Connect with us

State

ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಹೈಕಮಾಂಡ್ ಸಭೆಯಲ್ಲಿ ಮಹತ್ವದ ಚರ್ಚೆ ಸಾಧ್ಯ

Published

on

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಇಂದು ಸಂಜೆ 7 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ, ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆಯುವ ಮಹತ್ವದ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಉಪಸ್ಥಿತರಿರುವ ಸಾಧ್ಯತೆ ಇದೆ.

ಈ ಸಭೆಯಲ್ಲಿ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಸಚಿವ ಸಂಪುಟ ಪುನಾರಚನೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಲ್ಲದೆ, ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಕೆಲ ದಿನಗಳಿಂದ ಚರ್ಚೆಯಾಗುತ್ತಿರುವ ಅಧಿಕಾರ ಹಂಚಿಕೆ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಎಂ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಚಟುವಟಿಕೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ.

Politics

ಹರ್ಮನ್‌ಪ್ರೀತ್ ಕೌರ್‌ಗೆ ಪದ್ಮಶ್ರೀ ಗೌರವ

Published

on

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 66 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅವರ ಪತ್ನಿ ಹೇಮ ಮಾಲಿನಿ ಸ್ವೀಕರಿಸಿದರು.

ಪ್ರಸಿದ್ಧ ಪಿಟೀಲು ವಾದಕಿ ಎನ್.ರಾಜಮ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿತು. ಮಾಜಿ ರಾಜ್ಯಪಾಲ  ಗವ್ ಭಗತ್ ಸಿಂಗ್ ಕೋಶ್ಯಾರಿ ಹಾಗೂ ಖ್ಯಾತ ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಟ ಪ್ರೊಸೆನ್‌ಜಿತ್ ಚಟರ್ಜಿ ಅವರಿಗೂ ಪದ್ಮಶ್ರೀ ಗೌರವ ದೊರೆಯಿತು.

ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅದರಲ್ಲಿ 5 ಪದ್ಮ ವಿಭೂಷಣ, 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳಿವೆ. ಮೊದಲ ಹಂತದಲ್ಲಿ ಇಂದು 2 ಪದ್ಮ ವಿಭೂಷಣ, 6 ಪದ್ಮ ಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ವಿತರಿಸಲಾಯಿತು. ಉಳಿದ ಪ್ರಶಸ್ತಿಗಳನ್ನು ಎರಡನೇ ಹಂತದಲ್ಲಿ ಪ್ರದಾನ ಮಾಡಲಾಗುತ್ತದೆ.

Continue Reading

State

ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ

Published

on

ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ ತರುವುದಕ್ಕೆ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮೀ ಯೋಜನೆ ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಿದೆ.

ಗೃಹಲಕ್ಷ್ಮೀ ಹಣ ದುರಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಬರಲಿದೆ. ಬಯೋಮೆಟ್ರಿಕ್ ತರಲು ಎಲ್ಲಾ ತಯಾರಿ ಮುಕ್ತಾಯ ಆಗಿದೆ. ಶೀಘ್ರದಲ್ಲೇ ಬಯೋಮೆಟ್ರಿಕ್ ಜಾರಿ ಆಗಲಿದೆ. ಅನರ್ಹರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗೋದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಸತ್ತವರ ಅಕೌಂಟ್‌ಗೆ ಹಣ ಪಾವತಿ ಆಗೋದನ್ನ ತಡೆಗಟ್ಟಲು ಸರ್ಕಾರ ಈ ವ್ಯವಸ್ಥೆ ಜಾರಿಗೆ ಮುಂದಾಗಿದೆ. ೨ ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.


ಸುಮಾರು ೧೨೫ ಕೋಟಿ ಹಣ ಫಲಾನುಭವಿಗಳ ಖಾತೆಯಿಂದ ಡ್ರಾ ಆಗಿಲ್ಲ. ಹೀಗಾಗಿ, ಗೃಹಲಕ್ಷ್ಮೀ ಯೋಜನೆಗೆ ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಲಾಗಿದೆ. ಇದು ಒನ್ ಟೈಂ ಬಯೋಮೆಟ್ರಿಕ್ ಪದ್ಧತಿ. ಒಂದು ಸಲ ಫಲಾನುಭವಿಗಳು ಬಯೋಮೆಟ್ರಿಕ್ ಕೊಟ್ಟರೆ ಸಾಕು ಬೆಂಗಳೂರು ಇನ್, ಇನ್ ಸೇವಾಕೇಂದ್ರ ಮತ್ತು ಗ್ರಾಮ ಒನ್‌ಗಳಲ್ಲಿ ಫಲಾನುಭವಿಗಳು ಬಯೋಮೆಟ್ರಿಕ್ ಕೊಡಬೇಕು.

Continue Reading

State

ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆಗೆ ಹೊಸ ಕಮಾಂಡ್ ಕೇಂದ್ರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ಕರ್ನಾಟಕದಲ್ಲಿ ತುರ್ತು ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ವೇಗವಾಗಿ ಜನರಿಗೆ ತಲುಪಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.

ದೇಶದಲ್ಲೇ ಮೊದಲ ಬಾರಿಗೆ ಈ ರೀತಿಯ ಕೇಂದ್ರೀಕೃತ ವ್ಯವಸ್ಥೆಯನ್ನು ಕರ್ನಾಟಕದಲ್ಲಿ ಆರಂಭಿಸಲಾಗಿದೆ ಎಂದು ಹೇಳಲಾಗಿದ್ದು, ಇದರಿಂದ 108 ಆ್ಯಂಬುಲೆನ್ಸ್ ಸೇವೆಯ ಮೇಲ್ವಿಚಾರಣೆ ಮತ್ತು ಸಂಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ.

ರಾಜ್ಯದಲ್ಲಿ ಕಳೆದ ಸುಮಾರು 18 ವರ್ಷಗಳಿಂದ 108 ಆ್ಯಂಬುಲೆನ್ಸ್ ಸೇವೆ ಕಾರ್ಯನಿರ್ವಹಿಸುತ್ತಿದ್ದು, 2025–26ರ ಬಜೆಟ್ ಘೋಷಣೆಯಂತೆ ಈ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗಿದೆ. ಬೆಂಗಳೂರಿನಲ್ಲಿ ಮಾತ್ರ 65 ರಿಂದ 70 ಆ್ಯಂಬುಲೆನ್ಸ್‌ಗಳು ತುರ್ತು ಸೇವೆಗೆ ಲಭ್ಯವಿವೆ.

ತುರ್ತು ಸಂದರ್ಭಗಳಲ್ಲಿ “ಗೋಲ್ಡನ್ ಅವರ್” ಒಳಗೆ ಚಿಕಿತ್ಸೆ ದೊರೆತರೆ ಸುಮಾರು ಶೇ.80ರಷ್ಟು ರೋಗಿಗಳು ಬದುಕುಳಿಯುವ ಸಾಧ್ಯತೆ ಇದೆ ಎಂದು ಸಿಎಂ ತಿಳಿಸಿದ್ದಾರೆ. ರಸ್ತೆ ಅಪಘಾತ, ಹೆರಿಗೆ ಮತ್ತು ಹೃದಯಾಘಾತದಂತಹ ಸಂದರ್ಭಗಳಲ್ಲಿ ತ್ವರಿತ ಚಿಕಿತ್ಸೆ ಅತ್ಯಂತ ಅಗತ್ಯ ಎಂದು ಅವರು ಹೇಳಿದರು.

ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟವನ್ನು ಹೆಚ್ಚಿಸಿ ಜನರು ಅಲ್ಲಿ ಚಿಕಿತ್ಸೆ ಪಡೆಯುವಂತೆ ಪ್ರೋತ್ಸಾಹಿಸುವುದೂ ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Continue Reading

Trending

error: Content is protected !!