Connect with us

Mandya

ಕಳ್ಳತನಕ್ಕೆ ಸಹಕರಿಸಿದ್ದ ಪೇದೆ ಸೇರಿದಂತೆ ನಾಲ್ವರ ಬಂಧನ

Published

on

ಬಂಧಿತರಿಂದ 83 ಲಕ್ಷ ರೂ. ಮೌಲ್ಯದ ನಗ–ನಾಣ್ಯ ವಶಕ್ಕೆ ಪಡೆದ ಪೊಲೀಸರು

ಮಂಡ್ಯ: ಮದ್ದೂರು ಪಟ್ಟಣದಲ್ಲಿ ಮನೆ ಬೀಗ ಮುರಿದು 83 ಲಕ್ಷ ರೂ. ವೌಲ್ಯದ ನಗ-ನಾಣ್ಯ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳಿಗೆ ಸಹಕಾರ ನೀಡಿದ್ದ ಓರ್ವ ಪೊಲೀಸ್ ಪೇದೆಯನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ತಿಳಿಸಿದರು.

ಮೈಸೂರಿನ ಫಯಾಜ್, ಮಹಮದ್ ಮುನ್ನಾ, ಅಯೂಬ್, ಪ್ರಸಾದಿ ಹಾಗೂ ಆರೋಪಿಗಳಿಗೆ ಸಹಕಾರ ನೀಡಿದ್ದ ಪೊಲೀಸ್ ಪೇದೆ ಕೆಂಡಗಣ್ಣ ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಮದ್ದೂರು ಪಟ್ಟಣದ ಕೆ.ಎಚ್.ನಗರ ನಿವಾಸಿ ಡಾ.ಚಂದ್ರು ಅವರು ಜ.17 ರಂದು ಮನೆ ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ಹೊರಗೆ ಹೋಗಿದ್ದರು. 18 ರಂದು ವಾಪಸ್ಸು ಬಂದು ನೋಡಲಾಗಿ ಮನೆಯ ಬೀಗ ಮುರಿದು ಕಳ್ಳತನವಾಗಿರುವುದು ತಿಳಿಯಿತು ಎಂದು ಮದ್ದೂರು ಪೊಲೀಸರಿಗೆ ದೂರು ನೀಡಿದ್ದರು ಎಂದರು.

ಮನೆಯ ಕೊಠಡಿಯಲ್ಲಿನ ಬೀರುವಿನಲ್ಲಿದ್ದ ಒಂದೂವರೆ ಕೆ.ಜಿ. ಚಿನ್ನಾಭರಣಗಳು, 8 ಲಕ್ಷ ಕಳವು ಮಾಡಿದ್ದಾರೆ ಎಂದು ದೂರು ನೀಡಿದ್ದರು. ಮದ್ದೂರು ಗ್ರಾಮಾಂತರ ಸಿಪಿಐ ವೆಂಕಟೇಗೌಡ ಮತ್ತು ತಂಡ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ತಿಪಟೂರಿನಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಘಟನೆ ನಂತರ ಆರೋಪಿಗಳು ಹೈದ್ರಾಬಾದ್, ಗೋವಾ, ಬೀದರ್, ಹಾಸನ ಇತರೆಡೆಗಳಲ್ಲಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಅರಿತು ಹುಡುಕಾಟ ನಡೆಸಲಾಗಿತ್ತು. ಅಂತಿಮವಾಗಿ ತಿಪಟೂರಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿತ್ತು. ಬಂಧಿತ ಆರೋಪಿಗಳಿಂದ 1.486 ಕೆ.ಜಿ. ಚಿನ್ನಾಭರಣ, ₹1.70 ಲಕ್ಷ ಸೇರಿದಂತೆ ₹83 ಲಕ್ಷ ವೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಆರೋಪಿಗಳು ಕದ್ದಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಪೊಲೀಸ್ ಪೇದೆ ಕೆಂಡಗಣ್ಣ ಸಹಕಾರ ನೀಡಿದ್ದರೆಂಬ ಆರೋಪದ ಮೇರೆಗೆ ಆತನನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದರು.

ಮನೆ ಬೀಗ ಮುರಿದು ಒಳ ನುಗ್ಗಿ ನಗದು ಸೇರಿದಂತೆ ₹67 ಲಕ್ಷ ವೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ, ಮಳವಳ್ಳಿ ತಾಲ್ಲೂಕಿನ ರಾಮಂದೂರು ಗ್ರಾಮದ ಅಶೋಕ್‌ಕುಮಾರ್ (28) ಹಾಗೂ ಚಲುವರಾಜು (26) ಬಂಧಿತ ಆರೋಪಿಗಳು.

ಮನೆಗಳ್ಳರಿಂದ ₹67 ಲಕ್ಷ ಮೌಲ್ಯದ ಚಿನ್ನದ ಸಮೇತ ಬಂಧನ: ಮಳವಳ್ಳಿ ತಾಲ್ಲೂಕು ತೊರೆಕಾಡನಹಳ್ಳಿಯ ಅರ್ಜುನ್ ಎಂಬುವರ ಮನೆಯ ಬಾಗಿಲ ಬೀಗ ಮುರಿದು ಒಳ ನುಗ್ಗಿದ ಆರೋಪಿಗಳು ವಾಲ್‌ಡ್ರೂಪ್‌ನ ಡ್ರಾನಲ್ಲಿಟ್ಟಿದ್ದ 26 ಗ್ರಾಂ ತೂಕದ ಚಿನ್ನದ ಒಡವೆಗಳು, ₹20 ಸಾವಿರ ಹಣ ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ದಾಖಲು ಮಾಡಿದ್ದರು, ಈ ಬಗ್ಗೆ ತನಿಖೆ ಕೈಗೊಂಡ ಸಿಪಿಐ ಶ್ರೀಧರ್, ಪಿಎಸ್‌ಐ ಮಹೇಂದ್ರ, ಸತೀಶ್ ಮತ್ತು ಸಿಬ್ಬಂದಿಯು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ತೊರೆಕಾಡನಹಳ್ಳಿ ಮಾತ್ರವಲ್ಲದೆ ಬೇರೆ ಬೇರೆ ಕಡೆಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ, ಆರೋಪಿಗಳಿಂದ ₹67 ಲಕ್ಷ ವೌಲ್ಯದ 122 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಡಿ.28 ರಂದು ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ : ಪಾಪಣ್ಣ

Published

on

ಮಳವಳ್ಳಿ : ಇದೇ ಡಿ.28 ರಂದು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ಒಡಲೂರು ಶ್ರೀ ಜ್ಯೋತಿ ರಾಮಲಿಂಗ ಸ್ವಾಮಿಗಳ ಸಮರಸ ಸನ್ಮಾರ್ಗ ಸಂಘದ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರ್.ಆರ್ ವಧು- ವರರ ಕೇಂದ್ರದ
ಅಧ್ಯಕ್ಷ ಪಾಪಣ್ಣ ಅವರು ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಾರಾಯಣಪ್ಪ.ವಿ ಜಾಲಗೆರೆ ಮಾತನಾಡಿ, ಪಾಪಣ್ಣನವರ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಭಾಗಿತ್ವವನ್ನು ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಡಿವಾಳರ ಖಡ್ಗ ಪತ್ರಿಕೆಯ ಚಂದ್ರಶೇಖರ್, ಶಂಕರಮಠ ವಾರ್ಡ್ ಒಬಿಸಿ ಅಧ್ಯಕ್ಷ ಜಯರಾಮ್, ಬಿಜೆಪಿ ಮುಖಂಡ ಕೆಂಚಪ್ಪ, ಮುಖಂಡರಾದ ನಾಗರಾಜ ಮತ್ತು ಮುನಿರಾಜು, ವೆಂಕಟಾದ್ರಿ ಟೆಂಟ್ ಹೌಸ್ ಮಾಲೀಕ ವೆಂಕಟೇಶ್ ಉಪಸ್ಥಿತರಿದ್ದರು.

Continue Reading

Mandya

ವಿವಿಧ ಗಣ್ಯರ ಪುತ್ಥಳಿ, ಸರ್ಕಲ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್‌

Published

on

ಮದ್ದೂರು:  ತಾಲೂಕಿನ ನಗರ ವ್ಯಾಪ್ತಿಯ ವಿವಿಧ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಶಾಸಕ ಕೆ. ಎಂ .ಉದಯ್  ಸ್ಥಳ  ಪರಿಶೀಲನೆ ನಡೆಸಿದ್ದಾರೆ.

ಮದ್ದೂರು ನಗರದ ಟಿ.ಬಿ. ಸರ್ಕಲ್‌ನಿಂದ ಪೇಟೆಬೀದಿ, ಕೊಲ್ಲಿ ಸರ್ಕಲ್‌ವರೆಗೆ 80 ಅಡಿ ರಸ್ತೆ ಮತ್ತು ಶಿವಪುರದ ಕೊಪ್ಪ ಸರ್ಕಲ್ ಸೇರಿದಂತೆ ನಗರದ ವಿವಿಧ ಪ್ರಮುಖ ಸರ್ಕಲ್‌ಗಳಲ್ಲಿ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ, ಶಿವಪುರದ ಕೊಪ್ಪ ಸರ್ಕಲ್ – ಭಕ್ತ ಕನಕದಾಸರು, ಕೊಲ್ಲಿ ಸರ್ಕಲ್ – ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣ, ಹೂವಿನ ಸರ್ಕಲ್ – ಅಮರ ಶಿಲ್ಪಿ ಶ್ರೀ ಜಕಣಚಾರಿ, ಕೆಮ್ಮಣ್ಣು ನಾಲೆ ಸರ್ಕಲ್ – ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸ್ಟೇಡಿಯಂ ಸರ್ಕಲ್ – ಶ್ರೀ ಶ್ರೀ ಶ್ರೀ ಬಾಲ ಗಂಗಾಧರನಾಥ ಸ್ವಾಮಿಜೀ ಹಾಗೂ ಟಿ.ಬಿ. ಸರ್ಕಲ್ – ನಾಡಪ್ರಭು ಶ್ರೀ ಕೆಂಪೇಗೌಡರು ರವರುಗಳ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಯೋಧ್ಯೆಯ ಬಾಲರಾಮನ ಕೆತ್ತನೆಯ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ರವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯ ಮೂಲಕ ಯೋಜನೆಯ ವಿನ್ಯಾಸ, ಸ್ಥಳದ ಸೂಕ್ತತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮಗಳಿಗೆ ಅಗತ್ಯ ಮಾರ್ಗದರ್ಶನ ಪಡೆದಿದ್ದಾರೆ.

Continue Reading

Mandya

ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು

Published

on

ವರದಿ : ಅಲ್ಲಾಪಟ್ಟಣ ಸತೀಶ್

ಮಂಡ್ಯ :  ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನಲ್ಲಿ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲುಗೊಂಡಿದೆ.

ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ರಮ್ಯಾ(26) ದೂರು ನೀಡಿರುವ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಪೃಥ್ವಿ(27) ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು,ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಮನೆಯಲ್ಲಿ ರಮ್ಯಾ ಒಬ್ಬಳೇ ಇರುವಾಗ ಅತ್ಯಾಚಾರವೆಸಗಿರುವುದಾಗಿ ಹೇಳಲಾಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.

ಯಾರಿಗಾದರೂ ಹೇಳಿದರೆ ನಿಮ್ಮ ಅಪ್ಪ, ಅಮ್ಮನನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಯುವತಿ ತಿಳಿಸಿದ್ದಾಳೆ.

ಅಕ್ಟೋಬರ್ ತಿಂಗಳಲ್ಲಿ ರಮ್ಯಾಗೆ ವಾಂತಿ ಶುರುವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆ ಮಾಡಲಾಗಿ ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಿಣಿಯಾಗಿರುವುದು ದೃಢ ಪಟ್ಡಿದೆ ಎನ್ನಲಾಗಿದೆ.

ಬಳಿಕ ಮದುವೆ ಮಾಡುವಂತೆ ಪೃಥ್ವಿ ಮನೆಯವರೊಂದಿಗೆ ಮಾತುಕತೆ ನಡೆದಿದ್ದು, ಮದುವೆಗೆ ಒಪ್ಪಿ ಇದೀಗ ಮದುವೆಯಾಗದೆ ಮೋಸ ಮಾಡಿರುವುದಾಗಿ ಸಂತ್ರಸ್ತೆ  ಠಾಣೆಗೆ ದೂರು ನೀಡಿದ್ದಾಳೆ.

ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Continue Reading

Trending

error: Content is protected !!