Connect with us

State

ಕಾನೂನು ಬಾಹಿರ ಕೆಲಸ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Published

on

ಶಾಂತಿ, ನಿರ್ಭೀತ ವಾತಾವರಣ ಸೃಷ್ಟಿಸಲು ಬೆಂಗಳೂರು ಪೊಲೀಸರಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ನಗರದಲ್ಲಿ ಡ್ರಗ್ಸ್‌ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್‌ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್‌ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್‌ ಬೀಟ್‌ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.

ನಗರದಲ್ಲಿರುವ 241 ಹೊಯ್ಸಳ ವಾಹನಗಳ ಗಸ್ತುಪಡೆಯನ್ನು ಬಲಪಡಿಸಿ, ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಪೊಲೀಸ್‌ ಅಧಿಕಾರಿ, ಸಿಬ್ಬಂದಿ ರಿಯಲ್‌ ಎಸ್ಟೇಟ್‌ನವರ ಜೊತೆ ಷಾಮೀಲಾಗುವುದು, ಅಪರಾದ ಪ್ರಕರಣಗಳಲ್ಲಿ ಭಾಗಿಯಾಗುವುದು ಸರಿಯಲ್ಲ. ಇದರಿಂದ ಜನರಿಗೆ ಪೊಲೀಸ್‌ ವ್ಯವಸ್ಥೇಯ ಮೇಲಿನ ವಿಶ್ವಾಸ ಹೊರಟುಹೋಗುತ್ತದೆ.
ಸರ್ಕಾರ ಎಂದಿಗೂ ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ನಿಮಗೆ ಹೇಳುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ ಸರ್ಕಾರ ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಎಂದು ಎಚ್ಚರಿಸಿದರು. ನಗರದಲ್ಲಿ ರೌಡಿಸಂ ಅನ್ನು ಮಟ್ಟ ಹಾಕಬೇಕು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಉತ್ತಮವಾಗಿ ಮಾಡಿರುವುದಾಗಿ ಬೆಂಗಳೂರು ನಗರ ಪೊಲೀಸರಿಗೆ ಮುಖ್ಯಮಂತ್ರಿಗಳು ಅಭಿನಂದನೆ ತಿಳಿಸಿದರು.

ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ನಗರದಲ್ಲಿ ಶಾಂತಿಯುತ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಶ್ರಮಿಸುವುದಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Education

ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ : ಆಕರ್ಷಕ ಸಂಬಳ

Published

on

IPPB Recruitment 2025 : ಕೇಂದ್ರ ಸರ್ಕಾರಿ ಉದ್ಯೋಗಗಳಿಗಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಗೆ ಸಂಬಂದಿಸಿದ ಹುದ್ದೆಗಳ ವಿವರ, ಅರ್ಹತೆಗಳ ವಿವರ, ಸಂಬಳದ ವಿವರ, ವಯೋಮಿತಿ ವಿವರ, ಅರ್ಜಿ ಶುಲ್ಕ ಸೇರಿದಂತೆ ಇತ್ಯಾದಿ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ :

• ಡೆಪ್ಯೂಟಿ ಜನರಲ್ ಮ್ಯಾನೇಜರ್ – 01 ಹುದ್ದೆ
• ಚೀಪ್ ಆಪರೇಟಿಂಗ್ ಆಫೀಸರ್ – 01 ಹುದ್ದೆ
• ಚೀಪ್ HR ಆಫೀಸರ್ – 01 ಹುದ್ದೆ
• ಜನರಲ್ ಮ್ಯಾನೇಜರ್ – 01 ಹುದ್ದೆ
• ಚೀಫ್ ಕಾಂಪ್ಲೆಯನ್ಸ್ ಆಫೀಸರ್ – 01 ಹುದ್ದೆ

ಶೈಕ್ಷಣಿಕ ವಿದ್ಯಾರ್ಹತೆಗಳ ವಿವರ :

• ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ ಹುದ್ದೆಗೆ ಸಿಎ ಮುಗಿಸಿರಬೇಕು.
• ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದಾದರೂ ಒಂದು ಪದವಿ ಮುಗಿಸಿರಬೇಕು.
• ಚೀಫ್ ಕಾಂಪ್ಲೆಯನ್ಸ್ ಆಫೀಸರ್ ಹುದ್ದೆಗೆ ಸಿಎ/ MBA, ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
• ಚೀಪ್ HR ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು HR ವಿಭಾಗದಲ್ಲಿ MBA ಮುಗಿಸಿರಬೇಕು.
• ಚೀಪ್ ಆಪರೇಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದಾದರೂ ಒಂದು ಪದವಿ ಮುಗಿಸಿರಬೇಕು.

ಸಂಬಳ ಎಷ್ಟು ಸಿಗಲಿದೆ?

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಾರ್ಷಿಕ ವೇತನ ಪ್ಯಾಕೇಜ್ ರೂ. 3,16,627 ರಿಂದ ರೂ. 4,36,271 ರವರೆಗೆ ಸಿಗಲಿದೆ.

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – 150ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 750ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22 ಆಗಸ್ಟ್ 2025

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ – https://ibpsonline.ibps.in/ippbljul25/

Continue Reading

State

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ದೂರುದಾರನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು SIT ಸಿದ್ಧತೆ

Published

on

ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ  ಸಂಬಂಧಿಸಿದಂತೆ ದೂರುದಾರನ  ಹಿಂದಿರುವ ವ್ಯಕ್ತಿಗಳಿಗೆ ವಿಶೇಷ ತನಿಖಾ ತಂಡ  ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ  ಪ್ರಕರಣ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ನಡೆಸಿತ್ತು. 15 ದಿನಗಳ ಕಾಲ ಭಾರೀ ಮಳೆಯ ಮಧ್ಯೆಯೂ 17 ಪಾಯಿಂಟ್‌ಗಳಲ್ಲಿ ಉತ್ಖನನ ನಡೆಸಿದರೂ ದೂರುದಾರ ಮಾಸ್ಕ್ ಮ್ಯಾನ್ ಹೇಳಿದ್ದ ಪಾಯಿಂಟ್‌ 6 ಬಿಟ್ಟು ಬೇರೆ ಕಡೆ ಮೂಳೆಗಳು ಹೂತಿದ್ದ ಮೂಳೆಗಳು ದೊರೆತಿಲ್ಲ.

ಮೂಳೆಗಳು ಸಿಗದ ಕಾರಣ ಉತ್ಖನನ ಕಾರ್ಯವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದೆ. ದೂರುದಾರ ವ್ಯಕ್ತಿ ಇನ್ನೂ 13 ಪಾಯಿಂಟ್ ತೋರಿಸುತ್ತೇನೆ. ಅಲ್ಲೂ ಉತ್ಖನನ ಮಾಡಿ ಎಂದು ಒತ್ತಾಯಿಸಿದರೂ ಅಧಿಕಾರಿಗಳು ಆತನನ್ನೇ ಎಸ್‌ಐಟಿ ಕಚೇರಿಯಲ್ಲಿ ಕೂರಿಸಿ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಎಸ್‌ಐಟಿ ಅಧಿಕಾರಿಗಳು, ಬುರುಡೆ ಕಥೆ ಹೇಳಿರುವ ದೂರುದಾರನ ಬಾಯಿ ಬಿಡಿಸುವ ಪ್ರಯತ್ನ ನಡೆಸಿದ್ದಾರೆ. ಆತ ನೀಡಿರುವ ದೂರು ಸುಳ್ಳು ಅನ್ನೋ ನಿರ್ಧಾರಕ್ಕೆ ಬಂದ ಎಸ್‌ಐಟಿ ಅಧಿಕಾರಿಗಳು ಆತನನ್ನೇ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪ್ಲಾನ್ ಮಾಡಿದ್ದಾರೆ. ಆತನ ಹಿಂದೆ ಯಾರೋ ಇದ್ದು ಇದನ್ನೆಲ್ಲ ಮಾಡಿಸಿದ್ದಾರೆ ಎಂಬ ಶಂಕೆ ಮೂಡಿದ್ದು, ಅನೇಕ ವ್ಯಕ್ತಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಲಿದ್ದಾರೆ.

ಈ ಮಧ್ಯೆ ದೂರುದಾರ ವ್ಯಕ್ತಿ ಪ್ರಾರಂಭದಲ್ಲಿ ನ್ಯಾಯಾಲಯಕ್ಕೆ ಹಾಜರುಡಿಸಿದ ತಲೆ ಬುರುಡೆಯ ತನಿಖೆಯನ್ನೂ ಅಧಿಕಾರಿಗಳು ಮುಂದುವರಿಸಿದ್ದಾರೆ. ಈ ತಲೆ ಬುರುಡೆ ಪುರುಷನದ್ದು ಅನ್ನೋದು ತನಿಖೆ ವೇಳೆ ಬಹಿರಂಗಗೊಂಡಿದ್ದು ಈಗ ಆ ತಲೆ ಬುರುಡೆಯ ಮಹಜರು ನಡೆಸಲು ಎಸ್‌ಐಟಿ ತಯಾರಿ ನಡೆಸಿದೆ.
Continue Reading

State

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ*

Published

on

ಬೆಂಗಳೂರು : ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ತಾನೆ ಉಪಮುಖ್ಯಮಂತ್ರಿ, ಡಿಕೆ ಶಿವಕುಮಾ‌ರ್ ಅವರು ಕಲ್ಬುರ್ಗಿಯಲ್ಲಿ ಶರಣಬಸವಪ್ಪ ಅಪ್ಪಾಜಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದರು.

ಡಿಸಿಎಂ ಡಿಕೆ ಶಿವಕುಮಾ‌ರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ. ವಕ್ಸ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, “ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು” ಎಂದು ಹೇಳಿದ್ದರು. ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಡಿ ಕೆ ಶಿವಕುಮಾ‌ರ್ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.

Continue Reading

Trending

error: Content is protected !!