Connect with us

Uncategorized

ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ‌ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ

Published

on

ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ‌ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ರೂವಾರಿಗಳಿಗೆ ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ, ನೆಲಯೋಗಿ ಸಮಾಜಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಸುರೇಶ್‌ಕಂಠಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭವು ಜನವರಿ ೨೬ರ ಸಂಜೆ.೦೬ಕ್ಕೆ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ, ಅಭಿನಂದಿತರನ್ನು ಅಭಿನಂದಿಸುವರು ಎಂದು ಹೇಳಿದರು.

ಅಭಿನಂದಿತರಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ.ರಮೇಶ್‌ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ.ಮಂಜು, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ, ಸಮ್ಮೇಳನದ ಸಂಚಾಲಕರಾಗಿದ್ದ ಡಾ.ಮೀರಾ ಶಿವಲಿಂಗಯ್ಯ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಸಂಚಾಲಕ ಕೆ.ಹೆಚ್.ಲವ, ಕಾಂಗ್ರೆಸ್ ಪರಿಶಿಷ್ಠ ಜಾತಿ ರಾಜ್ಯ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಮುಖಂಡ ಮಹದೇವು, ವೀಣಾ ಶಂಕರ್, ಶ್ರೀಧರ್ ಉಪಸ್ಥಿತರಿದ್ದರು.

Continue Reading

Uncategorized

ಸಮಾಜ ಕಲ್ಯಾಣ ಇಲಾಖೆಯ ಹಲವು ಯೋಜನೆಗಳಿಗಾಗಿ ಅರ್ಜಿ ಅಹ್ವಾನ : ರೈತರಿಗೆ ಬಂಪರ್ ಆಫರ್

Published

on

Government schemes for SC/ST Farmers : ಸಮಾಜ ಕಲ್ಯಾಣ ಇಲಾಖೆಯಿಂದ ರೈತರಿಗಾಗಿ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಿಗಾಗಿ ಸಂಬಂದಿಸಿದ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.


ಯಾವೆಲ್ಲಾ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ?

1. ಭೂ ಒಡೆತನ ಯೋಜನೆ
2. ಗಂಗಾ ಕಲ್ಯಾಣ ಯೋಜನೆ
3. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ
4. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳು

1. ಭೂ ಒಡೆತನ ಯೋಜನೆ : ಈ ಯೋಜನೆಯನ್ನು ಭೂ ರೈತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಜಾರಿಗೆ ತಂದಿದ್ದು, ಅಂತವರಿಗಾಗಿ ಕೃಷಿ ಜಮೀನು ಖರೀದಿಸಲು ಶೇಕಡ 50ರಷ್ಟು ಹಣವನ್ನು ಸಹಾಯಧನ ರೂಪದಲ್ಲಿ ಮತ್ತು ಶೇಕಡ 50ರಷ್ಟು ಹಣವನ್ನು ಸಾಲದ ರೂಪದಲ್ಲಿ ನಿಗಮದಿಂದ ನೀಡಲಾಗುತ್ತದೆ.

2. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗದ ರೈತರಿಗೆ ನಮ್ಮ ಕೃಷಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿಕೊಳ್ಳಲು ಹಾಗೂ ಅದಕ್ಕೆ ಬೇಕಾಗಿರುವಂತಹ ವಿದ್ಯುತ್ ಪಂಪ್ ಸೆಟ್ಟುಗಳನ್ನು ಅಳವಡಿಸಿಕೊಳ್ಳಲು ನಿಗಮದಿಂದ ಸಹಾಯಧನ ನೀಡಲಾಗುತ್ತದೆ.

3. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ : ಇದರ ಅಡಿಯಲ್ಲಿ ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರೈಲರ್ ಮೊಬೈಲ್ ಕಿಚನ್ ಫುಡ್ ಹಾಗೂ ಹೈನುಗಾರಿಕೆ ಸರ್ಕಾರವು ಸಹಾಯದ ನೀಡುತ್ತಿದೆ.

4. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ : ಈ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಸ್ವಯಂ ಉದ್ಯೋಗ ಆರಂಭಿಸಲು ಆರ್ಥಿಕ ಸಹಾಯಧನ ನೀಡುತ್ತದೆ ಮತ್ತು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕಿನಿಂದ ಸಾಲ ಪಡೆಯಲು ಸಹಾಯಮಾಡುತ್ತದೆ.

ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10ನೇ ಸೆಪ್ಟೆಂಬರ್ 2025

Continue Reading

Uncategorized

ಧರ್ಮಸ್ಥಳ ಪ್ರಕರಣದಲ್ಲಿ ಉತ್ಖನನ: 15ನೇ ಸ್ಥಳದಲ್ಲಿ ಸಿಗದ ಕಳೇಬರ, ಬರಿಗೈಯಲ್ಲಿ ವಾಪಾಸ್‌ ಆದ SIT

Published

on

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತಂಡ ಸಾಕ್ಷಿ ದೂರುದಾರ ಸೂಚಿಸಿದ ಹೊಸ ಸ್ಥಳವಾದ 15ನೇ ಸ್ಥಳದಲ್ಲಿ ಶುಕ್ರವಾರ ಶೋಧ ಕಾರ್ಯ ನಡೆದಿದ್ದು, ಯಾವುದೇ ಕಳೇಬರ ಸಿಗದಿರುವ ಕಾರಣ ಎಸ್‌ಐಟಿ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸ್‌ ಆಗಿದ್ದಾರೆ.

ಬೆಳ್ತಂಗಡಿಯ ಬೊಳಿಯಾರು ಎಂಬಲ್ಲಿನ ಗೋಂಕ್ರತಾರ್ ಎಂಬಲ್ಲಿಗೆ ಎಸ್ಐಟಿ ತಂಡ ದೂರುದಾರನೊಂದಿಗೆ ಆಗಮಿಸಿದ್ದಾರೆ.

ಈ ಹೊಸ ಸ್ಥಳಕ್ಕೆ ಸಾಕ್ಷಿದೂರುದಾರನೊಂದಿಗೆ ಎಸ್ಐಟಿ ತಂಡ ಬೆಳಗ್ಗೆ 12.30ಗೆ ಬಂದಿದ್ದಾರೆ. ಸಂಜೆ 6ಗಂಟೆವರೆಗೆ ಶೋಧ ಕಾರ್ಯ ನಡೆಸಿದರೂ ಯಾವುದೇ ಕಳೆಬರ ಸಾಕ್ಷಿ ದೊರೆತಿಲ್ಲ. ಈ ಮೂಲಕ‌ 15ನೇ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಿ ಎಸ್ಐಟಿ ತಂಡ ಅಲ್ಲಿಂದ ತೆರಳಿದೆ.

Continue Reading

Uncategorized

ನಾಪೋಕ್ಲುವಿನ ಬೇತು ಹಾಗೂ ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಸ್ತನ್ಯಪಾನ ಕಾರ್ಯಕ್ರಮ

Published

on

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಹಾಗೂ ಇಂದಿರಾನಗರದ ಅಂಗನವಾಡಿ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಇಂದಿರಾನಗರದ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎದೆಹಾಲಿನ ಮಹತ್ವದ ಬಗ್ಗೆ ಹಾಗೂ ಅರೋಗ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.


ಬೇತು ಹಾಗೂ ಇಂದಿರಾನಗರದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಆಶಾ ಹಾಗೂ ಸೀಮಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ನಡೆಸಲಾಯಿತು.

ಈ ಸಂದರ್ಭ ಕಾರ್ಯಕ್ರಮ ದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳಾದ ಯಮುನ, ರೋಜಾ, ಆಶಾ ಕಾರ್ಯಕರ್ತೆಯರಾದ ಗಾಯತ್ರಿ,ಬಿನಿಷ, ಸೈನಾಝ್ ಬಾನು, ಸಹಾಯಕಿಯರಾದ ಸುಶೀಲಾ, ಅಂಗನವಾಡಿ ವ್ಯಾಪ್ತಿಯ ಗರ್ಭಿಣಿ ಬಾಣಂತಿಯರು, ಪೋಷಕರು ಮಕ್ಕಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Continue Reading

Trending

error: Content is protected !!