Mandya
ಪ್ರತಿಯೊಬ್ಬರೂ ನೈತಿಕ ಮತದಾನ ಮಾಡಿ: ಶೇಕ್ ತನ್ವೀರ್ ಆಸಿಫ್
ಶ್ರೀರಂಗಪಟ್ಟಣ: ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಸಂಬಂಧ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ದೇಶದ ಹಬ್ಬವಾದ ಅಂದು ಪ್ರತಿಯೊಬ್ಬರು ಯಾವುದೇ ಆಸೆ – ಆಮೀಷಗಳಿಗೆ ಒಳಗಾಗದೇ, ಮತಗಟ್ಟೆಗೆ ಬಂದು ನೈತಿಕ ಮತದಾನ ಮಾಡಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ತಿಳಿಸಿದರು.
ಅವರು ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿರುವ ಮಹಾರಾಜ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಶ್ರೀರಂಗಪಟ್ಟಣ ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಯುವ ಮತದಾರರ ವಿಶೇಷ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾನವೆಂಬುದು ಎಲ್ಲರ ಪ್ರಮುಖ ಹಕ್ಕಾಗಿದ್ದು, ಇನ್ನೊಬ್ಬರನ್ನು ನೋಡಿ ಮತ ಹಾಕದೇ, ಉತ್ತಮ ಭವಿಷ್ಯ ನಿರ್ಮಾಣ ಮಾಡುವಂತಹ ಹಾಗೂ ನಿಮಗೆ ಸೂಕ್ತವೆನಿಸಿದವರಿಗೆ ಮತದಾನ ಮಾಡುವ ಮೂಲಕ ಲೋಕಸಭಾ ಚುನಾವಣಾ ಹಬ್ಬದಲ್ಲಿ ಭಾಗಿಯಾಗಿ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಸಂಜೀವಪ್ಪ, ಶ್ರೀರಂಗಪಟ್ಟಣ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ವೇಣು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mandya
ಮಂಡ್ಯ ಪೋಲೀಸರಿಂದ 17 ಕೆಜಿ ಮಾದಕ ವಸ್ತು ನಾಶ
ಮಂಡ್ಯ: ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಎನ್.ಡಿ.ಪಿ.ಎಸ್ ಕಾಯ್ದೆಯಡಿ 2024 ಮತ್ತು 2025 ನೇ ಇಸವಿಯ ಈವರೆಗೆ ವರದಿಯಾಗಿದ್ದ 19 ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡು ಸುಮಾರು 3,60,460 ರೂ. ಮೌಲ್ಯದ 17 ಕೆ.ಜಿ 613 ಗ್ರಾಂ. ಗಾಂಜಾವನ್ನು ನಾಶಪಡಿಸಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು Drug Disposal Committee ವತಿಯಿಂದ ನಾಶಪಡಿಸಿದ್ದಾರೆ.
ಮಂಡ್ಯ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿ ಮುಖಾಂತರ ನಾಶಪಡಿಸಲು ನ್ಯಾಯಾಲಯವು ಆದೇಶಿಸಿ ಸಮಿತಿಗೆ ನೀಡಿತ್ತು. ಅದರಂತೆ ಒಟ್ಟು 17 ಕೆ.ಜಿ 613 ಗ್ರಾಂ ಮಾದಕ ವಸ್ತು(ಗಾಂಜಾ)ವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು Drug Disposal Committee ಮಂಡ್ಯ ಜಿಲ್ಲೆ ಅಧ್ಯಕ್ಷ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ನಿಯಮಾನುಸಾರ ಬುಧವಾರ (ಜ.22) ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಗುಚ್ಚೇನಹಳ್ಳಿ ಗ್ರಾಮದ M/S GIPS Bio-Tech Incinerator waste management ನಲ್ಲಿ ನಾಶಪಡಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Mandya
ಜ. 24 ರಿಂದ 28 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ : ಶೇಖ್ ತನ್ವೀರ್ ಅಸೀಫ್
ಮಂಡ್ಯ : ಜಿಲ್ಲಾ ಪಂಚಾಯತ್, ತೋಟಗಾರಿಕಾ ಸಂಘ, ತೋಟಗಾರಿಕೆ ಇಲಾಖೆ ಇವರ ಸಹಯೋಗದಲ್ಲಿ “ಪ್ರತಿ ತುತ್ತಿಗೂ ರೈತರನ್ನು ಸ್ಮರಿಸೋಣ” ಎಂಬ ಶೀರ್ಷಿಕೆಯಡಿ ಜನವರಿ 24 ರಿಂದ 28 ರವರೆಗೆ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ-2025 ಉದ್ಘಾಟನಾ ಕರರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತಿಳಿಸಿದರು.
ತೊಟಗಾರಿಕೆ ಇಲಾಖೆ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ದಿನಗಳ ಕಾಲ ನಡೆಯುವ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ರೈತರು, ಸಾರ್ವಜನಿಕರು, ನಾಗರೀಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಫಲಪುಷ್ಪ ಪ್ರದರ್ಶನ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ತೋಟಗಾರಿಕೆ ಕಚೇರಿ ಆವರಣ ಹಾಗೂ ಕಾವೇರಿ ಉದ್ಯಾನವನದಲ್ಲಿ ಮನಸೂರೆಗೊಳ್ಳುವ ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಫಲಪುಷ್ಪ ಪ್ರದರ್ಶನದಲ್ಲಿ ನೀಡಲಾಗುವುದು ಎಂದರು.
ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತ ಎಂದರು.
ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರಿ ಕೆ.ಎನ್., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಬಿ.ಎನ್.ಸುವೇದ, ಜಿಲ್ಲಾ ತೋಟಗಾರಿಕೆ ಸಂಘದ ಜಂಟಿ ಕಾರ್ಯದರ್ಶಿ ಎಸ್.ಪಿ.ಶ್ರೀಧರ್ ಹಾಗೂ ನಿರ್ದೇಶಕರಾದ ಎಂ.ಆರ್.ಅರವಿಂದ್ ಉಪಸ್ಥಿತರಿದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.
ಜಿಲ್ಲಾಧಿಕಾರಿಗಳಿಗೆ 2024- 25 ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆಯಲಿದೆ.
ಈ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Chamarajanagar20 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan22 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State15 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
Chamarajanagar11 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
National - International14 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Hassan17 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
Kodagu11 hours ago
ಸಾರ್ವಜನಿಕರಿಗೆ ಪಂಗನಾಮ ಹಾಕಿದ್ದ ಫರ್ನೀಚರ್ ಅಂಗಡಿ ಮಾಲೀಕನ ಬಂಧನ
-
National - International12 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ