Connect with us

Politics

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ನೀಡಲಾಗಿದೆ: ಸಿಎಂ ಸಿದ್ದರಾಮಯ್ಯ

Published

on

ಕಲಬುರಗಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್‌ನಲ್ಲಿ ಏನೂ ನೀಡಿಲ್ಲ. ಕರ್ನಾಟಕಕ್ಕೆ ಒಂದು ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪಿಡ್ ರೈಲು ನೀಡಿದ್ದಾರೆ. ಅದು ಕೂಡ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಅಪರ್ ಕೃಷ್ಣಾ ಹಾಗೂ ಅಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ರೂ ಏನು ನೀಡಿಲ್ಲ. ಈ ಹಿಂದೆ ಬಜೆಟ್‌ನಲ್ಲಿ ಯೋಜನೆಗೆ 5,200 ಕೋಟಿ ಹಣ ನೀಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್‌ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಳೆಕಾಳುಗಳಿಗೆ ಸಹಾಯ ಮಾಡಿ ಎಂದು ಕೇಳಿದರೂ ಅದು ಸಹ ಮಾಡಿಲ್ಲ. 15ನೇ ಹಣಕಾಸು ಆಯೋಗ ಆರಂಭವಾಗಿದೆ. ನಾವು ಕನಿಷ್ಟ ಶೇ. 50% ಕೊಡಿ ಎಂದು ಕೇಳಿದ್ದೇವು. ಆದರೆ, ಶೇ.41% ಮಾತ್ರ ಕೊಟ್ಟಿದ್ದಾರೆ. 14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ.4.71% ಮಾತ್ರ. 14ನೇ ಹಣಕಾಸಿಗಿಂತ ಜಾಸ್ತಿ ಮಾಡಿ ಕೊಡಿ ಅಂದರೆ 4.131 ಮಾತ್ರ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ 14ನೇ ಹಣಕಾಸಿನಷ್ಟು ಕೂಡ ಹಣ ನೀಡಿಲ್ಲ. ಉತ್ತರ ಪ್ರದೇಶಕ್ಕೆ ಹಾಗೂ ಕರ್ನಾಟಕಕ್ಕೆ ಹಣಕಾಸಿನ ಹಂಚಿಕೆಯಲ್ಲಿ ಭಾರಿ ತಾರತಮ್ಯವಾಗಿ ನಮಗೆ ಅನ್ಯಾಯವಾಗಿದೆ ಎಂದಿದ್ದಾರೆ.
ರಾಜ್ಯವಾರು ಹಣ ಹಂಚಿಕೆ ನೋಡಿದರೆ ಬಿಹಾರ 9.948, ಯುಪಿ-17.691, ಗುಜರಾತ್ 3.755, ಕರ್ನಾಟಕಕ್ಕೆ 4.131, ಆಂಧ್ರ- 4.271 ಇದೆ. ನಾವು ತಲಾ ಆದಾಯದಲ್ಲಿ ನಂಬರ್ 1, ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ಹೀಗಿದ್ರು ನಮಗೆ ಅನುದಾನ ಬಂದಿಲ್ಲ. ಬಜೆಟ್‌ಗೂ ಮುನ್ನ ನಮ್ಮ ರಾಜ್ಯದ ನೀರಾವರಿ, ಮೆಟ್ರೋ ಯೋಜನೆ, ಏಮ್ಸ್ ನೀಡಬೇಕು. ಕೆಕೆಆರ್ ಡಿಬಿಗೆ ಮ್ಯಾಚಿಂಗ್ ಗ್ರ‍್ಯಾಂಟ್ ಕೊಡಲು ಸಹ ಹೇಳಿದ್ದೇವೆ. ನಾವು ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ ಭಾಗಕ್ಕೆ 13 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ನಾವು 100 ತೆರಿಗೆ ಕೊಟ್ಟರೆ 14 ರೂಪಾಯಿ ವಾಪಸ್ ಬರುತ್ತದೆ. ಉಳಿದ ಹಣ ಕೇಂದ್ರ ಸರ್ಕಾರ ಬಳಸುತ್ತದೆ. ಸೆಸ್ ಸಬ್‌ಚಾಜ್9 ಸಹ ಕೇಂದ್ರ ಕಲೆಕ್ಟ್ ಮಾಡಿ ರಾಜ್ಯಗಳಿಗೆ ಕೊಡುವುದಿಲ್ಲ. ಹೀಗಾಗಿ, 2026-27 ಬಜೆಟ್ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
Continue Reading

Politics

ರಾಜ್ಯ ಸರ್ಕಾರದ ಜಾಹೀರಾತು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್‌

Published

on

ಶಿವಮೊಗ್ಗ: ಕೇಂದ್ರ ಸರ್ಕಾರ, ಮನರೇಗಾ ಯೋಜನೆ ಹೆಸರು ಬದಲಿಸಿರುವ ನಡೆಗೆ ಕಾಂಗ್ರೆಸ್  ವಿರೋಧ ವ್ಯಕ್ತಪಡಿಸಿದ್ದು, ಈ ಮಧ್ಯೆ ರಾಜ್ಯ ಸರ್ಕಾರ  ಈ ಬಗ್ಗೆ ಜಾಹೀರಾತು ನೀಡಿತ್ತು. ಇದನ್ನು ಡಿಸಿಎಂ ಡಿ.ಕೆ.ಶಿವಕುಮಾರ್  ಸಮರ್ಥಿಸಿಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಯ್ದೆ ಹಿಂಪಡೆದು ಹೊಸ ಯೋಜನೆ ಜಾರಿಗೊಳಿಸಿ ಕೇಂದ್ರ ಸರ್ಕಾರ ಗ್ರಾಮೀಣರಿಗೆ ಯಾವ ರೀತಿ ಅನ್ಯಾಯ ಮಾಡಿದೆ ಎಂಬುದನ್ನು ಜಾಹೀರಾತು ಮೂಲಕ ನಮ್ಮದೇ ಶೈಲಿಯಲ್ಲಿ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅದರಲ್ಲಿ ತಪ್ಪೇನಿದೆ ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ನಡೆದ ರೈತರ ಹೋರಾಟದ ಮಾದರಿಯಲ್ಲೇ ಮನರೇಗಾ ಯೋಜನೆ ಮರು ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ದೇಶದಾದ್ಯಂತ ಕೇಂದ್ರದ ವಿರುದ್ಧ ಹೋರಾಟ ಮಾಡಲಿದೆ.  ಕೇಂದ್ರದ ತೀರ್ಮಾನದಿಂದ  ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕು ಕಿತ್ತುಕೊಂಡಂತಾಗಿದೆ. ಇದನ್ನೇ ಜಾಹೀರಾತಿನಲ್ಲಿ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Continue Reading

Hassan

ಪ್ರಜ್ವಲ್ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ ನಗದು ಬಹುಮಾನ ಘೋಷಣೆ

Published

on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ ೩೦ ಅಧಿಕಾರಿ, ಸಿಬ್ಬಂದಿಗೆ ೨೫ ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ.

ಪ್ರಕರಣದ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು ಒಟ್ಟಾರೆ ೩೫ ಲಕ್ಷ ರೂ. ಬಹುಮಾನ ಘೋಷಿಸಿದೆ.


ಯಾರ‍್ಯಾರಿಗೆ ಎಷ್ಟು ಹಣ?

ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್‌ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ.ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ ಈ 25 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ.

ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರೂ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ)ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರೂ. ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರೂ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.

ನ್ಯಾಯಾಲಯದ ಆದೇಶದಲ್ಲಿ ಏನಿದೆ?

ಪುಜ್ವಲ್ ಮತ್ತು ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡವು, ಇಬ್ಬರ ವಿರುದ್ಧ ಒಟ್ಟು 4 ಪಕರಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ 1 ಪ್ರಕರಣದ ತನಿಖಾ ಕಾಲದಲ್ಲಿ ಸಮರ್ಪಕವಾಗಿ ತನಿಖೆ ಕೈಗೊಂಡು ಸಾಕ್ಷ್ಯಾಧಾರ ಸಂಗ್ರಹಿಸಿ, ಒಟ್ಟು 5 ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಿದ್ಧಪಡಿಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸದರಿ ಪ್ರಕರಣಗಳ ಪೈಕಿ ಸಿ.ಐ.ಡಿ. ಸೈಬರ್ ಕ್ರೈಂ ಪೊಲೀಸ್ ಠಾಣಾ ಮೊ.ಸಂ.02/2024ರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ಪೂರ್ಣಗೊಂಡು ಪ್ರಕರಣದ ಆರೋಪಿ ಪ್ರಜ್ವಲ್ ಕೃತ್ಯ ಸಾಬೀತಾಗಿದ್ದರಿಂದ ಅಪರಾಧಿಗೆ ಅಜೀವ ಸೆರೆವಾಸ ಮತ್ತು 11,60,000 ರೂ. ದಂಡ ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.

ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸದ್ಯ ಪ್ರಕರಣದ ಆರೋಪಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಪಡೆಯಲ್ಲಿ ವೃತ್ತಿ ಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆ ಉತ್ತೇಜಿಸುವ ಉದ್ದೇಶದೊಂದಿಗೆ ನಗದು ಪ್ರಶಸ್ತಿ ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.

Continue Reading

Politics

Joint Session| ರಾಜ್ಯಪಾಲರ ಭಾಷಣ: ಸದನದಲ್ಲಿ ಆಡಳಿತ, ವಿಪಕ್ಷಗಳ ಮಧ್ಯೆ ವಾಕ್ಸಮರ

Published

on

ಬೆಂಗಳೂರು: ರಾಜ್ಯಪಾಲರು ಜಂಟಿ‌ ಅಧಿವೇಶದಲ್ಲಿ ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಭಾರೀ ಮಟ್ಟದಲ್ಲಿ ಸದ್ದು ಮಾಡಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಆಡಳಿತ ಹಾಗೂ ವಿರೋಧ ಪಕ್ಷಗಳ‌ ಮಧ್ಯೆ ವಾಕ್ಸಮರ, ಟೀಕೆ ನಿಂದನೆಗೂ ವೇದಿಕೆಯಾಗಿತ್ತು.

ಸದನದಲ್ಲಿ ಕಲಾಪ  ಪ್ರಾರಂಭವಾದಾಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್  ಮಾತನಾಡಿ, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಸದಸ್ಯರು ಅಗೌರವ ತೋರಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಆಗಬೇಕು. ನಮ್ಮ 18 ಶಾಸಕರು ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ್ದಾರೆ ಎಂದು ಅಮಾನತು ಮಾಡಲಾಗಿತ್ತು. ಆದರೆ ಈಗ ರಾಜ್ಯಪಾಲರಿಗೆ ಅಗೌರವ ತೋರಿದವರ ವಿರುದ್ಧ ಏನು ಕ್ರಮ? ಈ ಸಂಬಂಧ ಸ್ಪೀಕರ್ ರೂಲಿಂಗ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಪಾಲರು ವಿವೇಚನೆಯಿಂದಲೇ ಭಾಷಣ ಮಾಡಿದ್ದಾರೆ. ಆದರೆ ಎಚ್‌.ಕೆ.ಪಾಟೀಲ್‌ ಅವರು ರಾಜ್ಯಪಾಲರಿಗೆ ಓಡಿ ಹೋದರು ಅಂದಿದ್ದು ಸರಿಯಲ್ಲ. ರಾಜ್ಯಪಾಲರು ಇದ್ದಾಗ ರಾಷ್ಟ್ರಗೀತೆ ಹಾಡು ಶುರುವಾಗಿದ್ದರೆ ಇರುತ್ತಿದ್ದರು ಎಂದು ರಾಜ್ಯಪಾಲರನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಸಕ ಅಶ್ವಥ್ ನಾರಾಯಣ, ಸುನೀಲ್ ಕುಮಾರ್ ಸಹ ರಾಜ್ಯಪಾಲರಿಗೆ ಅಗೌರವ ತೋರಿದ ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಾತಿನ ಭರದಲ್ಲಿ ಸುನೀಲ್ ಕುಮಾರ್ ಇದು ಗೂಂಡಾ ಸರ್ಕಾರ ಅಂದಿದ್ದು ಕಾಂಗ್ರೆಸ್‌ನವರನ್ನು ಕೆರಳಿಸಿತ್ತು. ಈ ಸಂದರ್ಭದಲ್ಲಿ ಸದನದಲ್ಲಿ ಜಟಾಪಟಿ ಇನ್ನಷ್ಟು ಹೆಚ್ಚಾಯಿತು.

 

Continue Reading

Trending

error: Content is protected !!