Connect with us

State

ರಾಜ್ಯ ಕಾನೂನು ಸುವ್ಯವಸ್ಥೆ ಬಗ್ಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ಭಾರತ-ಪಾಕಿಸ್ತಾನದ  ನಡುವೆ ಉದ್ವಿಗ್ನತೆ ಏರ್ಪಟ್ಟಿದ್ದು, ರಾಜ್ಯ ಹಾಗೂ ರಾಜ್ಯದ ಜನತೆಯ ಸುರಕ್ಷತೆಗಾಗಿ ಇಂದು ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಇಂದು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಸಲಹೆ ಸೂಚನೆಗಳನ್ನುನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಈ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದಿದ್ದಾರೆ.

Continue Reading

State

ಈ ಬಾರಿ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

Published

on

ಬೆಂಗಳೂರು: “ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ.15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

“ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು” ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.

ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

“ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ತಿಳಿಸಿದ್ದಾರೆ.

Continue Reading

State

ಭಾರತ-ಪಾಕ್‌ ಉದ್ವಿಗ್ನತೆ: ರಾಜ್ಯ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ: ಜಿ.ಪರಮೇಶ್ವರ್‌

Published

on

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಬಿಗಿ ಭದ್ರತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವುದರಿಂದ ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮೇ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಯುದ್ಧದ ಪರಿಸ್ಥಿತಿ ಇರುವ ಕಾರಣ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ. ಈ ವೇಳೆ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಯಾವ ಸಂದರ್ಭದಲ್ಲಿ ಏನಾಗುತ್ತೋ ತಿಳಿದಿಲ್ಲ. ಹೀಗಾಗಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಕೋಸ್ಟಲ್‌ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.

Continue Reading

State

ತಿರಂಗಾ ಯಾತ್ರೆ, ಸೈನಿಕರಿಗೆ ನೈತಿಕ‌ ಸ್ಥೈರ್ಯ ತುಂಬಿದೆ: ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ಭಾರತದ ಐಕ್ಯತೆ, ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕಾಗಿ “ತಿರಂಗಾ ಯಾತ್ರೆ” ಯಲ್ಲಿ ಹೆಜ್ಜೆಹಾಕಿ, ಪ್ರಾಣ ಪಣಕ್ಕಿಟ್ಟು ದೇಶದ ಗಡಿ ಕಾಯುತ್ತಿರುವ ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕಬಲ ತುಂಬಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶದ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ‌ಸ್ಥೈರ್ಯ ತುಂಬುವ ಸಲುವಾಗಿ ಇಂದು “ತಿರಂಗಾ ಯಾತ್ರೆ” ಹೆಸರಿನಲ್ಲಿ ತ್ರಿವರ್ಣ ಧ್ವಜ ಹಿಡಿದು ಪಾದಯಾತ್ರೆಯಲ್ಲಿ ಹೆಜ್ಜೆಹಾಕುತ್ತಾ, ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತೆಯನ್ನು ಎತ್ತಿಹಿಡಿದೆವು ಎಂದಿದ್ದಾರೆ.

“ಭಯೋತ್ಪಾದನೆ ತೊಲಗಲಿ” ಎಂದು ಇಡೀ ದೇಶ ಒಂದು ದನಿಯಾಗಿ ನಿಂತಿದೆ. ಮತ್ತೊಮ್ಮೆ ಭಾರತ ನೆಲದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಕೊಡುವ ಮೊದಲು ನೂರು ಬಾರಿ ಯೋಚಿಸುವಂತೆ ಪಾಕಿಸ್ತಾನಕ್ಕೆ ನಮ್ಮ ಸೇನೆ ಪಾಠ ಕಲಿಸಲಿದೆ ಎಂಬ ಪೂರ್ಣ ವಿಶ್ವಾಸವಿದೆ. ನಮ್ಮ ಸೈನ್ಯ ನಮ್ಮ ಹೆಮ್ಮೆ ಎಂದು ಹೇಳಿದ್ದಾರೆ.

Continue Reading

Trending

error: Content is protected !!