  ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ  ಧರಣಪ್ಪಗೌಡ, ಕರ್ಪೂರವಳ್ಳಿ  ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ   

Continue Reading

Trending