Politics
ಕೈಹಿಡಿದ ಮತದಾರರು ಮುದುಡಿದ ಕಮಲ: ಬಿಜೆಪಿ ಭದ್ರಕೋಟೆ ಛಿದ್ರಗೊಳಿಸಿದ ಕೈಪಡೆ

ದಾವಣಗೆರೆ. ಜೂ.೪; ತೀವ್ರ ಕೂತೂಹಲ ಮೂಡಿಸಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಾಲಾಗಿದೆ.ಕಾಂಗ್ರೆಸ್ ನ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ 26,094 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ 633,059 ಮತ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ 606,965 ಮತಗಳಿದ್ದಾರೆ.
ಟಿಕೇಟ್ ಘೋಷಣೆಯಾದಾಗಿನಿಂದಲೂ ಗೆಲುವಿನ ಭರವಸೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕೊನೆಗೂ ಗೆದ್ದು ಬೀಗಿದ್ದಾರೆ.ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು ಆದರೆ ಈ ಬಾರಿ ಕಾಂಗ್ರೆಸ್ ಬಿಜೆಪಿಯ ಕ್ಷೇತ್ರವನ್ನು ಕಸಿದಿದೆ.ದಾವಣಗೆರೆಯಲ್ಲಿ ಈ ಬಾರಿಯೂ
ಬಿಜೆಪಿ ಪಾಲಾಗುತಿತ್ತು ಎನ್ನಲಾಗುತ್ತಿತ್ತು ಆದರೆ ಈ ಬಾರಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ದಾವಣಗೆರೆ ಜನತೆ ಜೈ ಎಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನುಡಿದಂತೆ ಗೆಲುವು ಪಡೆದಿದ್ದಾರೆ.
ಮತ ಎಣಿಕೆಯ ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಪಕ್ಷ ಕೊನೆಯ ಸುತ್ತಿನ ವರೆಗೂ ಮುನ್ನಡೆ ಸಾಧಿಸುತ್ತಲೇ ಬಂದಿತ್ತು. ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದು, ಮತದಾರ ಕೈ ಕೊರಳಿಗೆ ಜಯದಮಾಲೆ ಹಾಕಿದ್ದಾರೆ.
Mysore
ಬಿಡದಿ ಟೌನ್ ಶಿಪ್ ಎಚ್.ಡಿ.ಕುಮಾರಸ್ವಾಮಿ ಕಾಲದಲ್ಲೇ ನಿರ್ಧಾರವಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪತ್ರ ಬರೆದಿದ್ದಾರೆ. ಆದರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಬಿಡದಿಯಲ್ಲಿ 7 ಟೌನ್‌ಶಿಪ್ ಮಾಡಬೇಕೆಂದು ನಿರ್ಧಾರವಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಕಾಲದಲ್ಲೇ ಬಿಡದಿಯಲ್ಲಿ 7 ಟೌನ್ ಶಿಪ್ ಆಗಬೇಕೆಂದು ತೀರ್ಮಾನ ಆಗಿತ್ತು. ಅದಕ್ಕಾಗಿ 300 ಕೋಟಿ ಹಣ ನೀಡಿದ್ದರು. ಅದನ್ನು ಈಗ ನಾನು ಡೈನೋಟಿಫಿಕೇಶ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದರು, ಅದೆಲ್ಲ ಇತಿಹಾಸ ಎಂದು ತಿರುಗೇಟು ನೀಡಿದರು.
ಟೌನ್ ಶಿಪ್ ಪಿತಾಮಹ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರೇ. ಯಾರು ಏನೇ ಹೇಳಿದರು ನಮ್ಮ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತದೆ ಎಂದು ಹೇಳಿದರು.
ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಜಾಗವನ್ನು ತೆಗೆದುಕೊಳ್ಳಬಹುದು. ಈ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದರು. ಅವರ ಕಾಲದಲ್ಲಿ ಯಾಕೆ ರೈತರ ಭೂಮಿಯನ್ನು ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ ಎಂದು ಪ್ರಶ್ನಿಸಿದರು.
ಇನ್ನೂ ಈ ವಿಚಾರದಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಟಾಂಗ್ ನೀಡಿದರು.
ಕಾವೇರಿ ನಮ್ಮ ಜೀವನದಿ
ಕಾವೇರಿ ತಾಯಿಯ ಆರತಿ ಮಾಡಬೇಕು. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಸಂಬಂಧಿಸಿದಂತೆ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರದ ಒಪ್ಪಿಗೆ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ. ಯಾರ ವಿರುದ್ದವೂ ಮಾತನಾಡುವುದಿಲ್ಲ. ಇದು ರಾಜಕೀಯ ಮಾಡುವ ವಿಚಾರ ಅಲ್ಲ. ಯಾರು ಈ ವಿಚಾರದಲ್ಲಿ ಯಾರೂ ಕೂಡಾ ರಾಜಕೀಯ ಮಾಡಬಾರದು. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು.
ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ. ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದು ಹೇಳಿದರು.
ರಾಮನಗರ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕೆಂದು ಗೊತ್ತು ಮಾಡೇ ಮಾಡುತ್ತೇನೆ
ರಾಮನಗರ ಹೆಸರು ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಮನಗರ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕೆಂದು ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ? ಅಥವಾ ಅಸೂಯೆನಾ ಎಂಬ ಪ್ರಶ್ನೆ ಮೂಡುತ್ತದೆ. ಆದರೆ ಏನೋ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಇರಬೇಕು ಎಂದು ವ್ಯಂಗ್ಯ ಮಾಡಿದ್ದಾರೆ.
Chamarajanagar
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು(ಏಪ್ರಿಲ್.24) ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಅವರು ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗವಹಿಸಿದ್ದಾರೆ.
ಇನ್ನೂ ಮಲೆ ಮಹದೇಶ್ವರ ದೇವಾಲಯ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರಿಂದ ಬೆಳ್ಳಿ ರಥೋತ್ಸವದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ದಾರೆ.
Politics
ಮೋದಿ, ಅಮಿತ್ ಶಾ ಸೇಡಿನ ರಾಜಕಾರಣಕ್ಕೆ ರಾಹುಲ್ ವಿರುದ್ಧ ದೂರು ದಾಖಲಿಸಲಾಗಿದೆ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ.
-
State11 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Hassan4 hours ago
ಜಮೀನು ವಿಚಾಕ್ಕೆ ಕೊಲೆ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore11 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Kodagu7 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ
-
Kodagu8 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ