Connect with us

Chikmagalur

ವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್‌ ಮುಖಂಡ

Published

on

ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್‌ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್‌ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್‌ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Chikmagalur

ಯುವತಿ ಮೇಲೆ ದೇವಸ್ಥಾನದ ಅರ್ಚಕರಿಂದಲೇ ಅತ್ಯಾಚಾ*ರ

Published

on

ಚಿಕ್ಕಮಗಳೂರು: ಮದುವೆಗಾಗಿ ಯುವತಿಯೊಬ್ಬಳು ಜಾತಕ ತೋರಿಸಲು ಹೋಗಿದ್ದ ವೇಳೆ ದೇವಸ್ಥಾನದ ಅರ್ಚಕರೇ ಯುವತಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊರಟ್ಟಿ ಗ್ರಾಮದ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ.

ಸಂತ್ರಸ್ತ ಯುವತಿ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಕೃಷ್ಣರಾವ್ ನನ್ನು ಪೊಲೀಸರು ಬಂಧಿಸಿದ್ದಾರೆ.

 

ಜಾತಕ ತೋರಿಸಲೆಂದು ಯುವತಿ ಅರ್ಚಕನನ್ನು ಭೇಟಿಯಾಗಿದ್ದರು. ಈ ವೇಳೆ ಅರ್ಚಕ ಕೃಷ್ಣರಾವ್‌ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಹಲವು ಬಾರಿ ಯುವತಿ ಮೇಲೆ ಆತ ದೌರ್ಜನ್ಯವೆಸಗಿದ್ದಾಗಿ ಯುವತ್ ಆರೋಪಿಸಿದ್ದಾರೆ.

ನಿನ್ನ ಜಾತಕದಲ್ಲಿ ದೋಷವಿದೆ. ಅದಕ್ಕೆ ತಡೆಯೊಡ್ಡಬೇಕು ಎಂದು ಯುವತಿಯನ್ನು ಅರ್ಚಕ ಹೆದರಿಸಿದ್ದನಂತೆ. ದೋಷ ಪರಿಹಾರ ಹೇಳುತ್ತೇನೆ ಎಂದು ಕರೆದು ಯುವತಿಯನ್ನು ಪದೇ ಪದೇ ಅತ್ಯಚಹಾರವೆಸಗಿದ್ದಾಗಿ ಆರೋಪಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬಣಕಲ್ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

Continue Reading

Chikmagalur

ವಿಜೃಂಭಣೆಯಿಂದ ಜರುಗಿದ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವ

Published

on

ವರದಿ : ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.

ಜಯಪುರ : ಕೊಪ್ಪ ತಾಲೂಕು ಮೇಗುಂದಾ ಹೋಬಳಿ ಮುನಿವೃಂದಪುರ ಮೇಗೂರು ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವವು ಬುಧವಾರ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ರಘುಪತಿ ಹೆಬ್ಬಾರ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ತಲವಾನೆ, ಕಾರ್ಯದರ್ಶಿ ಗೋಪಾಲಕೃಷ್ಣ, ದೇವಸ್ಥಾನದ ಪ್ರಧಾನ ಅರ್ಚಕರಾದ ಲಕ್ಷ್ಮೀನರಸಿಂಹಮೂರ್ತಿ ಭಟ್, ನವೀನ ನಾಗೇಂದ್ರ ಭಟ್, ಶ್ರೀಕಾಂತ್ ಭಟ್, ಕೊಪ್ಪ ತಾಲೂಕು ಉಪ ತಹಸಿಲ್ದಾರ್ ಸುಧೀರ್, ಜಯಪುರ ನಾಡಕಚೇರಿ ರೆವೆನ್ಯೂ ಇನ್ಸ್‌ಪೆಕ್ಟರ್‌ ವಿನಯ, ಗ್ರಾಮ ಲೆಕ್ಕಾಧಿಕಾರಿ ಸೀತಾರಾಮ್ ಸೇರಿದಂತೆ ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರು.

 

Continue Reading

Chikmagalur

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮ

Published

on

ಕೊಟ್ಟಿಗೆಹಾರ: ದಕ್ಷಿಣ ಕನ್ನಡ–ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.

ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಗಂಭೀರ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.


ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಮುಂಜಾಗ್ರತ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ.  ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ.

Continue Reading

Trending

error: Content is protected !!