Connect with us

Chikmagalur

ಅಸ್ಸಾಂನಿಂದ ಬಂದಿರುವ ಕಾರ್ಮಿಕನಿಂದ ಕಾಫಿ ತೋಟದಲ್ಲಿ ಗೋ ಹತ್ಯೆ

Published

on

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಗೋ ಹತ್ಯೆ ಮಾಡಿದ ಘಟನೆ ನಡೆದಿದ್ದು, ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.

ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಆರೋಪಿಗಳು-ಗೋಮಾಂಸ ಪಕ್ಷಕ್ಕೆ ಪಡೆಯಲಾಗಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.

ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು ಬಂಧಿಸಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Continue Reading

Chikmagalur

ಬೆಂಗಳೂರಿನಲ್ಲಿ ಅಪಘಾತ: ಚಂದ್ರೇಗೌಡ ಸಹಿತ ಮೂವರು ಸ್ಥಳದಲ್ಲೇ ಸಾ*ವು

Published

on

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ರಸ್ತೆ ಅಪಘಾತದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಿ.ಎಸ್.ಚಂದ್ರೇಗೌಡ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಪ್ಪಿದ್ದಾರೆ.

ಬೆಂಗಳೂರಿನಿಂದ ಕಾರಿನಲ್ಲಿ ಬರುತ್ತಿರುವಾಗ ನಾಗಮಂಗಲದ ಸಮೀಪದ ನಾಗತಿಹಳ್ಳಿಯಲ್ಲಿ ಚಾಲನಕ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಅಪ್ಪಳಿಸಿ ಉರುಳಿಬಿದ್ದಿದ್ದು, ವಾಹನ ಚಾಲನೆ ಮಾಡುತ್ತಿದ್ದ ಚಂದ್ರೇಗೌಡ (60) ಅವರ ಪತ್ನಿ ಸರೋಜಮ್ಮ (55) ಜಯಮ್ಮ (70) ಅವರುಗಳು ಅಸುನೀಗಿದ್ದಾರೆ ಹೇಳಲಾಗಿದೆ.


ಕೆಲವು ದಿನಗಳ ಹಿಂದೆ ಹಾಂಕಾಂಗ್ ಪ್ರವಾಸ ಕೈಗೊಂಡಿದ್ದರು. ನಿನ್ನೆ ಬೆಂಗಳೂರಿನಲ್ಲಿರುವ ಅಳಿಯನ ಮನೆಯಲ್ಲಿ ಉಳಿದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಚಿಕ್ಕಮಗಳೂರು ನಗರಕ್ಕೆ ಆಗಮಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂಬಂಧಿಕರಿಗೆ ವಿಷಯ ತಿಳಿಯುತ್ತಿದ್ದಂತೆ ಮೃತ ದೇಹಗಳನ್ನು ತರಲು ಬೆಂಗಳೂರಿಗೆ ತೆರಳಿದ್ದಾರೆ.

ಮೃತ ಡಿ.ಎಸ್.ಚಂದ್ರೇಗೌಡ ಜಿಲ್ಲಾಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಸಿಡಿಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎರಡು ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ತಾಲೂಕು ಕನಕ ಸಂಘದ ತಾಲೂಕು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

Continue Reading

Chikmagalur

ಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು

Published

on

ಚಿಕ್ಕಮಗಳೂರು : ಜಿಲ್ಲೆಯ ಬಾಳೆಹೊನ್ನೂರಿನಲ್ಲಿ  ಮತ್ತೊಂದು ಕಾಡಾನೆ ದಾಳಿ ಪ್ರಕರಣ ದಾಖಲಾಗಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ಆದರೆ ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಮಿಕ ಶಿವಮೊಗ್ಗ ಜಿಲ್ಲೆ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ.

ತೋಟದಲ್ಲೇ ಮೂರು ಕಾಡಾನೆಗಳು ಬೀಡು ಬಿಟ್ಟಿವೆ. ಆನೆ ದಾಳಿಯಿಂದ ಪ್ರಜ್ಞೆ ತಪ್ಪಿರೋ ಕೂಲಿ ಕಾರ್ಮಿಕ, ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದ ಕಾರ್ಮಿಕನ ಎಡಗೈ ನಡುಗುತ್ತಿದ್ದು ಪ್ರಜ್ಞಾಹೀನನಾಗಿದ್ದಾರೆ.

ಕಾರ್ಮಿಕ ಗಣಪತಿಯನ್ನು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಇನ್ನೂ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

Chikmagalur

ಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ

Published

on

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಪಕ್ಷದ  ಗ್ರಾ.ಪಂ. ಸದಸ್ಯ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದು, ಮೂವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ಅವರು ನಾಲ್ಕು ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು. ಹಾಗಾಗಿ ತಲೆಮರೆಸಿಕೊಂಡಿರೋ ಅಜಯ್, ನಿಥಿನ್ ಅಲಿಯಾಸ್ ಸೈನ್ಸ್, ದರ್ಶನ್ ಅಲಿಯಾಸ್ ಜಪಾನ್ ಗಾಗಿ ತೀವ್ರ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೊನ್ನೆಯಿಂದ ತಲೆಮರೆಸಿಕೊಂಡಿರೋ ಮೂವರಿಗಾಗಿ ತೀವ್ರ ಹುಡುಕಾಟವನ್ನು ಸಖರಾಯಪಟ್ಟಣದಲ್ಲಿ ಮುಂದುವರಿಸಿದ್ದು,  ಪೊಲೀಸ್‌ರು ಬಿಗಿ ಬಂದೋಬಸ್ತ್ ಮಾಡಲಾಗಿದೆ.

ನಿನ್ನೆ 100 ಪೊಲೀಸರು, ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜಿಸಿದ್ದ ಪೊಲೀಸ್ ಇಲಾಖೆಯೂ, ಇಂದು ಮತ್ತೆ ಸಖರಾಯಪಟ್ಟಣದಲ್ಲಿ 80 ಪೊಲೀಸರ ನಿಯೋಜನೆ ಮಾಡಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

 

Continue Reading

Trending

error: Content is protected !!