Connect with us

Kodagu

ಆನೆ ಚೌಕೂರು. ಗೇಟಿನಲ್ಲಿ ಕೊಡಗು ಮೈಸೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ರವರಿಗೆ ಭವ್ಯ ಸ್ವಾಗತ

Published

on

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ರವರನ್ನು ಇಂದು ಬೆಳಗ್ಗೆ ಆನೆ ಚೌಕೂರು ಗೇಟಿನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಇಬ್ಬರು ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭವ್ಯ ಸ್ವಾಗತವನ್ನು ನೀಡಿದರು.

ಮೈಸೂರಿನಿಂದ ಆಗಮಿಸಿದ ಲಕ್ಷ್ಮಣ್ ರವರನ್ನು ಶಾಲು ಹಾಗೂ ಹಾರ ಹಾಕುವ ಮೂಲಕ ಲೋಕಸಭಾ ಅಭ್ಯರ್ಥಿಯಾಗಿ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಸಂದರ್ಭ ಬರಮಾಡಿಕೊಳ್ಳಲಾಯಿತು.

ಜಿಲ್ಲೆಗೆ ಲಕ್ಷ್ಮಣ್ ಅವರನ್ನು ಸ್ವಾಗತಿಸಿ ಮಾತನಾಡಿದ ಶಾಸಕ ಎ. ಎಸ್. ಪೂನ್ನಣ್ಣನವರು ಮಾತನಾಡಿ ಇಂದಿನಿಂದ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸುತ್ತಿದ್ದೇವೆ ಮೊದಲಿಗೆ ಭಗಂಡೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ನಂತರ ತಲಕಾವೇರಿಯಲ್ಲಿ ಮಾತೆಕಾವೇರಿಗೆ ನಮಿಸಿ ಪೂಜಿಸಿ, ಮಾಜಿ ಯೋಧರಿಗೆ ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸಿ ಚುನಾವಣೆಗೆ ಅಣಿಯಾಗುತ್ತಿದ್ದೇವೆ ಎಂದರು. ಈ ಬಾರಿ ಲಕ್ಷ್ಮಣ್ ಗೌಡ ರವರ ಗೆಲುವು ನಿಶ್ಚಿತಎಂದು ಪೊನ್ನಣ್ಣನವರು ಸ್ಪಷ್ಟಪಡಿಸಿದರು.

ನಂತರ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕರಾದ ಮಂಥನಗೌಡರವರು ಕೊಡಗಿನ ಜನತೆ ನನ್ನನ್ನು ಹಾಗೂ ಪೊನ್ನಣ್ಣನವರನ್ನು ಕಳೆದ ಚುನಾವಣೆಯಲ್ಲಿ ಆರಿಸಿ ಕಳುಹಿಸಿದ್ದಾರೆ 10 ತಿಂಗಳ ನಮ್ಮ ಅಭಿವೃದ್ಧಿ ಕೆಲಸಗಳು ಗಮನಿಸಿ ಜನತೆ ಮತ ನೀಡುವಂತೆ ಕೋರಿಕೊಂಡರು. ಲಕ್ಷ್ಮಣ್ ಅವರ ಕಾರ್ಯಕ್ಷಮತೆ ಹಾಗೂ ಬದ್ಧತೆ, ಹಾಗೂ ಪಕ್ಷಕ್ಕಾಗಿ ಅವರ ತ್ಯಾಗವನ್ನು ಮನಗಂಡು ಅವರಿಗೆ ಟಿಕೆಟ್ ಅನ್ನು ಈ ಬಾರಿ ನೀಡಲಾಗಿದೆ ನಮ್ಮ ಚುನಾವಣೆಗಿಂತ ಇನ್ನೂ ಹೆಚ್ಚಾಗಿ ನಾವು ಕೆಲಸ ನಿರ್ವಹಿಸಿ ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು. ಕೊಡಗಿನ ಎರಡು ಕ್ಷೇತ್ರದಲ್ಲಿ ಅತ್ಯಧಿಕ ಮತವನ್ನು ನೀಡುತ್ತೇವೆ ಎಂದರು.

ನಂತರ ಮಾತನಾಡಿದ ಲಕ್ಷ್ಮಣ್ ರವರು ಕೊಡಗಿನಲ್ಲಿ 25 ವರ್ಷಗಳ ನಂತರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದ ಜನತೆ ಮುಕ್ತಿ ನೀಡಿದ್ದಾರೆ. ಕಳೆದ 10 ತಿಂಗಳಿಂದ ದಿನದ 24 ತಾಸು ಇಬ್ಬರು ಶಾಸಕರು ಅಭಿವೃದ್ಧಿ ಮಂತ್ರವನ್ನು ಜಪಿಸುತ್ತ ಇಡೀ ಕ್ಷೇತ್ರದಲ್ಲಿ 350 ಕೋಟಿಗಿಂತ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದ್ದಾರೆ, ಅವರೊಂದಿಗೆ ಕೆಲಸ ನಿರ್ವಹಿಸಲು ನನ್ನನ್ನು ಲೋಕಸಭಾ ಸದಸ್ಯನ್ನಾಗಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ಪಕ್ಷದ ರಾಜ್ಯ ಮುಖಂಡರಾದ ಚಂದ್ರಮೌಳಿ, ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಸಿಎಂರೊಂದಿಗೆ ಸಂವಾದ ನಡೆಸಿದ ಎ.ಎಸ್‌.ಪೊನ್ನಣ್ಣ

Published

on

ಬೆಳಗಾವಿ/ಮಡಿಕೇರಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಈ ಅಧಿವೇಶನದಲ್ಲಿ  ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದ್ದಾರೆ.

Continue Reading

Kodagu

ಅಂತರಾಷ್ಟ್ರೀಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ: ಮಡಿಕೇರಿಯ ಎಸ್.ಅನ್ವಿತ್  ಚಾಂಪಿಯನ್

Published

on

ಮಡಿಕೇರಿ: ಇತ್ತೀಚೆಗೆ ದುಬೈಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ 15ನೇ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅನ್ವಿತ್ ಎಸ್. ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ನಗರದ ಬ್ರೈನೋಬ್ರೈನ್ ಅಬಕಾಸ್ ಸಂಸ್ಥೆಯ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ಬಳಿ ಎಸ್.ಅನ್ವಿತ್  ತರಬೇತಿ ಪಡೆಯುತ್ತಿದ್ದಾನೆ. ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಅನ್ವಿತ್ ಸೇರಿದಂತೆ ಕರ್ನಾಟಕ ರಾಜ್ಯದ ಆರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುಮಾರು 16 ದೇಶಗಳ 1,800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮದೆನಾಡಿನ ಬಿಜಿಎಸ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿರುವ ಎಂಟು ವರ್ಷದ ಅನ್ವಿತ್ ಎಸ್. ಮದೆನಾಡು ಮದೆ ಮಹೇಶ್ವರ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ಶ್ರೀನಿವಾಸ ವಿ. ಹಾಗೂ ಪವಿತ್ರ ಎಂ.ಎನ್ ದಂಪತಿಯ ಪುತ್ರ.

ಬಹುಮಾನ ವಿತರಣಾ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಬ್ರೈನೋಬ್ರೈನ್ ಅಂತಾರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅವರು ಅನ್ವಿತ್ ಸಾಧನೆಯನ್ನು ಶ್ಲಾಘಿಸಿದರು.

ಮಾರ್ಗದರ್ಶಕಿ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅನ್ವಿತ್, ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಹೆಮ್ಮೆ ಎನಿಸಿದೆ. ತಂದೆ ತಾಯಿಗಳ ಸಹಕಾರದಿಂದ ಅನ್ವಿತ್ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದು, ಅಂತಾರಾಷ್ಟ್ರೀಯ ಮಟ್ಟದ ಯಶಸ್ಸು ಅವರ ಕುಟುಂಬದವರಿಗೆ ಸಲ್ಲಬೇಕು ಎಂದರು.

Continue Reading

Kodagu

ಶನಿವಾರಸಂತೆ – ಡಿ.10ಕ್ಕೆ ವಿದ್ಯುತ್ ವ್ಯತ್ಯಯ

Published

on

ಮಡಿಕೇರಿ : 66/11 ಕೆ.ವಿ ಶನಿವಾರಸಂತೆ ಮತ್ತು 66/11 ಕೆವಿ ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Continue Reading

Trending

error: Content is protected !!