Kodagu
ಸಿಎನ್‌ಸಿ 5ನೇ ಹಂತದ ಪಾದಯಾತ್ರೆ ಆರಂಭ – ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕುರಿತು ಜನ ಜಾಗೃತಿ

ಮಡಿಕೇರಿ: ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆಬದ್ಧವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕನ್ನು ಸಂವಿಧಾನದ ವಿಧಿ 244 R /w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಧೀನದೊಳಗೆ ಸಂಯೋಜಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಸಿಎನ್‌ಸಿ ಸಂಘಟನೆ 5ನೇ ಹಂತದ ಪಾದಯಾತ್ರೆಯನ್ನು ಆರಂಭಿಸಿತು.
ವಿರಾಜಪೇಟೆ ತಾಲ್ಲೂಕಿನ ಬೆಪುö್ಪನಾಡ್‌ನ ಅರಮೇರಿ ಮಂದ್ ಮತ್ತು ಕಡಂಗ ಮುರೂರು ಮಂದ್ ನಲ್ಲಿ ಪಾದಯಾತ್ರೆ ಹಿನ್ನೆಲೆ ನಡೆದ ಕೊಡವ ಜನಜಾಗೃತಿ ಸಭೆಯ ನೇತೃತ್ವ ವಹಿಸಿ ನಾಚಪ್ಪ ಮಾತನಾಡಿದರು.
ಕೊಡಗಿನ ಅತ್ಯಂತ ಸೂಕ್ಷö್ಮ ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದ ಭದ್ರತೆಯ ಅಗತ್ಯವಿದೆ. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ÷್ಮ, ಸಮಗ್ರ ಕುಲಶಾಸ್ತç ಅಧ್ಯಯನ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಅರಮೇರಿ ಮಂದ್ ಮತ್ತು ಕಡಂಗ ಮುರೂರು ಮಂದ್‌ನಲ್ಲಿ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಕೋವಿಯೊಂದಿಗೆ ಪಾಲ್ಗೊಂಡ ಕೊಡವ, ಕೊಡವತಿಯರು ಮಾನವ ಸರಪಳಿಯನ್ನು ರಚಿಸಿದರು. ಸೂರ್ಯ-ಚಂದ್ರ, ಮಾತೃ ಭೂಮಿ, ದೈವಿಕ ವಸಂತ ಕಾವೇರಿ, ಸಂವಿಧಾನ ಮತ್ತು ಗುರು- ಕರೋಣ ಹೆಸರಿನಲ್ಲಿ ಸಿಎನ್‌ಸಿ ಯ ಕೊಡವಲ್ಯಾಂಡ್ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಅಲ್ಮಂಡ ಸ್ವಾತಿ ರಂಜನ್, ಬಾಚಿರ ಕನ್ನಿಕೆ ಸುಬ್ರಮಣಿ, ಅಲ್ಮಂಡ ಸುನಿತಾ ಪೂಣಚ್ಚ, ಪೂಳಂಡ ಪದ್ಮಿನಿ ಪೂಣಚ್ಚ ಇತರರು ಇದ್ದರು.
::: ಇಂದಿನ ಪಾದಯಾತ್ರೆ :::
ನ.8ರಂದು ಬೆಳಗ್ಗೆ 10 ಗಂಟೆಗೆ ಕಡಿಯತ್‌ನಾಡ್ ನ ಕರಡದ “ಬೇಲಿಯಾಣೆ ಮಂದ್”, ಮಧ್ಯಾಹ್ನ 2.30 ಗಂಟೆಗೆ ಬಲಂಬೇರಿ ಮಂದ್, ನ.9 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ತಾಲ್ಲೂಕಿನ ನೂರಂಬಡನಾಡ್ ಮಂದ್, ಸಂಜೆ 4.30 ಗಂಟೆಗೆ ನೆಲಜಿನಾಡ್ ಮಂದ್ ನಲ್ಲಿ ಪಾದಯಾತ್ರೆ ಮತ್ತು ಜಾಗೃತಿ ಸಭೆ ನಡೆಯಲಿದೆ.
Kodagu
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ

ಮಡಿಕೇರಿ: ಶಿಕ್ಷಣದ ಗುರಿ ಕೇವಲ ಅಂಕಗಳಿಗೆ, ರ‍್ಯಾಂಕ್ ಗಳಿಕೆಗೆ ಸಿಮೀತವಾಗಬಾರದು. ಅದರ ಜೊತೆಯಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಅಮೂಲ್ಯ ಸಂಪತ್ತಾಗಿ ಪರಿವರ್ತನೆಯಾಗಬೇಕು. ಈ ರೀತಿಯ ಮಾರ್ಪಾಡು ಮಾಡುವವರು ಮತ್ತು ಹೊಂದುವವರು ನಿಜವಾದ ದೇಶಪ್ರೇಮಿಗಳು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.
ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರÀವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ನ ದೊಡ್ಡ ಉದ್ದೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸರ್ವಜನಾಂಗದವರಿಗೆ ಪ್ರಯೋಜನ ಆಗಬೇಕು, ಈ ಸಂಸ್ಥೆ ಇತರರಿಗೆ ಪ್ರೇರಣೆಯಾಗಬೇಕು. ಸರ್ಕಾರದಿಂದ ಯಾವುದೇ ಸಂದರ್ಭದಲ್ಲಿ ಸಹಕಾರ ಸಿಗಲಿದೆ ಎಂದರು.
ಉತ್ತಮ ಸಮಾಜ ದೇಶಕ್ಕೆ ಅತ್ಯಗತ್ಯ, ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಪ್ರೀತಿ, ವಿಶ್ವಾಸ ಸಂಪಾದಿಸಬೇಕು. ಸಮಾಜ ಕಟ್ಟುವುದಕ್ಕಾಗಿ ಯುವ ಜನಾಂಗವನ್ನು ಬೆಳೆಸಬೇಕೇ ಹೊರತು ದು:ಖ ಸೃಷ್ಟಿಗಾಗಿ ಅಲ್ಲ. ಯುವಕರಲ್ಲಿ ಸಕರಾತ್ಮಕ ಚಿಂತನೆ ಬರುವಂತೆ ನೋಡಿಕೊಳ್ಳಬೇಕು, ಆಗ ಮಾತ್ರ ನಾವು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಶಿಕ್ಷಣದ ಮೂಲಕ ಒಬ್ಬ ಅಧಿಕಾರಿಯನ್ನು ನೀಡುವುದರ ಜೊತೆಗೆ ಒಬ್ಬ ಉತ್ತಮ ಜನಪ್ರತಿನಿಧಿಯನ್ನು ಕೂಡ ನೀಡುವ ಅನಿವಾರ್ಯತೆ ಇದೆ ಎಂದು ಯು.ಟಿ.ಖಾದರ್ ತಿಳಿಸಿದರು.
ನಂತರ ಕಾವೇರಿ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು, ಉಮ್ಮತ್ ಒನ್ ಕೊಡಗು ಸಂಸ್ಥೆ ಸಮಾಜಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಇರಬೇಕು, ಜಾತಿ ಧರ್ಮ, ಬೇಧಭಾವವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯೊAದಿಗೆ ತಾವು ಇರುವುದಾಗಿ ಭರವಸೆ ನೀಡಿದರು.
ಶಿಕ್ಷಣದ ಮೂಲಕ ಉತ್ತಮ ಬದಲಾವಣೆ ತರಲು ಸಾಧ್ಯ, ಹೆಣ್ಣುಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಮಾಜಿ ಶಾಸಕ ಕೆ.ಎಂ.ಇಬ್ರಾಹಿA ಮಾಸ್ಟರ್ ಮಾತನಾಡಿ, ಮಡಿಕೇರಿ ಕೇಂದ್ರದಲ್ಲಿ ಸುಸಜ್ಜಿತವಾದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಆರಂಭಗೊAಡಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮಾಜದ ಸರ್ವರೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ದಕ್ಷಿಣ ಕನ್ನಡ ನಿವೃತ್ತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮಾತನಾಡಿ, ಶಿಕ್ಷಣ ನಮ್ಮನ್ನು ಬಲಿಷ್ಠರನ್ನಾಗಿ ಮಾಡಬೇಕು, ಯಾವುದೇ ಆಕರ್ಷಣೆ, ಆಮಿಷಗಳಿಗೆ ಒಳಗಾಗದೆ ನಿರ್ದಿಷ್ಟ ಗುರಿಯ ಕಡೆಗೆ ಕೊಂಡೊಯ್ಯಬೇಕು ಎಂದು ತಿಳಿಸಿದರು.
ಪ್ರಸ್ತುತ ದಿನಗಳಲ್ಲಿ ಸರಸ್ವತಿ ಆರಾಧನೆಗಿಂತ ಲಕ್ಷಿö್ಮ ಆರಾಧನೆ ಹೆಚ್ಚಾಗಿದ್ದು, ಎಲ್ಲವನ್ನು ಹಣದಲ್ಲಿ ಅಳತೆ ಮಾಡುವ ಬದಲು ಸರಸ್ವತಿಯ ಆರಾಧನೆಯ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತಿಯೊಬ್ಬರು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಕಠಿಣ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದರು.
ಕೇAದ್ರ ಸ್ಥಾನ ಮಡಿಕೇರಿಯಲ್ಲಿ ಆರಂಭಗೊAಡಿರುವ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕುಗಳಿಗೂ ವಿಸ್ತರಿಸಲಿ ಎಂದು ಶುಭ ಹಾರೈಸಿದರು.
::: ವಿದ್ಯಾರ್ಹತೆಗೆ ತಕ್ಕ ವರ ಸಿಗುತ್ತಿಲ್ಲ :::
ಈ ಹಿಂದೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಘೋಷವಾಕ್ಯವನ್ನು ಹೇಳಲಾಗುತ್ತಿತ್ತು. ಆದರೆ ಇಂದು ಎಲ್ಲಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಆದರೆ ಯುವಕರು ಕಾಲಹರಣ, ದುಶ್ಚಟಗಳಿಂದ ತಮ್ಮ ಶಿಕ್ಷಣವನ್ನು ಕುಂಠಿತಗೊಳಿಸುತ್ತಿದ್ದು, ಇದರಿಂದ ಯುವತಿರ ವಿದ್ಯಾರ್ಹತೆಗೆ ತಕ್ಕ ವರನನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ದಿನಗಳಲ್ಲಿ ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿದ್ದು, ಯುವಕರೂ ಹೆಚ್ಚಿನ ಶಿಕ್ಷಣ ಪಡೆಯುವಂತಾಗಬೇಕು ಮತ್ತು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಕೊಡುಗೆ ನೀಡಬೇಕು ಎಂದು ಎ.ಬಿ.ಇಬ್ರಾಹಿಂ ಸಲಹೆ ನೀಡಿದರು.
ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮಾತನಾಡಿ, ಉತ್ತಮ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು, ಸ್ವಾರ್ಥವನ್ನು ಬಿಟ್ಟು ಎಲ್ಲಾ ಸಮುದಾಯವನ್ನು ಸೇರಿಸಿಕೊಂಡು ಉತ್ತಮ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ. ಮುಂದಿನ ಯುವ ಪೀಳಿಗೆ ಇದನ್ನು ನೆನಪಿಸಿಕೊಂಡು ಮತ್ತಷ್ಟು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಭಾರಧಿಯಾರ್ ಯನಿವರ್ಸಿಟಿಯ ಸಿಂಡಿಕೇಟ್ ಸದಸ್ಯ ಡಾ.ರಾಶೀದ್ ಗಝಾಲಿ ಮಾತನಾಡಿ, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಛಲದೊಂದಿಗೆ ಪರಿಶ್ರಮಪಟ್ಟರೆ ಎಲ್ಲವೂ ಸಾಧ್ಯ, ಎಲ್ಲರೂ ದೊಡ್ಡ ಕನಸನ್ನು ಕಾಣಬೇಕು ಮತ್ತು ಸಕಾರಗೊಳಿಸುವ ಕೆಲಸ ಮಾಡಬೇಕು ಎಂದರು.
ಕೇವಲ ತಾತ್ಕಲಿಕ ಬದಲಾವಣೆಯಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯವಿಲ್ಲ. ಇದೊಂದು ನಿರಂತರ ಪ್ರಕ್ರಿಯೆ, ಸೃಜನಾತ್ಮಕ ಬೋಧನೆ ಮತ್ತು ಚಟುವಟಿಕೆಗಳಿಂದ ಮಕ್ಕಳ ಜ್ಞಾನ ವೃದ್ಧಿಯಾಗುತ್ತದೆ. ಚಟುವಟಿಕೆಗಳು ಹೊಸ ವಿಷಯದ ಸುಲಭ ಕಲಿಕೆಗೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪುಣೆಯ ಅನಿಶ್ ಡೆಫೆನ್ಸ್ ಕ್ಯಾರಿಯರ್ ಇನ್ಸಿಟ್ಯೂಟ್‌ನ ಸ್ಥಾಪಕ ನಿರ್ದೇಶಕ ಅನಿಸ್ ಕುಟ್ಟಿ, ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವ ರೀತಿಯ ಪೂರ್ವ ತಯಾರಿ ನಡೆಸಬೇಕು ಮತ್ತು ಆಯ್ಕೆ ಪ್ರಕ್ರಿಯೆಗಳು ಹೇಗೆ ನಡೆಯುತ್ತದೆ ಎನ್ನುವ ಕುರಿತು ಮಾರ್ಗದರ್ಶನ ನೀಡಿದರು. ಅಲ್ಲದೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು.
ಸಿ.ಎಂ.ಉಸ್ತಾದ್ ಪ್ರಾರ್ಥನೆ ಮಾಡುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಬೀದರ್‌ನ ಶಾಹಿದ್ ಗ್ರೂಫ್ ಆಫ್ ಇನ್ಸ್ಟ್ಯೂಟ್ ಸಿಇಓ ಡಾ.ತೌಸೀಫ್ ಅಹಮ್ಮದ್, ಪುತ್ತೂರು ಕಮ್ಯೂನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ಎಂ.ಎಫ್.ಐ.ಎಫ್‌ನ ಉಪಾಧ್ಯಕ್ಷ ಕೆ.ಎಂ.ಮುಸ್ತಫ, ಮಂಗಳೂರಿನ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಪ್ರಮುಖ ಕೆ.ಬಿ.ರಿಯಾಝ್ ಅಹಮ್ಮದ್ ಸೇರಿದಂತೆ ಮತ್ತಿರರ ಗಣ್ಯರು, ಒಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿಗಳು, ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಉಮ್ಮತ್ ಓನ್ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ಖಾಲಿದ್ ಸ್ವಾಗತಿಸಿದರು, ಶಿಕ್ಷಣ ತಜ್ಞ ಮಂಗಳೂರಿನ ರಫೀಕ್ ಮಾಸ್ಟರ್ ನಿರೂಪಿಸಿದರು. ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಹಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಹಾಗೂ ಉಮ್ಮತ್ ಒನ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಬಿ.ಬಶೀರ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
Kodagu
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

ಮಡಿಕೇರಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಅಮಾಯಕರ ಸಾವಿಗೆ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ೧೧ ವ?ಗಳಿಂದ ಭಯೋತ್ಪಾದಕರ ದಾಳಿಯಿಂದ ಭಾರತ ಮುಕ್ತವಾಗಿಲ್ಲ. ಕೇಂದ್ರ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಭದ್ರತಾ ಲೋಪ ಎದ್ದು ಕಾಣುತ್ತಿದ್ದು, ಗಡಿಯಲ್ಲಿ ನುಸುಳುಕೋರರು ಸುಲಭವಾಗಿ ದೇಶವನ್ನು ಪ್ರವೇಶಿಸುತ್ತಿದ್ದಾರೆ ಎನ್ನುವ ಸಂಶಯ ಮೂಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜಮ್ಮು ಕಾಶ್ಮೀರ ಸೇರಿದಂತೆ ಭಾರತ ದೇಶ ಭಯೋತ್ಪಾದಕರಿಂದ ಮುಕ್ತವಾಗಿದೆ ಎಂದು ಹೇಳಿಕೊಳ್ಳುವ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ವೈಫಲ್ಯದ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
Kodagu
ಉಗ್ರರನ್ನು ಸದೆಬಡಿಯಲು ಮಡಿಕೇರಿ ಜೆಡಿಎಸ್ ಆಗ್ರಹ

ಮಡಿಕೇರಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿರುವ ದಾಳಿ ಅಮಾನವೀಯವಾಗಿದ್ದು, ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಾತ್ಯತೀತ ಜನತಾದಳದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿಕಿರಣ್ ಶೆಟ್ಟಿ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿ ಖಂಡನೀಯ, ಅಮಾಯಕ ಪ್ರವಾಸಿಗರ ಸಾವಿಗೆ ಜೆಡಿಎಸ್ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.
ಭಾರತವನ್ನು ಭಯೋತ್ಪಾದಕ ಮುಕ್ತ ದೇಶವನ್ನಾಗಿ ಮಾಡಲು ಅಗತ್ಯವಿರುವ ಕಠಿಣ ಕಾನೂನು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಅಮಾಯಕ ನಾಗರೀಕರ ಹಾಗೂ ಯೋಧರ ಹತ್ಯೆಯಾಗುವುದನ್ನು ತಪ್ಪಿಸಬೇಕು. ಇನ್ನು ಮುಂದೆ ಭದ್ರತಾ ವ್ಯವಸ್ಥೆ ವೈಫಲ್ಯವಾಗದಂತೆ ಮತ್ತು ಗುಪ್ತಚರ ಇಲಾಖೆ ಸಕ್ರಿಯವಾಗುವಂತೆ ಕ್ರಮ ಕೈಗೊಳ್ಳಬೇಕು. ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಮಾಡುವುದು ಅಧರ್ಮದ ಕಾರ್ಯವಾಗಿದ್ದು, ದೇಶದ್ರೋಹಿಗಳಿಗೆ ಯಾರೂ ಬೆಂಬಲ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
ದೇಶದ ಭದ್ರತೆಗಾಗಿ ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು ಮತ್ತು ಉಗ್ರರ ನಿಗ್ರಹಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ಸೂಚಿಸಬೇಕು ಎಂದು ರವಿಕಿರಣ್ ಶೆಟ್ಟಿ ತಿಳಿಸಿದ್ದಾರೆ.
-
State10 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized6 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Hassan3 hours ago
ಜಮೀನು ವಿಚಾಕ್ಕೆ ಕೊಲೆ
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu6 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ