Connect with us

State

ಜಲಜೀವನ್‌ ಮಿಷನ್‌ಗೆ ಅನುದಾನವಿಲ್ಲ: ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ ಎಂದ ಸಿಎಂ

Published

on

ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಜಲಜೀವನ್‌ ಮಿಷನ್‌ ಅನ್ನು ಹಾಳುಗೆಡವಲು ಬಿಜೆಪಿ ಉದ್ದೇಶಪೂರಿತ ಸಂಚು ರೂಪಿಸಿದೆ. ಆ ಮೂಲಕ ಕರ್ನಾಟಕದ ಹಿತಾಶಕ್ತಿಗೆ ದ್ರೋಹ ಬೆಗೆದಿದೆ ಎಂದು ದೂರಿದ್ದಾರೆ.

https://x.com/siddaramaiah/status/1890706784882671833

ಟ್ವಿಟ್ಟರ್‌ನಲ್ಲೇನಿದೆ?

ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು!

ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ.

ಇಲ್ಲಿದೆ ನೋಡಿ ಸತ್ಯ:

ಜೆಜೆಎಂ ( ಜಲಜೀವನ್ ಮಿಷನ್)ಗೆ ಒಟ್ಟು ಹಂಚಿಕೆ – ₹49,262 ಕೋಟಿ (ಕೇಂದ್ರದ ಪಾಲು – ₹26,119 ಕೋಟಿ, ರಾಜ್ಯದ ಪಾಲು – ₹23,142 ಕೋಟಿ)

ಬಿಡುಗಡೆಯಾದ ಒಟ್ಟು ಅನುದಾನ – ₹32,202 ಕೋಟಿ (ಕೇಂದ್ರದ ಪಾಲು – ₹11,760 ಕೋಟಿ, ರಾಜ್ಯದ ಪಾಲು – ₹20,442 ಕೋಟಿ)

ಕರ್ನಾಟಕದ ಒಟ್ಟು ಖರ್ಚು – ₹29,413 ಕೋಟಿ

ಕೇಂದ್ರದ ಪಾಲು
₹26,119 ಕೋಟಿ ಹಂಚಿಕೆ
ಕೇವಲ ₹11,760 ಕೋಟಿ ಬಿಡುಗಡೆಯಾಗಿದೆ – ಶೇ. 45ರಷ್ಟು ಮಾತ್ರ ಬದ್ಧತೆಯನ್ನು ಹೊಂದಿದೆ.

ರಾಜ್ಯದ ಪಾಲು
₹23,142 ಕೋಟಿ ಹಂಚಿಕೆ
₹20,442 ಕೋಟಿ ಬಿಡುಗಡೆ – ಶೇ. 88.3ರಷ್ಟು ಹೆಚ್ಚಿನ ಮೊತ್ತ!

ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.

2024-25ನೇ ಸಾಲಿನ ಬಜೆಟ್‌ನಲ್ಲಿ – ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ

ಕೇಂದ್ರ ಸರ್ಕಾರವು ಜೆಜೆಎಮ್ ಗೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ₹570 ಕೋಟಿ ಮಾತ್ರ ಬಿಡುಗಡೆಯಾಗಿರುತ್ತದೆ. ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ. ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್ ನಲ್ಲಿ ₹7,652 ಕೋಟಿ ಹಂಚಿಕೆ ಮಾಡಿದ್ದು, ₹4,977 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ – ಇದು ದೇಶದ ಎಲ್ಲಾ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ.
ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – ₹70,163 ಕೋಟಿ
ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ ₹22,694 ಕೋಟಿಗೆ ಇಳಿಸಲಾಗಿದೆ.

ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್ ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ.

ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು.

ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ಕರ್ನಾಟಕದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ ಎಂದು ಸುದೀರ್ಘವಾಗಿ ಬರೆದುಕೊಂಡು ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ

Continue Reading

Special

ಕರ್ನಾಟಕದಲ್ಲಿ 2.93 ಲಕ್ಷ ಹೊಸ BPL ಕಾರ್ಡ್ ಬಿಡುಗಡೆ : ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಇದೆಯೇ?

Published

on

ಕರ್ನಾಟಕ ಸರ್ಕಾರದಿಂದ ಬಡ ಕುಟುಂಬಗಳ ಸಹಾಯಕ್ಕಾಗಿ ಹೊಸ BPL (Below Poverty Line) ಕಾರ್ಡ್ ವಿತರಣೆ ಕಾರ್ಯ ನಡೆದಿದೆ. ರಾಜ್ಯದಾದ್ಯಂತ ಸುಮಾರು 2.93 ಲಕ್ಷ ಹೊಸ BPL ಕಾರ್ಡ್‌ಗಳು ಮಂಜೂರಾಗಿದ್ದು, ಅರ್ಜಿ ಸಲ್ಲಿಸಿದ ಕುಟುಂಬಗಳು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಈಗಲೇ ಪರಿಶೀಲಿಸಬಹುದು.

ಹೊಸ BPL ಕಾರ್ಡ್ ಪಡೆಯಲು ಅರ್ಹರು:
•ಆರ್ಥಿಕವಾಗಿ ದುರ್ಬಲ ಮತ್ತು ಬಡ ಕುಟುಂಬಗಳು
•ಆದಾಯ ಮಿತಿ ಸರ್ಕಾರ ನಿಗದಿಪಡಿಸಿರುವ ಮಾನದಂಡಕ್ಕೆ ಒಳಪಡುವವರು
•ಹಿಂದಿನಿಂದಲೂ BPL ಕಾರ್ಡ್ ಸಲ್ಲಿಸಿದರೂ ಮಂಜೂರಾಗದ ಕುಟುಂಬಗಳು
•ಪರಿಶೀಲನಾ ಹಂತದಲ್ಲಿ ತಪ್ಪಾಗಿ APL ಪಟ್ಟಿಗೆ ಸೇರಿಸಲ್ಪಟ್ಟ ಕುಟುಂಬಗಳು

ಪಟ್ಟಿ ಪರಿಶೀಲನೆ ಮಾಡುವುದು ಹೇಗೆ?
•ಅಧಿಕೃತ ಸಾರ್ವಜನಿಕ ಪೋರ್ಟಲ್‌ಗೆ ಭೇಟಿ ನೀಡಿ ನಿಮ್ಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಆಯ್ಕೆ ಮಾಡಿ
•ಕುಟುಂಬದ ಮುಖ್ಯಸ್ಥರ ಹೆಸರು ಅಥವಾ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ
•‘Search’ ಒತ್ತಿದರೆ ಪಟ್ಟಿಯಲ್ಲಿ ನಿಮ್ಮ ವಿವರಗಳು ಕಾಣಿಸುತ್ತವೆ

ಈ ಹೊಸ ಹಂತದ ಮಹತ್ವ:
ಮುನ್ನಡೆಯ ವರ್ಷಗಳಲ್ಲಿ BPL ಕಾರ್ಡ್‌ಗಳ ಸಂಖ್ಯೆಯಲ್ಲಿ ಗೊಂದಲ, ಅನರ್ಹರ ಸೇರ್ಪಡೆ, ಅರ್ಹರು ಹೊರಬೀಳುವ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ವಿಮರ್ಶೆ ನಡೆಸಿ ಹೊಸ ವ್ಯವಸ್ಥೆ ತರಲಾಗಿದೆ.

BPL ಕಾರ್ಡ್ ಪಡೆಯುವ ಪ್ರಯೋಜನಗಳು:
•ಅನ್ನಭಾಗ್ಯ ಯೋಜನೆಯಡಿ ಉಚಿತ/ಕಡಿಮೆ ದರದ ಧಾನ್ಯ
•ಸಿಲಿಂಡರ್, ಆರೋಗ್ಯ, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅನೇಕ ಸರ್ಕಾರಿ ಯೋಜನೆಗಳ ಸೌಲಭ್ಯ
•ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳಿಗೆ ಅರ್ಹತೆ

ಅರ್ಹ ಕುಟುಂಬಗಳು ಯಾವುದೇ ವಿಳಂಬವಿಲ್ಲದೆ ಪಡಿತರ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಬಹುದು.ಕರ್ನಾಟಕದ 2.93 ಲಕ್ಷ ಹೊಸ BPL ಕಾರ್ಡ್ ವಿತರಣೆಯು ಹಲವು ಬಡ ಕುಟುಂಬಗಳಿಗೆ ನಿಜವಾದ ಆಶಾಕಿರಣ.

Continue Reading

State

ನಾಳೆ KSCA ಚುನಾವಣಾ ಮತದಾನ: ವೆಂಕಟೇಶ್‌ ಪ್ರಸಾದ್ v/s ಬ್ರಿಜೇಶ್ ಪಟೇಲ್ ಬಣಗಳ ಮಧ್ಯೆ ಜಿದ್ದಾಜಿದ್ದಿ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಚುನಾವಣಾ ಮತದಾನ ನಾಳೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣ ಮ ಬ್ರಿಜೇಶ್ ಪಟೇಲ್  ಬಣಗಳ ಮಧ್ಯೆ  ಭಾರೀ ಹಣಾಹಣಿ ನಡೆದಿದೆ.
ಚುನಾವಣೆಯನ್ನು ಸುತ್ತುವರಿದ ವಿವಾದಗಳ ನಡುವೆ ಇಂದು ಪ್ರಸಾದ್ ಬಣವೂ ಕೆಎಸ್‌ಸಿಎ ಸದಸ್ಯರೊಂದಿಗೆ ಸಂವಾದ ನಡೆಸಿತು.

ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.

ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.

Continue Reading

State

ಡಿವೈಡರ್‌ಗೆ ಕಾರ್‌ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published

on

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹೊತ್ತಿ ಉರಿದ ಕಾರಿನಿಂದ ಹೊರಬರಲು ಸಾಧ್ಯವಾಗದೇ ಇನ್ಸ್‌ಪೆಕ್ಟರ್ ಕೂಡ ಅದರ ಒಳಗೆ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

Trending

error: Content is protected !!