Connect with us

Kodagu

ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಿಎನ್‌ಸಿ ಪ್ರತಿಪಾದನೆ

Published

on

ಮಡಿಕೇರಿ : ತುಳು ಭಾಷೆಯಂತೆ ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು, ಭಾಷೆ ಉಳಿದರೆ ದೇಶ ಉಳಿಯುತ್ತದೆ, ವೈವಿಧ್ಯಮಯ ರಾಷ್ಟ್ರವನ್ನು ಒಂದಾಗಿಟ್ಟು ಮುಂದುವರಿಯಲು ಕೊಡವ ಭಾಷೆ ಸೇರಿದಂತೆ ಇಲ್ಲಿನ ಹಲವು ಆದಿಮಸಂಜಾತ ಭಾಷೆಗಳನ್ನು ಮುನ್ನಲೆಗೆ ತಂದು ಸಮಾನ ಪ್ರಾತಿನಿಧ್ಯ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಅವರು ತುಳುವಿನಂತೆ ಕೊಡವ ಭಾ?ಯನ್ನು ಸಂವಿಧಾನದ 345 ಪ್ರಕಾರ ರಾಜ್ಯದ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕು. ಒಂದೇ ಭಾಷೆಗೆ ಜೋತು ಬಿದ್ದು, ಭಾಷೆ ಪ್ರಾಬಲ್ಯದ ಮೂಲಕ ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ದೇಶದ ಏಕತೆಗೆ ದಕ್ಕೆ ಬರುತ್ತದೆ, ಒಗ್ಗಟ್ಟಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ, ತುಳುನಾಡು/ಕರಾವಳಿ ಕರ್ನಾಟಕದ ಪ್ರತಿನಿಧಿಗಳು, ವಿಶೇಷವಾಗಿ ಪುತ್ತೂರು ಶಾಸಕ ಅಶೋಕ್ ರೈ, ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಗುರುತಿಸುವ ವಿಷಯವನ್ನು ಎತ್ತಿದರು. ಕನ್ನಡ ಮತ್ತು ಸಂಸ್ಕೃತಿ ಖಾತೆ ಮಂತ್ರಿ ಶಿವರಾಜ್ ತಂಗಡಗಿ ಅವರು ಸದನದಲ್ಲಿ ಅಧಿಕೃತವಾಗಿ ಸಮ್ಮತ್ತಿ ಸೂಚಿಸಿದರು. ನಾವು ಅದನ್ನು ಸ್ವಾಗತಿಸುತ್ತೇವೆ, ಆದರೆ ಅದೇ ಸ್ಫೂರ್ತಿ ಮತ್ತು ಉತ್ಸಾಹದಿಂದ, ಕೊಡವ ತಕ್ ಅನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಗುರುತಿಸಬೇಕೆಂದು ನಾವು ಮಂತ್ರಿ ಹಾಗೂ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.


ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಭಾಷಾ ಹಕ್ಕೊತ್ತಾಯದ ಕುರಿತು ಸುದೀರ್ಘ ಮನವಿ ಪತ್ರವನ್ನು ರಾಷ್ಟ್ರಪತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ನ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ಕೊಡಗು ಜಿಲ್ಲೆಯ ಇಬ್ಬರು ಶಾಸಕರುಗಳಿಗೆ ಅವರುಗಳಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.

Continue Reading

Kodagu

ಸಂಜೀವಿನಿ ಕಟ್ಟಡ ನಿರ್ಮಾಣ ಶ್ಲಾಘನೀಯ : ಶಾಸಕ ಡಾ.ಮಂಥರ್ ಗೌಡ

Published

on

ಕೊಡ್ಲಿಪೇಟೆ : ಸದಸ್ಯರುಗಳು ಹೆಚ್ಚಾದಂತೆ ಸಂಘಗಳಿಗೆ ಬಲ ಬರುತ್ತದೆ ಎಂದು ಶಾಸಕ ಮಂತರ್‌ ಗೌಡ ಹೇಳಿದರು.

ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯತ್ನಲ್ಲಿ ನೂತನವಾಗಿ ನಿರ್ಮಿಸಿರುವ ಸಂಜೀವಿನಿ ಸಭಾಂಗಣ ಉದ್ಘಾಟನೆ ಮಾಡಿ ಮಾತನಾಡಿದರು.

ಬ್ಯಾಡಗೊಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ 42 ನೊಂದಾಯಿತ ಮಹಿಳಾ ಸ್ವಸಹಾಯ ಸಂಘ ಕಾರ್ಯನಿರ್ವಹಿಸುತ್ತಿದೆ. ಒಂದೇ ಪಂಚಾಯತ್ ನಲ್ಲಿ 425 ಸದಸ್ಯರಿರುವ ಇಷ್ಟು ಸಂಘಗಳು ಇರುವುದು ಹೆಮ್ಮೆಯ ವಿಷಯ ಎಂದರು.

ಬ್ಯಾಡಗೊಟ್ಟ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸ್ವಸಹಾಯ ಸಂಘಕ್ಕೆ ಸಂಜೀವಿನಿ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ ಕಾರ್ಯ. ಇದರಿಂದ ಸಂಘದ ಸದಸ್ಯರುಗಳಿಗೆ ಸುರಕ್ಷೆಯಿಂದ ಸಭೆಗಳನ್ನು ನಡೆಸಬಹುದು ಎಂದು ಹೇಳಿದರು.


ಪಂಚಾಯತ್ ಗಳು ಸ್ವಚ್ಛತೆ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಜನರು ಕಸ ವಿಂಗಡಿಸಿ ಹಾಕುವ ಮೂಲಕ ಪಂಚಾಯತ್ ನೊಂದಿಗೆ ಸಹಕರಿಸಬೇಕು. ರಸ್ತೆ ಬದಿಯಲ್ಲಿ ಸಾರ್ವಜನಿಕವಾಗಿ ಕಸ ಹಾಕಬಾರದೆಂದರು.

ಸಂಜೀವಿನಿ ಒಕ್ಕೂಟದ ಸದಸ್ಯರುಗಳ ಬೇಡಿಕೆಯ ಮೇರೆಗೆ ಚೇರ್ ಮತ್ತು ಟೇಬಲ್ ವ್ಯವಸ್ಥೆಯನ್ನು ವೈಯುಕ್ತಿಕವಾಗಿ ಮಾಡುತ್ತೇನೆಂದು ಭರವಸೆ ನೀಡಿ, ಪಂಚಾಯತ್ ಕಚೇರಿಯ ಆಧುನೀಕರಣ ಕಾಮಾಗಾರಿ ಗಳಿಗೆ ಶಾಸಕರ ನಿಧಿಯಿಂದ 10 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.

ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಉದ್ಬಾಟನೆ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅಂದಾಜು 17 ಲಕ್ಷ ಅನುದಾನದಲ್ಲಿ ಸಂಜೀವಿನಿ ಸಭಾಂಗಣ ನಿರ್ಮಾಣವಾಗಿರುವುದರಿಂದ ಸಭೆಗಳನ್ನು ನಡೆಸಲು ಸ್ಥಳಾವಕಾಶ ಒದಗಿಸಿದಂತೆ ಆಗಿದೆ. ಪಂಚಾಯತ್ ಆಡಳಿತ ಮಂಡಳಿಯ ಇಚ್ಚಾ ಶಕ್ತಿಯಿಂದ ಇದು ಸಾಧ್ಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಪಂಚಾಯತ್ ಸದಸ್ಯ ಹನೀಫ್ ಪ್ರಸ್ತಾವಿಕ ನುಡಿಗಳನ್ನಾಡಿ ಸ್ವಾಗತ ಭಾಷಣ ಮಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾವನ ಅಧ್ಯಕ್ಷರ ನುಡಿಗಳನ್ನಾಡಿದರು. ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ಸದಸ್ಯರುಗಳಾದ ದಿನೇಶ್ ಕುಮಾರ್ ಮತ್ತು ಮೊಕ್ಷಿತ್ರಾಜ್, ತಾಲೂಕು ಕೆ.ಡಿ.ಪಿ.ಸದಸ್ಯ ಡಿ.ಆರ್. ವೇದಕುಮಾರ್ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ತಾಲೂಕು ಪಂಚಾಯತ್ ಸಹಾಯಕ ನಿರ್ದೆಶಕರು ಗ್ರಾಮೀಣಾ ಎ.ರಾಕೇಶ್, ತಾಲೂಕು ತಾಂತ್ರಿಕ ಸಂಯೋಜಕ ರಂಜಿತ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯರುಗಳಾದ ಬಿ.ಬಿ.ಸತೀಶ್, ಜೆ.ಎಲ್.ಜನಾರ್ದನ್, ಕೆ.ಡಿ.ಪಿ.ಸದಸ್ಯರಾದ ಶರತ್ ಶೇಖರ್, ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕ ಡಾ.ಉದಯ್ ಕುಮಾರ್, ನಿಡ್ತ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್, ಬೆಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕಮಲಮ್ಮ, ಬ್ಯಾಡಗೊಟ್ಟ ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೀನಾ, ರೇಣುಕಾ, ವಿನೋದಾ, ದೊಡ್ಡಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಹೆಚ್.ಎಸ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸರೋಜಮ್ಮ, ನರೇಗಾ ಕಿರಿಯ ಅಭಿಯಂತರ ಕಿಶೋರ್, ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರೀಶ್ ಇದ್ದರು.


ಕಾರ್ಯಕ್ರಮದ ಅಂಗವಾಗಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ಪಂಚಾಯತ್ ಕಚೇರಿ ಸಮೀಪ ಆಯೋಜಿಸಿದ ಸಂತೆ ಮೇಳವನ್ನು ಉದ್ಘಾಟಿಸಿದ ಶಾಸಕರು ಮೇಳದಲ್ಲಿ ಮಹಿಳಾ ಸದಸ್ಯರುಗಳು ಮನೆಯಿಂದ ತಯಾರಿಸಿ ತಂದಿದ್ದಂತಹ ತಿಂಡಿ ತಿನಿಸುಗಳನ್ನು ಖರೀದಿಸಿ ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮ ಪಂಚಾಯತಿ ಸದಸ್ಯ ರುಗಳು, ಗ್ರಾಮದ ಪ್ರಮುಖರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Continue Reading

Kodagu

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಸಂಸದ ಯದುವೀರ್‌ ಮನವಿ

Published

on

ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ

ಮೈಸೂರು/ಮಡಿಕೇರಿ: ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಸಂಸದರು, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನನೆಗುದಿಗೆ ಬಿದ್ದಿದೆ ಎಂದರು.

ಯೋಜನೆಗೆ ಚಾಲನೆ ನೀಡಬೇಕು

ಮೈಸೂರು (ಬೆಳಗೊಳ) – ಕುಶಾಲನಗರ (89 ಕಿಮೀ) ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಕಾರಣಾಂತರಗಳಿಂದ ಸ್ಥಗಿತಗೊಂಡಿದೆ. ಈ ಯೋಜನೆಗೆ ಪುನರುಜ್ಜೀವನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಚಿವರು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ.

ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೇ ಪ್ರಮುಖ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರಿ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ಸ್ಯಾಚುರೇಟೆಡ್ ರಸ್ತೆ ಸಂಪರ್ಕದ ಮೇಲೆ ಬೆಳೆಗಾರರು ಅವಲಂಬಿತಾಗಿದ್ದಾರೆ ಎಂದು ವಿವರಿಸಲಾಗಿದೆ ಎಂದರು.

ಸುಸ್ಥಿರ ಪ್ರವಾಸೋದ್ಯಮಕ್ಕೆ ಅವಕಾಶ

ಈ ಯೋಜನೆಯು ಕೊಡಗು ಜಿಲ್ಲೆಗೆ ಸುಸ್ಥಿರ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೇರಳ ಅವಕಾಶ ಒದಗಿಸುತ್ತದೆ. ಕೃಷಿ-ತೋಟಗಾರಿಕೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಮತ್ತು ಕೊಡಗನ್ನು ಮೈಸೂರು ಮತ್ತು ಬೆಂಗಳೂರಿನ ಬೆಳವಣಿಗೆಯ ಕಾರಿಡಾರ್‌ಗಳೊಂದಿಗೆ ಸಂಯೋಜಿಸುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಯದುವೀರ್‌ ಒಡೆಯರ್‌ ತಿಳಿಸಿದರು.

ಈ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ರೈಲ್ವೆ ಸಚಿವಾಲಯ ಹಾಗೂ ಅಧಿಕಾರಿಗಳ ಜೊತೆ ನಿರಂತರ ಫಾಲೋ ಅಪ್‌ ಮಾಡಿ ಎರಡೂ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಸಂಸದರು ತಿಳಿಸಿದರು.

ಈ ಎರಡೂ ಮನವಿಯನ್ನು ಸ್ವೀಕರಿಸಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.


ಚೆನ್ನೈ-ಬೆಂಗಳೂರು ಹೈಸ್ಪೀಡ್‌ ರೈಲಿಗೆ ಮೈಸೂರು ಸೇರಿಸಲು ಆಗ್ರಹ

ಇದೇ ವೇಳೆ ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರು-ಮೈಸೂರು ಹೈಸ್ಪೀಡ್‌ ರೈಲು ಯೋಜನೆ ಘೋಷಿಸಲಾಗಿದೆ. ಆದರೆ ಮೈಸೂರು ಕೈ ಬಿಡಲಾಗಿದೆ. ರೈಲ್ವೆ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಈ ಯೋಜನೆಗೆ ಸಾಂಸ್ಕೃತಿಕ ನಗರಿಯನ್ನೂ ಸೇರಿಸಬೇಕು ಎಂದು ಸಂಸದರು ಮನವಿ ಮಾಡಿದರು.

ಮೈಸೂರು ಈಗ ಪ್ರಮುಖ ಪ್ರವಾಸಿ ತಾಣವಾಗಿದೆ. ಐಟಿ ಹಬ್‌ ಆಗುತ್ತಿದೆ. ರಾಜಧಾನಿ ಬೆಂಗಳೂರಿನೊಂದಿಗೆ ಸೂಕ್ತ ಸಂಪರ್ಕ ಜಾಲ ಹೊಂದಿದರೆ ಆರ್ಥಿಕ ಪ್ರಗತಿಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಸಂಸದರು ವಿವರಿಸಿದರು.

ಬೆಂಗಳೂರನ್ನು ಮೆಟ್ರೊ ಪಾಲಿಟನ್‌ ವಲಯದಿಂದ ದಟ್ಟಣೆ ಕಡಿಮೆ ಮಾಡಲು ಇದರು ನೆರವಾಗಲಿದೆ ಮತ್ತು ಹಲವಾರು ದಿನಗಳ ಬೇಡಿಕೆಯನ್ನು ಈಡೇರಿಸಲು ಸಚಿವರು ಮಂದಾಗಬೇಕು ಎಂದರು.

ಈ ನಿಟ್ಟಿನಲ್ಲಿ ಚೆನ್ನೈ-ಬೆಂಗಳೂರು ಆರ್ಥಿಕ ಕಾರಿಡಾರ್‌ಗೆ ಮೈಸೂರು ಕೂಡ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

Continue Reading

Kodagu

ಫೆ.15ಕ್ಕೆ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

Published

on

ಮಡಿಕೇರಿ : ಶಕವರ್ಷ 1947 ನೇ ವಿಶ್ವಾವಸು ಸಂವತ್ಸರ ಉತ್ತರಾಯಣ ಶಿಶಿರ ಋತು ಮಾಘಮಾಸ ಕೃಷ್ಣಪಕ್ಷ ತ್ರಯೋದಶಿ ಫೆ. 15 ರಂದು ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ್ ಸ್ವೀಕರಿಸಿ, ಭಗವಂತನ ಕೃಪೆಗೆ ಪಾತ್ರರಾಗುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಕೋರಿದ್ದಾರೆ.


ಪೂಜಾ ಕಾರ್ಯಕ್ರಮದ ವಿವರ: ಫೆಬ್ರವರಿ, 15 ರಂದು ಬೆಳಗ್ಗೆ 6.45 ಗಂಟೆಗೆ ಮಹಾಪೂಜೆ, ಬೆಳಗ್ಗೆ 7.15 ಗಂಟೆಗೆ ನಿತ್ಯ ಸೇವೆಗಳ ಆರಂಭ, ಬೆಳಗ್ಗೆ 9.30 ಗಂಟೆಗೆ ರುದ್ರಹೋಮ ಸಂಕಲ್ಪ(ಸಾಮೂಹಿಕ) ಏಕದರ್ಶ ರುದ್ರಾಭಿಷೇಕ(ಸಾಮೂಹಿಕ), ಬೆಳಗ್ಗೆ 10 ಗಂಟೆಗೆ ರುದ್ರ ಹೋಮ ಪ್ರಾರಂಭ(ಸಾಮೂಹಿಕ), ಮಧ್ಯಾಹ್ನ 12 ಗಂಟೆಗೆ ರುದ್ರಹೊಮ ಪೂರ್ಣಾಹುತಿ (ಸಾಮೂಹಿಕ), ಮಧ್ಯಾಹ್ನ 12.30 ಗಂಟೆಗೆ ಕಳಶಾಭಿಷೇಕ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಮಧ್ಯಾಹ್ನ 1.30 ಗಂಟೆಗೆ ತೀರ್ಥ ಪ್ರಸಾದ ವಿತರಣೆ(ವಿನಿಯೋಗ), ಸಂಜೆ 4 ಗಂಟೆಗೆ ದೇವರ ದರ್ಶನ ಹಾಗೂ ಸೇವೆಗೆ ಅವಕಾಶ, ನಂತರ ರಾತ್ರಿ 9 ಗಂಟೆಗೆ ಮಹಾ ಪೂಜೆ ನಡೆಯಲಿದೆ.


ಮಹಾ ಶಿವರಾತ್ರಿ ಹಬ್ದದ ಜಾಗರಣೆ ಪ್ರಯುಕ್ತ ಫೆಬ್ರವರಿ, 15 ರಿಂದ ಫೆಬ್ರವರಿ, 16 ರ ಬೆಳಗ್ಗೆ 4.30 ಗಂಟೆಯ ವರೆಗೆ ಬೆಳಗ್ಗಿನ ಜಾವದವರೆಗೂ ಸಹ ದೇವರ ದರ್ಶನಕ್ಕೆ ಅವಕಾಶವಿದೆ. ಭಕ್ತಾದಿಗಳ ಆಗಮನಕ್ಕೆ ದೇವಾಲಯ ತೆರೆದಿರುತ್ತದೆ.

ರುದ್ರಹೋಮ ಮತ್ತು ಏಕದಶ ರುದ್ರಾಭಿಷೇಕ (ಸಾಮೂಹಿಕ) ಸೇವಾರ್ಥದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ, ರಶೀದಿ ಪಡೆದುಕೊಳ್ಳಬಹುದು ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಅವರು ತಿಳಿಸಿದ್ದಾರೆ.


ಶಿವರಾತ್ರಿ ಹಬ್ಬದ ಪ್ರಯುಕ್ತ ಇದೇ ಫೆಬ್ರವರಿ 12 ರಂದು ಸಂಜೆ 5 ಗಂಟೆಗೆ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಅಂದು(ಫೆ.12) ಸಂಜೆ 5 ಗಂಟೆಗೆ ಭಕ್ತಾಧಿಗಳ ದರ್ಶನಕ್ಕೆ ಅವಕಾಶ ಇರುವುದಿಲ್ಲ, ಸಾರ್ವಜನಿಕರು ಸಹಕರಿಸಬೇಕಾಗಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಕೋರಿದ್ದಾರೆ.

Continue Reading

Trending

error: Content is protected !!