Connect with us

Mandya

ಸಿಪಿಐಎಂ ಕಾಂಗ್ರೆಸ್ ಗೆ ಬೆಂಬಲ

Published

on

ಮಂಡ್ಯ :  ಕೋಮುವಾದಿ ಬಿಜೆಪಿ ಮತ್ತು ಅವಕಾಶವಾದಿ ಜೆಡಿಎಸ್ ಸೋಲಿಸಲು ಜನಪರ ಪರ್ಯಾಯ ಜಾತ್ಯಾತೀತ ನೀತಿಗಳ ಹೊಸ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದಾಗಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಯಾವ ಕಾರಣಕ್ಕೆ ಇವರನ್ನು ಸೋಲಿಸಬೇಕು ಎನ್ನುವ ಬಗ್ಗೆ ಹೋಬಳಿ ಮಟ್ಟದಲ್ಲಿ ಸಿಪಿಐಎಂ ವತಿಯಿಂದ ಆಂದೋಲನ ನಡೆಸಲಾಗುತ್ತಿದೆ ಎಂದು ತಿಳಿಸಿದರು .

ಈ ದೇಶದ ಜಾತ್ಯತೀತ ಮೌಲ್ಯ, ಪ್ರಜಾಪ್ರಭುತ್ವ ಉಳಿಯಬೇಕು ಅಂದರೆ ಮೋದಿ ಸರ್ಕಾರವನ್ನು ಸೋಲಿಸಬೇಕಾಗಿದೆ. ಅವರು ಮತ್ತೆ ಪ್ರಧಾನಿಯಾದರೆ ಇಡೀ ಒಕ್ಕೂಟ ವ್ಯವಸ್ಥೆಯೇ ಉಳಿಯುವುದಿಲ್ಲ . ಹಾಗಾಗಿ ಕುಮಾರಸ್ವಾಮಿ ಅವರನ್ನು ಸೋಲಿಸುವಂತೆ ಕರೆ ನೀಡಿದರು.

ಚುನಾವಣೆ ಬಾಂಡ್ ಲಜ್ಜೆ ಹೀನವಾಗಿರುವ ಹಗರಣವಾಗಿದೆ. ಮೋದಿಯ ಭರವಸೆ ಬರಿ ಸುಳ್ಳಾಗಿದೆ .ನಾನು ಅಧಿಕಾರಕ್ಕೆ ಬಂದ ನಂತರ ಬೆಲೆ ಇಳಿಕೆ ಮಾಡುವುದಾಗಿ ಭರವಸೆ ನೀಡಿದ್ದು, ಆದರೆ ಈಗ ಬೆಲೆಗಳು ಎರಡು ಪಟ್ಟಾಗಿದೆ ಎಂದು ದೂರಿದರು ಪ್ರಧಾನಿ ಮೋದಿ ಕಾನೂನು ಬದ್ಧ ದರೋಡೆ ಕೋರರಂತೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಕಾನೂನು ಬದ್ಧ ದರೋಡೆಕೋರರು ಮತ್ತೆ ಬರಬಾರದು ಎನ್ನುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿರುವುದಾಗಿ ತಿಳಿಸಿದರು.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದ ಮೋದಿ, ನ್ಯಾಯಾಲಯದಲ್ಲಿ ಈ ವರದಿ ಅನುಷ್ಠಾನ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ . ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಘೋಷಿಸಿದ್ದರೂ ಜಾರಿಯಾಗಿಲ್ಲ. ಬದಲಿಗೆ ರಸಗೊಬ್ಬರ ಸೇರಿದಂತೆ ಇನ್ನಿತರ ಕೃಷಿ ಪರಿಕರಗಳ ದರ ಏರಿಕೆಯಾಗಿದೆ ಎಂದರು. ಕಾರ್ಪೊರೇಟ್ ಪರ ಕೃಷಿ ನೀತಿಯನ್ನು ಜಾರಿಗೆ ತರಲಾಗಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸಿದ್ದ ಸಂದರ್ಭದಲ್ಲಿ 700 ಮಂದಿ ರೈತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮೋದಿ ಕನಿಷ್ಠ ಸೌಜನ್ಯವನ್ನು ತೋರಿಲ್ಲ. ಎಂದು ಕಿಡಿ ಕಾರಿದರು.

ಪ್ರಧಾನಿ ನರೇಂದ್ರ ಮೋದಿ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಿದ್ದಾರೆ. ಈ ಯೋಜನೆಗೆ ನೀಡುತ್ತಿದ್ದ ಹಣವನ್ನು ಕಡಿತಗೊಳಿಸಿದ್ದಾರೆ . ಕೆಲಸವನ್ನು ನೀಡುತ್ತಿಲ್ಲ . ಒಂದು ವೇಳೆ ಕೆಲಸ ನೀಡಿದರೆ ಹಣ ನೀಡುತ್ತಿಲ್ಲ. ಉದ್ಯೋಗ ಸಿಗದಂತೆ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಬಾಂಡ್ ತಂದು ಮೋದಿಯವರು ದರೋಡೆ ಮಾಡಿದ್ದಾರೆ .ಬೇರೆ ದೇಶಗಳಲ್ಲಿ ನಿಷೇಧ ಮಾಡಿದ್ದ ಔಷಧಗಳನ್ನು ನಮ್ಮ ದೇಶದಲ್ಲಿ ಮಾರಾಟ ಮಾಡುವ ಅವಕಾಶ ಕಲ್ಪಿಸಿ ಅವರಿಂದ ಚುನಾವಣಾ ಬಾಂಡ್ ಮೂಲಕ ಹಣ ಪಡೆದಿದ್ದಾರೆ. ಐಟಿ, ಇಡಿ ಸಂಸ್ಥೆಗಳ ಮೂಲಕ ಬೆದರಿಸಿ ಹಣ ಪಡೆದಿದ್ದಾರೆ. ಆದ್ದರಿಂದ ಕೋಮುವಾದಿ ಮತ್ತು ಭ್ರಷ್ಟ ಬಿಜೆಪಿಯನ್ನು ಮತ್ತು ಅವಕಾಶವಾದಿ ಜೆಡಿಎಸ್ ಪಕ್ಷವನ್ನು ಸೋಲಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪುಟ್ಟಮಾದು, ಸಿ ಕುಮಾರಿ , ದೇವಿ, ಭರತ್ ರಾಜ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮಂಡ್ಯ ವಿ.ವಿ.ಗೆ ಮಧು.ಜಿ.ಮಾದೇಗೌಡ ನೇಮಕ

Published

on

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಮಧು.ಜಿ.ಮಾದೇಗೌಡ ಅವರು ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ವ್ಯವಸ್ಥಾಪನಾ‌ ಮಂಡಳಿ ಹಾಗೂ ಸಲಹಾ ಸಮಿತಿಗೆ ಸದಸ್ಯರಾಗಿ ನಾಮನಿರ್ದೇಶನ ಗೊಂಡಿದ್ದಾರೆ.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಮನಿರ್ದೇಶನ ಮಾಡಿರುತ್ತಾರೆಂದು ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಈ ಕುರಿತು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Continue Reading

Mandya

ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಿ: ಶೇಖ್ ತನ್ವೀರ್ ಆಸಿಫ್

Published

on

ಮಂಡ್ಯ: 2024ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಬಹಳ ಅದ್ದೂರಿಯಾಗಿ ಕಾರ್ಯಕ್ರಮವನ್ನು ಆಚರಿಸಿ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್ ಅವರು ತಿಳಿಸಿದರು.

ಅವರು ಸುವರ್ಣ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ಪೂರ್ವ ಸಿದ್ಧತಾ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ತಿರಂಗಾ ಯಾತ್ರೆ ಮತ್ತು ಮ್ಯಾರಾಥಾನ್ ಕಾರ್ಯಕ್ರಮಗಳನ್ನು ಮಂಡ್ಯ ಜಿಲ್ಲೆ ಮತ್ತು ನಗರ ವ್ಯಾಪ್ತಿಯಲ್ಲಿ ಆಯೋಜಿಸಲು ನಗರಸಭೆ ಹಾಗೂ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿಗಳು, ಆಯುಕ್ತರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಎಲ್ಲಾ ಮುಖ್ಯಾಧಿಕಾರಿಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಹರ್ ಘರ್ ತಿರಂಗಾ ಅಭಿಯಾನದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಮಾಡಿ ಮನೆಗಳು, ಸರ್ಕಾರಿ ಕಛೇರಿಗಳು ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ರಾಷ್ಟ್ರಧ್ವಜವನ್ನು ನಿಯಮಾನುಸಾರ ಹಾರಿಸಬೇಕು.

ಸೂಚಿತ ವೆಬ್ ಸೈಟ್ hargartiranga.com ರಲ್ಲಿ ಸೆಲ್ಸಿಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ ಎಂದರು.

ಜಾಥಾ ಕಾರ್ಯಕ್ರಮ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ಪ್ರತಿ ಶಾಲಾ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸೈಕಲ್ ಜಾಥಾ/ಬೈಕ್, ಪಾರಂಪರಿಕ ನಡಿಗೆ ಹಾಗೂ ಗಾಳಿಪಟ ಹಾರಿಸುವ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಕ್ರಮವಹಿಸಿ. ಜೊತೆಗೆ ತಿರಂಗಾ ಸಂಗೀತಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಮುಖಾಂತರ ನಡೆಸಬೇಕು ಎಂದು ತಿಳಿಸಿದರು.

ಎಲ್ಲಾ ತಹಶೀಲ್ದಾರರು ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ಕುರಿತು ಜಿಲ್ಲೆಯಲ್ಲಿ ಹಾಲಿ ಜೀವಿತ ಸ್ವಾತಂತ್ರ್ಯ ಯೋಧರಿಗೆ ಮನೆಗೆ ತೆರಳಿ ಸನ್ಮಾನ ಮಾಡಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಹರ್ ಘರ್ ತಿರಂಗಾ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಪ್ರತಿಜ್ಞಾವಿಧಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ / ನಿಗಮ ಮಂಡಳಿ, ಪ್ರಾಧಿಕಾರ ಹಾಗೂ ಇತರ ಕಾರ್ಯಾಲಯಗಳು, ಶಾಲಾ ಕಾಜೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಬೇಕು ಎಂದರು.

ಸೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳ ತಂಡದಿಂದ ತಿರಂಗಯಾತ್ರೆ ನಡೆಸಬೇಕು ಎಂದರು.

ವಿವಿಧ ಸ್ಪರ್ಧೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಆಶುಭಾಷಣಾ ಸ್ಪರ್ಧೆ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ಸಂಬಂಧಿತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವೆಬ್ ಸೈಟ್:hargartiranga.com ರಲ್ಲಿ ಅಪ್ ಲೋಡ್ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಮಾದಕ ವ್ಯಸನಗಳ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಹಾಗೂ ಪ್ರತಿಜ್ಞಾವಿಧಿ ಬೋಧನೆ

Published

on

ಶ್ರೀರಂಗಪಟ್ಟಣ: ವಿದ್ಯಾರ್ಥಿಗಳು ಮಾದಕ ದ್ರವ್ಯ ವಸ್ತುಗಳಿಗೆ ಮಾರು ಹೋಗದೆ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಕರೆ ನೀಡಿದರು.

ಅವರು ಶ್ರೀರಂಗಪಟ್ಟಣದ ಕಾವೇರಿ ಪ್ರೌಢ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮದ್ಯಪಾನ, ಧೂಮಪಾನ,
ಗಾಂಜಾ, ಕೋಕೆನ, ಬ್ರೌನ್ ಶುಗರ್, ಅಫೀಮುಗಳಂತಹ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಹಾಗೂ ತಮ್ಮ ಪಾಲಕರೂ ಕೂಡ ದೂರವಿರಬೇಕು. ಇವುಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಜೊತೆಗೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಕೂತುಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯಗಳನ್ನು ಬಳಸಬಾರದು. ದೇಶದ ಯುವ ಜನತೆ ಮಾದಕ ವ್ಯಸನ ಎಂಬ ಜಾಲದಲ್ಲಿ ಸಿಕ್ಕಿ ನರಳುತ್ತಿದ್ದಾರೆ.

ಇತ್ತೀಚೆಗೆ ಯುವ ಸಮೂಹ ಮಾದಕವೆಂಬ ವಿಷ ವರ್ತುಲದಲ್ಲಿ ಭಾಗವಹಿಸುತ್ತಿದೆ. ಚಟಗಳು ಮೊದಲು ಸಂತೋಷ್ ನೀಡಿದರೂ, ನಂತರ ಮನಸ್ಸಿನ ನೆಮ್ಮದಿ ಹಾಗೂ ಆರೋಗ್ಯವನ್ನು ಹಾಳು ಮಾಡುತ್ತದೆ. ಕ್ಷಣಿಕ ಸುಖ ನೀಡುವ ಮೋಹಕ್ಕೆ ಬಿದ್ದು ಸುಂದರವಾದ ಜೀವನ ಹಾಳು ಮಾಡಿಕೊಳ್ಳುವದು ಬೇಡ. ಅಭ್ಯಾಸ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿಯಾಗಬೇಕು ಬನ್ನಿ “ನಶಾ ಮುಕ್ತ ಮಂಡ್ಯ ಜಿಲ್ಲೆ” ನಿರ್ಮಾಣ ಮಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆ ಮಾಡದಿರವು ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲೆ ಜಯಶ್ರೀ ಎಂ, ಮುಖ್ಯ ಶಿಕ್ಷಕ ಮುದ್ದುರಾಜು, ಎನ್, ಸಹಶಿಕ್ಷಕರಾದ ಕುಮಾರಸ್ವಾಮಿ, ಮಂಜುನಾಥ, ಚಂದ್ರಶೇಖರ್, ದೈಹಿಕ ಶಿಕ್ಷಕ ಸಿ.ಆರ್.ಪಾಪಣ್ಣ, ಕಾಲೇಜು ಉಪನ್ಯಾಸಕರಾದ ಅಮ್ರಿನ ಆಲo, ಸರಿತ, ನಿರ್ಮಲ, ಶ್ರೀಶಾದಾಸ್ ಹಾಗೂ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ನಂತರ ಕಾಲೇಜು ಮಕ್ಕಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Continue Reading

Trending

error: Content is protected !!