State
ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆಗೆ ಹೊಸ ಕಮಾಂಡ್ ಕೇಂದ್ರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
Politics
ಹರ್ಮನ್‌ಪ್ರೀತ್ ಕೌರ್‌ಗೆ ಪದ್ಮಶ್ರೀ ಗೌರವ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 66 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅವರ ಪತ್ನಿ ಹೇಮ ಮಾಲಿನಿ ಸ್ವೀಕರಿಸಿದರು.
ಪ್ರಸಿದ್ಧ ಪಿಟೀಲು ವಾದಕಿ ಎನ್.ರಾಜಮ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿತು. ಮಾಜಿ ರಾಜ್ಯಪಾಲ ಗವ್ ಭಗತ್ ಸಿಂಗ್ ಕೋಶ್ಯಾರಿ ಹಾಗೂ ಖ್ಯಾತ ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಟ ಪ್ರೊಸೆನ್‌ಜಿತ್ ಚಟರ್ಜಿ ಅವರಿಗೂ ಪದ್ಮಶ್ರೀ ಗೌರವ ದೊರೆಯಿತು.
ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅದರಲ್ಲಿ 5 ಪದ್ಮ ವಿಭೂಷಣ, 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳಿವೆ. ಮೊದಲ ಹಂತದಲ್ಲಿ ಇಂದು 2 ಪದ್ಮ ವಿಭೂಷಣ, 6 ಪದ್ಮ ಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ವಿತರಿಸಲಾಯಿತು. ಉಳಿದ ಪ್ರಶಸ್ತಿಗಳನ್ನು ಎರಡನೇ ಹಂತದಲ್ಲಿ ಪ್ರದಾನ ಮಾಡಲಾಗುತ್ತದೆ.
State
ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ ತರುವುದಕ್ಕೆ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮೀ ಯೋಜನೆ ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಿದೆ.
ಗೃಹಲಕ್ಷ್ಮೀ ಹಣ ದುರಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಬರಲಿದೆ. ಬಯೋಮೆಟ್ರಿಕ್ ತರಲು ಎಲ್ಲಾ ತಯಾರಿ ಮುಕ್ತಾಯ ಆಗಿದೆ. ಶೀಘ್ರದಲ್ಲೇ ಬಯೋಮೆಟ್ರಿಕ್ ಜಾರಿ ಆಗಲಿದೆ. ಅನರ್ಹರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗೋದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಸತ್ತವರ ಅಕೌಂಟ್‌ಗೆ ಹಣ ಪಾವತಿ ಆಗೋದನ್ನ ತಡೆಗಟ್ಟಲು ಸರ್ಕಾರ ಈ ವ್ಯವಸ್ಥೆ ಜಾರಿಗೆ ಮುಂದಾಗಿದೆ. ೨ ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಸುಮಾರು ೧೨೫ ಕೋಟಿ ಹಣ ಫಲಾನುಭವಿಗಳ ಖಾತೆಯಿಂದ ಡ್ರಾ ಆಗಿಲ್ಲ. ಹೀಗಾಗಿ, ಗೃಹಲಕ್ಷ್ಮೀ ಯೋಜನೆಗೆ ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಲಾಗಿದೆ. ಇದು ಒನ್ ಟೈಂ ಬಯೋಮೆಟ್ರಿಕ್ ಪದ್ಧತಿ. ಒಂದು ಸಲ ಫಲಾನುಭವಿಗಳು ಬಯೋಮೆಟ್ರಿಕ್ ಕೊಟ್ಟರೆ ಸಾಕು ಬೆಂಗಳೂರು ಇನ್, ಇನ್ ಸೇವಾಕೇಂದ್ರ ಮತ್ತು ಗ್ರಾಮ ಒನ್‌ಗಳಲ್ಲಿ ಫಲಾನುಭವಿಗಳು ಬಯೋಮೆಟ್ರಿಕ್ ಕೊಡಬೇಕು.
State
ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಹೈಕಮಾಂಡ್ ಸಭೆಯಲ್ಲಿ ಮಹತ್ವದ ಚರ್ಚೆ ಸಾಧ್ಯ
-
State18 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Kodagu23 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan2 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Hassan21 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Mysore7 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Hassan23 minutes ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Chamarajanagar20 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Hassan2 hours agoಬಕ್ರಿದ್ ವೇಳೆ ಗೋವಂಶ ವಧೆ ಬೇಡ: ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ
