Connect with us

Location

ಕಲುಷಿತ ಕಾಂಗ್ರೆಸ್‌ ಎಂದು ಕೈ ಪಕ್ಷದ ಮೇಲೆ ಕಿಡಿಕಾರಿದ ಜೆಡಿಎಸ್*

Published

on

*ಕಲುಷಿತ ಕಾಂಗ್ರೆಸ್‌ ಎಂದು ಕೈ ಪಕ್ಷದ ಮೇಲೆ ಕಿಡಿಕಾರಿದ ಜೆಡಿಎಸ್*

*ಹೆಚ್.ಡಿ.ಕುಮಾರಸ್ವಾಮಿ ನಿಂದನೆಯೇ ಕಾಂಗ್ರೆಸ್ಸಿಗೆ ಅಂಟಿದ ಬೇನೆ*

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ಶಾಲೆಗೆ ಭೇಟಿ ನೀಡಿದ್ದ ಘಟನೆಯನ್ನೇ ವಿರೂಪವಾಗಿ ಚಿತ್ರಿಸಲು ಯತ್ನಿಸಿದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ಕೊಟ್ಟಿದೆ.

 

ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಮಾಡಿದ್ದ ಟೀಕೆ ಪ್ರತ್ಯುತ್ತರ ನೀಡಿರುವ ಪಕ್ಷವು, ಆ ಪಕ್ಷವನ್ನು ಕಲುಷಿತ ಕಾಂಗ್ರೆಸ್ ಎಂದು ಕಿಡಿಕಾರಿದೆ.

 

ಕಲುಷಿತ ಮನಸ್ಸಿನ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ. ಹೆಚ್.ಡಿ.ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಹೌದು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಜೆಡಿಎಸ್ ಪ್ರಶ್ನಿಸಿದೆ.

 

ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ! ಎಂದು ಜೆಡಿಎಸ್ ಆಪಾದಿಸಿದೆ.

 

ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಹೇಳಿದೆ ಜೆಡಿಎಸ್.

Continue Reading
Click to comment

Leave a Reply

Your email address will not be published. Required fields are marked *

Hassan

ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು

Published

on

ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.


ಈ ಸಂದರ್ಭದಲ್ಲಿ  ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.

Continue Reading

Hassan

ಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ

Published

on

ಹಾಸನ: ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕಾರ, 2011 ರ ಜನಗಣತಿ ಆಧಾರದ ಮೇರೆಗೆ ಹಾಸನ ಮಹಾನಗರ ಪಾಲಿಕೆಗೆ ವಾರ್ಡ್‌ಗಳನ್ನು ಪುನರ್ ವಿಂಗಡಣೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಕರಡನ್ನು ಪ್ರಕಟಿಸಿದೆ.

ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದೆ ನಗರಸಭೆ ಅವಧಿಯಲ್ಲಿ ಇದ್ದಷ್ಟೇ ಅಂದರೆ 35 ವಾರ್ಡ್‌ಗಳೇ ಈಗಲೂ ಮುಂದುವರಿದಿವೆ.
ಆದರೆ ಹಾಸನ ಮಹಾನಗರ ಪಾಲಿಕೆಯಾದ ನಂತರ ಎಲ್ಲ 35 ವಾರ್ಡ್‌ಗಳ ವ್ಯಾಪ್ತಿ ಮತ್ತು ವಿಸ್ತೀರ್ಣ ಹಿಗ್ಗಿದೆ.

ಇದೀಗ ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದ ಗಡಿ ವ್ಯಾಖ್ಯಾನ(ಚೆಕ್ಕುಬಂದಿ) ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಹಾಸನ ಮಹಾನಗರ ಪಾಲಿಕೆಯ ಕರಡು ವಾರ್ಡ್‌ವಾರು ಕ್ಷೇತ್ರ ಪುನರ್‌ವಿಂಗಡಣಾ ಮಾಹಿತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ.


ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೧೫ ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಈ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು, ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು ಹಾಸನ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಬೇಕೆಂದು ಮಂಜುನಾಥ್ ಅವರು ಸೂಚಿಸಿದ್ದಾರೆ.

Continue Reading

Mysore

ರಾಜಕೀಯ ಪ್ರೇರಿತದಿಂದ ನೂತನ ಸಹಕಾರ ಸಂಘ ಸ್ಥಾಪನೆ: ಸತೀಶ್ ಆರೋಪ

Published

on

ಪಿರಿಯಾಪಟ್ಟಣ: ರಾಜಕೀಯ ಪ್ರೇರಿತದಿಂದ ಮತ್ತೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ ಹೊರತು ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲ್ಲ ಎಂದು ಕಸಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಆರೋಪಿಸಿದರು.

ಹಬಟೂರು ಗ್ರಾಮದ ಸಮುದಾಯ ಭವನದಲ್ಲಿ ಕರೆದಿದ್ದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ನಮ್ಮ ಸಂಘದಿಂದ ರೈತರಿಗೆ ವಿವಿಧ ರೀತಿಯ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಸಂಘವು ಉತ್ತಮವಾಗಿ ಲಾಭದತ್ತ ಸಾಗುತ್ತಿದೆ. ಆದರೆ ನಮ್ಮ ಸಂಘದ ವ್ಯಾಪ್ತಿಗೆ ಒಳಪಡುವ ಚೌತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಬಟ್ಟೂರು ಗ್ರಾಮದಲ್ಲಿ ನೂತನ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಈ ನೂತನ ಸಂಘದ ವ್ಯಾಪ್ತಿಗೆ ಒಳಪಡುವ ರೈತರು ಇನ್ನುಮುಂದೆ ಅದೇ ಸಂಘದಲ್ಲಿ ಸಾಲ ಪಡೆಯಬೇಕು ಹಾಗೂ ನಮ್ಮ ಸಂಘದಿಂದ ಅವರನ್ನು ಬಿಡುಗಡೆಗೊಳಿಸಬೇಕು ಎಂಬಂತೆ ಸಹಾಯಕ ನಿಬಂಧಕರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ನಮ್ಮ ಸಂಘವು ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯವು ಆದೇಶಕ್ಕೆ ತಡೆ ನೀಡಿದೆ ಎಂದು ತಿಳಿಸಿದರು.


ಆದ್ದರಿಂದ ನಮ್ಮ ಸಂಘದ ವ್ಯಾಪ್ತಿಗೆ ಒಳಪಡುವ ಬೂದಿತಿಟ್ಟು, ಹಬಟ್ಟೂರು, ಲಕ್ಷ್ಮೀಪುರ, ಹಬಟ್ಟೂರು ಕೊಪ್ಪಲು, ಅಂಕನಹಳ್ಳಿ ಕೊಪ್ಪಲು, ಜವರಿ ಕೊಪ್ಪಲು ಹಾಗೂ ಮಲ್ಲಯ್ಯನ ಕೊಪ್ಪಲು ಗ್ರಾಮಗಳ ರೈತರು ಯಾವುದೇ ಗೊಂದಲಕ್ಕೆ ಒಳಗಾಗದೆ, ಇದುವರೆಗೆ ವ್ಯವಹರಿಸುತ್ತಿದ್ದ ಸಂಘದಲ್ಲಿಯೇ ಸಾಲ ಪಡೆಯಬಹುದು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಮೇಗೌಡ, ಸದಸ್ಯರಾದ ಪಿ.ಕೆ. ಕುಮಾರ್, ಎಚ್‌.ಪಿ. ಸುರೇಶ್, ರಮೇಶ್, ರಾಮಕೃಷ್ಣ, ಜಮೀನ್, ಶೋಭಾ, ಗೀತಾ, ನಳಿನಿ,ವಿ. ಆರ್ ವೆಂಕಟೇಶ್, ಕರಿ ನಾಯ್ಕ, ಸೇರಿದಂತೆ ರೈತರು ಉಪಸ್ಥಿತರಿದ್ದರು.

Continue Reading

Trending

error: Content is protected !!