State
ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು.
ಆದರೆ ಪೊಲೀಸ್ ಕಾನ್ಸ್‌ಸ್ಟೇಬಲ್ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ 3ತಿಂಗಳಿನಿಂದ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಮಹಮ್ಮದ್ ಹ್ಯಾರೀಸ್ ಪ್ರತಿದಿನ ಕರೆಮಾಡಿ 18,000 ರೂ. ಹಣ ಲಂಚವಾಗಿ ನೀಡಬೇಕೆಂದು ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂದು ಫಿರ್ಯಾದಿದಾರರಿಗೆ ಬೆದರಿಸುತ್ತಿದ್ದ.
ಇದರಿಂದ ಬೇಸತ್ತ ಪೊಲೀಸ್ ಕಾನ್ಸ್‌ಸ್ಟೇಬಲ್ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ 18,000 ಲಂಚ ಪಡೆಯುತ್ತಿದ್ದಾಗಲೇ ಮಹಮ್ಮದ್ ಹ್ಯಾರೀಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
State
ವಿಧಾನಸೌಧದ ಗುಮ್ಮಟದಲ್ಲಿ ಬಿರುಕು – ಸಿಎಂ ಗಮನಕ್ಕೆ ತರ್ತೀನಿ ಎಂದ ಸ್ಪೀಕರ್
ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಸ್ಪೀಕರ್ ಯುಟಿ ಖಾದರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ.
ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿದ್ದು. ಜೋರು ಮಳೆ ಬಂದಾಗ ನೀರು ಸಹ ಲೀಕೇಜ್ ಆಗುತ್ತಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಖುದ್ದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ನಾಯಕರ ಕಟ್ಟಡವಾಗಿರದೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವೂ ಆಗಿದೆ. ಆದ್ರೆ ದೊಡ್ಡ ಕಟ್ಟಡಗಳನ್ನು ಸರಿಪಡಿಸುವಾಗ ಮತ್ತೊಂದು ಕಡೆ ಸ್ವಲ್ಪ ಹೆಚ್ಚು-ಕಡಿಮೆ ಆಗಬಹುದು. ಗುಮ್ಮಟ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಫ್ಲೋರ್‌ಗಳು ಮಾತ್ರ ವ್ಯಾಪ್ತಿಗೆ ಬರುತ್ತದೆ. ಆದರೂ ಈ ವಿಚಾರವನ್ನ ಸಿಎಂ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.
ನಮ್ಮ ವ್ಯಾಪ್ತಿಯಲ್ಲಿನ ಫ್ಲೋರ್‌ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ. ಕೆಲವೊಂದು ಲೋಪದೋಷ ಆಗಿರಬಹುದು, ಆದಷ್ಟು ಬೇಗ ಸಿಎಂಗೆ ವಿಚಾರ ತಿಳಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.
State
ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತ
ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.
State
ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ
ಬೆಂಗಳೂರು:
ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ.
ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು.
ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.
ಕೆಯುಡಬ್ಲ್ಯೂಜೆ ಸಂತಾಪ:
ಹಿರಿಯ ಪತ್ರಕರ್ತರ ವೇದಿಕೆ ಸಂಘಟನೆಯಲ್ಲಿ ಸಕ್ರೀಯವಾಗಿದ್ದ ಕೃಷ್ಣಪ್ಪ ಅವರ ನಿಧನ ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದ.
ಕೃಷ್ಣಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.