Connect with us

State

ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಮಾಡಿದ ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.

ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ,ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು.

Continue Reading

State

ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ

Published

on

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ಮಾಡಿದ್ದೇನೆ. ಭೇಟಿಗೆ ಡಿಕೆಶಿ ಅವರು ಸಮಯ ನೀಡಿದ್ದರು. ಅದರಂತೆ ಇಂದು ಭೇಟಿ ಮಾಡಿದ್ದೇನೆ. ಮದುವೆಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.

ವೈಯಕ್ತಿಕ ವಿಚಾರಕ್ಕೆ ಮಾತ್ರ ನಾನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನು ಇಲ್ಲ. ಅಧಿಕಾರದಲ್ಲಿದ್ದಾಗ, ಸರ್ಕಾರ ಇದ್ದಾಗ ಪಕ್ಷ ಬೇಧ ಮರೆತು ಭೇಟಿ ಮಾಡುವುದು ಸಾಮಾನ್ಯ. ಅದರಂತೆ ಬಿಜೆಪಿಯ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಭೇಟಿ ಮಾಡಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

State

ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

Published

on

ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್ ಗುಡ್ ಫ್ರೈಡೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ,ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

ಪವಿತ್ರ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮೌಲ್ಯ ಮಾಪನದ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.ಈ ಬಗ್ಗೆ ಯು ಟಿ ಖಾದರ್ ರವರ ಬಳಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ ಶಿಕ್ಷಕಿಯರು ಸರಕಾರದ ಜೊತೆ ಮಾತುಕತೆ ನಡೆಸಿ ವಿನಾಯಿತಿ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.

ಈ ಬಗ್ಗೆ ಶಿಕ್ಷಣ ಇಲಾಖೆಯ ಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ ಈಸ್ಟರ್ ಗುಡ್ ಫ್ರೈಡೇ ದಿನಗಳಾದ ಗುರುವಾರ,ಶುಕ್ರವಾರ ಹಾಗೂ ಭಾನುವಾರ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು.

ಅದರಂತೆ ಶಿಕ್ಷಣ ಇಲಾಖೆಯು ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ವಿನಾಯಿತಿ ನೀಡಿ ಉಳಿದ ದಿನಗಳಲ್ಲಿ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

Continue Reading

State

ಸಿದ್ದರಾಮಯ್ಯ ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ: ಆರ್‌.ಅಶೋಕ್‌

Published

on

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Continue Reading

Trending

error: Content is protected !!