State
ದೀಪಾವಳಿಗೆ ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಹೊಡೆಯಬಹುದು. ಉಳಿದ ಸಮಯದಲ್ಲಿ ಸುಡುಮದ್ದು ಸಿಡಿಸಲು ಅವಕಾಶವಿಲ್ಲ.
ಬೆಳಕಿನ ಹಬ್ಬ ದೀಪಾವಳಿಗೆ ಕ್ಷಣಗಣನೆ ಆರಂಭ ವಾಗಿರುವಂತೆಯೇ ರಾಜ್ಯ¬ ಸರಕಾರವು ವಾಯು ಹಾಗೂ ಶಬ್ದಮಾಲಿನ್ಯ ಉಂಟಾಗ ದಂತೆ ತಡೆಯಲು ಮುನ್ನೆಚ್ಚ ರಿಕೆ ಕ್ರಮವಾಗಿ ಈ ಮಾರ್ಗಸೂಚಿ ಹೊರಡಿಸಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಳೆದ ತಿಂಗಳಲ್ಲೇ ಸುತ್ತೋಲೆ ಹೊರಡಿ ಸಿದ್ದು, ಗುರುವಾರ (ನ. 2) ಪೌರಾಡಳಿತ ನಿರ್ದೇಶನಾ ಲಯವು ಆದೇಶ ಹೊರಡಿಸಿದೆ. ಅದರಂತೆ ರಾತ್ರಿ 2 ತಾಸು ಮಾತ್ರ ಪಟಾಕಿ ಹೊಡೆಯಲು ಅವ ಕಾಶ ಕಲ್ಪಿಸಲಾಗಿದೆ. ಉಳಿದ ಅವಧಿಯಲ್ಲಿ ಪಟಾಕಿಗೆ ನಿಷೇಧ ಇರಲಿದೆ. ಅಷ್ಟೇ ಅಲ್ಲ, ಯಾವುದೇ ಹಸುರು ಪಟಾಕಿಗಳನ್ನು ರ್‍ಯಾಂಡಮ್ ಆಗಿ ಸಂಗ್ರಹಿಸಿ, ಶಬ್ದದ ಪ್ರಮಾಣ ಮಾಪನ ಮಾಡಬೇಕು ಹಾಗೂ ನಿಗದಿತ ಗುಣಮಾಪನಗಳಿಗೆ ಸರಿಹೊಂದದಿದ್ದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಲಾಗಿದೆ.
ಹಸುರು ಪಟಾಕಿ ಮಾತ್ರ ಬಳಸಬೇಕು ಹಾಗೂ ಬಳಸುವಾಗ ಪ್ರಾಣಿ, ಪಕ್ಷಿಗಳು, ಮಕ್ಕಳು ಮತ್ತು ವೃದ್ಧರಿಗೆ ತೊಂದರೆಯಾಗದಂತೆ ನೋಡಿ ಕೊಳ್ಳಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ ಗಳ ಸುತ್ತ ಮತ್ತು ಯಾವುದೇ ನಿಷೇ ಧಿತ ಪ್ರದೇಶದಲ್ಲಿ ಪಟಾಕಿ ಸಿಡಿಸು ವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ.
ಜಾಗೃತಿ ಮೂಡಿಸಲು ಕ್ರಮ
ಪರಿಸರಸ್ನೇಹಿ ದೀಪಾವಳಿ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಮಾಲ್‌ಗಳಲ್ಲಿ ಕರಪತ್ರ, ಭಿತ್ತಿಪತ್ರಗಳನ್ನು ಹಂಚುವ ಮೂಲಕ, ವೀಡಿಯೋ ಮತ್ತು ಆಡಿಯೋ ಮೂಲಕ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಟಿವಿ, ರೇಡಿಯೋ ಮೂಲಕ ಪರಿಸರಸ್ನೇಹಿ ದೀಪಾವಳಿ ಕುರಿತು ಜಾಗೃತಿ ಮೂಡಿಸಬೇಕು.
State
INDvsENG 1st t20: ಟೀಂ ಇಂಡಿಯಾ ಅಲ್‌ರೌಂಡರ್ ಪ್ರದರ್ಶನ; ಸೂರ್ಯ ಬಳಕ್ಕೆ ಮೊದಲ ಜಯ
ಕೊಲ್ಕತ್ತಾ: ಭಾರತ ತಂಡದ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್ ತಂಡ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಅಂತರದಿಂದ ಗೆಲುವು ದಾಖಲಿಸಿದೆ.
ಇಲ್ಲಿನ ಈಡೆನ್ ಗಾರ್ಡೆನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್ ಆಗಿ 132 ರನ್ ಗಳಿಸಿ ಟೀಂ ಇಂಡಿಯಾಗೆ 133 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿ ಭಾರತ ತಂಡ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.
ಇಂಗ್ಲೆಂಡ್ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರವಾಗಿ ಬೆನ್ ಡಕೆಟ್ ಹಾಗೂ ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಿದರು. ಸಾಲ್ಟ್ ಶೂನ್ಯ ಸುತ್ತಿ ಹೊರನಡೆದರೇ, ಡಕೆಟ್ 4(4) ರನ್ ಗಳಿಸಿ ಇನ್ನಿಂಗ್ಸ್ ಮುಗಿಸಿದರು.
ನಾಯಕ ಜೋಸ್ ಬಟ್ಲರ್ 44 ಎಸೆತ 8 ಬೌಂಡರಿ, 2 ಸಿಕ್ಸರ್ ಸಹಿತ 68 ರನ್ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಅಧಿಕ ರನ್. ಬಟ್ಲರ್ ಏಕಾಂಕಿ ಹೋರಾಟದ ಫಲವಾಗಿ ಇಂಗ್ಲೆಂಡ್ ನೂರರ ಗಡಿ ದಾಟಿತು.
ಉಳಿದಂತೆ ಹ್ಯಾರಿ ಬ್ರೂಕ್ 17(14), ಲಿವಿಂಗ್‌ಸ್ಟೋನ್ ಡಕ್‌ಔಟ್, ಬೆಥೆಲ್ 7(14), ಓವರ್‌ಟನ್ 2(4), ಆಟ್ಕಿನ್ಸನ್ 2(13), ಜೋಫ್ರಾ ಆರ್ಚರ್ 12(10), ಮಾರ್ಕ್‌ವುಡ್ 1(1) ಹಾಗೂ ಆದಿಲ್ ರಶೀದ್ ಔಟಾಗದೇ 8(11) ರನ್ ಗಳಿಸಿದರು.
ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ 3, ಅರ್ಶದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಟೀಂ ಇಂಡಿಯಾ ಇನ್ನಿಂಗ್ಸ್: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಸಂಜು ಸ್ಯಾಮ್ಸನ್ 26(20) ರನ್ ಗಳಿಸಿದರೇ, ನಾಯಕ ಸೂರ್ಯಕುಮಾರ್ ಯಾದವ್ ಡಕ್‌ಔಟ್ ಆಗಿ ಹೊರನಡೆದರು.
ಇತ್ತ ಆರಂಭದಿಂದಲೇ ಭರ್ಜರಿಯಾಗಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ ಭರ್ಜರಿ 8 ಸಿಕ್ಸರ್‌ಗಳ ಸಹಾಯದಿಂದ 79 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಜೊತೆಯಾದ ತಿಲಕ್ ವರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಕ್ರಮವಾಗಿ 19 ಹಾಗೂ 3 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಎರಡು, ಆದಿಲ್ ರಶೀದ್ ಒಂದು ವಿಕೆಟ್ ಕಬಳಿಸಿದರು.
State
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 3ಲಕ್ಷ ಪರಿಹಾರ ಘೋಷಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಪರಿಹಾರ ಘೋಷಿಸಿದ್ದಾರೆ.
State
ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್ ಕೊಟ್ಟರು.
ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan22 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
Chamarajanagar11 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
National - International14 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Hassan17 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International12 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Kodagu11 hours ago
ಸಾರ್ವಜನಿಕರಿಗೆ ಪಂಗನಾಮ ಹಾಕಿದ್ದ ಫರ್ನೀಚರ್ ಅಂಗಡಿ ಮಾಲೀಕನ ಬಂಧನ