Connect with us

Chamarajanagar

ವಿದುರಾಶ್ವತ್ಥ ನಡಿಗೆ ಶಿಬಿರದಲ್ಲಿ ಭಾಗವಹಿಸಿದ್ದ ರೇಂಜರ್ಸ್ ವಿದ್ಯಾರ್ಥಿನಿಯರಿಗೆ ಅಭಿನಂದನೆ

Published

on

ಚಾಮರಾಜನಗರ: ಸೆ.15ರಿಂದ 19ರವರೆಗೆ ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಂಸ್ಥೆಗಳ ಆಶ್ರಯದಲ್ಲಿ ಕೇಂದ್ರ ಕಚೇರಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಯವರೆಗೆ ನಡೆದ ರಾಜ್ಯಮಟ್ಟದ “ವಿದುರಾಶ್ವತ್ಥ ನಡಿಗೆ – ಸ್ವಾತಂತ್ರ್ಯ ಸೇನಾನಿಗಳಿಗೆ ನಮನ” ಶಿಬಿರದಲ್ಲಿ ಭಾಗವಹಿಸಿ ಮರಳಿದ ಜೆಎಸ್ಎಸ್ ಮಹಿಳಾ ಕಾಲೇಜಿನ ರೇಂಜರ್ಸ್ ಘಟಕದ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರೇಂಜರ್ಸ್ ಘಟಕದ ಹೊನ್ನಮ್ಮ, ಮಾನಸ ಬಿ.ಎಸ್. ಮತ್ತು ಶ್ವೇತಾ ಎಸ್. ಅವರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಪ್ರಭು, ಸಂಚಾಲಕಿ ಸಿ. ರೂಪಶ್ರೀ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.

Continue Reading

Chamarajanagar

ಸೆ. 26ರಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಪ್ರಜಾಸೇವೆ ಆಂದೋಲನ ಸಭೆ

Published

on

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಹಾಗೂ ಇತರೆ ಎಲ್ಲಾ ಇಲಾಖೆಗಳ ಸಂಬಂಧ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ತಾಲೂಕುಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಕಾರ್ಯಕ್ರಮವನ್ನು ಸೆ. 26ರಂದು ಬೆಳಿಗ್ಗೆ 11 ಗಂಟೆಗೆ ಯಳಂದೂರು ತಾಲೂಕಿನ ಅಗರ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಯಾವುದೇ ಇಲಾಖೆಯ ಕುಂದು ಕೊರತೆಗಳಿದ್ದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಗದಿತ ಕೌಂಟರ್‍ ಗಳಲ್ಲಿ ನೋಂದಾಯಿಸಿಕೊಂಡು ಲಿಖಿತವಾಗಿ ಅಹವಾಲು ಅರ್ಜಿಗಳನ್ನು ಸಲ್ಲಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಕಾರು–ಲಾರಿ ಮುಖಾಮುಖಿ ಡಿಕ್ಕಿ: ಮಹಿಳೆ ಸಾ*ವು, ನಾಲ್ವರಿಗೆ ಗಾಯ

Published

on

ಗುಂಡ್ಲುಪೇಟೆ: ತಾಲೂಕಿನ ಮದ್ದಯ್ಯನಹುಂಡಿ ಮತ್ತು ಕಣ್ಣೇಗಾಲ ಗೇಟ್ ನಡುವಿನ ಗುಂಡ್ಲುಪೇಟೆ–ಸುಲ್ತಾನ್ ಬತ್ತೇರಿ ರಸ್ತೆಯಲ್ಲಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.


ಕೇರಳದ ಪಾಲಕ್ಕಾಡ್ ಜಿಲ್ಲೆಯ ಮನ್ನಾರ್‌ಕಾಡ್ ನಿವಾಸಿ ನಬೀಲ್ ಮೊಹಮ್ಮದ್ ಎಂಬುವರು ತಮ್ಮ ಪತ್ನಿ ಲಿಸನಾ ಹಾಗೂ ಸಂಬಂಧಿಕರಾದ ಸಬೀತ್, ಅವರ ಪತ್ನಿ ನಸೀಬಾ ಮತ್ತು ಮಕ್ಕಳಾದ ವಿಜಿನ್ ಜಹಾನ್ ಹಾಗೂ ಎಮಿನಾ ಜಹಾನ್ ಅವರೊಂದಿಗೆ ಕಾರಿನಲ್ಲಿ ಗುಂಡ್ಲುಪೇಟೆಗೆ ಪ್ರವಾಸಕ್ಕೆ ಬರುತ್ತಿದ್ದರು.

ಸಂಜೆ ಸುಮಾರು 4 ಗಂಟೆಗೆ ಮದ್ದಯ್ಯನಹುಂಡಿ–ಕಣ್ಣೇಗಾಲ ಗೇಟ್ ನಡುವಿನ ರಸ್ತೆಯಲ್ಲಿ ಕಾರು ತೆರಳುತ್ತಿದ್ದಾಗ, ಎದುರಿನಿಂದ ಬಂದ ಲಾರಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಲಿಸನಾ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಿನ್ ಜಹಾನ್, ಎಮಿನಾ ಜಹಾನ್, ನಸೀಬಾ ಹಾಗೂ ಕಾರಿನ ಚಾಲಕ ನಬೀಲ್ ಮೊಹಮ್ಮದ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕರ ನೆರವಿನಿಂದ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮೃತದೇಹವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಘಟನೆ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಕೋರ್ಟ್ ರಸ್ತೆಯಲ್ಲಿ ಅನಧಿಕೃತ ಪೆಟ್ಟಿಗೆ ಅಂಗಡಿ ತೆರವು

Published

on

ಗುಂಡ್ಲುಪೇಟೆ: ಪಟ್ಟಣದ ಕೋರ್ಟ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುವಂತೆ ಅಳವಡಿಸಲಾಗಿದ್ದ ಅನಧಿಕೃತ ರೆಡಿಮೇಡ್ ಕಬ್ಬಿಣದ ಪೆಟ್ಟಿಗೆ ಅಂಗಡಿಯನ್ನು ಪುರಸಭೆ ಅಧಿಕಾರಿಗಳು ಬುಧವಾರ ಬೆಳಗ್ಗೆ ಕ್ರೇನ್ ಮೂಲಕ ತೆರವುಗೊಳಿಸಿದರು.


ಕೋರ್ಟ್ ರಸ್ತೆ ಬದಿಯಲ್ಲಿ ಅನುಮತಿ ಪಡೆಯದೆ ರಾತ್ರೋರಾತ್ರಿ ಕಬ್ಬಿಣದ ಪೆಟ್ಟಿಗೆಯನ್ನು ಅಳವಡಿಸಿ ಅಂಗಡಿ ಆರಂಭಿಸಲು ಸಿದ್ಧತೆ ನಡೆಸಲಾಗಿತ್ತು. ಈ ಕುರಿತು ಸಾರ್ವಜನಿಕರಿಂದ ಪುರಸಭೆಗೆ ದೂರುಗಳು ಬಂದ ಹಿನ್ನೆಲೆಯಲ್ಲಿ, ಮುಖ್ಯಾಧಿಕಾರಿ ಶರವಣ ಎಸ್. ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅನಧಿಕೃತ ಬಂಕ್‌ ಅನ್ನು ತೆರವುಗೊಳಿಸಿ ಜಪ್ತಿ ಮಾಡಿದರು.

ಸಾರ್ವಜನಿಕ ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಅನಧಿಕೃತವಾಗಿ ಅಂಗಡಿ ಅಥವಾ ಇತರೆ ನಿರ್ಮಾಣಗಳನ್ನು ಅಳವಡಿಸಿದರೆ ಮುಲಾಜಿಲ್ಲದೆ ತೆರವುಗೊಳಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಇಂಜಿನಿಯರ್ ಮಂಜುನಾಥ್, ಮಹೇಶ್, ಹಿರಿಯ ಆರೋಗ್ಯ ನಿರೀಕ್ಷಕ ಪರಮೇಶ್, ಮೇಲ್ವಿಚಾರಕರಾದ ಸಿದ್ದರಾಜು, ಮೂರ್ತಿ, ಬಿಲ್ ಕಲೆಕ್ಟರ್‌ಗಳಾದ ಪುಟ್ಟಸ್ವಾಮಿ, ರವಿ, ರಮೇಶ್ ಸೇರಿದಂತೆ ಪೌರಕಾರ್ಮಿಕರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

Trending

error: Content is protected !!