Connect with us

Mandya

ಎಐಸಿಸಿ ರಾಹುಲ್‌ ಗಾಂಧಿ ಅಬ್ಬರದ ಪ್ರಚಾರ – ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕುಟುಂಬದ ಮಹಿಳೆಯೊಬ್ಬರಿಗೆ 1 ಲಕ್ಷ ಘೋಷಣೆ

Published

on

ಮಂಡ್ಯ: ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಕುಟುಂಬದ ಮಹಿಳೆಯೊಬ್ಬರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವುದಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಘೋಷಿಸಿದರು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ವರ್ಷಕ್ಕೆ ಕುಟುಂಬದ ಮಹಿಳೆಯೊಬ್ಬರಿಗೆ ನೀಡುತ್ತಿರುವ 24 ಸಾವಿರದ ಜೊತೆಗೆ ಕೇಂದ್ರದಿಂದ ಪ್ರತಿ ವರ್ಷಕ್ಕೆ 1 ಲಕ್ಷ ನೀಡುತ್ತೇವೆ. ಇದರೊಂದಿಗೆ 1.24 ಲಕ್ಷ ನಿಮ್ಮದಾಗಲಿದೆ ಎಂದರು.
ಕೆಲವೇ ಕೆಲವರ ಏಳಿಗೆಗಾಗಿ ನರೇಂದ್ರ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಆದರೆ ಕಾಂಗ್ರೆಸ್‌ ಎಲ್ಲ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಕೆಲಸ ಮಾಡುತ್ತಿದೆ. ಆದ್ದರಿಂದ ಕಾಂಗ್ರೆಸ್‌ ಬೆಂಬಲಿಸಿ ಎಂದು ಮನವಿ ಮಾಡಿದರು.

ಕನ್ಯಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೆ ಪಾದಯಾತ್ರೆ ನಡೆಸಿದ ವೇಳೆ ರೈತರ ಸಂಕಷ್ಟ ಏನೆಂಬುದನ್ನು ಅರಿತಿದ್ದೇನೆ. ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ನರೇಂದ್ರ ಮೋದಿ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ರೈತರು ಹೇಳಿಕೊಂಡಿದ್ದಾರೆ. ಶ್ರೀಮಂತರ ಸಾಲ ಮನ್ನಾ ಮಾಡುವ ನರೇಂದ್ರ ಮೋದಿ ರೈತರ ಸಾಲವನ್ನು ಏಕೆ ಮನ್ನಾ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ ಎಂದರು. ಇದಕ್ಕೆಲ್ಲ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ, ಗ್ರಾಮೀಣ ಪ್ರದೇಶಗಳಿಗೆ ಸೀಮಿತವಾಗಿರುವ ನರೇಗಾ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಿ ಕೂಲಿಯನ್ನು 400 ರೂ. ಗೆ ಏರಿಸಲು ಚಿಂತನೆ ನಡೆಸಲಾಗಿದೆ. ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಿ ಖಾಯಂಗೊಳಿಸುತ್ತೇವೆ. ನಿರುದ್ಯೋಗ ಪದವೀಧರರಿಗೆ ಉದ್ಯೋಗ ನೀಡಲು ಮೊದಲ ಆದ್ಯತೆ ನೀಡುತ್ತೇವೆ ಎಂದರು.

ಚುನಾವಣಾ ಬಾಂಡ್ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈ ನಡುಕ :
ರಾಹುಲ್ ಗಾಂಧಿ
ದೇಶದಲ್ಲಿ ನಡೆದಿರುವ ಚುನಾವಣಾ ಬಾಂಡ್ ಭ್ರಷ್ಟಾಚಾರ ವಿಶ್ವದಲ್ಲಿಯೇ ನಡೆದಿರುವ ದೊಡ್ಡ ಹಗರಣವಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಹುದೊಡ್ಡ ಹಗರಣದ ಸಮರ್ಥನೆಗೆ ಮುಂದಾಗಿದ್ದು ಇಷ್ಟು ಪ್ರಮಾಣದ ಹಣ ಎಲ್ಲಿಂದ ಬಂತು ಎಂಬುದನ್ನು ನರೇಂದ್ರ ಮೋದಿ ಸ್ಪಷ್ಟಪಡಿಸಲಿ ಎಂದು ಎಐಸಿಸಿ ಉಪಾಧ್ಯಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು.

ಚುನಾವಣಾ ಬಾಂಡ್ ಹಗರಣದ ಬಗ್ಗೆ ಮಾಧ್ಯಮ ಸಂವಾದದಲ್ಲಿ ಸಮರ್ಥನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕೈ ನಡುಗುತ್ತಿತ್ತು ಇದರಿಂದಲೇ ಗೊತ್ತಾಗಲಿದೆ ಇದೊಂದು ಎಷ್ಟು ದೊಡ್ಡ ಹಗರಣ ಎಂಬುದು ಎಂದರು.
ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದು ಬಾಂಡ್ಗಳನ್ನೆಲ್ಲ ರದ್ದು ಮಾಡಿ ಎಂದು ಹೇಳಿದ್ದಾರೆ. ಈ ಬಾಂಡ್‌ಗಳಿಗೆ ಎಲ್ಲಿಂದ ಹಣ ಬಂದಿದ್ದು, ಹಣ ಪಡೆಯಲು ಕಾರಣ ಏನು ಎಂಬುದನ್ನು ದೇಶದ ಜನತೆಗೆ ಸಾರ್ವತ್ರಿಕವಾಗಿ ತಿಳಿಸಿ ಎಂದು ಹೇಳಿದೆ ಅಷ್ಟರ ಮಟ್ಟಿಗೆ ಕೋಟ್ಯಾಂತರ ಹಣ ಬಿಜೆಪಿ ಪಕ್ಷಕ್ಕೆ ಬಾಂಡ್ ಮೂಲಕ ಹರಿದು ಬಂದಿದೆ ಎಂದರು.
ವಿವಿಧ ಕಂಪನಿಗಳಿಗೆ ಗುತ್ತಿಗೆ ಕಾಮಗಾರಿಯ ಕಾರ್ಯಾದೇಶ ನೀಡಿದ ಬೆನ್ನಲ್ಲೇ ಚುನಾವಣಾ ಬಾಂಡ್ ಮೂಲಕ ಹಣ ಹರಿದು ಬಂದಿದೆ, ಮತ್ತೊಂದಡೆ ಭ್ರಷ್ಟಾಚಾರ ನಿರ್ಮೂಲನೆ ನೆಪದಲ್ಲಿ, ಐಟಿ, ಇ ಡಿ ಹಾಗೂ ಸಿಬಿಐ ದಾಳಿ ಮೂಲಕ ಬೆದರಿಕೆ ಮಾಡಿ ವಸೂಲಿ ಮಾಡಲಾಗಿದೆ, ಹಣ ಬಂದ ನಂತರ ಪ್ರಕರಣಗಳು ರದ್ದಾದ ನಿದರ್ಶನಗಳು ಇವೆ ಇಷ್ಟೇ ಅಲ್ಲದೆ ಗೂಂಡಾಗಿರಿ ಮಾದರಿಯಲ್ಲಿ ಹೆದರಿಸಿ ಬೆದರಿಸಿ ವಸೂಲಿ ಮಾಡಲಾಗಿದೆ, ಈ ಎಲ್ಲಾ ಕಾರಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ಕೈ ನಡುಗುತ್ತಿತ್ತು ಎಂದು ಹೇಳಿದರು.

ಮಾಧ್ಯಮಗಳು ಸಹ ಬಹುದೊಡ್ಡ ಹಗರಣದ ಬಗ್ಗೆ ವಾಸ್ತವಂಶವನ್ನು ಜನರ ಮುಂದಿಡಲು ವಿಫಲವಾಗಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷದ ಬಿ ಟೀಮ್ ಜಾತ್ಯತೀತ ಜನತಾದಳ ಎಂದು ಈ ಹಿಂದೆ ಹೇಳಿದ್ದೆ ಆದರೆ ಇದೀಗ ಎ ಟೀಮ್ ನೊಂದಿಗೆ ಬಿಟೀಮ್ ವಿಲೀನವಾಗಿದೆ ಎಂದು ಲೇವಡಿ ಮಾಡಿದರು.
ಕರ್ನಾಟಕದಲ್ಲಿ 5 ಗ್ಯಾರಂಟಿಗಳು ಜಾರಿಯಾಗಿ ಕೋಟ್ಯಂತರ ಕುಟುಂಬಗಳಿಗೆ ಅನುಕೂಲವಾಗಿದ್ದು ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಿನ ಅನುಕೂಲ ದೊರಕಿಸಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳು ದೊರಕಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇ ಗೌಡ, ಸಚಿವ ಚೆಲುವರಾಯಸ್ವಾಮಿ ಮಂಡ್ಯ ಜಿಲ್ಲೆಯ ಶಾಸಕರು, ಹಲವು ಮುಖಂಡರು ಹಾಜರಿದ್ದರು

Continue Reading
Click to comment

Leave a Reply

Your email address will not be published. Required fields are marked *

Mandya

ಮಂಡ್ಯ ವಿ.ವಿ.ಗೆ ಮಧು.ಜಿ.ಮಾದೇಗೌಡ ನೇಮಕ

Published

on

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಮಧು.ಜಿ.ಮಾದೇಗೌಡ ಅವರು ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ವ್ಯವಸ್ಥಾಪನಾ‌ ಮಂಡಳಿ ಹಾಗೂ ಸಲಹಾ ಸಮಿತಿಗೆ ಸದಸ್ಯರಾಗಿ ನಾಮನಿರ್ದೇಶನ ಗೊಂಡಿದ್ದಾರೆ.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಮನಿರ್ದೇಶನ ಮಾಡಿರುತ್ತಾರೆಂದು ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಈ ಕುರಿತು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Continue Reading

Mandya

ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಿ: ಶೇಖ್ ತನ್ವೀರ್ ಆಸಿಫ್

Published

on

ಮಂಡ್ಯ: 2024ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಬಹಳ ಅದ್ದೂರಿಯಾಗಿ ಕಾರ್ಯಕ್ರಮವನ್ನು ಆಚರಿಸಿ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್ ಅವರು ತಿಳಿಸಿದರು.

ಅವರು ಸುವರ್ಣ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ಪೂರ್ವ ಸಿದ್ಧತಾ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ತಿರಂಗಾ ಯಾತ್ರೆ ಮತ್ತು ಮ್ಯಾರಾಥಾನ್ ಕಾರ್ಯಕ್ರಮಗಳನ್ನು ಮಂಡ್ಯ ಜಿಲ್ಲೆ ಮತ್ತು ನಗರ ವ್ಯಾಪ್ತಿಯಲ್ಲಿ ಆಯೋಜಿಸಲು ನಗರಸಭೆ ಹಾಗೂ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿಗಳು, ಆಯುಕ್ತರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಎಲ್ಲಾ ಮುಖ್ಯಾಧಿಕಾರಿಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಹರ್ ಘರ್ ತಿರಂಗಾ ಅಭಿಯಾನದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಮಾಡಿ ಮನೆಗಳು, ಸರ್ಕಾರಿ ಕಛೇರಿಗಳು ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ರಾಷ್ಟ್ರಧ್ವಜವನ್ನು ನಿಯಮಾನುಸಾರ ಹಾರಿಸಬೇಕು.

ಸೂಚಿತ ವೆಬ್ ಸೈಟ್ hargartiranga.com ರಲ್ಲಿ ಸೆಲ್ಸಿಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ ಎಂದರು.

ಜಾಥಾ ಕಾರ್ಯಕ್ರಮ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ಪ್ರತಿ ಶಾಲಾ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸೈಕಲ್ ಜಾಥಾ/ಬೈಕ್, ಪಾರಂಪರಿಕ ನಡಿಗೆ ಹಾಗೂ ಗಾಳಿಪಟ ಹಾರಿಸುವ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಕ್ರಮವಹಿಸಿ. ಜೊತೆಗೆ ತಿರಂಗಾ ಸಂಗೀತಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಮುಖಾಂತರ ನಡೆಸಬೇಕು ಎಂದು ತಿಳಿಸಿದರು.

ಎಲ್ಲಾ ತಹಶೀಲ್ದಾರರು ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ಕುರಿತು ಜಿಲ್ಲೆಯಲ್ಲಿ ಹಾಲಿ ಜೀವಿತ ಸ್ವಾತಂತ್ರ್ಯ ಯೋಧರಿಗೆ ಮನೆಗೆ ತೆರಳಿ ಸನ್ಮಾನ ಮಾಡಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಹರ್ ಘರ್ ತಿರಂಗಾ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಪ್ರತಿಜ್ಞಾವಿಧಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ / ನಿಗಮ ಮಂಡಳಿ, ಪ್ರಾಧಿಕಾರ ಹಾಗೂ ಇತರ ಕಾರ್ಯಾಲಯಗಳು, ಶಾಲಾ ಕಾಜೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಬೇಕು ಎಂದರು.

ಸೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳ ತಂಡದಿಂದ ತಿರಂಗಯಾತ್ರೆ ನಡೆಸಬೇಕು ಎಂದರು.

ವಿವಿಧ ಸ್ಪರ್ಧೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಆಶುಭಾಷಣಾ ಸ್ಪರ್ಧೆ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ಸಂಬಂಧಿತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವೆಬ್ ಸೈಟ್:hargartiranga.com ರಲ್ಲಿ ಅಪ್ ಲೋಡ್ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಮಾದಕ ವ್ಯಸನಗಳ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಹಾಗೂ ಪ್ರತಿಜ್ಞಾವಿಧಿ ಬೋಧನೆ

Published

on

ಶ್ರೀರಂಗಪಟ್ಟಣ: ವಿದ್ಯಾರ್ಥಿಗಳು ಮಾದಕ ದ್ರವ್ಯ ವಸ್ತುಗಳಿಗೆ ಮಾರು ಹೋಗದೆ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಕರೆ ನೀಡಿದರು.

ಅವರು ಶ್ರೀರಂಗಪಟ್ಟಣದ ಕಾವೇರಿ ಪ್ರೌಢ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮದ್ಯಪಾನ, ಧೂಮಪಾನ,
ಗಾಂಜಾ, ಕೋಕೆನ, ಬ್ರೌನ್ ಶುಗರ್, ಅಫೀಮುಗಳಂತಹ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಹಾಗೂ ತಮ್ಮ ಪಾಲಕರೂ ಕೂಡ ದೂರವಿರಬೇಕು. ಇವುಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಜೊತೆಗೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಕೂತುಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯಗಳನ್ನು ಬಳಸಬಾರದು. ದೇಶದ ಯುವ ಜನತೆ ಮಾದಕ ವ್ಯಸನ ಎಂಬ ಜಾಲದಲ್ಲಿ ಸಿಕ್ಕಿ ನರಳುತ್ತಿದ್ದಾರೆ.

ಇತ್ತೀಚೆಗೆ ಯುವ ಸಮೂಹ ಮಾದಕವೆಂಬ ವಿಷ ವರ್ತುಲದಲ್ಲಿ ಭಾಗವಹಿಸುತ್ತಿದೆ. ಚಟಗಳು ಮೊದಲು ಸಂತೋಷ್ ನೀಡಿದರೂ, ನಂತರ ಮನಸ್ಸಿನ ನೆಮ್ಮದಿ ಹಾಗೂ ಆರೋಗ್ಯವನ್ನು ಹಾಳು ಮಾಡುತ್ತದೆ. ಕ್ಷಣಿಕ ಸುಖ ನೀಡುವ ಮೋಹಕ್ಕೆ ಬಿದ್ದು ಸುಂದರವಾದ ಜೀವನ ಹಾಳು ಮಾಡಿಕೊಳ್ಳುವದು ಬೇಡ. ಅಭ್ಯಾಸ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಬನ್ನಿ “ನಶಾ ಮುಕ್ತ ಮಂಡ್ಯ ಜಿಲ್ಲೆ” ನಿರ್ಮಾಣ ಮಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆ ಮಾಡದಿರವು ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲೆ ಜಯಶ್ರೀ ಎಂ, ಮುಖ್ಯ ಶಿಕ್ಷಕ ಮುದ್ದುರಾಜು, ಎನ್, ಸಹಶಿಕ್ಷಕರಾದ ಕುಮಾರಸ್ವಾಮಿ, ಮಂಜುನಾಥ, ಚಂದ್ರಶೇಖರ್, ದೈಹಿಕ ಶಿಕ್ಷಕ ಸಿ.ಆರ್.ಪಾಪಣ್ಣ, ಕಾಲೇಜು ಉಪನ್ಯಾಸಕರಾದ ಅಮ್ರಿನ ಆಲo, ಸರಿತ, ನಿರ್ಮಲ, ಶ್ರೀಶಾದಾಸ್ ಹಾಗೂ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ನಂತರ ಕಾಲೇಜು ಮಕ್ಕಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Continue Reading

Trending

error: Content is protected !!