Connect with us

Mysore

ರಾಜ್ಯದಲ್ಲಿ ಕುಡಿಯುವ ‌ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ‌ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ – ಸಿಎಂ ಸಿದ್ದರಾಮಯ್ಯ

Published

on

ಮೈಸೂರು : ರಾಜ್ಯದಲ್ಲಿ ಕುಡಿಯುವ ‌ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ‌ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ 236 ತಾಲ್ಲೂಕುಗಳ‌ ಪೈಕಿ 216 ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿವೆ.
42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ.ಸದ್ಯಕ್ಕೆ ಕುಡಿಯುವ ನೀರಿ‌ನ ಸಮಸ್ಯೆಯಿಲ್ಲ.
ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ.
ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಜನರಿಗೆ ಉದ್ಯೋಗ ನೀಡಲು ಕ್ರಮ ಕೈಗೊಂಡಿದ್ದೇವೆ.
ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Mysore

ಬಡ ಜನತೆ ಆರೋಗ್ಯದ ನಿರ್ಲಕ್ಷ ತೋರದೆ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ಸಮನ್ವಯಾಧಿಕಾರಿ ಅನುಷಾ

Published

on

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ ತೋರದೆ ಶಿಬಿರದ ಪ್ರಯೋಜನ ಪಡೆದುಕೊಳ್ಳಿ  ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಯೋಜನೆಯ ಸಮನ್ವಯಾಧಿಕಾರಿ ಅನುಷಾ ಹೇಳಿದರು.

ಸಮೀಪದ ಸುಗ್ಗನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ನಡೆದ ಉಚಿತ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿ ಪಿ, ಶುಗರ್, ಹೃದ್ರೋಗ ಹಾಗು ಕಿಡ್ನಿ ಕಾಯಿಲೆಗಳು ಬರುವುದು ಸಾಮಾನ್ಯವಾಗಿದೆ, ಇವು ಶ್ರೀಮಂತರ ಕಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಚಿಕಿತ್ಸಾ ವೆಚ್ಚ ಭರಿಸಲು ಆಸಾಧ್ಯ, ಗ್ರಾಮೀಣ ಭಾಗದ ಹಾಗು ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆ ಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂಬುದನ್ನು ಮನಗಂಡು ಧರ್ಮಸ್ಥಳ ಸಂಸ್ಥೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪಾತಲಿಂಗಪ್ಪ, ಜ್ಞಾನ ವಿಕಾಸ ಕೇಂದ್ರ ಅಧ್ಯಕ್ಷ ರೂಪ,ಸೇವಾಪ್ರತಿನಿಧಿ ರಾಧಾ, ವೈದ್ಯರಾದ ಡಾ, ಅಜಯ್ ಹಾಗು ಸುಗ್ಗನಹಳ್ಳಿ ಗ್ರಾಮಸ್ಥರು, ಮುಖಂಡರು ಇದ್ದಾರೆ.

ನಂಜನಗೂಡು ತಾಲೂಕಿನ ಕಳಲೆ ಕೆ.ಸಿ.ರವಿ ಅವರಿಗೆ ಆರಕ್ಷಕ ಕಲಾರತ್ನ ಪ್ರಶಸ್ತಿ

Published

on

ನಂಜನಗೂಡು ಆ.10

ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ನಂಜನಗೂಡು ತಾಲ್ಲೂಕಿನ ಕಳಲೆ ಗ್ರಾಮದ ಹೆಡ್‌ಕಾನ್‌ಸ್ಟೆಬಲ್‌ ರವಿ ಕೆ.ಸಿ. ಅವರಿಗೆ ಆರಕ್ಷಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಪೊಲೀಸ್‌ ಕಲಾ ಸಂಗಮ ಹಾಗೂ ನಬಿರೋಶನ್‌ ಬೋರಗಿ ಸಂಸ್ಥೆ ವತಿಯಿಂದ ಶುಕ್ರವಾರ ಬೆಂಗಳೂರಿನ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಹೆಡ್‌ಕಾನ್‌ಸ್ಟೆಬಲ್‌ ರವಿ ಕೆ.ಸಿ.ಕಳಲೆ ಅವರಿಗೆ ಆರಕ್ಷಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖಾ, ಎಸಿಪಿ ಎನ್.ಉಮಾರಾಣಿ, ಕಮಾಂಡೆಂಟ್ ಹಂಜಾ ಹುಸೇನ್, ಪೊಲೀಸ್‌ ಇನ್‌ಸ್ಪೆಕ್ಟರ್‌ ಕೆ.ವಿಶ್ವನಾಥ್, ನಬಿರೋಷನ್ ಸಂಸ್ಥೆಯ ಸಂಸ್ಥಾಪಕ ಮೌಲಾಲಿ ಈ ಸಂದರ್ಭದಲ್ಲಿ ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Trending

error: Content is protected !!