State
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ ಹೆಮ್ಮೆ, ಸ್ವಾಭಿಮಾನದ ಸಂಕೇತವಾಗಿದೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಇಂದು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಸ್ವಾತಂತ್ರ‍್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ. ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ಹೇಳಿದರು.
ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆ ಕಳೆದ ವರ್ಷ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.
ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ತಿಳಿಸಿದರು.
ಸ್ವಾತಂತ್ರ‍್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.
Special
ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ: ಇಲ್ಲಿದೆ ಸಂಪೂರ್ಣ ಮಾಹಿತಿ!
ಕರ್ನಾಟಕ ಸರ್ಕಾರ ಮಹಿಳೆಯರ ಸ್ವಾವಲಂಬನೆಯನ್ನು ಹೆಚ್ಚಿಸಲು ಮತ್ತು ಮನೆಯಲ್ಲೇ ಆದಾಯ ಸಂಪಾದಿಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ಹೊಲಿಗೆ ಯಂತ್ರ ಯೋಜನೆ ಅನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಬಡ ಮತ್ತು ಅಶಕ್ತ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡಲಾಗುತ್ತದೆ, ಇದರಿಂದ ಅವರು ಕೆಲಸ ಮಾಡಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಬಹುದು.
ಅರ್ಹತೆ:
•ಕರ್ನಾಟಕ ರಾಜ್ಯದ ನಿವಾಸಿ ಮಹಿಳೆ ಆಗಿರಬೇಕು
•BPL / APL ಬಡಕುಟುಂಬದ ಸದಸ್ಯರಾಗಿರಬೇಕು
•ವಯಸ್ಸು ಸಾಮಾನ್ಯವಾಗಿ 20 ರಿಂದ 45 ವರ್ಷಗಳ ನಡುವೆ
•ಹೊಲಿಗೆ ಕೆಲಸ ಕಲಿಯುವ ಇಚ್ಛೆ ಅಥವಾ ಈಗಾಗಲೇ ಮೂಲಭೂತ ಹೊಲಿಗೆ ಕೌಶಲ್ಯ ಇರಬೇಕು
•ವಿಧವೆ, ವಿಚ್ಛೇದಿತ ಅಥವಾ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಆದ್ಯತೆ

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
•ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಕಚೇರಿಗೆ ಭೇಟಿ.
•ಅಲ್ಲಿ ಲಭ್ಯವಿರುವ ಉಚಿತ ಹೊಲಿಗೆ ಯಂತ್ರ ಅರ್ಜಿ ಫಾರ್ಮ್ ಪಡೆಯಿರಿ
•ನಂತರ ಅಗತ್ಯ ದಾಖಲೆಗಳನ್ನು ಸೇರಿಸಿ ಅರ್ಜಿ ಪೂರ್ಣಗೊಳಿಸಬೇಕು.
ಪ್ರಮುಖ ದಾಖಲೆಗಳು:
•ಆಧಾರ್ ಕಾರ್ಡ್
•ರೇಷನ್ ಕಾರ್ಡ್ (BPL / APL)
•ವಾಸಸ್ಥಳ ಪ್ರಮಾಣ ಪತ್ರ
•ಆದಾಯ ಪ್ರಮಾಣ ಪತ್ರ
•ಪಾಸ್‌ಪೋರ್ಟ್ ಗಾತ್ರದ ಫೋಟೋ
•ಬ್ಯಾಂಕ್ ಖಾತೆ ಪಾಸ್‌ಬುಕ್ ಪ್ರತಿಗೆ
•ಹೊಲಿಗೆ ತರಬೇತಿ ಪಡೆದಿದ್ದರೆ ಅದರ ಪ್ರಮಾಣ ಪತ್ರ (ಐಚ್ಛಿಕ)
ಉಚಿತ ಹೊಲಿಗೆ ಯಂತ್ರ ಯೋಜನೆ ಮಹಿಳೆಯರು ತಮ್ಮ ಕಾಲ ಮೇಲೆ ನಿಲ್ಲಲು, ಸ್ವಂತ ಆದಾಯ ಸಂಪಾದಿಸಲು, ಮತ್ತು ಮನೆದಲ್ಲಿ ಕುಳಿತು ಕೆಲಸ ಮಾಡಲು ಅತ್ಯುತ್ತಮ ಅವಕಾಶ.ಅಗತ್ಯವಿರುವವರು ಇದನ್ನು ಸದುಪಯೋಗಪಡಿಸಿಕೊಳ್ಳಿರಿ.
National
2023ರ ಚುನಾವಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಸುಪ್ರೀಂ
ನವದೆಹಲಿ: ಸಿಎಂ ಸಿದ್ದರಾಮಯ್ಯ 2023ರ ಚುನಾವಣೆಯಲ್ಲಿ ವರುಣಾ (a) ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಕೆ. ಶಂಕರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿತ್ತು.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಶಂಕರ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
Special
ಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD Karnataka) ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಿಗೆ ಒಟ್ಟು 571 ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಮಹಿಳೆಯರಿಗೆ ಸರ್ಕಾರದಡಿ ದೊರೆಯುವ ಸುರಕ್ಷಿತ ಮತ್ತು ಮಾನ್ಯ ಉದ್ಯೋಗಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಪ್ರಮುಖವಾಗಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಲಭ್ಯವಾಗಿದೆ.
ಲಭ್ಯವಿರುವ ಹುದ್ದೆಗಳು:
•ಅಂಗನವಾಡಿ ಕಾರ್ಯಕರ್ತೆ
•ಅಂಗನವಾಡಿ ಸಹಾಯಕಿ
ಅರ್ಹತೆ :
1. ಅಂಗನವಾಡಿ ಕಾರ್ಯಕರ್ತೆ
•SSLC ಪಾಸಾಗಿರಬೇಕು
•ಸ್ಥಳೀಯ ಗ್ರಾಮ/ವಾರ್ಡ್ ನಿವಾಸಿಯಾಗಿರಬೇಕು
2. ಅಂಗನವಾಡಿ ಸಹಾಯಕಿ
•4ನೇ ತರಗತಿಯಿಂದ 9ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರಬಹುದು
•ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ

ವಯೋಮಿತಿ: 19-35 ವರ್ಷ
ಅರ್ಜಿ ಸಲ್ಲಿಸುವ ವಿಧಾನ :
•ನಿಮ್ಮ ತಾಲೂಕು/ಜಿಲ್ಲೆಯ ಅಧಿಕೃತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
•ಆನ್‌ಲೈನ್ ಅರ್ಜಿಯನ್ನು ಸರಿಯಾದ ಮಾಹಿತಿ ಹಾಗೂ ಅಗತ್ಯ ದಾಖಲೆಗಳಿಂದ ಭರ್ತಿ ಮಾಡಿ.
•ಅರ್ಜಿ ಸಲ್ಲಿಸಿದ ನಂತರ ದೃಢೀಕರಣ ಪ್ರತಿಯನ್ನು ಸೇವ್ ಮಾಡಿ.
ಆಯ್ಕೆ ಪ್ರಕ್ರಿಯೆ ಹೇಗೆ?:
ಅಂಗನವಾಡಿ ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲ.ಆಯ್ಕೆ ಸಂಪೂರ್ಣವಾಗಿ ವಿದ್ಯಾರ್ಹತೆ, ದಾಖಲೆಗಳ ಪರಿಶೀಲನೆ, ಸ್ಥಳೀಯತೆ, ಮೀಸಲಾತಿ ನಿಯಮಗಳು ಇವುಗಳನ್ನು ಆಧರಿಸಿ ಮಾಡಲಾಗುತ್ತದೆ.
ಉದ್ದೇಶ:
•ಸ್ಥಳೀಯ ಮಹಿಳೆಯರಿಗೆ ಸುರಕ್ಷಿತ ಸರ್ಕಾರಿ ಉದ್ಯೋಗ
•ತಿಂಗಳ ವೇತನ, ಮಾನ್ಯತೆ, ಮತ್ತು ಭದ್ರ ಉದ್ಯೋಗ
•ಸಮಾಜ ಸೇವೆ ಜೊತೆಗೆ ಕುಟುಂಬಕ್ಕೆ ಆರ್ಥಿಕ ಸಹಾಯ
ಕರ್ನಾಟಕದಲ್ಲಿ ಪ್ರಕಟವಾದ 571 ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗಳು, ಸರ್ಕಾರಿ ಸೇವೆಗೆ ಬಯಸುವ ಮಹಿಳೆಯರಿಗೆ ದೊಡ್ಡ ಅವಕಾಶ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ ಅರ್ಹರು ಈಗಲೇ ಅರ್ಜಿ ಹಾಕಿ ಸದುಪಯೋಗ ಪಡಿಸಿಕೊಳ್ಳಿರಿ
-
Mandya20 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore18 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Hassan23 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Kodagu24 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Hassan22 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore22 hours agoದೌರ್ಜನ್ಯ ತಡೆಗೆ ಕೆಪಿಎ- ಸಾವಿತ್ರಿಬಾ ಫುಲೆ ಸಂಸ್ಥೆ ನಡುವೆ ಒಡಂಬಡಿಕೆ
-
Hassan20 hours agoಭಾರಿ ಹೊಂಡದಲ್ಲಿ ಸಿಲುಕಿದ ಲಾರಿ: ಒಂದು ಗಂಟೆ ಕಾಲ NH-75 ಬಂದ್
-
Hassan4 hours agoವಾಲಿಬಾಲ್ ಪಂದ್ಯಾವಳಿಯಲ್ಲಿ ಜಗ್ಗಿಬಾಯ್ಸ್ ಪ್ರಥಮ ಸ್ಥಾನ
